14.7

रजो रागात्मकं विद्धि तृष्णासङ्गसमुद्भवम् ।
तन्निबध्नाति कौन्तेय कर्मसङ्गेन देहिनम् ॥
rajo rāgātmakaṃ viddhi tṛṣṇāsaṅgasamudbhavam |
tannibadhnāti kaunteya karmasaṅgena dehinam ||
Swami Sivananda (1887–1963)Bhagavad Gita
7. Know thou Rajas to be of the nature of passion, the source of thirst (for sensual enjoyment) and attachment; it binds fast, O Arjuna, the embodied one by attachment to action!
Bannanje Govindacharya (1936–2020)Bhagavad Gita Pravachana
ರಜಃ ರಾಗಾತ್ಮಕಮ್‌ ವಿದ್ಧಿ ತೃಷ್ಣಾ ಸಂಗ ಸಮುದ್ಧವಮ್‌ | ತತ್‌ ನಿಬಧ್ನಾತಿ ಕೌಂತೇಯ ಕರ್ಮಸಂಗೇನ ದೇಹಿನಮ್‌--ರಜೋಗುಣ ರಂಜಿಸುವಂತಾದ್ದು, ಆಸೆ-ಆಸಕ್ತಿಗಳನ್ನು ಹುಟ್ಟಿಸುವಂತಾದ್ದು ಎಂದು ತಿಳಿ. ಕೌಂತೇಯಾ, ಅದು ಜೀವನನ್ನು ಕರ್ಮದ ನಂಟಿನಿಂದ ಕಟ್ಟಿಹಾಕುತ್ತದೆ. ರಜಸ್ಸು ಅಂದರೆ ठग. ಒಂದು ವಸ್ತುವನ್ನು ತುಂಬಾ ಇಷ್ಟಪಡುವುದು, ಬಯಕೆಗಳ ಸರಮಾಲೆ- ಹೀಗೆ ಎಲ್ಲಾ ಪಂಚೇಂದ್ರಿಯಗಳ ಬಯಕೆ ರಜೋಗುಣದ ಪ್ರಭಾವದಿಂದ ಬರುವಂತಾದ್ದು. ಇದು ತೃಷ್ಣಾ ಮತ್ತು ಸಂಗಕ್ಕೆ ಕಾರಣ. ಇಲ್ಲಿ ತೃಷ್ಣಾ ಎಂದರೆ ಬೇಕು-ಬೇಕು ಎನ್ನುವ ದಾಹ. ಸಂಗ ಎಂದರೆ ಒಂದು ವಸ್ತುವಿನ ನಿರಂತರ ಒಡನಾಟ. ರಜೋಗುಣ ಬಯಕೆಯನ್ನು ಹುಟ್ಟಿಸುತ್ತದೆ. ಆ ಬಯಕೆಯಿಂದ ಒಡನಾಟ, ಒಡನಾಟದಿಂದ ಅದು ಅಂಟಿಕೊಳ್ಳುವಂತೆ ಮಾಡುತ್ತದೆ. ಹೀಗೆ ಹಂತ ಹಂತವಾಗಿ ರಜೋಗುಣ ನಮ್ಮನ್ನು ಬಿಡಿಸಿಕೊಳ್ಳಲಾಗದ ಬಂಧನಕ್ಕೊಳಪಡಿಸುತ್ತದೆ(ನಿಬದ್ದಾತಿ). ಇದರ ಪ್ರಭಾವದಿಂದ ನಾವು ಜ್ಞಾನದ ಬಯಕೆ ಇಲ್ಲದ ಕರ್ಮಸಂಗ ಮಾಡಲಾರಂಭಿಸುತ್ತೇವೆ. ಉದಾಹರಣೆಗೆ: ದುಡ್ಡಿಗಾಗಿ ಹೋರಾಟ, ದುಡ್ಡಿಗಾಗಿ. ಇಡೀ ಬದುಕನ್ನು ಮೀಸಲಿಡುವುದು. ದುಡ್ಡೇ ಪ್ರಪಂಚ ಎಂದು ಹೋರಾಡುವುದು, ಇತ್ಯಾದಿ. ಇದು ರಜಸ್ಸಿನ ಗಾಢವಾದ ಬಂಧನದ ಪ್ರಭಾವ.
Bibek Debroy (1955–2024)The Bhagavad Gita
‘O sinless one!11 Among these,12 sattva is shining because it is pure and is without sin, but ties down the atman because of attachment to happiness and knowledge.’13 (7) ‘O son of Kunti!14 Know rajas to be based on desire and the origin of thirst and attachment.15 That16 binds the atman17 firmly because of attachment to action.’