सन्तुष्टः सततं योगी यतात्मा दृढनिश्चयः ।
मय्यर्पितमनोबुद्धिर्यो मद्भक्तः स मे प्रियः ॥
santuṣṭaḥ satataṃ yogī yatātmā dṛḍhaniścayaḥ |
mayyarpitamanobuddhiryo madbhaktaḥ sa me priyaḥ ||
Swami Sivananda (1887–1963)Bhagavad Gita
14. Ever content, steady in meditation, possessed of firm conviction, self-controlled, with
mind and intellect dedicated to Me, he, My devotee, is dear to Me.
Sri Vishwesha Tirtharu (1931–2019)Gitasaroddhara
12.13–12.20 · ಭಕ್ತಶೀಲ ಸಂವರ್ಧನೆ
ಸಾಧಕನಲ್ಲಿ ಶೀಲಸಂವರ್ಧನೆ
ಸಾಧಕನು ನಿಷ್ಕುಮಕರ್ಮಾಚರಣ, ವೈರಾಗ್ಯಮತ್ತುಪ್ರಯತ್ನಗಳ ಜೊತೆಗೆ
ತನ್ನಲ್ಲಿ ಸದ್ಗುಣಗಳನ್ನು ಬೆಳೆಸಿಕೊಳ್ಳಲು ಪ್ರಯತ್ನಿಸಬೇಕು. ನಮ್ಮಲ್ಲಿ
ಸದ್ಗುಣಗಳನ್ನು ವಿಕಸಿತಗೊಳಿಸುವುದೂ ಪರಮಾತ್ಮನ ಸಾಕ್ಚಾತ್ಕಾರಕ್ಕೆ
ಆವಶ್ಯಕವಾಗಿದೆ. ಮುಕ್ತಿಯನ್ನು ಹೊಂದಲಿರುವ ಆತ್ಮರೆಲ್ಲರೂ ಸ್ವತಃ
ಸದ್ಗುಣರೂಪಿಗಳೇ ಆಗಿರುವರು. ಅಜ್ಞಾನದಿಂದ ಆವೃತವಾದ, ಆದರೆ
ಸ್ವಾಭಾವಿಕವಾಗಿ ಸದ್ಗುಣಾತ್ಮಕವಾದ ತಮ್ಮ ಚೈತನ್ಯವನ್ನು ಅವಿಷ್ಕಾರಗೊಳಿಸು
ವುದೇ ಮುಕ್ತಿ ಎಂದು ಶಾಸ್ತ್ರಗಳಲ್ಲಿ ಹೇಳಿದೆ. ಹೀಗೆ ನಮ್ಮ ಮೂಲಭೂತ
ಸದ್ಗುಣಗಳ ಅಭಿವ್ಯಕ್ತಿಯಾಗಲು ಅದಕ್ಕೆ ಅನುಕೂಲವೆನಿಸುವ ಪ್ರವೃತ್ತಿಗಳೇ ನಮ್ಮ
ಜೀವನದಲ್ಲಿ ವ್ಯಾಪಿಸಿಕೊಂಡಿರಬೇಕು. ಆತನಸ್ವಾಭಾವಿಕಧರ್ಮಗಳೆನಿಸಿದಸತ್ವ,
ಜ್ಞಾನ, ದಯೆ, ತ್ಯಾಗ ಮುಂತಾದ ಸ್ವರೂಪ ಸದ್ಗುಣಗಳಿಗೆ ತೀರ ವ್ಯತಿರಿಕ್ತವೂ
ವಿರೋಧಿಯೂ ಆದಪ್ರವೃತ್ತಿಯನ್ನು ನಮ್ಮಲ್ಲಿ ರೂಢಿಸಿಕೊಂಡಲ್ಲಿ ನಮ್ಮ ಆತ್ಮವು
ಇನ್ನೂ ಹೆಚ್ಚುಘನವಾದ ಆವರಣಕ್ಕೆ ಒಳಪಟ್ಟಂತಾಗುವುದು. ಅಸತ್ಯ, ಕ್ರೌರ್ಯ,
ಹಿಂಸೆ, ವಂಚನೆ ಮೊದಲಾದ ದುರ್ಗುಣಗಳು ಆತ್ಮಸ್ವರೂಪಕ್ಕೆ ತೀರ
ವಿಸಂಗತಗಳಾದ ವಿರೋಧಿ ಭಾವಗಳಾಗಿವೆ. ಇಂತಹ ದುರ್ಗುಣಗಳಿಗೆ ನಮ್ಮ
ಜೀವನದಲ್ಲಿ ಅವಕಾಶ ದೊರೆಯುವುದರಿಂದ ನಮ್ಮ ಆತ್ಮವನ್ನು ಕುಗ್ಗಿಸಿ ಅಜ್ಞಾನ
ಪ್ರಕೃತಿಗಳ ವಿಜೃಂಭಣೆಯನ್ನು ಇನ್ನೂ ಹೆಚ್ಚಿಸಿದಂತಾಗುತ್ತದೆ.
