14.24

समदुःखसुखः स्वस्थः समलोष्टाश्मकाञ्चनः ।
तुल्यप्रियाप्रियो धीरस्तुल्यनिन्दात्मसंस्तुतिः ॥
samaduḥkhasukhaḥ svasthaḥ samaloṣṭāśmakāñcanaḥ |
tulyapriyāpriyo dhīrastulyanindātmasaṃstutiḥ ||
Swami Sivananda (1887–1963)Bhagavad Gita
24. Alike in pleasure and pain, who dwells in the Self, to whom a clod of earth, stone and gold are alike, to whom the dear and the unfriendly are alike, firm, the same in censure and praise,
Bannanje Govindacharya (1936–2020)Bhagavad Gita Pravachana
ಸಮ ದುಃಖಸುಖಃ ಸ್ವಸ್ಥಃ ಸಮ ಲೋಷ್ಟ ಆಶ್ಮ ಕಾಂಚನಃ | ತುಲ್ಯ ಪ್ರಿಯ ಅಪ್ರಿಯಃ ಧೀರಃ Bey ನಿಂದಾತ್ಮ ಸಂಸ್ತುತಿಃ - ಸುಖ-ದುಃಖವನ್ನು ಸಮನಾಗಿ ಕಾಣುತ್ತಾನೆ. ತನ್ನಲ್ಲೇ ತಾನು ಇದ್ದುಬಿಡುತ್ತಾನೆ. ಮಣ್ಣು, ಕಲ್ಲು, ಚಿನ್ನ ಅವನಿಗೆ ಒಂದೇ ತರಹ. ಸಾಧನೆಯಿಂದ ಬಗೆ ಗಟ್ಟಿಗೊಂಡ ಅವನಿಗೆ ಪ್ರಿಯವೂ ಒಂದೇ; ಅಪ್ರಿಯವೂ ಒಂದೇ. ತೆಗಳಿಕೆಯೂ ಒಂದೆ. ಹೊಗಳಿಕೆಯೂ ಒಂದೇ. ತ್ರಿಗುಣಾತೀತ ಸರ್ವ ಸುಖ-ದುಃಖವನ್ನೂ ಸಮನಾಗಿ ಕಾಣುತ್ತಾನೆ. ಏಕೆಂದರೆ ನಮಗೆ ಮೇಲ್ನೋಟಕ್ಕೆ ಸುಖವೆಂದು ಕಾಣುವುದು ನಿಜವಾಗಿ ಸುಖವಾಗಿ ಇರಬೇಕೆಂದೇನೂ ಇಲ್ಲ. ಅದೇ ರೀತಿ ದುಃಖ ಕೂಡಾ. ಇದನ್ನು