सत्त्वं सुखे सञ्जयति रजः कर्मणि भारत ।
ज्ञानमावृत्य तु तमः प्रमादे सञ्जयत्युत ॥
sattvaṃ sukhe sañjayati rajaḥ karmaṇi bhārata |
jñānamāvṛtya tu tamaḥ pramāde sañjayatyuta ||
Swami Sivananda (1887–1963)Bhagavad Gita
9. Sattwa attaches to happiness, Rajas to action, O Arjuna, while Tamas, shrouding
knowledge, attaches to heedlessness only!
Bannanje Govindacharya (1936–2020)Bhagavad Gita Pravachana
ಸತ್ತ್ವಂ ಸುಖೇ ಸಂಜಯತಿ ರಜಃ ಕರ್ಮಣಿ ಭಾರತ |
ಜ್ಞಾನಮ್ ಆವೃತ್ಯ ತು ತಮಃ ಪ್ರಮಾದೇ ಸಂಜಯತಿ ಉತ -ಸತ್ವಗುಣ ಸುಖದ ನಂಟಿನಲ್ಲಿರುತ್ತದೆ. ಭಾರತಾ,
ರಜೋಗುಣ ಕರ್ಮದ ನಂಟಿನಲ್ಲಿರುತ್ತದೆ. ತಮೋಗುಣ ಅರಿವನ್ನು ಮುಚ್ಚಿ ಮೈಮರೆಸಿ ಬಿಡುತ್ತದೆ
ಈ ಶ್ಲೋಕದಲ್ಲಿ ಕೃಷ್ಣ ಮೂರು ಗುಣಗಳನ್ನು ಒಟ್ಟಿನಲ್ಲಿ ಸಂಕ್ಷೇಪಿಸಿ ಹೇಳುತ್ತಾನೆ. ಸತ್ವದ ಮೂಲ ಗುಣಧರ್ಮ
ಏನೆಂದರೆ -ಅದರಿಂದಾಗಿ ನಮ್ಮಿಂದ ಒಂದು ಸಹಜವಾದ ಆನಂದ ಚಿಮ್ಮುತ್ತದೆ. ರಜೋಗುಣ “ಏನಾದರೂ
ಮಾಡಬೇಕು ಇಲ್ಲದಿದ್ದರೆ ಜೀವನದಲ್ಲಿ ಸುಖವಿಲ್ಲ” ಎಂದು, ಸದಾ ದುಡ್ಡಿಗಾಗಿ ಹೋರಾಟ ಮಾಡುತ್ತಾ, ತಮ್ಮ
ಜೀವನವನ್ನು ಸವೆಸುವಂತೆ ಮಾಡುತ್ತದೆ. ತಮಸ್ಸು ನಮ್ಮಲ್ಲಿರುವ ಜ್ಞಾನವನ್ನು ಮುಚ್ಚಿಬಿಡುತ್ತದೆ. ಉದಾಹರಣೆಗೆ:
ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕು ಎನ್ನುವ ಒಳ್ಳೆಯತನ, ಕೊಡುವುದರಲ್ಲಿ ಖುಷಿಪಡುವುದು-ಸತ್ವಗುಣ.
ತಾನು ಸುಖವಾಗಿರಬೇಕು ಎಂದು ಸದಾ ಸುಖದ ಅನ್ವೇಷಣೆಯಲ್ಲಿ ತೊಡಗಿ, ಮಾಡಬಾರದ ಕೆಲಸವನ್ನು
ಮಾಡುತ್ತಾ ಬದುಕುವುದು ರಜೋಗುಣ. ಸೋಮಾರಿತನ, ನಿದ್ದೆ, ಅಜ್ಞಾನ, ಅದರಿಂದ ಪ್ರಮಾದ ಇವೆಲ್ಲವೂ
ತಮೋಗುಣದ ಪ್ರಭಾವ. ಇದು ನಮಗೆ ಕೃಷ್ಣ ಗೀತೆಯ ಮೂಲಕ ಹೇಳಿದ ಅತ್ಯುನ್ನತವಾದ ಮನಃಶಾಸ್ತ್ರ.
ಈ ಗುಣತ್ರಯಗಳು ಹೇಗೆ ನಮ್ಮನ್ನು ನಿಯಂತ್ರಣಕ್ಕೆ ತೆಗೆದುಕೊಂಡು ನಮ್ಮನ್ನು ಕುಣಿಸುತ್ತವೆ ಎನ್ನುವುದನ್ನು
ಕೃಷ್ಣ ನಿರೂಪಿಸಿದ್ದನ್ನು ನೋಡಿದೆವು. ಇಲ್ಲಿ ನಮಗೆ ಒಂದು ಸಂಶಯ ಬರಬಹುದು. ಈ ಮೂರು ಗುಣಗಳು ಒಟ್ಟಿಗೆ
ಏಕಕಾಲದಲ್ಲಿ ಕೆಲಸ ಮಾಡುವಾಗ, ಕೇವಲ ಸಾತ್ವಿಕ ಚಿಂತನೆ, ಕೇವಲ ರಾಜಸ ಚಿಂತನೆ, ಕೇವಲ ತಾಮಸ
ಚಿಂತನೆ ಹೇಗೆ ಸಾಧ್ಯವಾಗುತ್ತದೆ? ಮೂರು ಗುಣಗಳು ಒಬ್ಬನ ದೇಹದಲ್ಲಿರುವಾಗ ಯಾವುದೋ ಒಂದು ಗುಣ
ಕೆಲಸ ಮಾಡುವುದು ಹೇಗೆ ಸಾಧ್ಯ? ಮೂರು ಗುಣಗಳು ಬೆರೆತು ನಮ್ಮೊಳಗಿರುವಾಗ ಒಂದು ಪ್ರತ್ಯೇಕವಾದ
ಸಾತ್ವಿಕ ಸ್ವಭಾವ, ರಾಜಸ ಸ್ವಭಾವ, ತಾಮಸ ಸ್ವಭಾವ ಎಂದು ಗುರುತಿಸುವುದು ಹೇಗೆ? ಇದರ ವಿವರಣೆ
ಮುಂದಿನ ಶ್ಲೋಕ.
Bibek Debroy (1955–2024)The Bhagavad Gita
(9)
‘O descendant of Bharata!22 Sattva attaches to happiness and rajas attaches
to action. Tamas veils knowledge and attaches to errors.’