14.16

कर्मणः सुकृतस्याहुः सात्त्विकं निर्मलं फलम् ।
रजसस्तु फलं दुःखमज्ञानं तमसः फलम् ॥
karmaṇaḥ sukṛtasyāhuḥ sāttvikaṃ nirmalaṃ phalam |
rajasastu phalaṃ duḥkhamajñānaṃ tamasaḥ phalam ||
Sri Madhvacharya (1238–1317)Bhagavad Gita Tatparya Nirnaya
14.16–14.21
‘महालक्ष्मीरिति परा भार्या नारायणस्य या। प्रकृतिर्नाम सा ज्ञेया प्रकर्षेण करोति यत्। तस्यास्तु त्रीणि रूपाणि सत्त्वं नाम रजस्तमः। सृष्टिकाले विभज्यन्ते सत्त्वं श्रीः सद्गुणप्रभा। रजो रञ्जनकर्तृत्वाद् भू सा सृष्टिकरी यतः। यदावेशादियं पृथ्वी भूमिरित्येव कथ्यते। जीवानां ग्लपनाद् दुर्ग तम इत्येव कीर्तिता। एताभिस्तिसृभिर्जीवाः सर्वे बद्धा अमुक्तिगाः। सर्वान् बध्नन्ति सर्वाश्च तथाऽपि तु विशेषतः। श्रीर्देवबन्धिका नृणां भूर्दैत्यानामथापरा। एताभ्योऽन्यं परं चैव विष्णुं ज्ञात्वा विमुच्यते। सामर्थ्यातिशयादासां नैताभ्यो विद्यते परः। इति यावद् विजानाति तावत् तं नृपशुं विदुः। तस्मादाभ्योऽधिकगुणो विष्णुर्ज्ञेयः सदैव च’ इति महाविष्णुपुराणे। ‘रजसस्तु फलं दुःखम्’ इत्यत्र दुःखमिति दुःखमिश्रं सुखम्। दुःखं दुरिति सम्प्रोक्तम् खं नाम सुखमुच्यते’ इति शब्दनिर्णये। ‘कर्मणो राजसस्योक्तं दुःखमिश्रं सुखं फलम्। अज्ञानजं तामसस्य नित्यदुःखं फलं विदुः’ इति स्कान्दे॥16-21॥
Swami Sivananda (1887–1963)Bhagavad Gita
16. The fruit of good action, they say, is Sattwic and pure; the fruit of Rajas is pain, and ignorance is the fruit of Tamas.