ತಿಳಿದಾಗ ಎಲ್ಲವೂ ಭಗವಂತನ ಲೀಲೆ ಎನ್ನುವ ಭಾವನೆ ಮನಸ್ಸಿನಲ್ಲಿ ಹುಟ್ಟುತ್ತದೆ. ಆಗ ಎಲ್ಲವನ್ನೂ ಸಮನಾಗಿ ಕಾಣುವ ಕ್ಷಮತೆ ನಮ್ಮಲ್ಲಿ ಬೆಳೆಯುತ್ತದೆ. ನಾವು ಹೇಗೆ ನಾಟಕದಲ್ಲಿ ನಡೆಯುವ ದೃಶ್ಯವನ್ನು ಪ್ರೇಕ್ಷಕರಂತೆ ಕಾಣುತ್ತೇವೋ, ಹಾಗೇ ಪ್ರಪಂಚದಲ್ಲಿ ನಡೆಯುವ ಘಟನೆಗಳನ್ನು ಪ್ರೇಕ್ಷಕರಂತೆ ಕಾಣಲು ಅಭ್ಯಾಸ ಮಾಡಿಕೊಳ್ಳಬೇಕು. ಅದು ಸುಖಮಯವಿರಬಹುದು, ದುಃಖಮಯವಿರಬಹುದು-ಆದರೆ ನಾವು ಭಗವಂತನ ಒಂದೊಂದು ಕ್ರಿಯಯನ್ನೂ ಆಸ್ವಾಧಿಸಬೇಕು. ಜೀವನದಲ್ಲಿ ಬರುವ ತಾತ್ಕಾಲಿಕ ದುಃಖ ನಮ್ಮ ಶಾಶ್ವತ ಸುಖಕ್ಕೆ ಕಾರಣವಾಗಿರುತ್ತದೆ. ಆದರೆ ಅದು ನಮಗೆ ತಿಳಿದಿರುವುದಿಲ್ಲ ಅಷ್ಟೆ. ತ್ರಿಗುಣಾತೀತರು ಈ ವಿಷಯವನ್ನು ಅರಿತು ಸುಖ-ದುಃಖವನ್ನು ಸಮನಾಗಿ ಕಾಣುತ್ತಾ ಆನಂದದಿಂದ ಬದುಕುತ್ತಿರುತ್ತಾರೆ. ಹಿಂದೆ ಸ್ಥಿತಪ್ರಜ್ಞ ಮತ್ತು ಭಕ್ತರ ಲಕ್ಷಣ ಹೇಳುವಾಗ ಹೇಳಿದ ಮಾತುಗಳನ್ನು ಕೃಷ್ಣ ಇಲ್ಲಿ ಮತ್ತೆ ಪುನರುಚ್ಛರಿಸುತ್ತಾನೆ. ತ್ರಿಗುಣಾತೀತನಿಗೆ ಮಣ್ಣು, ಅಮೂಲ್ಯ ರತ್ನ, ಚಿನ್ನ-ಎಲ್ಲವೂ ಒಂದೇ. ಆತನಿಗೆ ಚಿನ್ನವಾಗಲೀ, ರತ್ನವಾಗಲೀ ಅಮೂಲ್ಯ ಎಂದು ಕಾಣುವುದಿಲ್ಲ... ಆತನಿಗೆ ಅಮೂಲ್ಯ-ಜ್ಞಾನವೊಂದೇ. ಈ ಕಾರಣದಿಂದ ಆತ ಹಣದಲ್ಲಾಗಲಿ, ಮುತ್ತು-ರತ್ನದಲ್ಲಾಗಲಿ, ಬಂಗಾರದಲ್ಲಾಗಲಿ ಯಾವುದೇ ರೀತಿಯ ಅಭಿಲಾಷೆ ತೋರುವುದಿಲ್ಲ. ಆದ್ದರಿಂದ ಆತ ಸಂತೋಷದಿಂದ ಬದುಕುತ್ತಾನೆ. ಭಾಗವತದ ಮೂರನೇ ಸ್ಮಂದದಲ್ಲಿ ಬರುವ ಒಂದು ಶ್ಲೋಕ ಈ ರೀತಿ ಹೇಳುತ್ತದೆ: ಯಶ್ಚ ಮೂಢತಮೋ ಲೋಕೇ ಯಶ್ಚ ಬುದ್ಧೇಃ ಪರಂ ಗತಃ ತಾವುಭೌ ಸುಖಮೇಧೇತೇ ಕ್ಲಿಶ್ಯತ್ಯಂತರಿತೋ ಜನಃ |॥