रजसि प्रलयं गत्वा कर्मसङ्गिषु जायते ।
तथा प्रलीनस्तमसि मूढयोनिषु जायते ॥
rajasi pralayaṃ gatvā karmasaṅgiṣu jāyate |
tathā pralīnastamasi mūḍhayoniṣu jāyate ||
Swami Sivananda (1887–1963)Bhagavad Gita
15. Meeting death in Rajas, he is born among those who are attached to action; and dying in
Tamas, he is born in the womb of the senseless.
Bannanje Govindacharya (1936–2020)Bhagavad Gita Pravachana
ರಜಸಿ ಪ್ರಳಯಮ್ ಗತ್ವಾ ಕರ್ಮ ಸಂಗಿಷು ಜಾಯತೇ |
ತಥಾ ಪ್ರಲೀನಃ ತಮಸಿ ಮೂಢ ಯೋನಿಷು ಜಾಯತೇ -ರಜೋಗುಣದಲ್ಲಿ ಸಾವನ್ನಪ್ಪಿದರೆ ಕರ್ಮಕ್ಕೆ
ಅಂಟಿಕೊಂಡವರಲ್ಲಿ ಹುಟ್ಟುತ್ತಾನೆ. ತಮೋಗುಣದಲ್ಲಿ ಸತ್ತವನು ತಿಳಿವಿರದ ಹೀನಯೋನಿಗಳಲ್ಲಿ ಹುಟ್ಟುತ್ತಾನೆ.
ಜ್ಞಾನಕ್ಕೆ ಪೂರಕವಲ್ಲದ ಕರ್ಮಾನುಷ್ಠಾನ ಮಾಡುತ್ತಾ ರಜೋಗುಣದ ಪ್ರಭಾವದಲ್ಲಿ ದುಡ್ಡು-ದುಡ್ಡು ಎಂದು ಬದುಕಿ,
ಅದೇ ಪ್ರಭಾವದಲ್ಲಿ ಸತ್ತರೆ-ಆಗ ಮುಂದಿನ ಜನ್ಮದಲ್ಲಿ ಕರ್ಮಕ್ಕೆ ಅಂಟಿಕೊಂಡು ಹುಟ್ಟಬೇಕಾಗುತ್ತದೆ. ಇನ್ನು
ತಮೋಗುಣದ ಪ್ರಭಾವದಲ್ಲಿ ಬದುಕಿ ಸತ್ತರೆ ಮುಂದಿನ ಜನ್ಮದಲ್ಲಿ ಹೀನಯೋನಿಯಲ್ಲಿ ಹುಟ್ಟಬೇಕಾಗುತ್ತದೆ. ಇಲ್ಲಿ
'ಹೀನಯೋನಿ' ಅಂದರೆ ಮನುಷ್ಯ ಕೂಡಾ ಆಗಬಹುದು. ಯಾವುದೇ ಸಂಸ್ಕಾರವಿಲ್ಲದ, ಸ್ವಚ್ಛತೆ ಇಲ್ಲದ,
ಜ್ಞಾನವಿಲ್ಲದ, ಕೇವಲ ಮನುಷ್ಯ ಆಕಾರವನ್ನು ಪಡೆದು, ಮನುಷ್ಯತ್ವದ ಲವಲೇಷವಿಲ್ಲದೆ ಮನುಷ್ಯರಾಗಿ
ಬದುಕುವುದೂ ಕೂಡಾ ಹೀನಯೋನಿ ಜನನ. ಇದಕ್ಕಿಂತ ಪ್ರಾಣಿ ಜನ್ಮ ಎಷ್ಟೋ ಮೇಲು. ಇದು ತಮೋಗುಣದಲ್ಲಿ
ಸತ್ತಾಗ ಆಗುವ ಪರಿಣಾಮ. [ಸಾಯುವ ಕೊನೇ ಕ್ಷಣದಲ್ಲಿ ರಜಸ್ಸು ಮತ್ತು ತಮಸ್ಸಿನ ಪ್ರಭಾವದಿಂದ ಸತ್ತರೆ, ಅದು
ನಮ್ಮ ಮುಂದಿನ ಜನ್ಮದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎನ್ನುವುದನ್ನು -ಘಜೇಂದ್ರನಾಗಿ ಹುಟ್ಟಿದ
ಇಂದ್ರದ್ಯುಮ್ನ ಮತ್ತು ಜಿಂಕೆಯಾಗಿ ಹುಟ್ಟಿದ ಭರತ ಚಕ್ರವರ್ತಿಯ ಕಥೆಯಿಂದ ನಾವು ತಿಳಿಯಬಹುದು.
ಪುನರ್ಜನ್ಮದ ಬಗ್ಗೆ ಇತ್ತೀಚಿನ ಸಂಶೋಧನೆ ಬಗ್ಗೆ ತಿಳಿಯಲು Edgar cayce(1877 to 1920) ಅವರ ಪುಸ್ತಕಗಳು
ಹಾಗೂ ಅವರ ಮೇಲಿನ ಸಂಶೋಧನೆಯ ವಿವರಗಳನ್ನು ನೋಡಿ ].
Bibek Debroy (1955–2024)The Bhagavad Gita
(15)
‘Death when rajas becomes strong leads to rebirth as someone addicted to
action. And death when tamas,33 leads to rebirth as sub-human species.’34