मम योनिर्महद् ब्रह्म तस्मिन्गर्भं दधाम्यहम् ।
सम्भवः सर्वभूतानां ततो भवति भारत ॥
mama yonirmahad brahma tasmingarbhaṃ dadhāmyaham |
sambhavaḥ sarvabhūtānāṃ tato bhavati bhārata ||
Sri Madhvacharya (1238–1317)Bhagavad Gita Tatparya Nirnaya
‘योनिर्भार्या तथा स्थानं योनिः कारणमेव च’ इति शब्दनिर्णये।
अत्रयोनिर्भार्या - ‘तस्मिन् गर्भं दधाम्यहम्’
इति वाक्यशेषात्॥03॥
Swami Sivananda (1887–1963)Bhagavad Gita
3. My womb is the great Brahma; in that I place the germ; thence, O Arjuna, is the birth of all
beings!
Bannanje Govindacharya (1936–2020)Bhagavad Gita Pravachana
ಮಮ ಯೋನಿಃ ಮಹತ್ ಬ್ರಹ್ಮ ತಸ್ಮಿನ್ ಗರ್ಭಮ್ ದಧಾಮಿ ಅಹಮ್ |
ಸಂಭವಃ ಸರ್ವಭೂತಾನಾಮ್ ತತಃ ಭವತಿ ಭಾರತ -ಚೇತನ ಪ್ರಕೃತಿ ನನ್ನ ಅರ್ಧಾಂಗಿ. ಅವಳಲ್ಲಿ ಸೃಷ್ಟಿಯ
ಬೀಜವನ್ನು ಬಿತ್ತುತ್ತೇನೆ. ಭಾರತಾ, ಎಲ್ಲಾ ಜೀವಿಗಳ ಹುಟ್ಟು ಅದರ ಮೂಲಕ ನಡೆಯುತ್ತದೆ
ಇಲ್ಲಿ ಕೃಷ್ಣ ಬಹಳ ವಿಚಿತ್ರವಾದ ಒಂದು ಸಂಗತಿಯನ್ನು ಹೇಳುತ್ತಾನೆ. ಈ ಶ್ಲೋಕ ಅರ್ಥವಾಗಬೇಕಿದ್ದರೆ ನಾವು
ಮೊದಲು 'ಭಾ-ರತ' ರಾಗಬೇಕು. “ರತ' ಅಂದರೆ ತತ್ವರತೆ. ನಾವು ಭಗವಂತನಲ್ಲಿ ರತರಾಗಬೇಕು; ಜ್ಞಾನದ
ಮಾರ್ಗದಲ್ಲಿ ರತರಾಗಬೇಕು; ಭಕ್ತಿಯಿಂದ ಭರಿತರಾಗಿ ತುಂಬಿದ ಕೊಡವಾಗಬೇಕು; ವಿನೀತರಾಗಿರಬೇಕು. ಆಗ
ಸೃಷ್ಟಿಯ ಈ ಗುಟ್ಟು ಅರ್ಥವಾಗುತ್ತದೆ.
ಯಾವುದೇ ಒಂದು ವಸ್ತು ಸೃಷ್ಟಿಯಾಗಬೇಕಿದ್ದರೂ ಅಲ್ಲಿ ಒಂದಕ್ಕಿಂತ ಹೆಚ್ಚು ಕಾರಣಗಳು ಬೇಕು. ಜಡವಾದರೆ
ಅಲ್ಲಿ ಎರಡು ಕಾರಣಗಳು ಅಗತ್ಯ. ಉದಾಹರಣೆಗೆ ಒಂದು ಮಡಕೆ ಸೃಷ್ಟಿಯಾಗಬೇಕಿದ್ದರೆ ಅಲ್ಲಿ ಮೂಲದ್ರವ್ಯ (raw
materials) ಬೇಕು ಮತ್ತು ರೂಪ ಕೊಡುವ ಕುಂಬಾರ ಬೇಕು. ವನಸ್ಪತಿಗಳ ಸೃಷ್ಟಿ- ಜಡದೊಳಗೆ ಭಗವಂತ
ಜೀವವನ್ನು ಸೇರಿಸುವುದರ ಮೂಲಕ ಆಗುತ್ತದೆ. ಆದರೆ ಗರ್ಭದ ಮೂಲಕ ಹುಟ್ಟುವ 'ಚೇತನ ಸೃಷ್ಟಿ'ಗೆ
ಜಡದ್ರವ್ಯದೊಂದಿಗೆ ಸೃಷ್ಟಿ ಮಾಡತಕ್ಕಂತಹ ಒಂದು ಗಂಡು ಮತ್ತು ಒಂದು ಹೆಣ್ಣು ಬೇಕು. ಇಬ್ಬರ
ಸಮಾಗಮದಿಂದ ಮೂರನೆಯದು ಸೃಷ್ಟಿಯಾಗುತ್ತದೆ.