ಅದರಂತೆ ನಮ್ಮಲ್ಲಿ ದುರ್ಗುಣಗಳು ಹೆಚ್ಚಿದರೆ ಅನಂತಗುಣರೂಪಿಯಾದ
ಭಗವಂತನ ಧ್ಯಾನ ಸಾಕ್ಷಾತ್ಯಾರಗಳನ್ನು ಪಡೆಯುವ ಅರ್ಹತೆಯನ್ನೇ ನಾವು
ಕಳೆದುಕೊಂಡಂತಾಗುವುದು. ನಮ್ಮ ನಿತ್ಯವ್ಯವಹಾರಗಳೆಲ್ಲವೂ ದುರ್ಗುಣ
ದುರಾಚಾರಗಳಿಂದ ದೂಷಿತವಾಗಿದ್ದರೆ, ಸುಗುಣಮೂರ್ತಿಯಾದ ಪರಮಾತ್ಮನ
ಸಾಮ್ಯಪ್ರಾಪ್ತಿಯೆನ್ನಲಾಗುವ ಮುಕ್ತಿಯನ್ನು ಪಡೆಯಲು ನಾವು ಹೇಗೆ
ಅರ್ಹರಾಗಬಲ್ಲೆವು? ಆದುದರಿಂದ ನಮ್ಮ ಮೂಲಭೂತಸ್ಥಿತಿಯೆನಿಸಿದ ನಮ್ಮ
ಆತ್ಮದಸ್ವಾಭಾವಿಕ ಗುಣಧರ್ಮಗಳಿಗೂ ನಮ್ಮ ಪರಮಪ್ರಾಪ್ಯಸ್ಥಾನವಾಗಿರುವ
ಪರಮಾತ್ಮ ಸ್ವರೂಪಗುಣಗಳಿಗೂ ತೀರ ವಿರೋಧಿಯಾದ ಮನೋಧರ್ಮ
ಗಳಿಗೆ ನಮ್ಮ ಜೀವನದಲ್ಲಿ ಸರ್ವಥಾ ಅವಕಾಶವಿರಬಾರದು. ಇದರಿಂದ
ಭಗವಂತನಿಂದನಾವುಇನ್ನೂ ಹೆಚ್ಚು ದೂರ ಉಳಿಯುವ ಮತ್ತು ಆತ್ಮವಿಕಾಸಕ್ಕೆ
ಅಡಚಣೆಯಾಗುವ ದುರಂತ ಸನ್ನಿವೇಶವು ಒದಗುವುದು. ಆದುದರಿಂದ
ಅನಂತಗುಣಮೂರ್ತಿಯಾದ ಪರಮಾತ್ಮನ ಸಾಕ್ಷಾತ್ಕಾರದಿಂದ ನಮ್ಮಲ್ಲಿಯೇ
ಸಹಜವಾಗಿ ಹುದುಗಿರುವ ಚೇತನಾತ್ಮಕ ಸದ್ಗುಣಪ್ರಭೆಗಳಿಂದ ನಾವು
ಬೆಳಗಬೇಕಾದರೆ ನಮ್ಮ ಲೌಕಿಕ ಜೀವನವು ನೀತಿಶೀಲಸಂಪನ್ನವಾಗಿರಬೇಕು.
