ध्यानेनात्मनि पश्यन्ति केचिदात्मानमात्मना ।
अन्ये साङ्ख्येन योगेन कर्मयोगेन चापरे ॥
dhyānenātmani paśyanti kecidātmānamātmanā |
anye sāṅkhyena yogena karmayogena cāpare ||
Sri Madhvacharya (1238–1317)Bhagavad Gita Tatparya Nirnaya
द्विविधं पुरुषं चैव प्रकृतिं द्विविधामपि।
सह तत्तद्गुणैः सम्यग् ज्ञात्वा पश्यति यः पुमान्।
सर्वथा वर्तमानोऽपि न स भूयोऽभिजायते’॥24॥
Swami Sivananda (1887–1963)Bhagavad Gita
25. Some by meditation behold the Self in the Self by the Self, others by the Yoga of
knowledge, and others by the Yoga of action.
Bannanje Govindacharya (1936–2020)Bhagavad Gita Pravachana
ಧ್ಯಾನೇನ ಆತ್ಮನಿ ಪಶ್ಯಂತಿ ಕೇಚಿತ್ ಆತ್ಮಾನಮ್ ಆತ್ಮನಾ |
ಅನ್ಯೇ ಸಾಂಖ್ಯೇನ ಯೋಗೇನ ಕರ್ಮಯೋಗೇನ ಚ ಅಪರೇ -ಕೆಲವರು ಧ್ಯಾನದ ಮೂಲಕ ಪರಮಾತ್ಮನನ್ನು
ತನ್ನಲ್ಲಿ ಬಗೆಗಣ್ಣಿನಿಂದ ಕಾಣುತ್ತಾರೆ. ಕೆಲವರು ಶಾಸ್ತ್ರದ ಅರಿವಿನ ಮೂಲಕ. ಕೆಲವರು ಕರ್ಮಯೋಗದ ಮೂಲಕ.
ಸಾಧನೆ ಮಾಡಲು ಮೊದಲು ನಮಗೆ ಸಾಧನಾ ಶರೀರ ಬೇಕು. ಹೀನಯೋನಿಯಲ್ಲಿ ಪೂರ್ಣತೆ ಪಡೆಯದ
ಶರೀರದಲ್ಲಿ ಹುಟ್ಟಿ ಬಂದರೆ ಸಾಧನೆ ಸಾಧ್ಯವಿಲ್ಲ. ಮೊದಲು ನಾವು ಮಾನವರಾಗಬೇಕು(ಪೂರ್ಣತೆಯನ್ನು ಪಡೆದ
ಶರೀರದಲ್ಲಿ ನೆಲೆಸುವ ಪುರುಷರಾಗಬೇಕು). ಇದಕ್ಕಾಗಿ "ಮಾನವ ಜನ್ಮ ದೊಡ್ಡದು, ಅದನ್ನು ಹಾಳು ಮಾಡಿ
ಕೊಳ್ಳದಿರಿ ಹುಚ್ಚಪ್ಪಗಳಿರಾ! " ಎಂದು ದಾಸರು ಹಾಡಿರುವುದು. ಸಾಧನೆಗೆ ಬೇಕಾದ ಸಾಧನಾ ಶರೀರ ಇಲ್ಲದಿದ್ದರೆ
ಯಾವಸಾಧನೆಯೂ ಸಾಧ್ಯವಿಲ್ಲ.
ಕೆಲವರು ತಮ್ಮ ಸ್ವರೂಪ ಯೋಗ್ಯತೆಯಿಂದ ಮತ್ತು ಭಗವದನುಗ್ರಹದಿಂದ ಜನ್ಮತಃ ಜ್ಞಾನ ಪಡೆದು ಹುಟ್ಟುತ್ತಾರೆ.
ಇವರಿಗೆ ಜ್ಞಾನ ನಿಚ್ಚಳ. ಇಂತವರು ತಮ್ಮ ಜೀವ ಯೋಗ್ಯತೆಯಿಂದ ತಮ್ಮ ಜೀವ ಸ್ವರೂಪದೊಳಗೆ- ಬಿಂಬರೂಪಿ
ಭಗವಂತನನ್ನು ಕಾಣಬಲ್ಲರು. ಇಂತವರು ಯಾವುದೇ ಅಧ್ಯಯನ ಮಾಡದೆ. ಸದಾ ಭಗವಂತನನ್ನು
ಅಂತರಂಗದಲ್ಲಿ ಕಾಣುತ್ತಾ-ಭಗವಂತನನ್ನು ಸೇರುತ್ತಾರೆ. ಬ್ರಹ್ಮಾದಿ ಸಕಲ ದೇವತೆಗಳು, ದೇವಾಂಶ
ಸಂಭೂತರು ಈ ರೀತಿ ಕಣ್ಮುಚ್ಚಿ ಭಗವಂತನನ್ನು ಕಾಣಬಲ್ಲರು, ಕಂಡು ಆತನನ್ನು ಸೇರಬಲ್ಲರು.
ಕೆಲವರು ಶುದ್ಧ ಆತ್ಮತತ್ವ ವಿಜ್ಞಾನದಿಂದ ಮೊದಲು ಭಗವಂತನನ್ನು ತಿಳಿಯುತ್ತಾರೆ. ಜೀವನನ್ನು,
ಪರಮಾತ್ಮನನ್ನು ತಿಳಿಯುವುದೇ ಸಾಂಖ್ಯಯೋಗ. ಈ ರೀತಿ ಜ್ಞಾನಗಳಿಸಿ, ಜ್ಞಾನಸ್ಪುರಣವನ್ನು ಗಳಿಸಿ, ಧ್ಯಾನದ
ಮೂಲಕ ಇವರು ಭಗವಂತನನ್ನು ಕಂಡು ಭಗವಂತನನ್ನು ಸೇರುತ್ತಾರೆ.
ಇನ್ನು ಕೆಲವರು ತಮ್ಮ ನಿರಂತರ ಕರ್ಮಾನುಷ್ಠಾನದಿಂದ ದೇಹ ಶುದ್ಧಿ ಸಾಧಿಸಿ, ಅದರಿಂದ ಭಗವಂತನ
ಒಲುಮೆಗೆ ಪಾತ್ರರಾಗಿ, ಜ್ಞಾನಗಳಿಸಿ, ಧ್ಯಾನದಲ್ಲಿ ಭಗವಂತನನ್ನು ಕಂಡು ಭಗವಂತನನ್ನು ಸೇರುತ್ತಾರೆ.
Bibek Debroy (1955–2024)The Bhagavad Gita
(24)
‘Some, through meditation, see the atman in the atman with the atman.36
Others use sankhya yoga37 and still others use karma yoga.’