11.46

किरीटिनं गदिनं चक्रहस्तं
इच्छामि त्वां द्रष्टुमहं तथैव ।
तेनैव रूपेण चतुर्भुजेन
सहस्रबाहो भव विश्वमूर्ते ॥
kirīṭinaṃ gadinaṃ cakrahastaṃ
icchāmi tvāṃ draṣṭumahaṃ tathaiva |
tenaiva rūpeṇa caturbhujena
sahasrabāho bhava viśvamūrte ||
Sri Madhvacharya (1238–1317)Bhagavad Gita Tatparya Nirnaya
तेनैव रूपेण भवेति अनन्तरूपगोपनेन तदेव प्रकाशयेत्यर्थः। पञ्चाननं चिन्त्यमचिन्त्यरूपम् पद्मसनं गोपितविश्वरूपम्’ इति वैहायससंहितायाम्॥46॥
Swami Sivananda (1887–1963)Bhagavad Gita
46. I desire to see Thee as before, crowned, bearing a mace, with the discus in hand, in Thy former form only, having four arms, O thousand-armed, Cosmic Form (Being)!
Bannanje Govindacharya (1936–2020)Bhagavad Gita Pravachana
ಕಿರೀಟಿನಮ್‌ ಗದಿನಮ್‌ ಚಕ್ರಹಸ್ತಮ್‌ ಇಚ್ಛಾಮಿ ತ್ವಾಮ್‌ ದ್ರಷ್ಟುಮ್‌ ಅಹಮ್‌ ತದಾ ಏವ। ತೇನ ಏವ ರೂಪೇಣ ಚತುಃ ಭುಜೇನ ಸಹಸ್ರ ಬಾಹೋ ಭವ ವಿಶ್ವಮೂರ್ತೇ-ಮುಕುಟವಿಟ್ಟ, ಕೈಯಲ್ಲಿ ಗದೆ-ಚಕ್ರ ತೊಟ್ಟ ನಿನ್ನನ್ನು ಆ ರೂಪದಲ್ಲೇ ಕಾಣಬಯಸುತ್ತೇನೆ. ಸಾವಿರ ತೋಳಿನ ವಿಶ್ವರೂಪನೇ, ಮತ್ತೊಮ್ಮೆ ನಾಲ್ಕು ತೋಳಿನ ಅದೇ ರೂಪದಿಂದ ಕಾಣಿಸಿಕೋ. “ನೀನು ಹಿಂದೆ ಕಾಣಿಸಿಕೊಂಡಂತೆ ಚತುರ್ಭುಜನಾಗಿ, ಕಿರೀಟ ಧರಿಸಿದ ಗದಾ-ಚಕ್ರ ಹಿಡಿದಿರುವ ನಿನ್ನ ರೂಪವನ್ನು ತೋರು” ಎಂದು ಅರ್ಜುನ ಸಹಸ್ರ ತೋಳಿನ ವಿಶ್ವರೂಪಿ ಭಗವಂತನಲ್ಲಿ ಕೈಜೋಡಿಸಿ ಬೇಡಿಕೊಳ್ಳುತ್ತಾನೆ. ಇಲ್ಲಿ ಅರ್ಜುನ ಕೃಷ್ಣನಲ್ಲಿ -“ನಿನ್ನ ಚತುರ್ಭುಜ ರೂಪವನ್ನು