अनेकबाहूदरवक्त्रनेत्रं
पश्यामि त्वां सर्वतोऽनन्तरूपम् ।
नान्तं न मध्यं न पुनस्तवादिं
पश्यामि विश्वेश्वर विश्वरूप ॥
anekabāhūdaravaktranetraṃ
paśyāmi tvāṃ sarvato'nantarūpam |
nāntaṃ na madhyaṃ na punastavādiṃ
paśyāmi viśveśvara viśvarūpa ||
·
अनेकबाहूदरवक्त्रनेत्रं
पश्यामि त्वां सर्वतोऽनन्तरूपम् ।
नान्तं न मध्यं न पुनस्तवादिं
पश्यामि विश्वेश्वर विश्वरूप ॥
anekabāhūdaravaktranetraṃ
paśyāmi tvāṃ sarvato'nantarūpam |
nāntaṃ na madhyaṃ na punastavādiṃ
paśyāmi viśveśvara viśvarūpa ||
अनेकबाहूदरवक्त्रनेत्रं
पश्यामि त्वा सर्वतोऽनन्तरूपम् ।
नान्तं न मध्यं न पुनस्तवादिं
पश्यामि विश्वेश्वर विश्वरूप ॥
anekabāhūdaravaktranetraṃ
paśyāmi tvā sarvato'nantarūpam |
nāntaṃ na madhyaṃ na punastavādiṃ
paśyāmi viśveśvara viśvarūpa ||
Swami Sivananda (1887–1963)Bhagavad Gita
16. I see Thee of boundless form on every side, with many arms, stomachs, mouths and
eyes; neither the end nor the middle nor also the beginning do I see, O Lord of the universe, O
Cosmic Form!
Bannanje Govindacharya (1936–2020)Bhagavad Gita Pravachana
ಅನೇಕ ಬಾಹು ಉದರ ವಕ್ರ ನೇತ್ರಮ್ ಪಶ್ಯಾಮಿ ತ್ವಾಮ್ ಸರ್ವತಃ ಅನಂತ ರೂಪಮ್ |
ನ ಅಂತಮ್ ನ ಮಧ್ಯಮ್ ನ ಪುನಃ ತವ ಆದಿಮ್ ಪಶ್ಯಾಮಿ ವಿಶ್ವೇಶ್ವರ ವಿಶ್ವರೂಪ - ಎಣಿಕೆಯಿರದ
ತೋಳುಗಳು, ಒಡಲು, ಬಾಯಿ, ಕಣ್ಣುಗಳು. ಎಲ್ಲೆಡೆಯೂ ಎಣಿಕೆಯಿರದ ರೂಪಗಳ ನಿನ್ನನ್ನು ಕಾಣುತ್ತಿದ್ದೇನೆ. ಓ
ಪೊಡವಿಗೊಡೆಯನೇ, ಓ ವಿಶ್ವರೂಪನೇ, ನಿನ್ನ ತುದಿ ಕಾಣುತ್ತಿಲ್ಲ; ಇಲ್ಲ ನಡು; ಇಲ್ಲ ಬುಡ ಕೂಡಾ.
ಎಲ್ಲಿ ನೋಡಿದರಲ್ಲಿ ಮುಖ, ಎಲ್ಲಿ ನೋಡಿದರಲ್ಲಿ ಕಣ್ಣು, ಎಲ್ಲಿ ನೋಡಿದರಲ್ಲಿ ತೋಳು, ಎಲ್ಲಿ ನೋಡಿದರಲ್ಲಿ ಉದರ.
ಈ ಶ್ಲೋಕ ಪುರುಷಸೂಕ್ತಕ್ಕೆ ವ್ಯಾಖ್ಯಾನ ರೂಪದಲ್ಲಿದೆ. ಪುರುಷ ಸೂಕ್ತದಲ್ಲಿ ಹೇಳುವಂತೆ: “ಓಂ ಸಹಸ್ರಶೀರ್ಷಾ
ಪುರುಷಃ | ಸಹಸ್ರಾಕ್ಷಃ ಸಹಸ್ರಪಾತ್ | -ಭಗವಂತನಿಗೆ ಸಹಸ್ರಾರು ಶಿರಗಳು, ಸಹಸ್ರಾರು ಕಣ್ಣುಗಳು, ಸಹಸ್ರಾರು
ಪಾದಗಳು. ಎಲ್ಲಿ ಏನನ್ನು ಕಾಣಬೇಕೆಂದು ಅಪೇಕ್ಷೆ ಪಟ್ಟು ಅರ್ಜುನ ಕಂಡನೋ ಅಲ್ಲಿ ಆತ ಬಯಸಿದ್ದು ಕಾಣಿಸಿತು.
ಇದು ಒಂದು ವಿಚಿತ್ರ ಅನುಭವ. ಇದನ್ನು ವಿವರಿಸುವುದು ಅಸಾಧ್ಯ. ಕೇವಲ ಅನುಭವಿಸಬೇಕು. ಅನಂತ ರೂಪಿ
ಭಗವಂತನ ರೂಪಕ್ಕೆ ತುದಿ ಬುಡವಿಲ್ಲ. ಸಮಸ್ತ ಜಗದ ಸ್ವಾಮಿ ಭಗವಂತ ಅಣುವಿಗಿಂತ ಅಣು ಕೂಡಾ ಹೌದು,
ಮಹತೋಮಯ ಕೂಡಾ ಹೌದು. ಭಗವಂತನ ಈ ರೂಪವನ್ನು ಧ್ಯಾನದಲ್ಲಿ ಕಾಣುವುದು ಬಹಳ ಕಷ್ಟ.
ಶಾಸ್ತ್ರಕಾರರು ಹೇಳುವಂತೆ ಧ್ಯಾನದಲ್ಲಿ ಭಗವಂತನ ಪೂರ್ಣ ಶರೀರ ಕಾಣಬೇಕು ಎಂದುಕೊಂಡು ಕುಳಿತರೆ
ಏನೂ ಕಾಣದೇ ಇರಬಹುದು. ಅದಕ್ಕಾಗಿ ಕೊಳಲನೂದುವ ಆತನ ಒಂದು ಕಿರಿ ಬೆರಳಿನ ಮೇಲೋ, ಆತನ
ಕರುಣಾಪೂರ್ಣ ಕಣ್ಣಿನ ನೋಟವನ್ನೋ ಕೇಂದ್ರೀಕರಿಸಿ ಧ್ಯಾನ ಅಭ್ಯಾಸ ಮಾಡುವುದು ಒಳ್ಳೆಯದು.
Bibek Debroy (1955–2024)The Bhagavad Gita
(16)
‘O Lord of the Universe! O Universal Form! I see you, with many arms,
many stomachs, many faces and many eyes, everywhere. And I don’t see an
end, a middle or a beginning to you.’