10.9

मच्चित्ता मद्गतप्राणा बोधयन्तः परस्परम् ।
कथयन्तश्च मां नित्यं तुष्यन्ति च रमन्ति च ॥
maccittā madgataprāṇā bodhayantaḥ parasparam |
kathayantaśca māṃ nityaṃ tuṣyanti ca ramanti ca ||
Sri Madhvacharya (1238–1317)Bhagavad Gita Tatparya Nirnaya
मद्गतप्राणाः - मद्विषयचेष्टाः॥09॥
Swami Sivananda (1887–1963)Bhagavad Gita
9. With their minds and lives entirely absorbed in Me, enlightening each other and always speaking of Me, they are satisfied and delighted.
Bannanje Govindacharya (1936–2020)Bhagavad Gita Pravachana
ಮತ್‌ ಚಿತ್ತಾಃ ಮತ್‌ ಗತ ಪ್ರಾಣಾಃ ಬೋಧಯಂತಃ ಪರಸ್ಪರಮ್‌ | ಕಥಯಂತಃ ಚ ಮಾಮ್‌ ನಿತ್ಯಮ್‌ ತುಪ್ಯಂತಿ ಚ ರಮಂತಿ ಚ --ಅನುಗಾಲ ನನ್ನಲ್ಲೇ ಬಗೆಯಿಟ್ಟವರು, ನನಗಾಗಿ ಬದುಕುವವರು, ನನ್ನನ್ನೇ ಒಬ್ಬರಿಗೊಬ್ಬರು ತಿಳಿಹೇಳುತ್ತಾ, ತಿಳಿಯುತ್ತಾ ತಣಿಯುತ್ತಾರೆ; ಸಂತಸಪಡುತ್ತಾರೆ. ಹೀಗೆ ನಿಜವಾದ ಜ್ಞಾನ ಭಕ್ತಿ ಉಳ್ಳವರ ಚಿತ್ತದಲ್ಲಿ ಸದಾ ಭಗವಂತನ ಚಿಂತನವೇ ತುಂಬಿರುತ್ತದೆ. ಅವರ ಮನಸ್ಸು ಭಗವನ್ಮಯವಾಗಿ ಬಿಡುತ್ತದೆ. ಅವರಿಗೆ ಎಲ್ಲವುದರಲ್ಲೂ ಭಗವಂತನೇ ಕಾಣುತ್ತಾನೆ. ಇಂತವರು ಪ್ರತೀ ಘಟನೆಯ ಹಿಂದೆ ಭಗವಂತನಿದ್ದಾನೆ, ಅವನ ಇಚ್ಛೆಯಂತೆ ಎಲ್ಲವೂ ನೆಡೆಯತ್ತಿದೆ ಎನ್ನುವ ಅರಿವಿನಲ್ಲಿ ಬದುಕುತ್ತಾರೆ. ಇವರ ಮನಸ್ಸು ಭಗವಂತನೊಂದಿಗೆ ಶ್ರುತಿಗೂಡಿರುತ್ತದೆ. ಇವರು ಸದಾ ಭಗವಂತನ ಬಗೆಗೆ ಮಾತನಾಡುತ್ತಿರುತ್ತಾರೆ. ಒಂದೊಂದು ಸಂಗತಿಯಲ್ಲೂ “ಭಗವಂತನ ಸೃಷ್ಟಿ ಎಷ್ಟು ಅದ್ಭುತ' ಎನ್ನುವಂತೆ ಇವರು ವಿಶ್ಲೇಷಣೆ ಮಾಡುತ್ತಾರೆ. ತಮ್ಮ ಜೀವನದ ಪ್ರತಿಯೊಂದು ಘಟನೆಯನ್ನೂ ಇವರು ಭಗವಂತನ ಪ್ರಸಾದ ಎನ್ನುವಂತೆ ಸ್ವೀಕರಿಸುತ್ತಾರೆ. ಇಂತವರ ಜೀವನ ಆನಂದಮಯವಾಗಿರುತ್ತದೆ. ಇವರಲ್ಲಿ ಕೆಟ್ಟ ಯೋಚನೆ ಸುಳಿಯುವುದಿಲ್ಲ. ಇವರ ಮನಸ್ಸು ಸದಾ ನಿರ್ಮಲವಾಗಿರುತ್ತದೆ. ಇವರು ಲೋಕ ವ್ಯವಹಾರದ ಮಾತನ್ನು ಬಿಟ್ಟು, ಭಗವಂತನ ವಿಚಾರ ಮಾತನಾಡುತ್ತಾ ಸದಾ ಆನಂದಪಡುತ್ತಿರುತ್ತಾರೆ.
Bibek Debroy (1955–2024)The Bhagavad Gita
(9) ‘Mind on me, live in me, explaining my nature to each other and always conversing,12 they13 attain satisfaction and happiness.’