ನಮ್ಮ ವ್ಯವಹಾರಗಳೆಲ್ಲ ಸದ್ಗುಣಮಯವಾಗಿರಬೇಕು. ಸಾಧಕನು ತನ್ನಲ್ಲಿ
ಅಳವಡಿಸಿಕೊಳ್ಳಬೇಕಾದ ಈ ಗುಣಗಳ ಯಾದಿಯನ್ನು ಹನ್ನೆರಡನೆಯ
ಅಧ್ಯಾಯದಕೊನೆಯಲ್ಲಿ ಬರುವ,
ಅದ್ವೇಷ್ಟಾಸರ್ವಭೂತಾನಾಂ ಮೈತ್ರಃ ಕರುಣಏವಚ।
ಮುಂತಾದ ಶ್ಲೋಕಗಳಲ್ಲಿ ನಾವು ಕಾಣಬಹುದು. ಅದ್ವೇಷ, ಮೈತ್ರಿ, ಕರುಣೆ,
ನಿರ್ಮಮತೆ, ನಿರಹಂಕಾರ, ಸಹನೆ, ಅಲಂಬುದ್ಧಿ ಮೊದಲಾದವುಗಳೇನಮ್ಮಲ್ಲಿ
ಅಳವಡಿಸಿಕೊಳ್ಳಬೇಕಾದ ಸದ್ಗುಣಗಳಾಗಿವೆ. ಭಕ್ತನಲ್ಲಿ ಈ ಗುಣಗಳು
ತುಂಬಿರುತ್ತವೆ. ಇಂತಹ ಗುಣಶಾಲಿಯೇ ತನಗೆ ಅತ್ಯಂತ ಪ್ರೀತಿಪಾತ್ರನೆಂದು
ಸ್ವಾಮಿಯು ಅರುಹಿದ್ದಾನೆ. ಲೋಕದ ಯಾವುದೇ ವ್ಯವಹಾರದಿಂದ
ಉದ್ವಿಗ್ನನಾಗದೆ, ಯಾರಿಗೂ ಹೆದರದೆ ಭಕ್ತನು ತನ್ನ ಕರ್ತವ್ಯವನ್ನು
ನಿರ್ವಹಿಸುತ್ತಾನೆ. ಅದರಂತೆ ಅವನಿಂದಲೂ ಜನರಿಗೆ ಯಾವ ಭಯ, ಅಪಾಯ
ಉಪದ್ರವಗಳೂ ಇಲ್ಲ. ಸರ್ವರಿಗೂ ಅಭಯ ನೀಡಿತಾನೂ ನಿರ್ಭಯವಾಗಿ,
ಉಳಿದವರೂನಿರುದ್ದಿಗ್ಗರಾಗಿರುವಂತಹ ಸನ್ನಿವೇಶವನ್ನು ಭಕ್ತನು ನಿರ್ಮಿಸುತ್ತಾನೆ.
ಆತನು "ಸರ್ವಾರಂಭ ಪರಿತ್ಯಾಗಿ' ಅಂದರೆ ಪರಮಾತ್ಮನ ಪ್ರೀತಿಕರವಾಗದ ಕೇವಲ
ಸ್ವಫಲಾಪೇಕ್ಷೆಯ ಕರ್ಮಗಳಿಂದ ದೂರವಾಗಿರುತ್ತಾನೆ. ಅವನಿಗೆ
ಸುಖದುಃಖಗಳಿರಡರಲ್ಲಿಯೂ ಸಮದೃಷ್ಟಿ ಇರುತ್ತದೆ. ಸುಖದಂತೆ ದುಃಖವೂ
ಅವನಿಗೆ ಅಪೇಕ್ಷಿತವೇ. ತನ್ನ ದುಷ್ಕೃತ್ಯಗಳ ಫಲರೂಪವಾದ ದುಃಖತಾಪಗಳನ್ನು
ಅನುಭವಿಸಿತನ್ನ ಪಾತಕಗಳನ್ನು ಪರಿಹರಿಸಿಕೊಳ್ಳಲು ಭಕ್ತನು ತವಕಿಸುತ್ತಾನೆ. ತನ್ನ
ಆತ್ಮಶುದ್ಧಿಗೆ ಸಹಾಯಕವೆಂದು ದುಃಖದ ಸನ್ನಿವೇಶವನ್ನು ಸಂತೋಷ
ಸಮಾರಂಭವೆಂಬಂತೆ ಉತ್ಸಾಹದಿಂದ ಆತನು ಸ್ವಾಗತಿಸುತ್ತಾನೆ. ಅದರಂತೆ ಭಕ್ತನು
ದುಃಖದಂತೆ ಸುಖವನ್ನು ಉಪೇಕ್ಷಾಬುದ್ಧಿಯಿಂದ ನೋಡುವನು. ದುಃಖವು
ಕ್ಲೇಶರೂವವಾಗಿರುವಂತೆ ಸುಖವೂ ಅನಂತಕ್ಷೇಶಕರವಾಗಿದೆ. ಒಂದು ಸುಖದ
ತುಣುಕಿಗಾಗಿ ಮಾನೆಔನು ಅದೆಷ್ಟು ದೈನ್ಯ ಸಂಕಟಗಳನ್ನು ಅನುಭವಿಸುತ್ತಾನೆ!
