देवद्विजगुरुप्राज्ञपूजनं शौचमार्जवम् ।
ब्रह्मचर्यमहिंसा च शारीरं तप उच्यते ॥
devadvijaguruprājñapūjanaṃ śaucamārjavam |
brahmacaryamahiṃsā ca śārīraṃ tapa ucyate ||
Swami Sivananda (1887–1963)Bhagavad Gita
14. Worship of the gods, the twice-born, the teachers and the wise, purity,
straightforwardness, celibacy and non-injury—these are called the austerities of the body.
Bannanje Govindacharya (1936–2020)Bhagavad Gita Pravachana
ದೇವ ದ್ವಿಜ ಗುರು ಪ್ರಾಜ್ಞ ಪೂಜನಂ ಶೌಚಮ್ ಆರ್ಜವಮ್ |
ಬ್ರಹ್ಮಚರ್ಯಮ್ ಅಹಿಂಸಾ ಚ ಶಾರೀರಂ ತಪಃ ಉಚ್ಯತೇ -ದೇವತೆಗಳನ್ನು, ಅರಿವಿನಿಂದ ಮರುಹುಟ್ಟು
ಪಡೆದವರನ್ನು, ಗುರುಗಳನ್ನು ಮತ್ತು ತುಂಬಾ ತಿಳಿದವರನ್ನು ಗೌರವಿಸುವುದು, ನೈರ್ಮಲ್ಯ, ನೇರ ನಡೆ,
ಬ್ರಹ್ಮಚರ್ಯ ಮತ್ತು ಇನ್ನೊಬ್ಬರಿಗೆ ಕಾಟ ನೀಡದಿರುವುದು ಶರೀರದ ತಪಸ್ಸು ಎನಿಸುತ್ತದೆ.
ದೇವರ ಪ್ರತೀಕ ಎಲ್ಲಿ ಕಂಡಿತೋ ಅಲ್ಲಿ ತಲೆಬಾಗುವುದು; ಜ್ಞಾನಿಗಳಿಗೆ ಗೌರವ ಕೊಡುವುದು; ಗುರುವಿಗೆ
ತಲೆಬಾಗುವುದು; ಭಗವದ್ಭೂತಿಯಿಂದ ಭಗವಂತನನ್ನು ಅನುಭವಿಸಿದ ಅನುಭಾವಿಗಳಾದ ಪ್ರಾಜ್ಞರನ್ನು
ಗೌರವಿಸುವುದು- ಇವೆಲ್ಲವೂ ಶರೀರ ತಪಸ್ಸು ಎನಿಸುತ್ತದೆ. ಇದರ ಜೊತೆಗೆ ಶುಚಿತ್ವವನ್ನು ಕಾಪಾಡಿಕೊಂಡು
ಬದುಕುವುದು, ನೇರ ನಡೆ-ನುಡಿ, ಬ್ರಹ್ಮಚರ್ಯ ಪಾಲನೆ. ಹಾಗೂ ಇನ್ನೊಬ್ಬರಿಗೆ. ನಮ್ಮಿಂದ
ತೊಂದರೆಯಾಗದಂತೆ ಬದುಕುವುದು ಶರೀರದ ತಪಸ್ಸು. [ಈ ಶ್ಲೋಕದಲ್ಲಿ ಹೇಳಿರುವ ಶೌಚಮ್, ಆರ್ಜವಮ್
ಮತ್ತು ಅಹಿಂಸಾ-ಈ ಗುಣಗಳ ಪೂರ್ಣ ವಿವರಣೆಯನ್ನು ಹದಿನಾರನೇ ಅಧ್ಯಾಯದ ಪ್ರಾರಂಭಿಕ ಶ್ಲೋಕದಲ್ಲಿ
ವಿವರಿಸಲಾಗಿದೆ]. ಇಲ್ಲಿ ಬ್ರಹ್ಮಚರ್ಯ ಪಾಲನೆ' ಅಂದರೆ ಮನಸ್ಸನ್ನು ಭಗವಂತನಲ್ಲಿ ನೆಲೆಗೊಳಿಸುವುದು; ಅದಕ್ಕೆ
ಪೂರಕವಾಗಿ ವೇದಾಧ್ಯಯನ ಮಾಡುವುದು ಹಾಗೂ ಅಧ್ಯಯನಕ್ಕೆ ಪೂರಕವಾಗಿ ದೈಹಿಕ ಬ್ರಹ್ಮಚರ್ಯ ಪಾಲನೆ.
ದೈಹಿಕವಾಗಿ ಪೂರ್ಣ ಬ್ರಹ್ಮಚರ್ಯ ಕೇವಲ ಸನ್ಯಾಸಿಗಳಿಗೆ ಮತ್ತು ಬ್ರಹ್ಮಚಾರಿಗಳಿಗೆ ಅನ್ವಯಿಸುತ್ತದೆ.
ಗ್ರಹಸ್ಥರಾದವರು ಈ ರೀತಿ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಗ್ರಹಸ್ಥರಲ್ಲಿ ಬ್ರಹ್ಮಚರ್ಯ ಪಾಲನೆ ಎಂದರೆ-
ಅವರು ಸ್ವಚ್ಛಂದ ಕಾಮಿಗಳಾಗದೇ, ಗ್ರಹಸ್ಥಧರ್ಮ ಪಾಲನೆಯ ಆವರಣದಲ್ಲಿ ಬದುಕುವುದು ಎಂದರ್ಥ. ಹೀಗೆ
ಭಗವಂತನಲ್ಲಿ ಶರಣಾಗತಿ; ಜ್ಞಾನಿಗಳಿಗೆ, ಗುರುಗಳಿಗೆ, ಪ್ರಾಜ್ಞರಿಗೆ ಗೌರವ ಕೊಡುವುದು, ಶುಚಿತ್ವವನ್ನು
ಕಾಪಾಡಿಕೊಳ್ಳುವುದು, ನೇರ ನಡೆ ನುಡಿ, ಬ್ರಹ್ಮಚರ್ಯ ಪಾಲನೆ ಮತ್ತು ಅಹಿಂಸೆಯಿಂದ ಬದುಕುವುದು-
ಶಾರೀರಿಕ ತಪಸ್ಸು . ನಾವು ಸಾಮಾಜಿಕವಾಗಿ ಸಭ್ಯರಾಗಿ ಬದುಕಲು ಈ ತಪಸ್ಸು ಬೇಕೇಬೇಕು.
ಮನುಷ್ಯನಾದವನು ಅನುಸರಿಸಬೇಕಾದ ದೈಹಿಕ ನೀತಿಗಳಿವು
Bibek Debroy (1955–2024)The Bhagavad Gita
(14)
‘Worship of gods, brahmanas,24 teachers and the wise, purity, simplicity,
brahmacharya25 and non-violence26—these are known as physical
austerities.’