|೩-೭-೧೭॥ ಒಬ್ಬ ಮೂಢ ಮತ್ತು ಇನ್ನೊಬ್ಬ ಜ್ಞಾನಿ- ಇವರಿಬ್ಬರು ಲೋಕದಲ್ಲಿ ಸುಖದಿಂದ ಬದುಕಬಲ್ಲರು ಎಂದು. ಏಕೆಂದರೆ ಇವರಿಗೆ ಹಣದ ಮೋಹವಿರುವುದಿಲ್ಲ. ಆದರೆ ಇವೆರಡರ ಮಧ್ಯದಲ್ಲಿರುವವರು-ಜೀವನದ ಅರ್ಥ ತಿಳಿಯದೆ ಮೋಹಕ್ಕೆ ಬಲಿಯಾಗಿ ದುಃಖ ಅನುಭವಿಸುತ್ತಾರೆ. ಹೇಗೆ ಜ್ಞಾನಿಗಳು ತಮ್ಮ ಜೀವನದಲ್ಲಿ ಈ ತತ್ವವನ್ನು ಅಳವಡಿಸಿಕೊಂಡು ಬದುಕುತ್ತಾರೆ ಎನ್ನುವುದಕ್ಕೆ ರಾಮಕೃಷ್ಣ ಪರಮಹಂಸರ ಜೀವನ ಚರಿತ್ರೆ ಉತ್ತಮ ನಿದರ್ಶನ. ಮೈಸೂರು ಮಹಾರಾಜರ ಕಾಲದಲ್ಲಿ ಸೋದೆಮಠದ ಸ್ವಾಮಿಗಳಾಗಿದ್ದ ವಿಶ್ವಪ್ರಿಯತೀರ್ಥರು (ವೃಂದಾವನಾಚಾರ್ಯರು) ಬದುಕಿದ ಜೀವನ ಶೈಲಿ ಇದಕ್ಕೆ ಇನ್ನೊಂದು ಉತ್ತಮ ದೃಷ್ಟಾಂತ. ಈ ಶ್ಲೋಕವನ್ನು ಇನ್ನೊಂದು ಮುಖದಲ್ಲಿ ನೋಡಿದಾಗ ನಮಗೆ ಇನ್ನೂ ಒಂದು ವಿಶೇಷ ಸಂದೇಶ ತಿಳಿಯುತ್ತದೆ. ಒಬ್ಬ ನಿಜವಾದ ಭಕ್ಷ(ತ್ರಿಗುಣಾತೀತ)ನ ಭಗವದ್‌ ಭಕ್ತಿ ಆತನ ಜೀವನದಲ್ಲಿ ಬರುವ ಸುಖ-ದುಃಖಗಳಿಂದ ಏರುಪೇರಾಗುವುದಿಲ್ಲ. ಬಡತನವಿರಲಿ-ಸಿರಿತನವಿರಲಿ ಈತ ನಿರಂತರ ಭಗವಂತನ ಭಕ್ತಿಯಲ್ಲಿ ತೊಡಗಿರುತ್ತಾನೆ. ಈತನ ಭಕ್ತಿಗೆ ಇನ್ನೊಬ್ಬರ ಪ್ರೀತಿ-ದ್ವೇಷ ಎಂದೂ ಮಾನದಂಡವಲ್ಲ. ಈ ರೀತಿ ತ್ರಿಗುಣಾತೀತರು ಎಲ್ಲಾ ಸ್ಥಿತಿಯಲ್ಲೂ ಸಮಾನತೆಯಿಂದ ಬದುಕುತ್ತಾರೆ.
