तेषामहं समुद्धर्ता मृत्युसंसारसागरात् ।
भवामि नचिरात्पार्थ मय्यावेशितचेतसाम् ॥
teṣāmahaṃ samuddhartā mṛtyusaṃsārasāgarāt |
bhavāmi nacirātpārtha mayyāveśitacetasām ||
Swami Sivananda (1887–1963)Bhagavad Gita
7. To those whose minds are set on Me, O Arjuna, verily I become ere long the saviour out
of the ocean of the mortal Samsara!
Bannanje Govindacharya (1936–2020)Bhagavad Gita Pravachana
12.6–12.7
ಯೇ ತು ಸರ್ವಾಣಿ ಕರ್ಮಾಣಿ ಮಯಿ ಸಂನ್ಯಸ್ಯ ಮತ್ ಪರಾಃ |
ಅನನ್ಯೇನ ಏವ ಯೋಗೇನ ಮಾಮ್ ಧ್ಯಾಯಂತಃ ಉಪಾಸತೇ ||
ತೇಷಾಮ್ ಅಹಂ ಸಮುದ್ಧರ್ತಾ ಮೃತ್ಯು ಸಂಸಾರ ಸಾಗರಾತ್ |
ಭವಾಮಿ ನಚಿರಾತ್ ಪಾರ್ಥ ಮಯ್ಯಾವೇಶಿತಚೇತಸಾಮ್ -ಕೆಲವರಿರುತ್ತಾರೆ: ಅವರು ಮಾಡಿದ್ದನ್ನೆಲ್ಲಾ ನನ್ನಲ್ಲಿ
ಅರ್ಪಿಸಿಬಿಡುತ್ತಾರೆ. ಅವರು ನನ್ನಲ್ಲೇ ಬಗೆಯಿಟ್ಟವರು. ಅವರ ಸಾಧನೆಯ ಗುರಿ ನಾನಲ್ಲದೆ ಬೇರಿಲ್ಲ. ನನ್ನನ್ನೇ
ನೆನೆಯುತ್ತಾ ಸೇವಿಸುತ್ತಾರೆ. ಓ ಪಾರ್ಥಾ, ನನ್ನನ್ನೇ ನೆಚ್ಚಿದ ಅಂತವರನ್ನು ನಾನು ಬಹುಬೇಗ ಸಾವಿನ ಬಾಳಿನ
ಕಡಲಿನಿಂದ ಬಿಡುಗಡೆಗೊಳಿಸುತ್ತೇನೆ.
ಕೃಷ್ಣ ಹೇಳುತ್ತಾನೆ: “ನನ್ನನ್ನು ಸೇರುವ ಸುಲಭ ಸಾಧನವೆಂದರೆ-ನೀನು ಜೀವನ ನಿರ್ವಹಣೆಗಾಗಿ ಯಾವ
ಕ್ರಿಯೆಯನ್ನು ಮಾಡುತ್ತೀಯೋ ಅದನ್ನು ನನ್ನಲ್ಲಿ ಅರ್ಪಿಸುವುದು” ಎಂದು. ಇಲ್ಲಿ ಕೃಷ್ಣ ಹೇಳುತ್ತಿರುವುದು ನಮ್ಮ
ಪ್ರತಿಯೊಂದು ಕ್ರಿಯೆಯ ಹಿಂದಿರಬೇಕಾದ ಅನುಸಂಧಾನವನ್ನು. ಈ ಕಾರ್ಯವನ್ನು ಭಗವಂತ ನನ್ನ ಕೈಯಿಂದ
ಮಾಡಿಸಿದ-ಇದು ಅವನಿಗರ್ಪಿತವಾಗಲಿ ಎನ್ನುವ ಅನುಸಂಧಾನ. ಈ ರೀತಿ ಇದ್ದಾಗ ನಾವು ಭಗವಂತನ
ಪೂರ್ಣಾನುಗ್ರಹಕ್ಕೆ ಪಾತ್ರರಾಗಬಹುದು. ಇಲ್ಲಿ ನಮ್ಮಲ್ಲಿರಬೇಕಾದ ಅತಿ ಮುಖ್ಯ ಅಂಶವೆಂದರೆ ಭಗವಂತನನ್ನು
ಅನನ್ಯವಾಗಿ ಏಕನಿಷ್ಠೆಯಿಂದ ಉಪಾಸನೆ ಮಾಡುವುದು. ನಮ್ಮ ಸಾಧನೆಯಲ್ಲಿ ಕೊರತೆ ಇರಬಹುದು, ಇಂದ್ರಿಯ
ನಿಗ್ರಹ . ಕಷ್ಟವಾಗಬಹುದು, ಸರ್ವಭೂತ ಹಿಶಚಿಂತನೆ.. ಆಗದೇ ಇರಬಹುದು, ಚಿಂತನೆಯಲ್ಲಿ
ಲೋಪದೋಷಗಳಿರಬಹುದು, ಏಕಾಗ್ರತೆ ಬಾರದೇ ಇರಬಹುದು. ಆದರೆ ಇಲ್ಲಿ ಕೃಷ್ಣನ ಭರವಸೆ ಏನೆಂದರೆ
ನನ್ನಲ್ಲಿ ಶರಣಾಗು, ನಿನ್ನ ಮನಸ್ಸನ್ನು ನನ್ನಲ್ಲಿ ನೆಡು-ನಾನು ನಿನ್ನನ್ನು ಉದ್ಧ್ಭರಿಸುತ್ತೇನೆ” ಎನ್ನುವುದು. ನಮ್ಮ
ಚಿತ್ತದಲ್ಲಿ ಭಗವಂತನನ್ನು ನೆಲೆಗೊಳಿಸಿದಾಗ ಭಗವಂತ ನಮ್ಮನ್ನು ಈ ಹುಟ್ಟು ಸಾವಿನ ಸಂಸಾರ ಸಾಗರದಿಂದ
ಪಾರು ಮಾಡುವ ಜವಾಬ್ಧಾರಿಯನ್ನು ವಹಿಸುತ್ತಾನೆ.
Bibek Debroy (1955–2024)The Bhagavad Gita
(7)
‘...With minds rendered unto me, O son of Pritha!7 I become swiftly their
rescuer from this mortal world that is like an ocean.’