आयुधानामहं वज्रं धेनूनामस्मि कामधुक् ।
प्रजनश्चास्मि कन्दर्पः सर्पाणामस्मि वासुकिः ॥
āyudhānāmahaṃ vajraṃ dhenūnāmasmi kāmadhuk |
prajanaścāsmi kandarpaḥ sarpāṇāmasmi vāsukiḥ ||
Swami Sivananda (1887–1963)Bhagavad Gita
28. Among weapons I am the thunderbolt; among cows I am the wish-fulfilling cow called
Surabhi; I am the progenitor, the god of love; among serpents I am Vasuki.
Bannanje Govindacharya (1936–2020)Bhagavad Gita Pravachana
ಆಯುಧಾನಾಮ್ ಅಹಮ್ ವಜ್ರಮ್ ಧೇನೂನಾಮ್ ಅಸ್ಮಿ ಕಾಮಧುಕ್ |
ಪ್ರಜನಃ ಚ ಅಸ್ಮಿ ಕಂದರ್ಪಃ ಸರ್ಪಾಣಾಮ್ ಅಸ್ಮಿ ವಾಸುಕಿಃ -ಆಯುಧಗಳಲ್ಲಿ ವಜ್ರಾಯುಧ ನಾನು.
[ಅರಿವರ್ಜಿತನಾದ್ದರಿಂದ 'ವಜ್ರ' ಎನ್ನಿಸಿ ವಜ್ರಾಯುಧದಲ್ಲಿದ್ದೇನೆ.] ಹಸುಗಳಲ್ಲಿ ಕಾಮಧೇನು ನಾನು.
[ಕಾಮ:ಬಯಸಿದ್ದನ್ನು, ಧುಕ್ಕರೆಯುವುದರಿಂದ 'ಕಾಮಧುಕ್' ಎನ್ನಿಸಿ. ಕಾಮಧೇನುವಿನಲ್ಲಿದ್ದೇನೆ.]
ಸಂತಾನವನ್ನೀಯುವ ಕಾಮದೇವ [ಕಂ-ಸುಖದ, ದರ-ಹಲವು ಬಗೆಗಳನ್ನು, ಪಂಉಣ್ಣಿಸುವುದರಿಂದ “ಕಂದರ್ಪ'
ಎನ್ನಿಸಿ ಕಾಮದೇವನಲ್ಲಿದ್ದು ಅವನಿಗೆ ಹುಟ್ಟಿನ ಸೆಳೆತದ ಶಕ್ತಿಯನ್ನಿತ್ತವನು] ನಾನು. ಹಾವುಗಳಲ್ಲಿ ವಾಸುಕಿ ನಾನು.
[ವಾಸು-ಎಲ್ಲೆಡೆ ವಾಸಮಾಡಿ, ಕಿ£ಸುಖವನ್ನೀಯುವುದರಿಂದ 'ವಾಸುಕಿ' ಎನ್ನಿಸಿ ವಾಸುಕಿಯಲ್ಲಿದ್ದೇನೆ.]
ಆಯುಧಗಳಲ್ಲಿ ಸರ್ವಶ್ರೇಷ್ಠ ಆಯುಧ ಭಗವಂತ ಧರಿಸುವ ಸುದರ್ಶನ. ಭಗವಂತನ ಆಯುಧವನ್ನು ಬಿಟ್ಟರೆ
ಶ್ರೇಷ್ಠ ಆಯುಧ ವಜ್ರಾಯುಧ. ಕೃಷ್ಣ ಹೇಳುತ್ತಾನೆ. “ಆಯುಧಗಳಲ್ಲಿ ವಜ್ರಾಯುಧ ನಾನು” ಎಂದು. ಈ
ವಜ್ರಾಯುಧ ಇಂದ್ರನ ಆಯುಧ. ಇದಕ್ಕೆ ಮೂರು ಲೋಕವನ್ನು ನಿಯಂತ್ರಿಸುವ ಶಕ್ತಿಯನ್ನು ಭಗವಂತ ಕೊಟ್ಟ.