14.22–14.25
ಮಾನ ಅಪಮಾನಯೋಃ ತುಲ್ಯಃ ತುಲ್ಯಃ ಮಿತ್ರ ಅರಿ ಪಕ್ಷಯೋಃ | ಸರ್ವಾರಂಭ ಪರಿತ್ಯಾಗೀ ಗುಣಾತೀತಃ ಸಃ ಉಚ್ಯತೇ -- ಸಮ್ಮಾನವೂ ಒಂದೇ; ಅಪಮಾನವೂ ಒಂದೇ. ಗೆಳೆಯರ ಬಳಗವೂ ಒಂದೇ; ಹಗೆಯರ ಬಳಗವೂ ಒಂದೇ. ಅವನು ಇಂತಹ ಯಾವ ಲೌಕಿಕದಲ್ಲೂ ತೊಡಗಿಕೊಳ್ಳುವುದಿಲ್ಲ. ಅಂತವನು 'ಗುಣಾತೀತ' ಎನಿಸುತ್ತಾನೆ. ತ್ರಿಗುಣಾತೀತರನ್ನು ಒಬ್ಬರು 'ಮಹಾನ್‌ ಜ್ಞಾನಿ' ಎಂದು ಸಮ್ಮಾನಿಸಿ ಮಾತನಾಡಬಹುದು, ಇನ್ನೊಬ್ಬರು ಆತ ‘OTD ಎಂದು ನಿಂದಿಸಬಹುದು. ಆದರೆ ಇದ್ಯಾವುದೂ ಅವರ ಮೇಲೆ ಪರಿಣಾಮಬೀರದು. ಇವರಿಗೆ ಸ್ನೇಹಿತರು ಎನ್ನುವ ಮೋಹವಾಗಲೀ, ಶತ್ರುಗಳು ಎನ್ನುವ ದ್ವೇಷವಾಗಲೀ ಇರುವುದಿಲ್ಲ. ಇವರು ಎಲ್ಲರನ್ನೂ ಅವರವರ ಯೋಗ್ಯತೆಗೆ ತಕ್ಕಂತೆ ಕಾಣುತ್ತಾ, ಭಗವಂತನ ಭಕ್ತಿಗೆ ವಿರುದ್ಧವಾದ ಯಾವ ಚಟುವಟಿಕೆಯಲ್ಲೂ ತೊಡಗದೇ ಬದುಕುತ್ತಾರೆ. ಇವರು ದೀರ್ಥಕಾಲದ ಯಾವುದೇ ಯೋಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಿಲ್ಲ. ಹೀಗೆ ಮೇಲಿನ ನಾಲ್ಕು ಶ್ಲೋಕದಲ್ಲಿ ಗುಣಾತೀತರ ಸ್ವಭಾವದ ಪೂರ್ಣ ಚಿತ್ರಣವನ್ನು ಕೃಷ್ಣ ಸುಂದರವಾಗಿ ವರ್ಣಿಸಿದ. ಈ ಸ್ವಭಾವವುಳ್ಳವರನ್ನು ನಾವು ಗುಣಾತೀತರೆಂದು ಗುರುತಿಸಬಹುದು. ಇಲ್ಲಿಯ ತನಕ ತ್ರಿಗುಣಗಳ ಬಗ್ಗೆ ಮತ್ತು ತ್ರಿಗುಣಾತೀತರ ಸ್ವಭಾವದ ಬಗ್ಗೆ ವಿವರಿಸಿದ ಕೃಷ್ಣ, ಕೊನೆಯ ಎರಡು ಶ್ಲೋಕದಲ್ಲಿ ನಾವು ತ್ರಿಗುಣಾತೀತರಾಗುವ ಬಗೆ ಹೇಗೆ ಎನ್ನುವುದನ್ನು ವಿವರಿಸುತ್ತಾನೆ. ನಮ್ಮ ಎಲ್ಲಾ ಪ್ರವೃತ್ತಿಯೂ ಈ ಮೂರು ಗುಣಗಳ ಪರಿಮಿತಿಯಲ್ಲಿ ಇರುವಾಗ ತ್ರಿಗುಣವನ್ನು ಮೀರಿ ನಿಲ್ಲುವುದು ನಮಗೆ ಕಲ್ಪನಾತೀತ. ಹಾಗಾಗಿ ಇಲ್ಲಿ ಕೃಷ್ಣ ನಮಗೆ ತ್ರಿಗುಣಾತೀತರಾಗಲು ಇರುವ ಏಕಮಾತ್ರ ಮಾರ್ಗವನ್ನು ವಿವರಿಸುತ್ತಾನೆ.
Bibek Debroy (1955–2024)The Bhagavad Gita
(24) ‘Equal between happiness and unhappiness, established in himself,44 equal between earth, stone and gold, similar in treatment of the loved and the hated, tranquil, similar between praise and censure.’