अहं वैश्वानरो भूत्वा प्राणिनां देहमाश्रितः ।
प्राणापानसमायुक्तः पचाम्यन्नं चतुर्विधम् ॥
ahaṃ vaiśvānaro bhūtvā prāṇināṃ dehamāśritaḥ |
prāṇāpānasamāyuktaḥ pacāmyannaṃ caturvidham ||
Sri Madhvacharya (1238–1317)Bhagavad Gita Tatparya Nirnaya
स एवाग्निस्थितो विष्णुर्नाम्ना वैश्वानरः सदा।
सर्वेषां स नराणां यदुपजीव्यः सदैव च॥14॥
Swami Sivananda (1887–1963)Bhagavad Gita
14. Having become the fire Vaisvanara, I abide in the body of living beings and, associated
with the Prana and Apana, digest the fourfold food.
Bannanje Govindacharya (1936–2020)Bhagavad Gita Pravachana
ಅಹಮ್ ವೈಶ್ವಾನರಃ ಭೂತ್ವಾ ಪ್ರಾಣಿನಾಮ್ ದೇಹಮ್ ಆಶ್ರಿತಃ |
ಪ್ರಾಣ ಅಪಾನ ಸಮಾಯುಕ್ತಃ ಪಚಾಮಿ ಅನ್ನಮ್ ಚತುರ್ವಿಧಮ್ -ನಾನು "ವೈಶ್ವಾನರ'ನಾಗಿ ಜೀವಿಗಳ
ದೇಹದೊಳಗಿದ್ದು ಪ್ರಾಣ-ಅಪಾನರಿಂದೊಡಗೂಡಿ (ತಿನ್ನುವ, ಚೀಪುವ, ನೆಕ್ಕುವ, ಕುಡಿಯುವ] ನಾಲ್ಕು ಬಗೆಯ
ಆಹಾರವನ್ನು ಕರಗಿಸುತ್ತೇನೆ.
ಇಲ್ಲಿ 'ಪಚಾಮ್ಯನ್ನಂ ಚತುರ್ವಿಧಮ್' ಎಂದರೆ ನಾಲ್ಕು ಬಗೆಯ ಅನ್ನವನ್ನು TADS" ಎಂದರ್ಥ. ಅನ್ನವೆಂದರೆ
ಎಲ್ಲಾ ರೀತಿಯ 'ಆಹಾರ'. "ಪ್ರಾಣಿನಾಂ ದೇಹಮಾಶ್ರಿತಃ" ಎಂದರೆ 'ಪ್ರಾಣಿ'ಗಳು ತಿನ್ನಬಲ್ಲ ಆಹಾರ ಎಂದರ್ಥ.
ಪ್ರಾಣಿಗಳ ಅಹಾರವನ್ನು ನಾಲ್ಕು ವಿಧಗಳಲ್ಲಿ ವಿಂಗಡಿಸಬಹುದು- ಭಕ್ಷ್ಯ, ಭೋಜ್ಯ, ಲೇಹ್ಯ ಮತ್ತು ಚೋಷ್ಯ. ಭಕ್ಷ್ಯ
ಅಂದರೆ ಅಗಿದು, ಕಡಿದು ತಿನ್ನಲು ಯೋಗ್ಯವಾದುದು (ತಿನ್ನುವುದು); ಭೋಜ್ಯ ಅಂದರೆ ಅಗಿಯದೆಯೇ, ನವಣಿಸಿ
ತಿನ್ನಲು ಯೋಗ್ಯವಾದುದು (ಉಣ್ಣುವುದು). ಲೇಹ್ಯ ಅಂದರೆ ನೆಕ್ಕಿ ತಿನ್ನಲು ಯೋಗ್ಯವಾದುದು; ಚೋಷ್ಯ ಅಂದರೆ
ಕುಡಿಯಲು ಯೋಗ್ಯವಾದುದು. ಈ ನಾಲ್ಕು ವಿಧದ 'ಅನ್ನ'ವನ್ನು ಸೇವಿಸುವ ಎಲ್ಲಾ ಜೀವಿಗಳ ಜಠರದಲ್ಲಿ ಅಗ್ನಿಯ
ರೂಪದಲ್ಲಿದ್ದು, ನಾಲ್ಕು ಬಗೆಯ ಅನ್ನವನ್ನು ಮೂರು ಬಗೆ(ಸೂಕ್ಷ್ಮ-ಮಧ್ಯ-ಸ್ಥೂಲ)ಯಲ್ಲಿ ವಿಭಾಗಮಾಡಿ, ದೇಹಕ್ಕೆ
ಉಣಬಡಿಸಿ ನಮಗೆ ಬದುಕಲು ವ್ಯವಸ್ಥೆ ಮಾಡಿಸುವವ ವೈಶ್ವಾನರ ರೂಪಿ ಭಗವಂತ.