ಸಮಚಿತ್ತನಾದ ಭಕ್ತನ ದೃಷ್ಟಿಯಲ್ಲಿ ವೈಷಯಿಕ ಸುಖಹಾಗೂಸಾಂಸಾರಿಕ ಕ್ಲೇಶ
ಇವೆರಡಕ್ಕೂ ಒಂದೇ ಬೆಲೆ. ಎರಡನ್ನೂ ಹೇಯಭಾವನೆಯಿಂದಲೇ ಆತನು
ನಿರೀಕ್ಷಿಸುತ್ತಿರುವುದರಿಂದ ಆತನು ಸಮದುಃಖ ಸುಖನೆನಿಸುತ್ತಾನೆ.
ಸ್ತುತಿನಿಂದೆಗಳೆರಡರಲ್ಲಿಯೂ ನಿರ್ವಿಕಾರನಾಗಿರುವುದೂ ಒಂದು ಅಪೂರ್ವವಾದ
ಮಹತ್ವದ ಗುಣವಾಗಿದೆ. ಉಳದ ಎಲ್ಲ ಗುಣಗಳಿದ್ದರೂ ಸ್ಪುತಿನಿಂದಗಳಿಂದ
ವಿಕಾರವಶನಾಗದ ವ್ಯಕ್ತಿಯು ದೊರೆಯುವುದು ವಿರಳ. ಸರ್ವಸಂಗ
ಪರತ್ಯಾಗಿಗಳಿಗೂನಿಸ್ಚೃಹ ಸೇವಾಜೀವಿಗಳಿಗೂಸ್ತುತಿಯ ಮೋಹವನ್ನು ಮೀರಿ
ನಿಲ್ಲಲಾಗುವುದಿಲ್ಲ. ತನ್ನತ್ಯಾಗಸೇವೆಗಳನ್ನು ಸ್ತುತಿಸುವಾಗಎಂತಹತ್ಯಾಗತಪಸ್ವಿಯ
ಮುಖವೂ ಅರಳುತ್ತದೆ. ಫಲಾಶೆ ಇಲ್ಲದೆ ಕೇವಲ ಹರಿ ಪ್ರೀತಿಯ ಅಪೇಕ್ಷೆಯಿಂದ
ಸ್ವಕರ್ತವ್ಯಬುದ್ಧಿಯಿಂದ ನಡೆಯುವ ಕರ್ಮ ಯೋಗಿಯಾದ ಭಕ್ತನಿಗೆ
ಸ್ತುತಿನಿಂದೆಗಳೆರಡೂ ಸಮಾನವೇ ಆಗುವವು. ಇಂತಹ ದಿವ್ಯಸದ್ಗುಣಗಳನ್ನೆಲ್ಲ
ವಡೆಯಲು ಸಾಧಕನು ವ್ರಯತ್ನಿಸಿದಲ್ಲಿ ಅಧ್ಯಾತ್ಮನಿಧಿಯು ಅವನ
ಹಸ್ತಗತವಾಗುವುದರಲ್ಲಿವಿಲಂಬವಾಗುವುದಿಲ್ಲ.
ಯೇತು ಧರ್ಮ್ಯಾಮೃತಮಿದಂ ಯಥೋಕ್ತಂ ಪರ್ಯುಪಾಸತೇ।
ಈ ಸದ್ಗು ಣಗಳು ಧರ್ಮ ಹಾಗೂ ಅಮೃತಗಳಾಗಿವೆ.
