ये तु धर्म्यामृतमिदं यथोक्तं पर्युपासते ।
श्रद्दधाना मत्परमा भक्तास्तेऽतीव मे प्रियाः ॥
ye tu dharmyāmṛtamidaṃ yathoktaṃ paryupāsate |
śraddadhānā matparamā bhaktāste'tīva me priyāḥ ||
Sri Madhvacharya (1238–1317)Bhagavad Gita Tatparya Nirnaya
व्यस्तेन प्रियाः समस्तेनातीवप्रियाः। भक्तिस्तु व्यस्तेष्वप्युक्तैव। ‘यस्मान्नोद्विजते’ इत्यत्रापि स
चेत्यनेन भक्तिरनुषज्यते। धर्मसाधनं धर्म्यं तदेवामृतसाधनममृतं -
धर्म्यामृतम्॥20॥
Swami Sivananda (1887–1963)Bhagavad Gita
20. They verily who follow this immortal Dharma (doctrine or law) as described above,
endowed with faith, regarding Me as their supreme goal, they, the devotees, are exceedingly dear to
Me.
Sri Vishwesha Tirtharu (1931–2019)Gitasaroddhara
12.13–12.20 · ಭಕ್ತಶೀಲ ಸಂವರ್ಧನೆ
ಸಾಧಕನಲ್ಲಿ ಶೀಲಸಂವರ್ಧನೆ
ಸಾಧಕನು ನಿಷ್ಕುಮಕರ್ಮಾಚರಣ, ವೈರಾಗ್ಯಮತ್ತುಪ್ರಯತ್ನಗಳ ಜೊತೆಗೆ
ತನ್ನಲ್ಲಿ ಸದ್ಗುಣಗಳನ್ನು ಬೆಳೆಸಿಕೊಳ್ಳಲು ಪ್ರಯತ್ನಿಸಬೇಕು. ನಮ್ಮಲ್ಲಿ
ಸದ್ಗುಣಗಳನ್ನು ವಿಕಸಿತಗೊಳಿಸುವುದೂ ಪರಮಾತ್ಮನ ಸಾಕ್ಚಾತ್ಕಾರಕ್ಕೆ
ಆವಶ್ಯಕವಾಗಿದೆ. ಮುಕ್ತಿಯನ್ನು ಹೊಂದಲಿರುವ ಆತ್ಮರೆಲ್ಲರೂ ಸ್ವತಃ
ಸದ್ಗುಣರೂಪಿಗಳೇ ಆಗಿರುವರು. ಅಜ್ಞಾನದಿಂದ ಆವೃತವಾದ, ಆದರೆ
ಸ್ವಾಭಾವಿಕವಾಗಿ ಸದ್ಗುಣಾತ್ಮಕವಾದ ತಮ್ಮ ಚೈತನ್ಯವನ್ನು ಅವಿಷ್ಕಾರಗೊಳಿಸು
ವುದೇ ಮುಕ್ತಿ ಎಂದು ಶಾಸ್ತ್ರಗಳಲ್ಲಿ ಹೇಳಿದೆ. ಹೀಗೆ ನಮ್ಮ ಮೂಲಭೂತ
ಸದ್ಗುಣಗಳ ಅಭಿವ್ಯಕ್ತಿಯಾಗಲು ಅದಕ್ಕೆ ಅನುಕೂಲವೆನಿಸುವ ಪ್ರವೃತ್ತಿಗಳೇ ನಮ್ಮ