ನಾವು ಸೇವಿಸುವ ಆಹಾರ ಮಣ್ಣು-ನೀರು-ಬೆಂಕಿಯ ಮಿಶ್ರಣ. ಆಹಾರದಲ್ಲಿನ ಮಣ್ಣಿನ ಸೂಕ್ಷ್ಮ ಭಾಗ ಮೆದುಳಿಗೆ,
ಮಧ್ಯ ಭಾಗ ಮಾಂಸ-ಚರ್ಮಕ್ಕೆ, ಹಾಗೂ ಸ್ಥೂಲ ಭಾಗ ಮಲವಾಗಿ ವಿಸರ್ಜನೆಯಾಗುತ್ತದೆ. ಅದೇ ರೀತಿ ನೀರಿನ
ಸೂಕ್ಷ್ಮ ಭಾಗ ಉಸಿರಾಗಿ, ಮಧ್ಯ ಭಾಗ ನೆತ್ತರಾಗಿ, ಹಾಗೂ ಸ್ಥೂಲ ಭಾಗ ಮೂತ್ರವಾಗಿ ವಿನಿಯೋಗವಾಗುತ್ತದೆ.
ಇನ್ನು ಬೆಂಕಿಯ ಸೂಕ್ಷ್ಮ ಭಾಗ ವಾಕ್ ಶಕ್ತಿಯಾಗಿ, ಮಧ್ಯ ಭಾಗ ಅಸ್ಥಿಮಜ್ಜೆಯಾಗಿ , ಸ್ಥೂಲ ಭಾಗ ಹಲ್ಲು ಮತ್ತು
ಅಸ್ಥಿಯಾಗಿ ವಿನಿಯೋಗವಾಗುತ್ತದೆ. ಈ ರೀತಿ ಚಿನ್ನದ ಗಣಿಯಿಂದ ಚಿನ್ನವನ್ನು ಬೇರ್ಪಡಿಸುವುದಕ್ಕಿಂತ
ಕಠಿಣವಾದ ಈ ಕಾರ್ಯವನ್ನು ನಮ್ಮೊಳಗಿದ್ದು ವ್ಯವಸ್ಥಿತ ರೀತಿಯಲ್ಲಿ ಮಾಡಿ, ನಮಗೆ ಜೀವನವನ್ನು ಕೊಡುವವನು
ಆ ಭಗವಂತ. ಭಗವಂತನ ಈ ಕಾರ್ಯಕ್ಕೆ ಸೇವಕ ಪ್ರಾಣ-ಅಪಾನ ಎನ್ನುವ ಪ್ರಾಣದೇವರ ಎರಡು ರೂಪಗಳು.
ಕಠೋಪನಿಷತ್ತಿನಲ್ಲಿ ಹೇಳುವಂತೆ:
ಊರ್ಧ್ವಂ ಪ್ರಾಣಮುನ್ನಯತಿ ಅಪಾನಂ ಪ್ರತ್ಯಗಸ್ಯತಿ.
ಮಧ್ಯೇ ವಾಮನಮಾಸೀನಂ ವಿಶ್ವೇ ದೇವಾ ಉಪಾಸತೇ |9-9- ||
ಇಲ್ಲಿ ಪ್ರಾಣ-ಅಪಾನ ಎನ್ನುವ ಪ್ರಾಣದೇವರ ಎರಡು ರೂಪ, ಮಧ್ಯದಲ್ಲಿ(ಹೃದಯದಲ್ಲಿ) ಭಗವಂತನ ವಾಮನ
ರೂಪ. ಇದು ಪಂಚರೂಪಿ ಭಗವಂತನ ಉಪಾಸನೆಗಿಂತ ಭಿನ್ನವಾದ ಉಪಾಸನೆ. ಹೃದಯದ ಮಧ್ಯದಲ್ಲಿದ್ದು,
ನಾವು ಉಂಡ ಅಹಾರವನ್ನು ಜೀರ್ಣಿಸಿ ಬದುಕು ಕೊಡುವವನು-ವಾಮನ ರೂಪಿ ಭಗವಂತ. ಈ ಮನ್ವಂತರದಲ್ಲಿ
ವಾಮನ ದೇವೇಂದ್ರನ ರಕ್ಷಕನಾಗಿರುವ 'ಉಪೇಂದ್ರ'. ಆದ್ದರಿಂದ ನಮ್ಮ ಹೃದಯದಲ್ಲಿರುವ ವಾಮನ ರೂಪಿ
ಭಗವಂತನ ಉಪಾಸನೆ ಈ ಮನ್ವಂತರದಲ್ಲಿ ಬಹಳ ಮುಖ್ಯವಾಗುತ್ತದೆ. ನಮ್ಮೊಳಗೆ ವಾಮನ ರೂಪಿಯಾಗಿರುವ
ಈ ಭಗವಂತನೇ ತ್ರಿವಿಕ್ರಮನಾಗಿ ಭೂಮಿ-ವ್ಯೋಮದಲ್ಲಿ ತುಂಬಿರುವವನು.
Bibek Debroy (1955–2024)The Bhagavad Gita
(14)
‘I am established in the bodies of beings as the fire of digestion. I mingle
with the prana and apana breath20 and digest the four types of food.’21