Bannanje Govindacharya (1936–2020)Bhagavad Gita Pravachana
12.13–12.14
ಅದ್ವೇಷ್ಟಾ ಸರ್ವಭೂತಾನಾಂ ಮೈತ್ರಃ ಕರುಣಃ ಏವ ಚ |
ನಿರ್ಮಮಃ ನಿರಹಂಕಾರಃ ಸಮದುಃಖಸುಖಃ ಕ್ಷಮೀ ॥
ಸಂತುಷ್ಟಃ ಸತತಮ್ ಯೋಗೀ ಯತಾತ್ಮಾ ದೃಢನಿಶ್ಚಯಃ |
ಮಯಿ ಅರ್ಪಿತ ಮನಃ ಬುದ್ದಿಃ ಯಃ ಮತ್ ಭಕ್ತಃ ಸಃ ಮೇ ಪ್ರಿಯಃ -ಯಾವ ಜೀವಿಗಳಲ್ಲು ಹಗೆಯಿರದವನು, ಎಲ್ಲರ
ನೇಹಿಗನು, ದುಃಖವನ್ನು ಕಂಡು ಕರಗುವವನು, ನಾನು-ನನ್ನದು ಎಂಬ ಹಮ್ಮಿರದವನು, ಸುಖದಲ್ಲಿ ಹಿಗ್ಗದವನು,
ದುಃಖದಲ್ಲಿ ಕುಗ್ಗದವನು, ತಾಳ್ಮೆ ತಪ್ಪದವನು, ಯಾವಾಗಲೂ ತೃಪ್ತಿಯಿಂದಿರುವವನು, ಧ್ಯಾನಸಾಧನೆಯಲ್ಲಿ
ತೊಡಗಿದವನು, ಬಗೆ ಬಿಗಿ ಹಿಡಿದವನು, ತತ್ವದ ನಿರ್ಧಾರದಿಂದ ಬಗೆ ಗಟ್ಟಿಗೊಂಡವನು, ಬಗೆ-ತಿಳಿವುಗಳನ್ನು
ನನ್ನಲ್ಲಿ ಅರ್ಪಿಸಿದವನು- ಇಂತಹ ನನ್ನ ಭಕ್ತ ನನಗೆ ಅಚ್ಚುಮೆಚ್ಚು.
ಭಗವಂತ ಮೆಚ್ಚುವ ಮಾನವ ವರ್ತನೆಯ ಬಗ್ಗೆ ಕೃಷ್ಣ ವಿವರಿಸುತ್ತಾ ಮೊದಲನೆಯದಾಗಿ ಹೇಳುತ್ತಾನೆ: “ಅದ್ವೇಷ್ಟಾ
ಸರ್ವಭೂತಾನಾಂ”"ಎಂದು. ಅಂದರೆ ಯಾರನ್ನೂ ದ್ವೇಷಿಸದಿರುವುದು. ಇದು ಭಗವದ್ಭಕ್ತನಲ್ಲಿ ಇರಬೇಕಾದ
ಮೊದಲನೇ ಗುಣ. ದ್ವೇಷದಲ್ಲಿ ಎರಡು ವಿಧ. ಒಂದು ಒಳ್ಳೆಯವರನ್ನು(ಅವರ ಉದ್ಧಾರವನ್ನು ಕಂಡು)
ದ್ವೇಷಿಸುವುದು; ಇನ್ನೊಂದು ಕೆಟ್ಟವರನ್ನು(ಅವರ ಕೆಟ್ಟತನವನ್ನು ಕಂಡು) ದ್ವೇಷಿಸುವುದು. ದ್ವೇಷ ಬರುವುದು
ಅಸಹನೆ ಮತ್ತು ಹೊಟ್ಟೆಕಿಚ್ಚಿನಿಂದಾಗಿ. ಇನ್ನೊಬ್ಬರ ಉತ್ಕರ್ಷವನ್ನು ಕಂಡು ಸಂಕಟಪಡುವುದು ದ್ವೇಷ
ಒಳ್ಳೆಯವನಿರಲಿ, ಕೆಟ್ಟವನಿರಲಿ-ಹೊಟ್ಟೆಕಿಚ್ಚು ಅಸಹನೆ ಬೇಡ. ಎಲ್ಲಿ ಒಳ್ಳೆಯತನವಿದೆ ಅದನ್ನು ಪ್ರೀತಿಸು, ಸ್ನೇಹ
ಬೆಳೆಸು. ದುಷ್ಟರನ್ನು ದೂರ ಬಿಟ್ಟುಬಿಡು; ಒಳ್ಳೆಯತನವನ್ನು, ಒಳ್ಳೆಯವರನ್ನು ಪ್ರೀತಿಸು. ಇನ್ನೊಬ್ಬರ ಕಷ್ಟವನ್ನು
ಕಂಡು ಕರಗು. ನಾನು, ನನ್ನದು ,ನನ್ನಿಂದ ಎನ್ನುವ ಅಹಂಕಾರ ಮಮಕಾರವನ್ನು ಬಿಟ್ಟುಬಿಡು. “ಈಶಾವಾಸ್ಯಂ
ಇದಮ್ ಸರ್ವಂ' -ಎಲ್ಲವುದರ ಒಡೆಯ ಆ ಭಗವಂತ. ಆತ ಕೊಟ್ಟಿರುವುದರಿಂದ ಇದೆ ಎನ್ನುವ ಮನೋಭಾವ
ಇರಲಿ... ಹೇಗೆ ಅಹಂಕಾರ ಒಳ್ಳೆಯದಲ್ಲವೋ ಹಾಗೇ ಅತಿಯಾದ ಮಮಕಾರ ಒಳ್ಳೆಯದಲ್ಲ.