ಜೀವನದಲ್ಲಿ ವ್ಯಾಪಿಸಿಕೊಂಡಿರಬೇಕು. ಆತನಸ್ವಾಭಾವಿಕಧರ್ಮಗಳೆನಿಸಿದಸತ್ವ,
ಜ್ಞಾನ, ದಯೆ, ತ್ಯಾಗ ಮುಂತಾದ ಸ್ವರೂಪ ಸದ್ಗುಣಗಳಿಗೆ ತೀರ ವ್ಯತಿರಿಕ್ತವೂ
ವಿರೋಧಿಯೂ ಆದಪ್ರವೃತ್ತಿಯನ್ನು ನಮ್ಮಲ್ಲಿ ರೂಢಿಸಿಕೊಂಡಲ್ಲಿ ನಮ್ಮ ಆತ್ಮವು
ಇನ್ನೂ ಹೆಚ್ಚುಘನವಾದ ಆವರಣಕ್ಕೆ ಒಳಪಟ್ಟಂತಾಗುವುದು. ಅಸತ್ಯ, ಕ್ರೌರ್ಯ,
ಹಿಂಸೆ, ವಂಚನೆ ಮೊದಲಾದ ದುರ್ಗುಣಗಳು ಆತ್ಮಸ್ವರೂಪಕ್ಕೆ ತೀರ
ವಿಸಂಗತಗಳಾದ ವಿರೋಧಿ ಭಾವಗಳಾಗಿವೆ. ಇಂತಹ ದುರ್ಗುಣಗಳಿಗೆ ನಮ್ಮ
ಜೀವನದಲ್ಲಿ ಅವಕಾಶ ದೊರೆಯುವುದರಿಂದ ನಮ್ಮ ಆತ್ಮವನ್ನು ಕುಗ್ಗಿಸಿ ಅಜ್ಞಾನ
ಪ್ರಕೃತಿಗಳ ವಿಜೃಂಭಣೆಯನ್ನು ಇನ್ನೂ ಹೆಚ್ಚಿಸಿದಂತಾಗುತ್ತದೆ.
ಅದರಂತೆ ನಮ್ಮಲ್ಲಿ ದುರ್ಗುಣಗಳು ಹೆಚ್ಚಿದರೆ ಅನಂತಗುಣರೂಪಿಯಾದ
ಭಗವಂತನ ಧ್ಯಾನ ಸಾಕ್ಷಾತ್ಯಾರಗಳನ್ನು ಪಡೆಯುವ ಅರ್ಹತೆಯನ್ನೇ ನಾವು
ಕಳೆದುಕೊಂಡಂತಾಗುವುದು. ನಮ್ಮ ನಿತ್ಯವ್ಯವಹಾರಗಳೆಲ್ಲವೂ ದುರ್ಗುಣ
ದುರಾಚಾರಗಳಿಂದ ದೂಷಿತವಾಗಿದ್ದರೆ, ಸುಗುಣಮೂರ್ತಿಯಾದ ಪರಮಾತ್ಮನ
ಸಾಮ್ಯಪ್ರಾಪ್ತಿಯೆನ್ನಲಾಗುವ ಮುಕ್ತಿಯನ್ನು ಪಡೆಯಲು ನಾವು ಹೇಗೆ
ಅರ್ಹರಾಗಬಲ್ಲೆವು? ಆದುದರಿಂದ ನಮ್ಮ ಮೂಲಭೂತಸ್ಥಿತಿಯೆನಿಸಿದ ನಮ್ಮ
ಆತ್ಮದಸ್ವಾಭಾವಿಕ ಗುಣಧರ್ಮಗಳಿಗೂ ನಮ್ಮ ಪರಮಪ್ರಾಪ್ಯಸ್ಥಾನವಾಗಿರುವ
ಪರಮಾತ್ಮ ಸ್ವರೂಪಗುಣಗಳಿಗೂ ತೀರ ವಿರೋಧಿಯಾದ ಮನೋಧರ್ಮ
ಗಳಿಗೆ ನಮ್ಮ ಜೀವನದಲ್ಲಿ ಸರ್ವಥಾ ಅವಕಾಶವಿರಬಾರದು. ಇದರಿಂದ
ಭಗವಂತನಿಂದನಾವುಇನ್ನೂ ಹೆಚ್ಚು ದೂರ ಉಳಿಯುವ ಮತ್ತು ಆತ್ಮವಿಕಾಸಕ್ಕೆ
ಅಡಚಣೆಯಾಗುವ ದುರಂತ ಸನ್ನಿವೇಶವು ಒದಗುವುದು. ಆದುದರಿಂದ
ಅನಂತಗುಣಮೂರ್ತಿಯಾದ ಪರಮಾತ್ಮನ ಸಾಕ್ಷಾತ್ಕಾರದಿಂದ ನಮ್ಮಲ್ಲಿಯೇ
ಸಹಜವಾಗಿ ಹುದುಗಿರುವ ಚೇತನಾತ್ಮಕ ಸದ್ಗುಣಪ್ರಭೆಗಳಿಂದ ನಾವು
ಬೆಳಗಬೇಕಾದರೆ ನಮ್ಮ ಲೌಕಿಕ ಜೀವನವು ನೀತಿಶೀಲಸಂಪನ್ನವಾಗಿರಬೇಕು.
ನಮ್ಮ ವ್ಯವಹಾರಗಳೆಲ್ಲ ಸದ್ಗುಣಮಯವಾಗಿರಬೇಕು. ಸಾಧಕನು ತನ್ನಲ್ಲಿ
ಅಳವಡಿಸಿಕೊಳ್ಳಬೇಕಾದ ಈ ಗುಣಗಳ ಯಾದಿಯನ್ನು ಹನ್ನೆರಡನೆಯ
ಅಧ್ಯಾಯದಕೊನೆಯಲ್ಲಿ ಬರುವ,
ಅದ್ವೇಷ್ಟಾಸರ್ವಭೂತಾನಾಂ ಮೈತ್ರಃ ಕರುಣಏವಚ।
ಮುಂತಾದ ಶ್ಲೋಕಗಳಲ್ಲಿ ನಾವು ಕಾಣಬಹುದು. ಅದ್ವೇಷ, ಮೈತ್ರಿ, ಕರುಣೆ,
ನಿರ್ಮಮತೆ, ನಿರಹಂಕಾರ, ಸಹನೆ, ಅಲಂಬುದ್ಧಿ ಮೊದಲಾದವುಗಳೇನಮ್ಮಲ್ಲಿ
ಅಳವಡಿಸಿಕೊಳ್ಳಬೇಕಾದ ಸದ್ಗುಣಗಳಾಗಿವೆ. ಭಕ್ತನಲ್ಲಿ ಈ ಗುಣಗಳು
ತುಂಬಿರುತ್ತವೆ. ಇಂತಹ ಗುಣಶಾಲಿಯೇ ತನಗೆ ಅತ್ಯಂತ ಪ್ರೀತಿಪಾತ್ರನೆಂದು
ಸ್ವಾಮಿಯು ಅರುಹಿದ್ದಾನೆ. ಲೋಕದ ಯಾವುದೇ ವ್ಯವಹಾರದಿಂದ
ಉದ್ವಿಗ್ನನಾಗದೆ, ಯಾರಿಗೂ ಹೆದರದೆ ಭಕ್ತನು ತನ್ನ ಕರ್ತವ್ಯವನ್ನು
ನಿರ್ವಹಿಸುತ್ತಾನೆ. ಅದರಂತೆ ಅವನಿಂದಲೂ ಜನರಿಗೆ ಯಾವ ಭಯ, ಅಪಾಯ
ಉಪದ್ರವಗಳೂ ಇಲ್ಲ. ಸರ್ವರಿಗೂ ಅಭಯ ನೀಡಿತಾನೂ ನಿರ್ಭಯವಾಗಿ,
ಉಳಿದವರೂನಿರುದ್ದಿಗ್ಗರಾಗಿರುವಂತಹ ಸನ್ನಿವೇಶವನ್ನು ಭಕ್ತನು ನಿರ್ಮಿಸುತ್ತಾನೆ.
