श्रीभगवानुवाच ।
प्रकाशं च प्रवृत्तिं च मोहमेव च पाण्डव ।
न द्वेष्टि सम्प्रवृत्तानि न निवृत्तानि काङ्क्षति ॥
śrībhagavānuvāca |
prakāśaṃ ca pravṛttiṃ ca mohameva ca pāṇḍava |
na dveṣṭi sampravṛttāni na nivṛttāni kāṅkṣati ||
Swami Sivananda (1887–1963)Bhagavad Gita
22. Light, activity and delusion,—when they are present, O Arjuna, he hates not, nor does
he long for them when they are absent!
Bannanje Govindacharya (1936–2020)Bhagavad Gita Pravachana
ಭಗವಾನ್ ಉವಾಚ-ಭಗವಂತ ಹೇಳಿದನು:
ಪ್ರಕಾಶಮ್ ಚ ಪ್ರವೃತ್ತಿಮ್ ಚ ಮೋಹಮ್ ಏವ ಚ ಪಾಂಡವ |
ನ ದ್ವೇಷ್ಟಿ ಸಂಪ್ರವೃತ್ತಾನಿ ನ ನಿವೃತ್ತಾನಿ ಕಾಂಕ್ಷತಿ-ಪಾಂಡವ, ಲೌಕಿಕದ ತಿಳಿವಿನ ಬೆಳಕನ್ನಾಗಲೀ, ಕಾಯಕದ
ಹುರುಪನ್ನಾಗಲೀ, ಭ್ರಾಂತಿಯನ್ನೇ ಆಗಲಿ- ಇದ್ದಾಗ ದ್ವೇಷಿಸುವುದಿಲ್ಲ; ಇರದಾಗ ಬಯಸುವುದಿಲ್ಲ.
ತ್ರಿಗುಣಗಳನ್ನು ದಾಟಿದವ ಯಾವುದೋ ಅನಪೇಕ್ಷವಾದುದು ಬಂದಾಗ ಅದನ್ನು ದ್ವೇಷಿಸುವುದಿಲ್ಲ;
ಅಪೇಕ್ಷೆತವಾದುದು ಬಾರದೇ ಇದ್ದಾಗ ಅದನ್ನು ಅಪೇಕ್ಷಿಸುವುದಿಲ್ಲ. “ಯಾವುದು ಬೇಕು, ಯಾವುದು ಬೇಡ
ಎನ್ನುವುದು ನನಗಿಂತ ಚೆನ್ನಾಗಿ ಭಗವಂತನಿಗೆ ಗೊತ್ತಿದೆ. ಅದಕ್ಕಾಗಿ ನಾನೇಕೆ ತಲೆ ಕೆಡಿಸಿಕೊಳ್ಳಬೇಕು” ಎನ್ನುವ
ನಿರ್ಲಿಪ್ತತೆ ಆತನಲ್ಲಿರುತ್ತದೆ. ಜೀವನದಲ್ಲಿ ಏನು ಬಂತೋ ಅದನ್ನು ಆತ ಸ್ವಾಗತಿಸುತ್ತಾನೆ. ವ್ಯಾಸರು
ಮಹಾಭಾರತದ ಶಾಂತಿಪರ್ವದಲ್ಲಿ ಒಂದು ಮಾತನ್ನು ಹೇಳಿದ್ದಾರೆ:
ಏವಂ ಅಪ್ಯ ಅಶುಭಂ ಕರ್ಮನ ಭೂತಂ ನ ಭವಿಷ್ಯತಿ |೧೨-೩೨-೧೮|
“ಆಗಬಾರದ್ದು ಹಿಂದೆ ಆಗಿಲ್ಲ, ಮುಂದೆ ಆಗುವುದೂ ಇಲ್ಲ. ಏನು ಆಗಬೇಕೋ ಅದು ಘಟಿಸಿಯೇ ತೀರುತ್ತದೆ.
ಅದನ್ನು ನಾನು ಬೇಡ ಎಂದು ದ್ವೇಷಿಸಿ ಫಲವೇನು?”. ಆದ್ದರಿಂದ ತ್ರಿಗುಣವನ್ನು ದಾಟಿದವನು- ಬಂದಾಗ 'ಬೇಡ'
ಎಂದು ದ್ವೇಷಿಸುವುದಿಲ್ಲ; ಇಲ್ಲದ್ದನ್ನು ಬಯಸುವುದೂ ಇಲ್ಲ. ಎಲ್ಲವನ್ನೂ ನಿರ್ವಿಕಾರನಾಗಿ ನೋಡುತ್ತಾ, ತುಂಬಿದ
ಕೊಡದಂತೆ ತುಳುಕದೇ ಬದುಕುತ್ತಾನೆ.