Bannanje Govindacharya (1936–2020)Bhagavad Gita Pravachana
ಕರ್ಮಣಃ ಸುಕೃತಸ್ಯ ಅಹುಃ ಸಾತ್ತ್ವಿಕಮ್‌ ನಿರ್ಮಲಮ್‌ ಫಲಮ್‌ | ರಜಸಃ ತು ಫಲಮ್‌ ದುಃಖಮ್‌ ಅಜ್ಞಾನಮ್‌ ತಮಸಃ ಫಲಮ್‌ - ಒಳ್ಳೆಯ ಕಜ್ಜದಿಂದ ದುಗುಡವಿರದ ಸಾತ್ವಿಕ ಫಲ ಎನ್ನುತ್ತಾರೆ ತಿಳಿದವರು. ರಾಜಸವಾದ ಕಜ್ಜದಿಂದ ದುಃಖ ಬೆರೆತ ಸುಖ. ತಿಳಿಗೇಡಿತನವೇ ತಮೋಗುಣದ ಕಜ್ಜದ ಫಲ. ಜೀವನದುದ್ದಕ್ಕೂ ಇನ್ನೊಬ್ಬರಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದು ಸುಕೃತ. ನಮ್ಮಲ್ಲಿ ಸಂಪತ್ತಿದ್ದಾಗ ಅದು ನನ್ನದು-ನನ್ನದು ಎಂದು ಜಿಪುಣನಾಗಿ ಬದುಕಿದರೆ ಅದರಿಂದ ದುಃಖಭರಿತ ಜೀವನ ನಮ್ಮದಾಗುತ್ತದೆ. ನಾವು ಗಳಿಸಿದ್ದನ್ನು ಇನ್ನೊಬ್ಬರ ಕಷ್ಟದಲ್ಲಿ ವಿನಿಯೋಗಿಸಿದಾಗ ಅದು ನಮ್ಮನ್ನು ಸಾತ್ವಿಕ ಫಲದತ್ತ ಕೊಂಡೊಯ್ಯುತ್ತದೆ. ಮಧ್ವಾಚಾರ್ಯರು ಈ ವಿಚಾರಕ್ಕೆ ಒತ್ತು ಕೊಟ್ಟು ತಮ್ಮ 'ಗೀತಾತಾತ್ಪರ್ಯ'ದಲ್ಲಿ ಹೀಗೆ ಹೇಳಿದ್ದಾರೆ: “ನಾನಾ ಜನಸ್ಯ ಶುಶ್ರೂಷಾ ಕರ್ತವ್ಯಾ ಕರವನ್ಮಿತೇ” ಕಷ್ಟದಲ್ಲಿರುವವರ ಸೇವೆ ಮಾಡುವುದು ಮೋಕ್ಷ ಸಾಧನೆಯ ಒಂದು ಮುಖ. ನಮ್ಮಲ್ಲಿ ಕೆಲವರು ಕಷ್ಟದಲ್ಲಿರುವವರನ್ನು ಕಂಡು ಹೀಗೆ ಹೇಳುವುದಿದೆ: “ಅದು ಅವನ ಪ್ರಾರಾಬ್ದಕರ್ಮ, ಅದನ್ನು ಅವನು ಅನುಭವಿಸಲಿ. ಅದಕ್ಕೆ ನಾನ್ಯಾಕೆ ಚಿಂತಿಸಬೇಕು” ಎಂದು. ಈ ರೀತಿ ಹೇಳಿದಾಗ ನಾವು ಆ ಕಷ್ಟದಲ್ಲಿರುವ ವ್ಯಕ್ತಿಯ ಒಳಗಿರುವ ಭಗವಂತನನ್ನು ತಿರಸ್ಕಾರ ಮಾಡಿದಂತಾಗುತ್ತದೆ. ಇಂತವರಿಗೆ ಎಂದೆಂದೂ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ. ನಮ್ಮ ಆಧ್ಯಾತ್ಮಿಕ ಸಾಧನೆಯಲ್ಲಿ ಜಪ- ತಪವಷ್ಟೇ ಸಾಲದು; ಇಲ್ಲಿ ಕಷ್ಟದಲ್ಲಿರುವ ಜನರ ಸೇವೆಯೂ ಒಂದು ಪ್ರಧಾನವಾದ ಅಂಶ. ಸಾಧಕನು ತನ್ನ ನಿತ್ಯಾನುಷ್ಠಾನಗಳ ಜತೆಗೆ ಈ ಸೇವಾಕಾರ್ಯವನ್ನು ಆಚರಿಸಬೇಕೆನ್ನುವುದು ಗೀತೆಯ ಆದೇಶವೆಂದು ಮಧ್ವಾಚಾರ್ಯರು ಪ್ರತಿಪಾದಿಸಿದ್ದಾರೆ. ನಿನ್ನ ಮನೆಯಲ್ಲಿ ಬೆಂದ ಅನ್ನ ಎಷ್ಟು ಹಸಿದ ಜನರ ಹಸಿವನ್ನು ತಣಿಸುತ್ತದೋ-ಅಷ್ಟು ಸುಕೃತ. ಇದಕ್ಕಾಗಿ ಹಿಂದಿನ ಕಾಲದಲ್ಲಿ ಒಂದು ಸಂಪ್ರದಾಯವಿತ್ತು. ಅಡುಗೆ ಮಾಡಿ, ದೇವರಿಗೆ ಅದನ್ನು ಅರ್ಪಿಸಿ, ಸುಮಾರು ಹತ್ತು ನಿಮಿಷ ಹೆಬ್ಬಾಗಿಲಿನಲ್ಲಿ ಕಾದು, ನಂತರ ಊಟ ಮಾಡುವುದು. ಏಕೆಂದರೆ ಈ ಸಮಯದಲ್ಲಿ ಯಾರಾದರೂ ಹಸಿದವರು ಮನೆಯ ಬೀದಿಯಲ್ಲಿ ಬಂದರೆ ಅವರಿಗೆ ಮೊದಲು ಊಟ ಬಡಿಸಿ, ಆನಂತರ ಯಜಮಾನ ಊಟಮಾಡುವುದು ಆಗಿನ ಪದ್ಧತಿಯಾಗಿತ್ತು. ಇಷ್ಟೇ ಅಲ್ಲದೆ ಇದಕ್ಕೂ ಮೊದಲು 'ಬಲಿಹರಣ' ಮಾಡುತ್ತಿದ್ದರು. ಮನೆಯ ಸುತ್ತಮುತ್ತಲಿನ ಪ್ರಾಣಿ-ಪಕ್ಷಿಗಳಿಗೆ ಆಹಾರ ನೀಡುವುದು “ಬಲಿಹರಣ”. ಹೀಗೆ ಜೀವಮಾನದುದ್ದಕ್ಕೂ ಒಳ್ಳೆಯ ಕೆಲಸ ಮಾಡಿದರೆ ಅದರ ಫಲ ಸಾತ್ವಿಕವಾಗುತ್ತದೆ. ಇದರಿಂದ ಈ ಜನ್ಮದಲ್ಲಿ ಜ್ಞಾನ ಗಳಿಸಲು ಆಗದಿದ್ದರೂ ಕೂಡಾ, ಮುಂದಿನ ಜನ್ಮದಲ್ಲಿ ಆ ಅವಕಾಶ ಒದಗಿ ಬರುತ್ತದೆ. ಜ್ಞಾನವಿದ್ದೂ ದುಷ್ಕೃತಿಯಾಗಿ ಬದುಕಿದರೆ ಮತ್ತೆ ಹೀನಯೋನಿಯಲ್ಲಿ ಹುಟ್ಟಬೇಕಾಗುತ್ತದೆ. ಹೋಮ-ಹವನ, ದಾನ-ದಕ್ಷಿಣೆ, ಬ್ರಾಹ್ಮಣಾರಾಧನೆ- ಎಲ್ಲವನ್ನೂ ಮಾಡಿ, “ತಾನು ಎಲ್ಲರಿಗಿಂತ ಮಹಾನ್‌' ಎನ್ನುವ ಅಹಂಕಾರ ಬಂದರೆ ಅದು ರಜಸ್ಸಿನ ಕರ್ಮವಾಗುತ್ತದೆ. ಅದರ ಫಲ ಲೋಭ; ದುಃಖ ಬೆರೆತ ಜೀವನ. ಇದರಿಂದ ಪುಣ್ಯ ಕರ್ಮ ಮಾಡಿಯೂ ದುಃಖ ಅನುಭವಿಸಬೇಕಾಗುತ್ತದೆ. ಅಜ್ಞಾನದಿಂದ, ಯಾರದ್ದೋ ಒತ್ತಡಕ್ಕೆ ಮಾಡುವ ಕರ್ಮದಿಂದ ಎಂದೂ ಜ್ಞಾನ ಬೆಳೆಯುವುದಿಲ್ಲ. ತಿಳಿಗೇಡಿತನವೇ ತಮೋಗುಣದ ಕರ್ಮಫಲ. ನಮ್ಮಲ್ಲಿ ಯಾವ ಗುಣ ಪೂರ್ಣವಾಗಿ ಜಾಗೃತವಾಗಿದೆ ಎಂದು ಹೇಗೆ ತಿಳಿಯುತ್ತದೆ ಎನ್ನುವುದರ ವಿವರಣೆಯನ್ನು, ಮುಂದಿನ ಶ್ಲೋಕದಲ್ಲಿ ಉಪಸಂಹಾರ ರೂಪದಲ್ಲಿ ಕೃಷ್ಣ ವಿವರಿಸಿದ್ದಾನೆ.
Bibek Debroy (1955–2024)The Bhagavad Gita
(16) ‘It has been said that sattva-type action has the fruit of pure happiness,35 rajas-type has the fruit of unhappiness and tamas-type has the fruit of ignorance.’