ಆತನು "ಸರ್ವಾರಂಭ ಪರಿತ್ಯಾಗಿ' ಅಂದರೆ ಪರಮಾತ್ಮನ ಪ್ರೀತಿಕರವಾಗದ ಕೇವಲ
ಸ್ವಫಲಾಪೇಕ್ಷೆಯ ಕರ್ಮಗಳಿಂದ ದೂರವಾಗಿರುತ್ತಾನೆ. ಅವನಿಗೆ
ಸುಖದುಃಖಗಳಿರಡರಲ್ಲಿಯೂ ಸಮದೃಷ್ಟಿ ಇರುತ್ತದೆ. ಸುಖದಂತೆ ದುಃಖವೂ
ಅವನಿಗೆ ಅಪೇಕ್ಷಿತವೇ. ತನ್ನ ದುಷ್ಕೃತ್ಯಗಳ ಫಲರೂಪವಾದ ದುಃಖತಾಪಗಳನ್ನು
ಅನುಭವಿಸಿತನ್ನ ಪಾತಕಗಳನ್ನು ಪರಿಹರಿಸಿಕೊಳ್ಳಲು ಭಕ್ತನು ತವಕಿಸುತ್ತಾನೆ. ತನ್ನ
ಆತ್ಮಶುದ್ಧಿಗೆ ಸಹಾಯಕವೆಂದು ದುಃಖದ ಸನ್ನಿವೇಶವನ್ನು ಸಂತೋಷ
ಸಮಾರಂಭವೆಂಬಂತೆ ಉತ್ಸಾಹದಿಂದ ಆತನು ಸ್ವಾಗತಿಸುತ್ತಾನೆ. ಅದರಂತೆ ಭಕ್ತನು
ದುಃಖದಂತೆ ಸುಖವನ್ನು ಉಪೇಕ್ಷಾಬುದ್ಧಿಯಿಂದ ನೋಡುವನು. ದುಃಖವು
ಕ್ಲೇಶರೂವವಾಗಿರುವಂತೆ ಸುಖವೂ ಅನಂತಕ್ಷೇಶಕರವಾಗಿದೆ. ಒಂದು ಸುಖದ
ತುಣುಕಿಗಾಗಿ ಮಾನೆಔನು ಅದೆಷ್ಟು ದೈನ್ಯ ಸಂಕಟಗಳನ್ನು ಅನುಭವಿಸುತ್ತಾನೆ!
ಸಮಚಿತ್ತನಾದ ಭಕ್ತನ ದೃಷ್ಟಿಯಲ್ಲಿ ವೈಷಯಿಕ ಸುಖಹಾಗೂಸಾಂಸಾರಿಕ ಕ್ಲೇಶ
ಇವೆರಡಕ್ಕೂ ಒಂದೇ ಬೆಲೆ. ಎರಡನ್ನೂ ಹೇಯಭಾವನೆಯಿಂದಲೇ ಆತನು
ನಿರೀಕ್ಷಿಸುತ್ತಿರುವುದರಿಂದ ಆತನು ಸಮದುಃಖ ಸುಖನೆನಿಸುತ್ತಾನೆ.
ಸ್ತುತಿನಿಂದೆಗಳೆರಡರಲ್ಲಿಯೂ ನಿರ್ವಿಕಾರನಾಗಿರುವುದೂ ಒಂದು ಅಪೂರ್ವವಾದ
ಮಹತ್ವದ ಗುಣವಾಗಿದೆ. ಉಳದ ಎಲ್ಲ ಗುಣಗಳಿದ್ದರೂ ಸ್ಪುತಿನಿಂದಗಳಿಂದ
ವಿಕಾರವಶನಾಗದ ವ್ಯಕ್ತಿಯು ದೊರೆಯುವುದು ವಿರಳ. ಸರ್ವಸಂಗ
ಪರತ್ಯಾಗಿಗಳಿಗೂನಿಸ್ಚೃಹ ಸೇವಾಜೀವಿಗಳಿಗೂಸ್ತುತಿಯ ಮೋಹವನ್ನು ಮೀರಿ
ನಿಲ್ಲಲಾಗುವುದಿಲ್ಲ. ತನ್ನತ್ಯಾಗಸೇವೆಗಳನ್ನು ಸ್ತುತಿಸುವಾಗಎಂತಹತ್ಯಾಗತಪಸ್ವಿಯ
ಮುಖವೂ ಅರಳುತ್ತದೆ. ಫಲಾಶೆ ಇಲ್ಲದೆ ಕೇವಲ ಹರಿ ಪ್ರೀತಿಯ ಅಪೇಕ್ಷೆಯಿಂದ
ಸ್ವಕರ್ತವ್ಯಬುದ್ಧಿಯಿಂದ ನಡೆಯುವ ಕರ್ಮ ಯೋಗಿಯಾದ ಭಕ್ತನಿಗೆ
ಸ್ತುತಿನಿಂದೆಗಳೆರಡೂ ಸಮಾನವೇ ಆಗುವವು. ಇಂತಹ ದಿವ್ಯಸದ್ಗುಣಗಳನ್ನೆಲ್ಲ
ವಡೆಯಲು ಸಾಧಕನು ವ್ರಯತ್ನಿಸಿದಲ್ಲಿ ಅಧ್ಯಾತ್ಮನಿಧಿಯು ಅವನ
ಹಸ್ತಗತವಾಗುವುದರಲ್ಲಿವಿಲಂಬವಾಗುವುದಿಲ್ಲ.