ಲೋಕದಲ್ಲಿ ಕೆಲವರಿಗೆ ಸತ್ವದಲ್ಲಿ ಆಸಕ್ತಿಯಾದರೆ ಇನ್ನು ಕೆಲವರಿಗೆ ಕೇವಲ ಪ್ರವೃತ್ತಿ. ಮತ್ತೆ ಕೆಲವರಿಗೆ ಯಾವ
ಆಸಕ್ತಿಯೂ ಇಲ್ಲ- ಕತ್ತಲನ್ನು ಕತ್ತಲು ಎಂದು ತಿಳಿಯದೆ. ಕತ್ತಲಲ್ಲೇ ಬದುಕುವವರಿದ್ದಾರೆ. ಇದು
ಸರ್ವೇಸಾಮಾನ್ಯವಾಗಿ ಕಾಣುವ ವಿಚಾರ. ತ್ರಿಗುಣವನ್ನು ಮೀರಿ ನಿಂತವರು ಇದನ್ನು ನೋಡಿ ತಮ್ಮ ಮನಸ್ಸನ್ನು
ವಿಕಾರ ಮಾಡಿಕೊಳ್ಳುವುದಿಲ್ಲ. “ಅವರವರ ಗುಣ ಪ್ರಭಾವಕ್ಕನುಗುಣವಾಗಿ ಎಲ್ಲವೂ ನಡೆಯುತ್ತಿದೆ” ಎಂದು
ತಿಳಿದು ತಟಸ್ಥರಾಗಿ ಬದುಕುತ್ತಾರೆ. ಸತ್ಯವೆಂದು ಕಂಡದ್ದನ್ನು ಇವರು ಹೇಳುತ್ತಾರೆ. ಆದರೆ ಎಂದೂ ವಾದ
ವಿವಾದವನ್ನು ಬೆಳೆಸುವುದಿಲ್ಲ. “ಎಲ್ಲವೂ ಭಗವಂತನ ಲೀಲೆ, ಆತ ಮಾಡಿದ ವ್ಯವಸ್ಥೆ” ಎಂದು ಎಲ್ಲವನ್ನು
ಸ್ವೀಕರಿಸುತ್ತಾರೆ. ಗೀತೆಯ ಹನ್ನೆರಡನೇ ಅಧ್ಯಾಯದಲ್ಲಿ "ನಿಜವಾದ ಭಕ್ತ' ಹೇಗಿರುತ್ತಾನೆ ಎಂದು ವಿವರಿಸುವಾಗ
ಕೃಷ್ಣ ಈ ಶ್ಲೋಕದಲ್ಲಿ ಕೊಟ್ಟ ವಿವರಣೆಯನ್ನೇ ಕೊಟ್ಟಿದ್ದಾನೆ. ಇದರ ಅರ್ಥ- ಹೊರಗಿನ ಗುಣವನ್ನು ಮೀರಿ
ನಿಲ್ಲುವುದೇ ನಿಜವಾದ ಭಕ್ತೆ.
ಇಲ್ಲಿ ವ್ಯಾಸರು "ಪಾಂಡವ' ಎನ್ನುವ ವಿಶೇಷಣವನ್ನು ಬಳಸಿದ್ದಾರೆ. ಪಾಂಡಾ ಎಂದರೆ ಜ್ಞಾನಿ. ಪಾಂಡವ ಎಂದರೆ
ಜ್ಞಾನವನ್ನು ಗುರುತಿಸಿ ತಲೆಬಾಗುವವನು. “ತ್ರಿಗುಣಾತೀತನಾಗುವ ಮೊದಲು ನೀನು ಪಾಂಡವನಾಗಬೇಕು”
ಎನ್ನುವ ಸಂದೇಶ ಈ ವಿಶೇಷಣದ ಹಿಂದಿದೆ.
14.22–14.25
ಮಾನ ಅಪಮಾನಯೋಃ ತುಲ್ಯಃ ತುಲ್ಯಃ ಮಿತ್ರ ಅರಿ ಪಕ್ಷಯೋಃ |
ಸರ್ವಾರಂಭ ಪರಿತ್ಯಾಗೀ ಗುಣಾತೀತಃ ಸಃ ಉಚ್ಯತೇ -- ಸಮ್ಮಾನವೂ ಒಂದೇ; ಅಪಮಾನವೂ ಒಂದೇ.
