17.13

विधिहीनमसृष्टान्नं मन्त्रहीनमदक्षिणम् ।
श्रद्धाविरहितं यज्ञं तामसं परिचक्षते ॥
vidhihīnamasṛṣṭānnaṃ mantrahīnamadakṣiṇam |
śraddhāvirahitaṃ yajñaṃ tāmasaṃ paricakṣate ||
Sri Madhvacharya (1238–1317)Bhagavad Gita Tatparya Nirnaya
17.12–17.13
‘यागात् तु राजसात् स्वर्गः साङ्कल्पिक उदाहृतः। लोकः स दीनदेवानां सनाम्नां वासवादिभिः। विष्णावश्रद्धयाऽयोग्यकामाच्चैषां पुनर्भवेत्। नरकं च विना यज्ञं राजसा नरलोकगाः। निषिद्धं कर्म कुर्युश्चेदीयुस्ते नरकं ध्रुवम्। कदाचित् सात्त्विका कुर्यः कर्म राजसतामसम्। अन्येऽन्यच्च तथाऽप्येषां स्थितिः स्वाभाविकी पुनः। स्वं स्वं कर्म तु सर्वेषां सदैव स्यान्महत्फलम्। अन्यदल्पफलं चैव बाहुल्यं तेषु लक्षणम्’ इति पाद्मे॥12-13॥
Swami Sivananda (1887–1963)Bhagavad Gita
13. They declare that sacrifice to be Tamasic which is contrary to the ordinances of the scriptures, in which no food is distributed, which is devoid of Mantras and gifts, and which is devoid of faith.
Bannanje Govindacharya (1936–2020)Bhagavad Gita Pravachana
ವಿಧಿಹೀನಮ್‌ ಅಸೃಷ್ಟ ಅನ್ನಮ್‌ ಮಂತ್ರ ಹೀನಮ್‌ ಅದಕ್ಷೆಣಮ್‌। ಶ್ರದ್ಧಾ ವಿರಹಿತಂ ಯಜ್ಞಂ ತಾಮಸಂ ಪರಿಚಕ್ಷತೇ -ಶಾಸ್ತ್ರಕ್ಕೆ ಅನುಗುಣವಾಗಿಲ್ಲ; ಅನ್ನದಾನವಿಲ್ಲ; ಮಂತ್ರವಿಲ್ಲ; ದಕ್ಷಿಣೆಯಿಲ್ಲ; ಮಾಡುವ ಕ್ರಿಯೆಯಲ್ಲಿ ನಂಬಿಕೆಯೂ ಇಲ್ಲ. ಇಂತಹ ಯಜ್ಞವನ್ನು ತಾಮಸ ಎನ್ನುತ್ತಾರೆ. ಮಂತ್ರ ಸರಿಯಾಗಿ ಹೇಳದೇ ಇರುವುದು, ಮಂತ್ರವನ್ನು ಕ್ರಮ ತಪ್ಪಿ ಹೇಳುವುದು, ಪದ ಉಚ್ಛಾರ ಸರಿಯಾಗಿಲ್ಲದೇ ಇರುವುದು-ಇವೆಲ್ಲವೂ ವಿಧಿಹೀನ. ಈ ರೀತಿ ಮಾಡುವ ಯಜ್ಞ ತಾಮಸ ಯಜ್ಞ. ಯಾವುದೇ ಯಜ್ಞದಲ್ಲಿ ಹೇಗೆ ಪ್ರತಿಮೆಯ ಮೂಲಕ ಮತ್ತು ಅಗ್ನಿಯ ಮೂಲಕ ಆರಾಧನೆ ನಡೆಯುತ್ತದೆಯೋ, ಅದೇ ರೀತಿ ಚರಮೂರ್ತಿಗಳ ಆರಾಧನೆ ಬಹಳ ಮುಖ್ಯ. ಅನ್ನದಾನ ಮಾಡುವ ಮೂಲಕ ಪ್ರತಿಯೊಬ್ಬರೊಳಗೂ ಇರುವ ಭಗವಂತನ ಆರಾಧನೆ ಈ ಚರಮೂರ್ತಿ ಆರಾಧನೆ. ಹೀಗೆ ಅನ್ನ ದಾನವಿಲ್ಲದೆ, ದಕ್ಷಿಣೆ(ವೈದಿಕರಿಗೆ ಅವರ ಜೀವನ ನಿರ್ವಾಹಣೆಗಾಗಿ ನಾವು ಸಲ್ಲಿಸುವ ಸೇವೆ) ಇಲ್ಲದೆ ಮಾಡುವ ಯಜ್ಞ ತಾಮಸ ಯಜ್ಞ. ಇವೆಲ್ಲವುದಕ್ಕಿಂತ ಮುಖ್ಯವಾದುದು ಶ್ರದ್ಧೆ. ಭಗವಂತನ ಮೇಲೆ ಅಚಲವಾದ ಶ್ರೇಷ್ಠ ಶ್ರದ್ಧೆ ಇಲ್ಲದೇ ಮಾಡುವ ಯಾವುದೇ ಯಜ್ಞವಿರಲಿ-ಅದು ಸರ್ವತ್ರ ತಾಮಸ ಯಜ್ಞವಾಗುತ್ತದೆ. ಆಹಾರ ಮತ್ತು ಯಜ್ಞದ ನಂತರ ಕೃಷ್ಣ ಮುಂದಿನ ಶ್ಲೋಕಗಳಲ್ಲಿ ಮೂರು ವಿಧದ ತಪಸ್ಸಿನ ಬಗ್ಗೆ ವಿವರಿಸುತ್ತಾನೆ. ಮೂಲಭೂತವಾಗಿ ತಪಸ್ಸಿನಲ್ಲಿ ಮೂರು ವಿಧ. ನಮ್ಮ ನಡೆಯಲ್ಲಿ ಶಿಸ್ತುಬದ್ಧತೆಯನ್ನು ತರುವುದು-ತಪಸ್ಸು; ಆಳವಾದ ಚಿಂತನೆ-ತಪಸ್ಸು; ಮನಃಶುದ್ಧಿಗಾಗಿ ಮಾಡುವ ದೇಹದಂಡನೆಯೂ-ತಪಸ್ಸು. ತಪಸ್ಸು ಮಾಡಲು ಕಾಡಿಗೆ ಹೋಗಬೇಕಾಗಿಲ್ಲ. ಮನೆಯಲ್ಲೇ ಇದ್ದು ತಪಸ್ಸು ಮಾಡಬಹುದು. ಸಾತ್ವಿಕ, ರಾಜಸ ಮತ್ತು ತಾಮಸ ತಪಸ್ಸನ್ನು ವಿವರಿಸುವ ಮೊದಲು ಇಲ್ಲಿ ಕೃಷ್ಣ ಶರೀರ, ಮಾತು ಮತ್ತು ಮನ ಎನ್ನುವ ಮೂಲಭೂತವಾದ ಮೂರು ತಪಸ್ಸಿನ ವಿವರಣೆಯನ್ನು ಮುಂದಿನ ಮೂರು ಶ್ಲೋಕಗಳಲ್ಲಿ ಕೊಡುತ್ತಾನೆ.
Bibek Debroy (1955–2024)The Bhagavad Gita
(13) ‘Sacrifices without following prescribed rites, without donating food, without mantras, without donations and without faith, are said to be of the tamas-type.’