ವ್ರತ್ರನನ್ನು ಸಂಹಾರ ಮಾಡಲು ಭಗವಂತನ ಆದೇಶದಂತೆ ದಧೀಚಿ ಎನ್ನುವ ಮುನಿಯ ಪೂರ್ಣ ತಪಸ್ಸಿನ
ಫಲವನ್ನು ಆವಾಹನೆ ಮಾಡಿ ನಿರ್ಮಾಣಗೊಂಡ ಆಯುಧ ವಜ್ರಾಯುಧ. ಮಳೆ ಬಂದಾಗ ಕಾಣುವ ಸಿಡಿಲು-
ಮಿಂಚನ್ನು ವಜ್ರಾಯುಧದ ಪ್ರತೀಕವೆನ್ನುತ್ತಾರೆ. ಈ ಆಯುಧದಲ್ಲಿ ಭಗವಂತ 'ವಜ್ರಃ ನಾಮಕನಾಗಿ
ಸನ್ನಿಹಿತನಾಗಿದ್ದಾನೆ. 'ವರ್ಜನಾತ್ ಇತಿ ವಜ್ರಃ. ಶತ್ರುಗಳನ್ನು, ಸಮಸ್ತ ದೋಷವನ್ನು, ವರ್ಜನೆ ಮಾಡುವ
ಭಗವಂತ ವಜ್ರಃ.
ಅಸ್ತ್ರದ ಬಗ್ಗೆ ಹೇಳಿದ ಕೃಷ್ಣ ಮುಂದೆ ವಿಶ್ವಾಮಿತ್ರನ ಸಮಸ್ತ ಅಸ್ತ್ರವನ್ನು ನಾಶಮಾಡಿದ ವಸಿಷ್ಠಮುನಿಯ
ಕಾಮಧೇನುವಿನ ಬಗ್ಗೆ ಹೇಳುತ್ತಾನೆ. ಪ್ರಾಣಿಗಳಲ್ಲೇ ಶ್ರೇಷ್ಠ ಪ್ರಾಣಿ-ಧೇನು(ಹಸು). ನಮ್ಮ ಜೀವಮಾನವಿಡೀ
ನಮಗೆ ಹಾಲುಣಿಸಿ ಪೋಷಿಸುವ ಭಗವಂತನ ವಿಶಿಷ್ಟ ವಿಭೂತಿ ಹಸು. ಈ ಕಾರಣಕ್ಕಾಗಿ ಕೃಷ್ಣ ಬಾಲಕನಿದ್ದಾಗ
ಗೋಪೂಜೆಯನ್ನು ಚಾಲ್ತಿಗೆ ತಂದ. ಹಸುವಿನ ಮಲ-ಮೂತ್ರ ಕೂಡಾ ತ್ಯಾಜ್ಯವಲ್ಲ. ಯಾವುದರಿಂದಲೂ
ಗುಣವಾಗದ ಚರ್ಮರೋಗ ಗೋಮಯ ಮತ್ತು ಮೃತ್ತಿಕೆ(ಕೆಂಪು ಮಣ್ಣು)ಯಿಂದ ಸ್ನಾನ ಮಾಡಿದರೆ ಆ ರೋಗ
ಗುಣವಾಗುತ್ತದೆ. ಮನೆ ಮುಂದೆ ಸಗಣಿ ಸಾರಿಸುವುದರಿಂದ ಅಲ್ಲಿ ಕ್ರಿಮಿ ಕೀಟ ಇಲ್ಲವಾಗುತ್ತದೆ. ಗೋಮಯದಲ್ಲಿ
ಲಕ್ಷ್ಮಿಯ ಸನ್ನಿಧಾನವಿದೆ" ಎಂದು ಮಹಾಭಾರತದಲ್ಲಿ ಬರುವ ಒಂದು ಕಥೆಯಲ್ಲಿ ಹೇಳಲಾಗಿದೆ. ಹೀಗೆ
ಅನೇಕಾನೇಕ ಉಪಯೋಗ ಹಸುವಿನಿಂದ. ಭಗವಂತ ಬಯಸಿದ್ದನ್ನು ಕೊಡುವ 'ಕಾಮಧುಕ್' ನಾಮಕನಾಗಿ
ಕಾಮಧೇನುವಿನಲ್ಲಿ ವಿಭೂತಿಯಾಗಿ ನಿಂತ.