ಗೆಳೆಯರ ಬಳಗವೂ ಒಂದೇ; ಹಗೆಯರ ಬಳಗವೂ ಒಂದೇ. ಅವನು ಇಂತಹ ಯಾವ ಲೌಕಿಕದಲ್ಲೂ
ತೊಡಗಿಕೊಳ್ಳುವುದಿಲ್ಲ. ಅಂತವನು 'ಗುಣಾತೀತ' ಎನಿಸುತ್ತಾನೆ.
ತ್ರಿಗುಣಾತೀತರನ್ನು ಒಬ್ಬರು 'ಮಹಾನ್ ಜ್ಞಾನಿ' ಎಂದು ಸಮ್ಮಾನಿಸಿ ಮಾತನಾಡಬಹುದು, ಇನ್ನೊಬ್ಬರು ಆತ
‘OTD ಎಂದು ನಿಂದಿಸಬಹುದು. ಆದರೆ ಇದ್ಯಾವುದೂ ಅವರ ಮೇಲೆ ಪರಿಣಾಮಬೀರದು. ಇವರಿಗೆ
ಸ್ನೇಹಿತರು ಎನ್ನುವ ಮೋಹವಾಗಲೀ, ಶತ್ರುಗಳು ಎನ್ನುವ ದ್ವೇಷವಾಗಲೀ ಇರುವುದಿಲ್ಲ. ಇವರು ಎಲ್ಲರನ್ನೂ
ಅವರವರ ಯೋಗ್ಯತೆಗೆ ತಕ್ಕಂತೆ ಕಾಣುತ್ತಾ, ಭಗವಂತನ ಭಕ್ತಿಗೆ ವಿರುದ್ಧವಾದ ಯಾವ ಚಟುವಟಿಕೆಯಲ್ಲೂ
ತೊಡಗದೇ ಬದುಕುತ್ತಾರೆ. ಇವರು ದೀರ್ಥಕಾಲದ ಯಾವುದೇ ಯೋಜನೆಯಲ್ಲಿ ತಮ್ಮನ್ನು ತಾವು
ತೊಡಗಿಸಿಕೊಳ್ಳುವುದಿಲ್ಲ.
ಹೀಗೆ ಮೇಲಿನ ನಾಲ್ಕು ಶ್ಲೋಕದಲ್ಲಿ ಗುಣಾತೀತರ ಸ್ವಭಾವದ ಪೂರ್ಣ ಚಿತ್ರಣವನ್ನು ಕೃಷ್ಣ ಸುಂದರವಾಗಿ
ವರ್ಣಿಸಿದ. ಈ ಸ್ವಭಾವವುಳ್ಳವರನ್ನು ನಾವು ಗುಣಾತೀತರೆಂದು ಗುರುತಿಸಬಹುದು.
ಇಲ್ಲಿಯ ತನಕ ತ್ರಿಗುಣಗಳ ಬಗ್ಗೆ ಮತ್ತು ತ್ರಿಗುಣಾತೀತರ ಸ್ವಭಾವದ ಬಗ್ಗೆ ವಿವರಿಸಿದ ಕೃಷ್ಣ, ಕೊನೆಯ ಎರಡು
ಶ್ಲೋಕದಲ್ಲಿ ನಾವು ತ್ರಿಗುಣಾತೀತರಾಗುವ ಬಗೆ ಹೇಗೆ ಎನ್ನುವುದನ್ನು ವಿವರಿಸುತ್ತಾನೆ. ನಮ್ಮ ಎಲ್ಲಾ
ಪ್ರವೃತ್ತಿಯೂ ಈ ಮೂರು ಗುಣಗಳ ಪರಿಮಿತಿಯಲ್ಲಿ ಇರುವಾಗ ತ್ರಿಗುಣವನ್ನು ಮೀರಿ ನಿಲ್ಲುವುದು ನಮಗೆ
ಕಲ್ಪನಾತೀತ. ಹಾಗಾಗಿ ಇಲ್ಲಿ ಕೃಷ್ಣ ನಮಗೆ ತ್ರಿಗುಣಾತೀತರಾಗಲು ಇರುವ ಏಕಮಾತ್ರ ಮಾರ್ಗವನ್ನು
ವಿವರಿಸುತ್ತಾನೆ.
Bibek Debroy (1955–2024)The Bhagavad Gita
(22)
Bhagavan41 said:
‘O son of Pandu!42 He who is engaged in knowledge and inclination and
delusion and yet does not hate, nor desire if these are withdrawn.’43