ಈ ಶ್ಲೋಕದಲ್ಲಿ "ಮಮ ಯೋನಿಃ ಮಹತ್ ಬ್ರಹ್ಮ' ಎನ್ನುವಲ್ಲಿ ಬಂದಿರುವ 'ಯೋನಿ' ಮತ್ತು 'ಬ್ರಹ್ಮ' ಎನ್ನುವ
ಪದಗಳು ಅನೇಕ ಅರ್ಥವನ್ನು ಕೊಡುವ ಪದಗಳು. ಯಾವ ಸಂದರ್ಭದಲ್ಲಿ ಯಾವ ಅರ್ಥ ಹೊಂದಿಕೆಯಾಗುತ್ತದೆ
ಎಂದು ತಿಳಿದು ನಾವು ಶ್ಲೋಕವನ್ನು ಅರ್ಥ ಮಾಡಿಕೊಳ್ಳಬೇಕು. ಯೋನಿ- ಕಾರಣ, ಉತ್ಪತ್ತಿಸ್ಥಾನ, ಹೆಂಡತಿ
ಇತ್ಯಾದಿ ಅರ್ಥವನ್ನು ಕೊಡುತ್ತದೆ. ಅದೇ ರೀತಿ ಬ್ರಹ್ಮ- ಜೀವ, ಚತುರ್ಮುಖ, ಲಕ್ಷ್ಮಿ, ಭಗವಂತ ಇತ್ಯಾದಿ ಅನೇಕ
ಅರ್ಥವನ್ನು ಕೊಡುತ್ತದೆ... ಈ ಶ್ಲೋಕದಲ್ಲಿ. ಯೋನಿ ಅಂದರೆ ಹೆಂಡತಿ; “ಮಹತ್ WI, ಎಂದರೆ
ಚತುರ್ಮುಖನಿಗೂ ತಾಯಿಯಾಗಿರುವ ಶ್ರೀಲಕ್ಷ್ಮಿ. ಕೃಷ್ಣ ಹೇಳುತ್ತಾನೆ “ ನಾನು ನನ್ನ ಪತ್ನಿಯಾದ ಚಿತ್ ಪ್ರಕೃತಿ
(ಲಕ್ಷ್ಮಿತಯಲ್ಲಿ ಗರ್ಭದಾನ ಮಾಡುತ್ತೇನೆ. ಆ ಗರ್ಭ ಬೆಳೆದು ಸಮಸ್ತ ಜೀವಜಾತಗಳು ಸೃಷ್ಟಿಯಾಗುತ್ತವೆ” ಎಂದು.
ಇದು ನಮಗೆ ಹೊಸ ಸಂಗತಿ. ಏಕೆಂದರೆ ಖುಗ್ಬೇದದಲ್ಲಿ ಚತುರ್ಮುಖನ ಸೃಷ್ಟಿಯ ಬಗ್ಗೆ ಈ ರೀತಿ ಹೇಳಲಾಗಿದೆ:
ತಮಿದ್ಲರ್ಭಂ ಪ್ರಥಮಂ ದಧ್ರ ಆಪೋ ಯತ್ರ ದೇವಾಃ ಸಮಗಚ್ಛಂತ ವಿಶ್ವೇ|
ಅಜಸ್ಯ ನಾಭಾವಧ್ಯೇಕಮರ್ಪಿತಂ ಯಸ್ಮಿನ್ವಿಶ್ವಾನಿ ಭುವನಾನಿ BR: || ೧೦.೮೨.೦೬॥
ಇಲ್ಲಿ “ಭಗವಂತನ ನಾಭಿ ಕಮಲದಿಂದ ಬ್ರಹ್ಮ ಹೊರ ಬಂದ” ಎಂದು ಹೇಳಲಾಗಿದೆ. ಚತುರ್ಮುಖನಿಂದ ಜೀವ
ಸೃಷ್ಟಿ ನಿರ್ಮಾಣವಾಯಿತು. ಆದ್ದರಿಂದ ಚತುರ್ಮುಖ ಜಗತ್ತಿನ ತಂದೆ ಎನ್ನುವ ವಿಚಾರವೂ ನಮಗೆ ತಿಳಿದಿದೆ.