ಪುರಂದರದಾಸರಂತೆ ಪ್ರೀತಿಯಲ್ಲಿ ನಿರ್ಲಿಪ್ತತೆ(೧6॥೦೧66 ೩೫೩೦೧716೧0 ಇರಲಿ. ಪುರಂದರದಾಸರಿಗೆ ಒಬ್ಬ
ಮಗನಿದ್ದ. ಅವರು ಆತನನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಒಂದು ದಿನ ಪ್ರೀತಿಯ ಮಗ ಸತ್ತು ಹೋದ.
ಆಗ ಅವರು “ಗಿಳಿಯು ಪಂಜರದೊಳಲ್ಲ-ನೀನು ಕೊಟ್ಟ ಗಿಳಿ ನಿನ್ನನ್ನು ಸೇರಿತು” ಎಂದು ನಿರ್ಲಿಪ್ತರಾಗಿ
ಬದುಕಿದರು. ನಾವು ದುಃಖ-ಸುಖವನ್ನು ಕಾಣುವುದರಲ್ಲಿ ಸಮತೋಲನ ಸಾಧಿಸಬೇಕು. ಸುಖ ಬಂದಾಗ
ಹಾರಾಟ ಬೇಡ. ದುಃಖ ಬಂದಾಗ ಕುಸಿಯದೆ ಬಂದದ್ದನ್ನು ಎದುರಿಸಬೇಕು. ಇನ್ನೊಬ್ಬರ ಮೇಲೆ ಕ್ಷಮಾ ಭಾವನೆ
ಇರಲಿ. ಪ್ರತೀಕಾರ ಬೇಡ. [ತಪ್ಪು ಮಾಡಿದವರನ್ನು ನ್ಯಾಯಾಧೀಶರು, ಅಧಿಕಾರಿಗಳು ದಂಡಿಸಬಹುದು. ಅದು
ಅವರ ಕರ್ತವ್ಯಧರ್ಮ-ಅಲ್ಲಿ ಪ್ರತೀಕಾರವಿಲ್ಲ].
ಮುಂದುವರಿದು ಕೃಷ್ಣ ಹೇಳುತ್ತಾನೆ: “ಸಂತುಷ್ಟಃ ಸತತಂ ಯೋಗೀ ಯತಾತ್ಮಾ ದೃಢನಿಶ್ಚಯಃ” ಎಂದು.
ಯಾವುದೇ ಒಬ್ಬ ಮನುಷ್ಯ ಹಾಯಾಗಿರಬೇಕಾದರೆ ಇರಬೇಕಾದ ಚಿತ್ತವೃತ್ತಿ “ಅತೃಪ್ತಿ ಇಲ್ಲದೆ ಇರುವುದು”.
ಜೀವನದಲ್ಲಿ ನಮ್ಮೆಲ್ಲಾ ದುಃಖಗಳಿಗೆ ಕಾರಣ ಅತೃಪ್ತಿ. ಇಲ್ಲದೇ ಇರುವುದರ ಬಗೆಗೆ ಅತೃಪ್ತಿ ಪಡುವುದರ ಬದಲು
ಇರುವುದರ ಬಗ್ಗೆ ತೃಪ್ತಿ ಪಡು. ಏನಿದೆಯೋ ಅದರಲ್ಲಿ ತೃಪ್ತಿ ಪಡುವುದನ್ನು ಅಭ್ಯಾಸ ಮಾಡು. ಸದಾ
ಯೋಗಿಯಾಗು. ಇಲ್ಲಿ ಯೋಗಿ ಅನ್ನುವುದಕ್ಕೆ ಅನೇಕ ಅರ್ಥಗಳಿವೆ. ವಿವಿಧ ಆಸನಗಳ ಅಭ್ಯಾಸ ಯೋಗವಲ್ಲ.