ಯೇತು ಧರ್ಮ್ಯಾಮೃತಮಿದಂ ಯಥೋಕ್ತಂ ಪರ್ಯುಪಾಸತೇ।
ಈ ಸದ್ಗು ಣಗಳು ಧರ್ಮ ಹಾಗೂ ಅಮೃತಗಳಾಗಿವೆ.
Bannanje Govindacharya (1936–2020)Bhagavad Gita Pravachana
ಯೇ ತು ಧರ್ಮ ಅಮೃತಮ್ ಇದಮ್ ಯಥಾ ಉಕ್ತಮ್ ಪರ್ಯುಪಾಸತೇ |
ಶ್ರದ್ದಧಾನಾಃ ಮತ್ ಪರಮಾಃ ಭಕ್ತಾಃ ತೇ ಅತೀವ ಮೇ ಪ್ರಿಯಾಃ -ಧರ್ಮ ಮೋಕ್ಷಗಳಿಗೆ ಸಾಧನವಾದ ಈ ಭಕ್ತಿ
ಯೋಗವನ್ನು ಇಲ್ಲಿ ಹೇಳಿದ ರೀತಿ ಆಚರಿಸುವವರು, ನನ್ನ ಹಿರಿಮೆಯನ್ನು ನಂಬಿ ನಡೆದು ನನ್ನಲ್ಲಿ ಭಕ್ತಿಯಿಟ್ಟವರು -
ಅಂತವರು ನನಗೆ ತುಂಬಾ ಅಚ್ಚುಮೆಚ್ಚು.
ನಮ್ಮ ಭಕ್ತಿ ಹೇಗಿರಬೇಕು, ಭಕ್ತನಲ್ಲಿರಬೇಕಾದ ಗುಣಗಳೇನು ಎನ್ನುವ ಈ ಅಮೃತ(ಮೋಕ್ರಸಾಧನಾ
ಧರ್ಮವನ್ನು ವಿವರಿಸಿದ ಕೃಷ್ಣ, ಇಲ್ಲಿ ಫಲಶ್ರುತಿಯಾಗಿ ಹೇಳುತ್ತಾನೆ: “ಇಲ್ಲಿ ಹೇಳಿದಂತೆ ಉಪಾಸನೆ
ಮಾಡುವವರು, ಗುಣಧರ್ಮವನ್ನು ಬೆಳೆಸಿಕೊಂಡವರು, ಭಕ್ತಿಯಿಂದ ಆಚರಣೆಗೆ ತಂದುಕೊಳ್ಳುವ ಭಕ್ತರು ನನಗೆ
ಪರಮ ಪ್ರಿಯರು” ಎಂದು.
ಇತಿ ದ್ವಾದಶೋ*ಧ್ಯಾಯಃ
ಹನ್ನೆರಡನೆಯ ಅಧ್ಯಾಯ ಮುಗಿಯಿತು
Bibek Debroy (1955–2024)The Bhagavad Gita
(20)
‘Those who are devoted and look upon me as the supreme goal and worship
according to this immortal dharma mentioned earlier, such devotees are
extremely dear to me.’