ತೋರು” ಎಂದಿದ್ದಾನೆ. ಕೃಷ್ಣ ತನ್ನ ಅಂತರಂಗದ ಭಕ್ತರಿಗೆ ತನ್ನ ಚತುರ್ಭುಜ ರೂಪವನ್ನು ತೋರಿದ್ದ. ಇದನ್ನು ಅರ್ಜುನ ಕೂಡಾ ನೋಡಿದ್ದಾನೆ. ಭಾಗವತದಲ್ಲಿ- ಬಾಲಕನಾಗಿದ್ದಾಗ ಕೃಷ್ಣ ತನ್ನ ಚತುರ್ಭುಜ ರೂಪವನ್ನು ತೋರಿದ್ದ ಎನ್ನುವುದನ್ನು ಹೀಗೆ ಹೇಳಿದ್ದಾರೆ: SDT) Bo ಬಾಲಕಮಂಬುಜೇಕ್ಷಣಂ ಚತುರ್ಭುಜಂ ಶಂಖಗದಾದ್ಯುದಾಯುಧಂ, ಶ್ರೀವತ್ಸಲಕ್ಷ್ಮಂ ಗಲಶೋಭಿಕೌಸ್ತುಭಂ ಪೀತಾಂಬರಂ ಸಾಂದ್ರಪಯೋದಸೌಭಗಂ ॥೧೦.೦೩.೯॥ ಸಾಮಾನ್ಯರು ಕಾಣದ ಭಗವಂತನ ಚತುರ್ಭುಜ ರೂಪವನ್ನು ಕೃಷ್ಣ ಕೆಲವರಿಗೆ ತೋರಿದ್ದ ಎನ್ನುವುದನ್ನು ಈ ಶ್ಲೋಕ ದೃಡಪಡಿಸುತ್ತದೆ. ಇಲ್ಲಿ ಅರ್ಜುನ ಭಗವಂತನಲ್ಲಿ ಆತನ ವಿಶ್ವರೂಪ ದರ್ಶನವನ್ನು ಕೊನೆಗೊಳಿಸಿ ತನಗೆ ಚತುರ್ಭುಜ ರೂಪವನ್ನು ತೋರಿಸು ಎಂದು ಬೇಡಿಕೊಳ್ಳುತ್ತಾನೆ. ಇಲ್ಲಿ ನಾವು ತಿಳಿಯಬೇಕಾದ ಮುಖ್ಯ ವಿಚಾರ ಎಂದರೆ: ಭಗವಂತನ ವಿಶ್ವರೂಪದ ಉಪಾಸನೆ ಸಾಮಾನ್ಯರಾದ ನಮಗೆ ಅಸಾಧ್ಯ. ಆತನ ವಿಶ್ವರೂಪವನ್ನು ಮಹಾ ಜ್ಞಾನಿಯಾದ ಅರ್ಜುನನಿಂದಲೇ ನೋಡಿ ತಡೆದುಕೊಳ್ಳಲು ಆಗಿಲ್ಲ. ಹಾಗಿರುವಾಗ ನಾವು ಅದನ್ನು ನಮ್ಮ ಧ್ಯಾನದಲ್ಲಿ ಜೀರ್ಣಿಸಿಕೊಳ್ಳವುದು ಸಾಧ್ಯವೇ? ಈ ಕಾರಣಕ್ಕಾಗಿ ಧ್ಯಾನದಲ್ಲಿ ಭಗವಂತನ ವಿಶ್ವ ರೂಪವನ್ನು ಉಪಾಸನೆ ಮಾಡುವುದಕ್ಕಿಂತ, ಭಗವಂತನ ವಿಶ್ವ ಶಕ್ತಿಯ ಎಚ್ಚರದಿಂದ ಆತನ ಅವತಾರ ರೂಪದಲ್ಲಿ ಆತನನ್ನು ಉಪಾಸನೆ ಮಾಡುವುದು ಶ್ರೇಯಸ್ಕರ. ಅರ್ಜುನನ ಈ ಬೇಡಿಕೆಯನ್ನು ಕೃಷ್ಣ ಹೇಗೆ ಪುರಸ್ಕರಿಸಿದ ಎನ್ನುವುದನ್ನು ಮುಂದಿನ ಶ್ಲೋಕಗಳಲ್ಲಿ ನೋಡೋಣ.
Bibek Debroy (1955–2024)The Bhagavad Gita
(46) ‘I wish to see your earlier,49 crowned, with a mace and chakra50 in hand. O thousand-armed! O Universal Form! Become manifest in your four-armed form.’51