ಈ ಪ್ರಪಂಚದಲ್ಲಿರುವ ಜೀವಿಗಳಲ್ಲಿ ಗಂಡು-ಹೆಣ್ಣಿನ ನಡುವೆ ಹುಟ್ಟಿನ IFS(Sexual 6650:6)ವಾಗಿ ನಿಂತಿರುವವ-
ಸಂತಾನವನ್ನೀಯುವ ಕಾಮದೇವ. ಈ ಕಾಮದೇವ(ಕಂದರ್ಪ)ನಲ್ಲಿ ಭಗವಂತನ ವಿಶಿಷ್ಟ ಶಕ್ತಿ ಅಡಗಿದೆ.
ಸೃಷ್ಟಿಯಲ್ಲಿ ಸಂತಾನ ಕ್ರಿಯೆ ನಡೆಯುವುದಕ್ಕೋಸ್ಕರ ಅಧಮ್ಯ ಬಯಕೆಯನ್ನು ಎಲ್ಲರೊಳಗೆ ತುಂಬಿ, ಅಲ್ಲಿ
ಭಗವಂತ ಕೂತ. ಈ ಕಾರಣದಿಂದ ಭಗವಂತನ ಅನುಗ್ರಹವಿಲ್ಲದೆ ಲೀಲಾಜಾಲವಾಗಿ ಯಾರೂ ಕೂಡಾ ಈ
ಶಕ್ತಿಯಿಂದೀಚೆಗೆ ಬರಲಾರರು. ಬಲವಂತವಾಗಿ ಅದನ್ನು ಬಿಡಲಾಗದು. ಭಗವಂತ ಕಂದರ್ಪಃ ನಾಮಕನಾಗಿ
ಕಾಮದೇವನಲ್ಲಿ ತುಂಬಿದ್ದಾನೆ. ಮನುಷ್ಯನಿಗೆ ಅನೇಕ ರೀತಿಯ ಬಯಕೆಗಳನ್ನು ಕೊಟ್ಟು, ಆ ಬಯಕೆಯಿಂದ
ಅವರನ್ನು ಸಂತೃಪ್ತಿಗೊಳಿಸಿ, ವಿಚಿತ್ರ ಸುಖದ ಸುಪ್ಪತ್ತಿಗೆಯಲ್ಲಿ ಓಲಾಡಿಸುವ ಭಗವಂತ Sores.
ಕಾಮದೇವ-ಮನ್ಮಥನ ನಂತರ ಕಾಮದ ಸಂಕೇತವಾದ ಸರ್ಪದ ಬಗ್ಗೆ ಕೃಷ್ಣ ವಿವರಿಸುತ್ತಾನೆ. ಹೊಟ್ಟೆಯನ್ನು
ಹೊಸೆದುಕೊಂಡು ಹೋಗುವ ಸರೀಸೃಪವನ್ನು ಸರ್ಪ ಎನ್ನುತ್ತಾರೆ. ಸರೀಸೃಪಗಳಿಗೆಲ್ಲಾ ರಾಜ ವಾಸುಕಿ.
ಭಗವಂತ “ವಾಸುಕಿಃ' ನಾಮಕನಾಗಿ ನಿಂತು, ವಾಸುಕಿಗೆ ಈ ಸ್ಥಾನವನ್ನು ಕೊಟ್ಟ. ಭಗವಂತ ಇಲ್ಲದ ಸ್ಥಳವಿಲ್ಲ.
ಎಲ್ಲೆಡೆ ವಾಸಮಾಡುವ ಭಗವಂತ 'ವಾಸುಕಿಃ'.
Bibek Debroy (1955–2024)The Bhagavad Gita
‘Among horses, know me to be Ucchaishrava, arising from the immortal
nectar.45 Among great elephants Airavata and among men, the king.’
(28)
‘Among weapons I am vajra.46 Among cows I become kamadhenu.47 I
become Kandarpa for procreation.48 And among serpents I am Vasuki.’49