16.4

दम्भो दर्पोऽभिमानश्च क्रोधः पारुष्यमेव च ।
अज्ञानं चाभिजातस्य पार्थ सम्पदमासुरीम् ॥
dambho darpo'bhimānaśca krodhaḥ pāruṣyameva ca |
ajñānaṃ cābhijātasya pārtha sampadamāsurīm ||
·
Swami Sivananda (1887–1963)Bhagavad Gita
4. Hypocrisy, arrogance, self-conceit, harshness and also anger and ignorance, belong to one who is born in a demoniacal state, O Arjuna!
Bannanje Govindacharya (1936–2020)Bhagavad Gita Pravachana
ಡಂಭಃ ದರ್ಪಃ ಅಭಿಮಾನಃ ಚ ಕ್ರೋಧಃ ಪಾರುಷ್ಯಮ್‌ ಏವ ಚ | ಅಜ್ಞಾನಮ್‌ ಚ ಅಭಿಜಾತಸ್ಯ ಪಾರ್ಥ ಸಂಪದಮ್‌ ಆಸುರೀಮ್‌--ಪಾರ್ಥಾ, ಆಸುರೀ ಸಂಪತ್ನು [ಕೆಟ್ಟ ನಡತೆ] ಹೊತ್ತು ಬಂದವನ ಗುಣಗಳು ಇವು: ಬೂಟಾಟಿಕೆ, ಸೊಕ್ಕು, ಬಿಂಕ, ಸಿಡುಕು, ಒರಟುತನ ಮತ್ತು ತಿಳಿಗೇಡಿತನ. ಮೇಲೆ ಹೇಳಿದ ಇಪ್ಪಾತ್ತಾರು ದೈವೀಗುಣಕ್ಕೆ ವಿರುದ್ಧವಾಗಿ ಆರು ಆಸುರೀ ಗುಣಗಳನ್ನು ಕೃಷ್ಣ ಈ ಶ್ಲೋಕದಲ್ಲಿ ಹೇಳಿದ್ದಾನೆ: (೧) ಡಂಭ(ಇಲ್ಲದ್ದನ್ನು ಇದೆ ಎಂದು ತೋರಿಸಿಕೊಳ್ಳುವುದು): ಒಳಗಡೆ ಏನಿಲ್ಲವೋ ಅದು ಇದೆ ಎನ್ನುವಂತೆ ಸುಭಗತನದ ಪ್ರದರ್ಶನ; ಒಳಗಿರುವ ಕೆಟ್ಟತನವನ್ನು ಮುಚ್ಚಿಟ್ಟು ತುಂಬಾ ಒಳ್ಳೆಯವರ ಹಾಗೆ ಪ್ರದರ್ಶನ ಮಾಡುವುದು, ಇತ್ಯಾದಿ ಡಂಭ ಎನಿಸುತ್ತದೆ. ಇದು ಮೇಲೆ ಹೇಳಿದ ಆರ್ಜವಂ ಎನ್ನುವ ಸದ್ಗುಣದ ವಿರುದ್ಧ ಗುಣ. (೨) ದರ್ಪ: ಏನು ತಪ್ಪು ಮಾಡಲೂ ಹೇಸದ ಮನೋವೃತ್ತಿ. ಇದು ಹ್ರೀ ಎನ್ನುವ ಸದ್ಗುಣದ ವಿರುದ್ಧ ಗುಣ. (೩) ಅತಿಮಾನ(೦೪೯ Estimation of Self): ತನ್ನ ಬಗ್ಗೆ ಅತಿರೇಕದ ಕಲ್ಪನೆ; ನಾನೇ ದೊಡ್ಡ ಮನುಷ್ಯ ಎಂದು ಭ್ರಮಿಸಿಕೊಂಡು ಇನ್ನೊಬ್ಬರಿಗೆ ಅಗೌರವ ತೋರುವುದು; ಎಲ್ಲರೂ ತನ್ನ ಕಾಲನ್ನು ಹಿಡಿಯಬೇಕು ಎಂದು ಅಪೇಕ್ಷಿಸುವುದು-ಇವು