ವೇದದಲ್ಲಿ ಇನ್ನೊಂದು ಕಡೆ(ಅಂಭ್ರಿಣೀಸೂಕ್ರ) ಹೀಗೆ ಹೇಳಿದ್ದಾರೆ:
ಅಹಂ ಸುವೇ ಪಿತರಮಸ್ಯ ಮೂರ್ಧನ್ ಮಮ ಯೋನಿರಷ್ಟ್ಟ೦ತಃ ಸಮುದ್ರೇ |
ತತೋ ವಿ ತಿಷ್ಠೇ ಭುವನಾನು ವಿಶ್ವೋ-ತಾಮೂಂ ದ್ಯಾಂ ವರ್ಷ್ಮಣೋಪ ಸ್ಚೃಶಾಮಿ | ೭॥
ಇದು ಲಕ್ಷ್ಮಿ ಹೇಳುವ ಮಾತು: “ನಾನು ಈ ಜಗತ್ತಿನ ತಂದೆಯಾದ ಚತುರ್ಮುಖನನ್ನು ನನ್ನ ನೆತ್ತಿ(ಯೂರ್ಧನ್-
ಬೈತಲೆ)ಯಿಂದ ಹೆತ್ತೆ. ನನಗೂ ಕಾರಣನಾದ ಭಗವಂತ ಸಮುದ್ರದಲ್ಲಿದ್ದಾನೆ " ಎಂದು. ಸಮಸ್ತ ಬ್ರಹ್ಮಾಂಡದ
ಸೃಷ್ಟಿ ಶಿವನಿಂದಾಯಿತು ಎಂದು ಇನ್ನೊಂದೆಡೆ ಹೇಳುತ್ತಾರೆ. ಶಾಸ್ತ್ರ ಪ್ರಕ್ರಿಯೆ ಗೊತ್ತಿಲ್ಲದಿದ್ದರೆ ಇದೆಲ್ಲವೂ ಬರಿಯ
ಗೊಂದಲ. ಮೋಕ್ಷ ಸಾಧನೆ ಮಾಡುವವರು ಇದನ್ನು ಸೂಕ್ಷ್ಮವಾಗಿ ವಿಶ್ಲೇಷಿಸಬೇಕು-ಆಗ ಸತ್ಯ
ಸಾಕ್ಷಾತ್ಕಾರವಾಗುತ್ತದೆ.
ಜೀವ-ಪ್ರಕೃತಿ-ಭಗವಂತ ಅನಾದಿ ಅನಂತ. ಸೃಷ್ಟಿ ಪೂರ್ವದಲ್ಲಿ ಸಮಸ್ತ ಪ್ರಪಂಚ ಸೂಕ್ಷ್ಮ ರೂಪದಲ್ಲಿ ಭಗವಂತನ
ಉದರದಲ್ಲಿತ್ತು. ಇದನ್ನು ಇನ್ನೂ ಸೂಕ್ಷ್ಮವಾಗಿ ನೋಡಿದರೆ- ಸಮಸ್ತ ವಿಶ್ವ ಲಕ್ಷ್ಮೀದೇವಿಯ ಉದರದಲ್ಲಿತ್ತು ಮತ್ತು
ಲಕ್ಷ್ಮಿ ಭಗವಂತನ ಉದರದಲ್ಲಿದ್ದಳು. ಭಗವಂತ ಲಕ್ಷ್ಮಿಯ ಉದರದಲ್ಲಿ ಸಮಸ್ತ ಜೀವಜಾತಗಳ ಬೀಜಕ್ಷೇಪ
ಮಾಡಿದ. ಕಮಲ ರೂಪದ ಇಡೀ ಬ್ರಹ್ಮಾಂಡ ಲಕ್ಷ್ಮಿಯ ನೆತ್ತಿಯ ಮೂಲಕ ಭಗವಂತನ ನಾಭಿಯಿಂದ
ಹೊರಚಿಮ್ಮಿತು. ಅದರಲ್ಲಿ ಚತುರ್ಮುಖನಿದ್ದ ಜೊತೆಗೆ ಅವ್ಯಕ್ತ ರೂಪದಲ್ಲಿ ಸಮಸ್ತ ದೇವತೆಗಳೂ, ಜೀವಜಾತರೂ
ಹುಟ್ಟಿದರು. ಈ ಕಾರಣದಿಂದ ಲಕ್ಷ್ಮೀನಾರಾಯಣರು ಸಮಸ್ತ ಜಗತ್ತಿನ ತಾಯಿ-ತಂದೆ. ಇಲ್ಲಿ ನಾವು
