10.39

यच्चापि सर्वभूतानां बीजं तदहमर्जुन ।
न तदस्ति विना यत्स्यान्मया भूतं चराचरम् ॥
yaccāpi sarvabhūtānāṃ bījaṃ tadahamarjuna |
na tadasti vinā yatsyānmayā bhūtaṃ carācaram ||
Swami Sivananda (1887–1963)Bhagavad Gita
39. And whatever is the seed of all beings, that also am I, O Arjuna! There is no being, whether moving or unmoving, that can exist without Me. COMMENTARY: I am the primeval seed from which all creation has come into existence. I am the seed of everything. I am the Self of everything. Nothing can exist without Me. Everything is of My nature. I am the soul of everything.
Bannanje Govindacharya (1936–2020)Bhagavad Gita Pravachana
ಯತ್‌ ಚ ಅಪಿ ಸರ್ವ ಭೂತಾನಾಮ್‌ ಬೀಜಮ್‌ ತತ್‌ ಅಹಮ್‌ ಅರ್ಜುನ | ನ ತತ್‌ ಅಸ್ತಿ ವಿನಾ ಯತ್‌ ಸ್ಯಾತ್‌ ಮಯಾ ಭೂತಮ್‌ ಚರ ಅಚರಮ್‌ -ಅರ್ಜುನಾ, ಸಮಸ್ತ ಜೀವಿಗಳಲ್ಲಿ ಏನೆಲ್ಲಾ ವಿಶಿಷ್ಟ ಗುಣವಿದೆಯೋ ಅವುಗಳಲ್ಲಿ ನಾನೇ ಇದ್ದು ಆ ಶಕ್ತಿ ನೀಡಿದ್ದೇನೆ. ನನ್ನನ್ನು ಹೊರತುಪಡಿಸಿ ಈ ಚರಾಚರದಲ್ಲಿ ಯಾವುದೂ ತಾನೇ ತಾನಾಗಿ ಇಲ್ಲ. “ಈ ಜಗತ್ತಿನಲ್ಲಿರುವ ಸಮಸ್ತ ವಸ್ತು(ಜಡ-ಚೇತನ)ವಿಗೂ ಮೂಲಭೂತವಾಗಿರುವ ಅಭಿವ್ಯಂಜಕ ರೂಪ ಮತ್ತು ಶಕ್ತಿ ಕೊಡುವವನು ನಾನು” ಎನ್ನುತ್ತಾನೆ ಕೃಷ್ಣ. ಹೀಗೆ ಭಗವಂತ ಸಮಸ್ತ ಸೃಷ್ಟಿಗೂ ಬೀಜಪುರುಷನಾಗಿ ನಿಂತಿದ್ದಾನೆ. ಕಣ್ಣಿಗೆ ಕಾಣದ ಜೀವಕ್ಕೆ ಕಣ್ಣಿಗೆ ಕಾಣುವ ಶರೀರ ಕೊಡುವವನು ಆತ. ಗಂಡಿನ ರೇತಸ್ಸಿನಲ್ಲಿದ್ದು, ಜೀವವನ್ನು ರೇತಸ್ಸಿನ ಮುಖೇನ ಹೆಣ್ಣಿನ ದೇಹದೊಳಗೆ ಸೇರಿಸಿ, ಅಲ್ಲಿ ಜೀವಕ್ಕೆ ಒಂದು ರೂಪವನ್ನು ಕೊಟ್ಟು ಬೆಳಗಿಸುವವ ಭಗವಂತ. ಹೀಗೆ ಈ ಪ್ರಪಂಚದಲ್ಲಿರುವ ಚೇತನಾಚೇತನ ಅಥವಾ ಚರಾಚರಾತ್ಮಕ-ಎಲ್ಲವನ್ನೂ ಹುಟ್ಟಿಸುವವನು ಭಗವಂತ. “ಈ ಪ್ರಪಂಚದಲ್ಲಿ ನನ್ನನ್ನು ತೊರೆದು ಸ್ವತಂತ್ರವಾಗಿ ಯಾವ ವಸ್ತುವೂ ಇಲ್ಲ” ಎನ್ನುತ್ತಾನೆ ಕೃಷ್ಣ. ಇದು ವೈದಿಕ ಪರಂಪರೆಯಲ್ಲಿ ಇರುವ ಗೊಂದಲಕ್ಕೆ ಕೃಷ್ಣ ಕೊಟ್ಟ ನೇರ ಉತ್ತರ. ಜೀವ ಮತ್ತು ಭಗವಂತ ಒಂದೇ ಅಲ್ಲ. ಜೀವ ಭಗವಂತನ ಪ್ರತಿಬಿಂಬ. ಎಲ್ಲವೂ ಇದೆ. ಆದರೆ ಭಗವಂತನನ್ನು ಬಿಟ್ಟು ಸ್ವತಂತ್ರ ಅಸ್ತಿತ್ವ ಯಾರಿಗೂ ಇಲ್ಲ.
Bibek Debroy (1955–2024)The Bhagavad Gita
(39) ‘O Arjuna! Whatever is the seed of origin of every being, that is me alone. There is nothing moveable or immovable that can come into being without me.’