ಅತಿಮಾನವೆನಿಸುತ್ತವೆ. (೪) ಕ್ರೋಧ : ಮನುಷ್ಯ ಬಿಡಬೇಕು ಎಂದರೂ ಬಿಡಲಾಗದ ಕೆಟ್ಟಗುಣ ಕ್ರೋಧ. ಇದು ನಮಗೆ ಗೊತ್ತಿಲ್ಲದಂತೆ ನಮ್ಮನ್ನು ದಾರಿತಪ್ಪಿಸುವ ದುರ್ಗುಣ. (೫) ಪಾರುಷ್ಯ : ಉಗ್ರವಾದ, ಅಸಹ್ಯವಾದ ಮಾತು; ಇನ್ನೊಬ್ಬರನ್ನು ತಾತ್ಸಾರದಿಂದ ಮಾತನಾಡಿಸುವುದು, ಇತ್ಯಾದಿ ಪಾರುಷ್ಯಕ್ಕೆ ಉದಾಹರಣೆ. (೬) ಅಜ್ಞಾನ : ಮೇಲಿನ ಎಲ್ಲಾ ದುರ್ಗುಣಗಳ ಚಕ್ರವರ್ತಿ ಈ ಅಜ್ಞಾನ. ನಿಜವಾದ ಜ್ಞಾನಿ ಎಂದೂ ಈ ಕೆಟ್ಟ ಗುಣಗಳ ದಾಸನಾಗುವುದಿಲ್ಲ. ಈ ಎಲ್ಲಾ ಆಸುರೀ ಗುಣಗಳು ನಮ್ಮಲ್ಲಿ ಮನೆ ಮಾಡಿ ನಮ್ಮನ್ನೇ ಹೊರ ಹಾಕುತ್ತವೆ. ಆದ್ದರಿಂದ ಈ ದುರ್ಗುಣಗಳನ್ನು ನಾವು ಮೊದಲು ಹೊರ ಹಾಕಬೇಕು. ಕುರಾನಿನಲ್ಲಿ ಇದನ್ನು- “Drive them out from where you have been driven out” ಎಂದು ಸುಂದರವಾಗಿ ಹೇಳಿದ್ದಾರೆ. ನಿನ್ನನ್ನು ಹೊರಹಾಕಿ, ನಿನ್ನೊಳಗೆ ಕೂತು ನಿನ್ನನ್ನು ಹಾಳು ಮಾಡುತ್ತಿರುವ ಈ ದುರ್ಗುಣಗಳನ್ನು ಮೊದಲು ಹೊರಹಾಕು ಎನ್ನುತ್ತಾರೆ. ಇದನ್ನೇ ವೇದದಲ್ಲಿ ಹೀಗೆ ಹೇಳಿದ್ದಾರೆ: “ಯೊ ಅಸ್ಮಾನ್‌ ದ್ವೇಷ್ಟಿ ಯಾಮ್‌ ವಯಮ್‌ BA ..|ಅಥರ್ವ ೩-೨೭-೨॥- ಅಂದರೆ- “ಯಾರು ನಮ್ಮನ್ನು ದ್ವೇಶಿಸುತ್ತಾರೋ, ಯಾರನ್ನು ನಾವು ದ್ವೇಷ ಮಾಡುತ್ತೇವೋ ಅಂತಹ ಶತ್ರುವನ್ನು ಒದ್ದೋಡಿಸು” ಎಂದರ್ಥ. ಇಲ್ಲಿ ಶತ್ರು ಎಂದರೆ ನಮ್ಮ ಅಂತಃಶತ್ರುಗಳಾದ ಈ ದುರ್ಗುಣಗಳು. ಈ ಶ್ಲೋಕದಲ್ಲಿ 'ಪಾರ್ಥ' ಎನ್ನುವ ವಿಶೇಷಣವನ್ನು ಬಳಸಲಾಗಿದೆ. “ನಾವು ದುರ್ಗುಣಗಳಿಂದ ದೂರ ಸರಿದು, ಜ್ಞಾನ ಮಾರ್ಗದಲ್ಲಿ ಸಾಗಿ, ಯಥಾರ್ಥ ಬದುಕನ್ನು ಬದುಕುವ ಪಾರ್ಥರಾಗಬೇಕು' ಎನ್ನುವ ಸಂದೇಶ ಈ ವಿಶೇಷಣದ ಹಿಂದಿದೆ.
Bibek Debroy (1955–2024)The Bhagavad Gita
(4) ‘O son of Pritha!11 Arrogance, insolence, egoism, anger, cruelty and ignorance, these belong to birth towards demonic wealth.’