13.24

य एवं वेत्ति पुरुषं प्रकृतिं च गुणैः सह ।
सर्वथा वर्तमानोऽपि न स भूयोऽभिजायते ॥
ya evaṃ vetti puruṣaṃ prakṛtiṃ ca guṇaiḥ saha |
sarvathā vartamāno'pi na sa bhūyo'bhijāyate ||
Swami Sivananda (1887–1963)Bhagavad Gita
24. He who thus knows Spirit and Matter, together with the qualities, in whatever condition he may be, he is not reborn.
Bannanje Govindacharya (1936–2020)Bhagavad Gita Pravachana
ಯಃ ಏವಮ್‌ ವೇತ್ತಿ ಪುರುಷಮ್‌ ಪ್ರಕೃತಿಮ್‌ ಚ ಗುಣೈಃ ಸಹ | ಸರ್ವಥಾ ವರ್ತಮಾನಃ ಅಪಿ ನ ಸಃ ಭೂಯಃ ಅಭಿಜಾಯತೇ -ಹೀಗೆ ಪ್ರಕೃತಿ-ಪುರುಷರನ್ನು ಗುಣಗಳ ಜತೆಗೆ ಅರಿತವನು ಹೇಗೆ ಬದುಕಿದರೂ ಮತ್ತೆ ಮರಳಿ ಹುಟ್ಟುವುದಿಲ್ಲ. ಅನಾಧಿನಿತ್ಯವಾದ ಪ್ರಕೃತಿ(ಜಡ ಮತ್ತು ಚೇತನ), ಎಲ್ಲವುದಕ್ಕೂ ಕಾರಣ ಪುರುಷನಾದ ಪರಮಾತ್ಮ, ಆತನ ಅಧೀನವಾಗಿರುವ ಜೀವಜಾತ ಇದನ್ನು ಗುಣಗಳ ಜೊತೆಗೆ ಅರಿತವನು ಜ್ಞಾನಿ. ಇಂತಹ ಜ್ಞಾನಿ ಬಾಹ್ಯವಾಗಿ ಹೇಗೆ ಕಾಣಿಸಿಕೊಂಡರೂ ಕೂಡಾ, ಸತ್ಯದ ಸಾಕ್ಷಾತ್ಕಾರದಿಂದ ಆತ ಮೋಕ್ಷವನ್ನು ತಲುಪುತ್ತಾನೆ. ಇಲ್ಲಿ ಬಾಹ್ಯ ಸಂಸ್ಕಾರಕ್ಕೆಂತ ಜ್ಞಾನ ಎಷ್ಟು ಮುಖ್ಯ ಎನ್ನುವುದನ್ನು ಕೃಷ್ಣ ಒತ್ತಿ ಹೇಳಿದ್ದಾನೆ. ಮುಖವಾಡದ ಬದುಕಿನಿಂದ ಏನೂ ಉಪಯೋಗವಿಲ್ಲ. ಅದಕ್ಕಿಂತ ಮಿಗಿಲಾದದ್ದು ಸತ್ಯದ ಸಾಕ್ಷಾತ್ಕಾರ. ಸತ್ಯದ ಸಾಕ್ಷಾತ್ಕಾರವಾದಾಗ ತಾನಾಗಿಯೇ ಲೌಕಿಕ ಪ್ರಪಂಚ ಎಷ್ಟು ಅರ್ಥಹೀನ ಎನ್ನುವುದು ತಿಳಿಯುತ್ತದೆ. ಜ್ಞಾನಕ್ಕೆಂತ ಮಿಗಿಲಾದ ಇನ್ನೊಂದು ಪವಿತ್ರಸಾಧನವಿಲ್ಲ. ಕರ್ಮಾನುಷ್ಠಾನದಲ್ಲಿ ಅಕಾಸ್ಮಾತ್‌ ಚ್ಯುತಿಯಾದರೂ ಜ್ಞಾನ ಮಾರ್ಗದಲ್ಲಿ ಸಾಗುವವನಿಗೆ ಅದು ಬಾಧಕವಾಗುವುದಿಲ್ಲ. ಜ್ಞಾನ ಅವನನ್ನು ಸರಿದಾರಿಗೆ ತಂದು ನಿಲ್ಲಿಸುತ್ತದೆ ಮತ್ತು ಆತ ಮೋಕ್ಷವನ್ನು ಪಡೆಯುತ್ತಾನೆ. ಕೃಷ್ಣ ಪ್ರಕೃತಿ ಮತ್ತು ಪುರುಷನನ್ನು ಗುಣ ಸಹಿತ ತಿಳಿಯುವುದು ಮೋಕ್ಷಮಾರ್ಗ ಎಂದು ಹೇಳಿದ. ಹಾಗಿದ್ದರೆ ಇದನ್ನು ತಿಳಿಯುವ ಬಗೆ ಯಾವುದು? ಇದನ್ನು ಕೃಷ್ಣ ಮುಂದಿನ ಎರಡು ಶ್ಲೋಕಗಳಲ್ಲಿ ವಿವರಿಸುತ್ತಾನೆ. ಭಗವಂತನನ್ನು ಸೇರಲು ಅನೇಕ ವಿಧಾನಗಳಿವೆ. ಎಲ್ಲರಿಗೂ ಎಲ್ಲವೂ ಅಲ್ಲ. ಏಕೆಂದರೆ ಒಬ್ಬರು ತಿಳಿದಂತೆ ಇನ್ನೊಬ್ಬರು ತಿಳಿದುಕೊಳ್ಳಲು ಆಗುವುದಿಲ್ಲ. ಬನ್ನಿ ಈ ಕುರಿತು ಕೃಷ್ಣನ ವಿವರಣೆಯನ್ನು ಆಲಿಸೋಣ.
Bibek Debroy (1955–2024)The Bhagavad Gita
(23) ‘He who knows the nature of purusha, and of prakriti, with the qualities, whatever be the position he is in, will not be reborn.’