अर्जुन उवाच ।
प्रकृतिं पुरुषं चैव क्षेत्रं क्षेत्रज्ञमेव च ।
एतद्वेदितुमिच्छामि ज्ञानं ज्ञेयं च केशव ॥
arjuna uvāca |
prakṛtiṃ puruṣaṃ caiva kṣetraṃ kṣetrajñameva ca |
etadveditumicchāmi jñānaṃ jñeyaṃ ca keśava ||
·
अर्जुन उवाच ।
प्रकृतिं पुरुषं चैव क्षेत्रं क्षेत्रज्ञमेव च ।
एतद्वेदितुमिच्छामि ज्ञानं ज्ञेयं च केशव ॥
arjuna uvāca |
prakṛtiṃ puruṣaṃ caiva kṣetraṃ kṣetrajñameva ca |
etadveditumicchāmi jñānaṃ jñeyaṃ ca keśava ||
not in this edition
Swami Sivananda (1887–1963)Bhagavad Gita
1. I wish to learn about Nature (matter) and the Spirit (soul), the Field and the Knower of the
Field, knowledge and that which ought to be known.
Bannanje Govindacharya (1936–2020)Bhagavad Gita Pravachana
ಅರ್ಥಾತ್- “ಕೇಶವಾ, ನಾನಿದನ್ನು ತಿಳಿಯಬಯಸುತ್ತೇನೆ: ಪ್ರಕೃತಿಯನ್ನು, ಪುರುಷನನ್ನು, ಕ್ಷೇತ್ರವನ್ನು,
ಕ್ಷೇತ್ರಜ್ಞನನ್ನು, ಜ್ಞಾನವನ್ನು ಮತ್ತು ಜ್ಞೇಯವನ್ನು”.
ವಾಸ್ತವವಾಗಿ ಈ ಶ್ಲೋಕ ಭಗವದ್ಗೀತೆಯ ಶ್ಲೋಕವಲ್ಲ. ಪ್ರಾಚೀನ ಭಾಷ್ಯಕಾರರು ಯಾರೂ ಈ ಶ್ಲೋಕವನ್ನು
ಗೀತೆಯ ಶ್ಲೋಕವೆಂದು ಪರಿಗಣಿಸಿಲ್ಲ. ಬಹಳ ಮಂದಿಯ ಅಭಿಪ್ರಾಯದಂತೆ ಇದು ಪ್ರಕ್ಷಿಪ್ತಶ್ಲೋಕ*. ಗೀತೆಯಲ್ಲಿ
ಒಟ್ಟು ಏಳುನೂರು ಶ್ಲೋಕಗಳಿವೆ. ಅದಕ್ಕಾಗಿ ಗೀತೆಯನ್ನು 'ಸಪ್ತಶತಿ' ಎಂದು ಕರೆಯುತ್ತಾರೆ. [ಇದಕ್ಕಾಗಿ
ವಾದಿರಾಜರು ತಮ್ಮ ಯುಕ್ತಿಮಲ್ಲಿಕಾದಲ್ಲಿ ಬ್ರಹ್ಮಸೂತ್ರ ಮತ್ತು ಭಗವದ್ಗೀತೆಯನ್ನು ರಚಿಸಿದ ವೇದವ್ಯಾಸರನ್ನು
'ಸೂತ್ರಸಪ್ತಶತೀಪತೇ' ಎಂದು ಸಂಬೊಧಿಸಿದ್ದಾರೆ]. ಇಂತಹ ಏಳುನೂರು ಶ್ಲೋಕಗಳಿರುವ ಭಗವದ್ಗೀತೆಗೆ ಈ
ಮೇಲಿನ ಶ್ಲೋಕವನ್ನು ಸೇರಿಸಿದರೆ ಒಟ್ಟು ಏಳುನೂರ ಒಂದು ಶ್ಲೋಕವಾಗುತ್ತದೆ. ಇನ್ನು ಈ ಶ್ಲೋಕದಲ್ಲಿ
ಕೇಳಲಾದ ಪ್ರಶ್ನೆಗೆ ಸಂಬಂಧಪಟ್ಟಂತೆ ಹಿಂದಿನ ಅಧ್ಯಾಯದ ಕೊನೆಯಲ್ಲಿ ಎಲ್ಲೂ ಕೃಷ್ಣ ಉಲ್ಲೇಖ ಮಾಡಿಲ್ಲ. ಈ
ಕಾರಣದಿಂದ ಇಲ್ಲಿ ಅರ್ಜುನ ಈ ರೀತಿ ಪ್ರಶ್ನೆ ಮಾಡುವ ಸಾಧ್ಯತೆ ಇಲ್ಲ. ಆದ್ದರಿಂದ ಈ ಶ್ಲೋಕ ಪ್ರಕ್ಷಿಪ್ತಶ್ಲೋಕ.
ಗೀತೆಯ ಏಳುನೂರು ಶ್ಲೋಕಗಳಲ್ಲಿ ಇದು ಸೇರಿಲ್ಲ.
ನೇರವಾಗಿ ಕೃಷ್ಣ ಅರ್ಜುನನಿಗೆ ಕ್ಷೇತ್ರ ಮತ್ತು ಕ್ಷೇತ್ರಜ್ಞ ಎನ್ನುವುದರ ಶಾಸ್ತ್ರೀಯ ಅರ್ಥವನ್ನು
ವಿವರಿಸುವುದರೊಂದಿಗೆ ಈ ಅಧ್ಯಾಯ ಆರಂಭವಾಗುತ್ತದೆ.