13.29

समं पश्यन्हि सर्वत्र समवस्थितमीश्वरम् ।
न हिनस्त्यात्मनात्मानं ततो याति परां गतिम् ॥
samaṃ paśyanhi sarvatra samavasthitamīśvaram |
na hinastyātmanātmānaṃ tato yāti parāṃ gatim ||
Sri Madhvacharya (1238–1317)Bhagavad Gita Tatparya Nirnaya
13.28–13.29
जीवेषु दुःखयोगादिरूपेण विनश्यत्स्वप्यतथाभूतम् - ‘दुःखयोगादिरूपेण जीवेषु विनश्यत्स्वपि। दुःखयोगादिरहितः सर्वजीवेष्वपि स्थितः। गुणैः सर्वै समो नित्यं न हीनो हीनगोऽपि सन्। इति पश्यति यो विष्णुं स एव न तमो व्रजेत्’ इति पाद्मे॥27-28॥
Swami Sivananda (1887–1963)Bhagavad Gita
29. Because he who sees the same Lord dwelling equally everywhere does not destroy the Self by the self, he goes to the highest goal.
Bannanje Govindacharya (1936–2020)Bhagavad Gita Pravachana
ಸಮಮ್‌ ಪಶ್ಯನ್‌ ಹಿ ಸರ್ವತ್ರ ಸಮವಸ್ಥಿತಮ್‌ ಈಶ್ವರಮ್‌ | ನ ಹಿನಸ್ತಿ ಆತ್ಮನಾ ಆತ್ಮನಮ್‌ ತತಃ ಯಾತಿ ಪರಾಮ್‌ ಗತಿಮ್‌ - ಸರ್ವ ಶಕ್ತನಾದ ಭಗವಂತ ಎಲ್ಲೆಡೆಯೂ ಏರುಪೇರಿಲ್ಲದೆ.. ಏಕರೂಪನಾಗಿದ್ದಾನೆ ಎಂದು. ತಿಳಿದವನು ತನ್ನ ಏಳಿಗೆಗೆ ತಾನೇ ತಾನು ಅಡ್ಡಿಯನೊಡ್ಡಿಕೊಳ್ಳುವುದಿಲ್ಲ. ಮುಂದೆ ಪರಮ ಪದವನ್ನು ಪಡೆಯುತ್ತಾನೆ. ನಾವು ನಮ್ಮ ದೇಹದಲ್ಲಿ ಸ್ಥಿತರು. ಆದರೆ ಭಗವಂತ “ಸಂಸ್ಥಿತ', ಈ ದೇಹದೊಳಗಿರುವ ನಮಗೆ ಈ ದೇಹದ ಜ್ಞಾನ ಕೂಡಾ ಇಲ್ಲ. ಏಕಿದ್ದೇವೆ ಎಂದೂ ಗೊತ್ತಿಲ್ಲ. ನಾವು ಒಳಗಿದ್ದು ಆನಂದ ದುಃಖವನ್ನು ಅನುಭವಿಸುತ್ತಿರುತ್ತೇವೆ. ಆದರೆ ಭಗವಂತ ದುಃಖ ಅಜ್ಞಾನದ ಸ್ಪರ್ಶವಿಲ್ಲದ ಆನಂದಮೂರ್ತಿ. ಆತ ನಮ್ಮೊಳಗಿರುವ ಸರ್ವ ತತ್ತ್ವಾಭಿಮಾನಿ ದೇವತೆಗಳಿಗೆ ಸಮವಸ್ಥಿತನಾಗಿ ಎತ್ತರದಲ್ಲಿದ್ದಾನೆ. ದುಃಖ ಅಜ್ಞಾನದ ಸ್ಪರ್ಶವಿಲ್ಲದ ಭಗವಂತ ಯಾರನ್ನೂ ಮೇಲು-ಕೀಳು ಭಾವದಿಂದ ನೋಡುವುದಿಲ್ಲ. ಪ್ರತಿಯೊಬ್ಬರನ್ನೂ ಅವರವರ ಕರ್ಮ ಮತ್ತು ಜೀವಯೋಗ್ಯತೆಗೆ ತಕ್ಕಂತೆ ಸಮನಾಗಿ ಕಾಣುತ್ತಾನೆ. ಭಗವಂತ ಸಮಸ್ತ ಜಡ-ಚೇತನದೊಳಗೆ ಜಗದೀಶ್ವರನಾಗಿ ನಿಂತು ನಮ್ಮ ಜೀವ ಸ್ವಭಾವಕ್ಕೆ ತಕ್ಕಂತೆ, ಕರ್ಮಕ್ಕನುಗುಣವಾಗಿ ನಮ್ಮನ್ನು ನಡೆಸುತ್ತಿದ್ದಾನೆ. ಈ ಸತ್ಯ ತಿಳಿದಾಗ “ನೀನು ನಿನಗೆ ಹಿಂಸೆ ಮಾಡದೆ ಬದುಕಬಹುದು” ಎನ್ನುತ್ತಾನೆ ಕೃಷ್ಣ. ನಿನ್ನ ಅರಿವಿಲ್ಲದೆ, ಭಗವಂತನ ಅರಿವಿಲ್ಲದೆ ಬದುಕುವುದು ಒಂದು ಆತ್ಮಹಿಂಸೆ. ಒಮ್ಮೆ "ನಾನು' ಅಂದರೇನು, ನನ್ನೊಳಗಿರುವ ಭಗವಂತನೆಂದರೇನು ಎನ್ನುವ ವಸ್ತುಸ್ಥಿತಿ ತಿಳಿದರೆ ಹಿಂಸೆಯಾಗುವುದಿಲ್ಲ. ಅದು ತಿಳಿಯದೆ ಬದುಕುವುದು ಅಜ್ಞಾನದ ಮತ್ತು ದುಃಖದ ಬದುಕು. ಜೀವನದಲ್ಲಿ ಬರುವ ಪ್ರತಿಯೊಂದು ಸಂಗತಿಯನ್ನು-“ನಾನು ಹಿಂದೆ ಮಾಡಿದ ಕರ್ಮದ ಫಲ-ಅದನ್ನು ಭಗವಂತ ಮಾಡಿಸಿದ” ಎಂದು ತಿಳಿದುಕೊಂಡರೆ ದುಃಖವಿಲ್ಲದೆ ಆನಂದದಿಂದ ಬದುಕಬಹುದು. ನಮ್ಮ ಮನಸ್ಸೇ ನಮಗೆ ದುಃಖ ಕೊಡುವುದು. ಅದೇ ಆನಂದ ಕೊಡುವುದು. ನಮಗೆ ದುಃಖವಾಗುವುದು ನಮ್ಮ ತಿಳುವಳಿಕೆಯಿಂದಲೇ ಹೊರತು ಇನ್ಯಾವುದರಿಂದಲೂ ಅಲ್ಲ. ಉದಾಹರಣೆಗೆ ಒಬ್ಬ ಶ್ರೀಮಂತ ಯಾವುದೋ ಕಾರಣದಿಂದ ತನ್ನಲ್ಲಿರುವ ಎಲ್ಲಾ ಸಂಪತ್ತನ್ನು ಕಳೆದುಕೊಳ್ಳುತ್ತಾನೆ. ಆಗ ಆತ “ನನ್ನ ಪೂರ್ವ ಜನ್ಮದ ಕರ್ಮಕ್ಕನುಗುಣವಾಗಿ ಈ ಘಟನೆ ನಡೆಯಿತು. ಎಲ್ಲವೂ ಭಗವಂತನ ಲೀಲೆ; ಕೊಡುವವನೂ ಅವನೇ, ತೆಗೆದುಕೊಳ್ಳುವವನೂ ಅವನೇ; ಪಾಲಿಸುವವನೂ ಅವನೇ; ಇದಕ್ಕಾಗಿ ನಾನೇಕೆ ಚಿಂತಿಸಬೇಕು” ಎಂದು ತಿಳಿದುಕೊಂಡರೆ ಆತ ಆನಂದದಿಂದಿರಬಹುದು. ಇದನ್ನು ಬಿಟ್ಟು ಬ್ರಹ್ಮಾಂಡವೇ ತಲೆಮೇಲೆ ಬಿದ್ದಂತೆ ವರ್ತಿಸಿದರೆ ಅದು ನಮ್ಮನ್ನು ನಾವು ಹಿಂಸಿಸಿಕೊಂಡಂತೆ. ನಾವು ಎಲ್ಲವನ್ನು ಪ್ರೇಕ್ಷಕರಾಗಿ ಕಾಣಲು ಅಭ್ಯಾಸ ಮಾಡಿಕೊಳ್ಳಬೇಕು. ಭಗವಂತನ ಅರಿವಿನೊಂದಿಗೆ ಶಾಂತವಾದ ಇಂತಹ ಬದುಕು ನಮ್ಮನ್ನು ಪರಮಪದವಾದ ಮೋಕ್ಷದತ್ತ ಕೊಂಡೊಯ್ಯಬಲ್ಲದು. ಭಗವಂತನ ಚಿಂತನೆಯ ಇನ್ನೊಂದು ಅನುಸಂಧಾನವನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ನಮ್ಮ ಮುಂದಿಟ್ಟಿದ್ದಾನೆ. ಎಚ್ಚರಿಕೆಯಿಂದ ಈ ಶ್ಲೋಕವನ್ನು ನಾವು ನೋಡಿದರೆ ನಮಗೆ ಸತ್ಯ ತಿಳಿಯುತ್ತದೆ. ನಮ್ಮಲ್ಲಿ ಎಲ್ಲರಲ್ಲೂ ಇರುವ ಒಂದು ಗೊಂದಲ ಎಂದರೆ- “ಕ್ರಿಯೆಯನ್ನು ನಾನು ಮಾಡುವುದೇ ಅಥವಾ ನನ್ನಿಂದ ಭಗವಂತ ಮಾಡಿಸುವುದೇ? ಭಗವಂತ ಮಾಡಿಸುವುದಾದರೆ ಏಕೆ ನನ್ನಿಂದ ಕೆಟ್ಟ ಕೆಲಸವನ್ನು ಮಾಡಿಸುತ್ತಾನೆ?”ಎಂಬುದು. ಈ ಪ್ರಶ್ನೆಗೆ ಕೃಷ್ಣ ಈ ಶ್ಲೋಕದಲ್ಲಿ ಅಡಕವಾಗಿ ಉತ್ತರ ಕೊಟ್ಟಿದ್ದಾನೆ. ಇಲ್ಲಿ Hod ಕೃಷ್ಣ ಹೇಳಿದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಈ ಶ್ಲೋಕವನ್ನು ನಾವು ನೋಡಬೇಕಾಗಿದೆ.
Bibek Debroy (1955–2024)The Bhagavad Gita
(28) ‘He who sees God equally established in everything, he doesn’t kill the atman with the atman,40 and, therefore, attains supreme liberation.’