11.12

दिवि सूर्यसहस्रस्य भवेद्युगपदुत्थिता ।
यदि भाः सदृशी सा स्याद्भासस्तस्य महात्मनः ॥
divi sūryasahasrasya bhavedyugapadutthitā |
yadi bhāḥ sadṛśī sā syādbhāsastasya mahātmanaḥ ||
Swami Sivananda (1887–1963)Bhagavad Gita
12. If the splendour of a thousand suns were to blaze out at once (simultaneously) in the sky, that would be the splendour of that mighty Being (great soul).
Bannanje Govindacharya (1936–2020)Bhagavad Gita Pravachana
ದಿವಿ ಸೂರ್ಯ ಸಹಸ್ರಸ್ಯ ಭವೇತ್‌ ಯುಗಪತ್‌ ಉತ್ಥಿತಾ ಯದಿ ಭಾಃ ಸದೃಶೀ ಸಾ ಸ್ಯಾತ್‌ ಭಾಸ ತಸ್ಯ ಮಹಾತ್ಮನಃ - ಸಾವಿರ ಸಾವಿರ ಸೂರ್ಯರು ಒಮ್ಮೆಲೇ ಮುಗಿಲಲ್ಲಿ ಮೂಡಿಬಂದರೆ, ಅಂತಹ ಬೆಳಕು ಆ ಮಹಾತ್ಮನ ಬೆಳಕಿಗೆ ಸರಿಗಟ್ಟಿ ತೇನೊ | ಸಂಜಯ ಹೇಳುತ್ತಾನೆ: “ಸಾವಿರಾರು ಸೂರ್ಯರು ಆಕಾಶದಲ್ಲಿ ಒಮ್ಮೆಗೇ ಉದಿಸಿದರೆ. ಎಷ್ಟು ಪ್ರಕಾಶಮಾನವಾಗಿರುತ್ತದೋ, ಅಂತಹ ಪ್ರಕಾಶಮಾನನಾಗಿ ಭಗವಂತ ಕಾಣಿಸಿದ” ಎಂದು. ಯೋಗಿಗಳಿಗೆ ಭಗವಂತ ಒಳಗಣ್ಣಿನಲ್ಲಿ ಸಾವಿರ ಸೂರ್ಯರು ಏಕಕಾಲದಲ್ಲಿ ಉದಯಿಸಿದರೆ ಎಷ್ಟು ಪ್ರಖರವಾಗಿರುತ್ತದೋ ಅಷ್ಟು ಪ್ರಖರವಾಗಿ ಕಾಣಿಸುತ್ತಾನೆ. ಆದರೆ “ಚಂದ್ರಾಂಶು'ವಾದ ಭಗವಂತ ಅಷ್ಟೇ ತಂಪು ಮತ್ತು ಅಹ್ಲಾದಮಯ. ಭಗವಂತ ಸೂರ್ಯನಂತೆ ಪ್ರಖರ ಆದರೆ ಚಂದ್ರನಂತೆ ತಂಪು. ಇಷ್ಟು ಪ್ರಕಾಶಮಾನನಾಗಿರುವ ಭಗವಂತನ ರೂಪವನ್ನು ಯಾರೂ ಎಂದೆಂದೂ ತಮ್ಮ ಹೊರಗಟಣ್ಣಿನಿಂದ ಕಾಣಲು ಸಾಧ್ಯವಿಲ್ಲ.
Bibek Debroy (1955–2024)The Bhagavad Gita
(12) If the brilliance of a thousand suns simultaneously rises in the sky, then that brilliance can rival the brilliance of that great soul.