ಅರಿಯಬೇಕಾದ ಒಂದು ಮುಖ್ಯ ವಿಚಾರವೆಂದರೆ-ಸೃಷ್ಟಿ ಕ್ರಿಯೆ ಹಂತ ಹಂತವಾಗಿ ನಡೆದ ಕ್ರಿಯೆ. ಲಕ್ಷ್ಮೀ
ನಾರಾಯಣರ ಸಮಾಗಮದಿಂದ ನಿರ್ಮಾಣವಾದದ್ದು ಕೇವಲ ಅವ್ಯಕ್ತ ಸೃಷ್ಟಿ. ನಂತರ ಚತುರ್ಮುಖ ಬ್ರಹ್ಮ ಈ
ಸೂಕ್ಷ್ಮರೂಪಿ ಅವ್ಯಕ್ತ ಪ್ರಪಂಚಕ್ಕೆ(ಜೀವ ಜಾತಕ್ಕೆ) ಒಂದು ಮೂಲ ಸ್ಥೂಲರೂಪವನ್ನು ಕೊಟ್ಟು ಜಗತ್ತಿನ
ಪಿತಾಮಹನೆನಿಸಿದ. ತದನಂತರ ಶಿವನಿಂದ ಈ ಪ್ರಪಂಚ ಪೂರ್ಣ ಸ್ಥೂಲರೂಪವನ್ನು ಪಡೆಯಿತು. ಈ
ಪ್ರಕ್ರಿಯೆಯನ್ನು ನಾವು ಅರ್ಥ ಮಾಡಿಕೊಂಡರೆ ಇಲ್ಲಿ ಯಾವುದೇ ಗೊಂದಲವಿಲ್ಲ. ಚತುರ್ಮುಖ ಲಕ್ಷ್ಮಿಯ
ನೆತ್ತಿಯಿಂದ ಹುಟ್ಟಿದ್ದು ಹೌದು; ಆತ ಭಗವಂತನ ನಾಭಿಯಿಂದ ಹುಟ್ಟಿರುವುದೂ ಹೌದು; ಆತ ಜಗತ್ತಿನ ತಂದೆ
ಹೌದು; ಶಿವನಿಂದ ಈ ಸ್ಥೂಲ ಪ್ರಪಂಚ ನಿರ್ಮಾಣವಾದದ್ದೂ ಹೌದು; ಲಕ್ಷ್ಮೀ ನಾರಾಯಣರು ಸಮಸ್ತ
ಜೀವಜಾತದ ತಾಯಿ-ತಂದೆ ಕೂಡಾ ಹೌದು. ಈ ಕುರಿತ ವಿವರವನ್ನು 'ಮಹಾಭಾರತ ತಾತ್ಪರ್ಯ ನಿರ್ಣಯದಲ್ಲಿ
ಸ್ಪಷ್ಟವಾಗಿ ವಿವರಿಸಲಾಗಿದೆ.
ಒಂದು ಚೇತನ[ಭೂತಿ(ಉನ್ನತಿ) ಉಳ್ಳ ಜೀವ]ದ ಸೃಷ್ಟಿಗೆ ಒಂದು ಗಂಡು ಒಂದು ಹೆಣ್ಣಿನ ಸಮಾಗಮ ಅಗತ್ಯ.
ಇದು ಸೃಷ್ಟಿ ಆರಂಭದಿಂದಲೇ ಬೆಳೆದುಕೊಂಡು ಬಂದ ಸಂಪ್ರದಾಯ. ಜಗತ್ತಿನ ಎಲ್ಲಾ ಸೃಷ್ಟಿಯ ಹಿಂದೆ
ಲಕ್ಷ್ಮೀನಾರಾಯಣರು ತಂದೆ ತಾಯಿಯಾಗಿ ನಿಂತಿದ್ದಾರೆ. ಈ ವಿಷಯವನ್ನು ಇನ್ನೂ ಸ್ಪಷ್ಟವಾಗಿ ಕೃಷ್ಣ ಮುಂದಿನ
ಶ್ಲೋಕದಲ್ಲಿ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(3)
‘O Bharata!4 The great brahman5 is my womb. Into that, I place the seed.6
And from that, all the beings are created.’