ಮನಸ್ಸನ್ನು ಏಕಾಗ್ರಗೊಳಿಸಲು ಮಾಡಬೇಕಾದ ಪ್ರಕ್ರಿಯೆ ಯೋಗ. ಕೋತಿಯಂತೆ ಹರಿದಾಡುವ ನಮ್ಮ
ಮನಸ್ಸನ್ನು ಹಿಡಿದು ನಿಲ್ಲಿಸುವುದು-ಗಾಳಿಯನ್ನು ಹಿಡಿದು ನಿಲ್ಲಿಸಿದಂತೆ. ಅದು ತುಂಬಾ ವಿಚಿತ್ರ. ಮನಸ್ಸು ಜಾರಿ
ಹೋಗುವುದು ನಮಗೆ ತಿಳಿಯುವುದು ಅದು ಹೋದ ಮೇಲೆ. ಇಂತಹ ಮನಸ್ಸನ್ನು ಹಿಡಿದು ನಿಲ್ಲಿಸಲು ಮೊದಲು
ಬೆನ್ನುಹುರಿಯನ್ನು ನೆಟ್ಟಗೆ ಮಾಡಿ ಸ್ಥಿರವಾಗಿ ಕುಳಿತುಕೊಳ್ಳಲು ಅಭ್ಯಾಸ ಮಾಡುವುದು-ಆಸನ(ಯಾವ
ಆಸನವಾದರೂ ಸರಿ). ನಂತರ ಪ್ರಾಹಾಯಾಮದ ಮೂಲಕ ಒಳಗಿನ ಚಿಂತನೆಯನ್ನು ಜಾಗೃತಗೊಳಿಸುವುದು
ಯೋಗ. ಸ್ವಚ್ಛ ಮನಸ್ಸಿನಲ್ಲಿ ಭಗವಂತನನ್ನು ಕೂರಿಸುವುದು ಯೋಗ, ಬದುಕಿನಲ್ಲಿ ಜೀವನ ನಿರ್ವಹಣೆಗೆ
ಕಂಡುಕೊಂಡ(ಸಿಕ್ಕಿದ) ದಾರಿಯನ್ನು ಶ್ರದ್ಧೆಯಿಂದ ಪ್ರಾಮಾಣಿಕವಾಗಿ ಮಾಡುವುದು ಯೋಗ. ಈ ರೀತಿ
ಅಭ್ಯಾಸದಿಂದ ಮನಸ್ಸನ್ನು ನಮ್ಮ ಹಿಡಿತದಲ್ಲಿಟ್ಟುಕೊಳ್ಳಬೇಕು. ಏನನ್ನೂ ಕೆಟ್ಟ ಭಾವದಿಂದ ಕಾಣದೇ ಇರವುದನ್ನು
ಅಭ್ಯಸಿಸು. ಅಧ್ಯಾತ್ಮ ದಾರಿಯಲ್ಲಿ ಅಚಲವಾದ ನಿರ್ಧಾರವಿರಲಿ. ಏನೇ ಬರಲಿ ದೃಢನಿಶ್ಚಯದಿಂದ ಮುಂದೆ
ಸಾಗು. ಮನಸ್ಸು ಭಗವಂತನಿಗಾಗಿ ಹಾತೊರೆಯಲಿ. ಬುದ್ದಿ ಭಗವಂತನನ್ನು ಅರಿಯಲಿ. “ಈ ರೀತಿ ಯಾರು
ನನ್ನನ್ನು ಪ್ರೀತಿಸುತ್ತಾರೋ(ಭಕ್ತ) ಅವರು ನನಗೆ ಅತೀ ಪ್ರಿಯ” ಎನ್ನುತ್ತಾನೆ ಕೃಷ್ಣ.
Bibek Debroy (1955–2024)The Bhagavad Gita
(14)
‘...Is always satisfied, a yogi and controlled in mind, firm in resolution15 and
with mind and intellect immersed in me, such a devotee of mine is dear to
me.’