भवाप्ययौ हि भूतानां श्रुतौ विस्तरशो मया ।
त्वत्तः कमलपत्राक्ष माहात्म्यमपि चाव्ययम् ॥
bhavāpyayau hi bhūtānāṃ śrutau vistaraśo mayā |
tvattaḥ kamalapatrākṣa māhātmyamapi cāvyayam ||
Swami Sivananda (1887–1963)Bhagavad Gita
2. The origin and the destruction of beings verily have been heard by me in detail from Thee,
O lotus-eyed Lord, and also Thy inexhaustible greatness!
Bannanje Govindacharya (1936–2020)Bhagavad Gita Pravachana
ಭವ ಅಪ್ಯಯೌ ಹಿ ಭೂತಾನಾಮ್ ಶ್ರುತೌ ವಿಸ್ತರಶಃ ಮಯಾ |
ತ್ವತ್ತಃ ಕಮಲಪತ್ರ ಅಕ್ಷ ಮಾಹಾತ್ಮ್ಯಮ್ ಅಪಿ ಚ ಅವ್ಯಯಮ್ -- ಜೀವಿಗಳ ಹುಟ್ಟು ಸಾವುಗಳ ಬಿತ್ತರವನ್ನು
ನಾನು ನಿನ್ನಿಂದ ಕೇಳಿದೆ; ಓ ತಾವರೆ ಎಸಳಂಥ ಕಣ್ಣಳವನೇ, ನಿನ್ನ ಅಳಿವಿರದ ಮಹಿಮೆಯನ್ನು ಕೂಡಾ.
“ಜೀವಿಗಳ ಭವ ಮತ್ತು ಅಪ್ಯಯಗಳ ಬಿತ್ತರವನ್ನು ನಾನು ನಿನ್ನಿಂದ ಕೇಳಿದೆ” ಎನ್ನುತ್ತಾನೆ ಅರ್ಜುನ. ಇಲ್ಲಿ ಭವ
ಮತ್ತು ಅಪ್ಯಯ ಎನ್ನುವುದಕ್ಕೆ ಹುಟ್ಟು-ಸಾವು, ಸೃಷ್ಟಿ-ಸಂಹಾರ ಎನ್ನುವ ಅರ್ಥವಲ್ಲದೆ ಇನ್ನೊಂದು ಬಹಳ
ರೋಚಕವಾದ ಅರ್ಥವಿದೆ. ವೇದಕಾಲದ ಖುಷಿಗಳು ಇದನ್ನು ಒಂದು ಹೊಸ ಅರ್ಥದಲ್ಲಿ ಬಳಸುತ್ತಿದ್ದರು.
ಪ್ರಭವಾಪ್ಯಯೌ ಭೂತಾನಾಂ” ಎಂದು ಉಪನಿಷತ್ತಿನಲ್ಲಿ ಬರುತ್ತದೆ. ಸುಖಪ್ರಾಪ್ತಿ-ಭವ ಮತ್ತು ದುಃಖನಿವೃತ್ತಿ-
ಅಪ್ಯಯ. ಇದು ಪ್ರಾಚೀನ ಖುಷಿಗಳ ಅರ್ಥ. “ಯಾವ ರೀತಿಯ ನಡೆಯಿಂದ ಸುಖ ಪಡೆಯಬಹುದು, ಯಾವ
ರೀತಿಯ ನಡೆಯಿಂದ ನಮ್ಮ ಬದುಕಿನ ದುಃಖದಿಂದ ಪಾರಾಗಬಹುದು ಎನ್ನುವ ಮೂಲ ಮಂತ್ರವನ್ನು ನಿನ್ನ
ಬಾಯಿಯಿಂದಲೇ ಹೇಳಿದಿ-ಅದನ್ನು ನಾನು ಕಿವಿಯಾರೆ ಕೇಳಿದೆ” ಎನ್ನುತ್ತಾನೆ ಅರ್ಜುನ.
ಇಲ್ಲಿ 'ಕಮಲಪತ್ರಾಕ್ಷ' ಎನ್ನುವ ಒಂದು ವಿಶೇಷಣ ಬಳಸಿದ್ದಾರೆ. ಇದನ್ನು ಅರ್ಜುನ ಪ್ರಯೋಗ ಮಾಡುವುದರಲ್ಲಿ
ಒಂದು ವಿಶೇಷವಿದೆ. “ನೀನು ನನ್ನ ಮೇಲೆ ಕಾರುಣ್ಯದ ರಸಧಾರೆಯನ್ನು ಹರಿಸಿದೆಯಲ್ಲಾ ಕೃಷ್ಣ” ಎನ್ನುವ ಭಾವ
ಈ ವಿಶೇಷಣದ ಹಿಂದಿದೆ. “ನಿನ್ನ ಮಹಿಮೆ ಅವ್ಯಯ ಅನಂತವಾಗುಳಿಯುವ ಸಂಪತ್ತು. ಆ ಮಹತ್ತಾದ ಜ್ಞಾನವನ್ನು
ನನಗೆ ಕೊಟ್ಟೆ. ಅತಿ ದುರ್ಲಭವಾದ ನಿನ್ನ ಮಹಿಮೆಯನ್ನು ನನಗೆ ಹೇಳಿದೆ” ಎನ್ನುತ್ತಾನೆ ಅರ್ಜುನ.
Bibek Debroy (1955–2024)The Bhagavad Gita
(2)
‘O one with eyes like lotus-leaves!1 From you I have heard in detail about
the creation and destruction of all beings. And also your eternal greatness.’