अनुद्वेगकरं वाक्यं सत्यं प्रियहितं च यत् ।
स्वाध्यायाभ्यसनं चैव वाङ्मयं तप उच्यते ॥
anudvegakaraṃ vākyaṃ satyaṃ priyahitaṃ ca yat |
svādhyāyābhyasanaṃ caiva vāṅmayaṃ tapa ucyate ||
Swami Sivananda (1887–1963)Bhagavad Gita
15. Speech which causes no excitement and is truthful, pleasant and beneficial, the practice
of the study of the Vedas, are called austerity of speech.
COMMENTARY: It is said in the Manu Smriti: “One should speak what is true; one
should speak what is pleasant; one should not speak what is true if it is not pleasant, nor what is
pleasant if it is false. This is the ancient Dharma”. To be an austerity speech should combine all the
attributes mentioned in the above verse.
Bannanje Govindacharya (1936–2020)Bhagavad Gita Pravachana
ಅನುದ್ವೇಗ ಕರಂ ವಾಕ್ಯಂ ಸತ್ಯಂ ಪ್ರಿಯ ಹಿತಂ ಚ ಯತ್ |
ಸ್ವಾಧ್ಯಾಯ ಅಭ್ಯಸನಂ ಚ ಏವ ವಾಹ್ಮಯಂ ತಪಃ ಉಚ್ಯತೇ-ಕೆರಳಿಸದ, ದಿಟವಾದ, ಕೇಳುವುದಕ್ಕೆ ಮೆಚ್ಚಾದ
ಹಾಗೂ ಬಾಳಿಗೆ ಒಳಿತಾದ ಮಾತು ಮತ್ತು ಶಾಸ್ತ್ರಗಳ ಓದು ಮಾತಿನ ತಪಸ್ಸು ಎನಿಸುತ್ತದೆ.
ಹಿಂದಿನ ಅಧ್ಯಾಯದಲ್ಲಿ ವಿಶ್ಲೇಶಿಸಿದಂತೆ ಇದ್ದದ್ದನ್ನು ಇದ್ದಂತೆ ಹೇಳುವುದೇ ಸತ್ಯವಲ್ಲ. ಸತ್ಯ ಅಂದರೆ ಏನು
ಎನ್ನುವ ವಿವರಣೆಯನ್ನು ಕೃಷ್ಣ ಈ ಶ್ಲೋಕದ ಮೂಲಕ ನಮಗೆ ಕೊಟ್ಟಿದ್ದಾನೆ. ಎಲ್ಲಿ ನಿಜವಾದ ಸಜ್ಜನಿಕೆ ಇದೇ-
ಅದನ್ನು ಮೆಚ್ಚಿಕೊಂಡು, ಅದಕ್ಕೆ ಪೂರಕವಾಗಿ, ಇನ್ನೊಬ್ಬರನ್ನು ನೋಯಿಸದೆ, ಅವರಿಗೆ ಹಿತವಾಗುವ ರೀತಿ
ಮಾತನಾಡುವುದು ಮಾತಿನ ತಪಸ್ಸು. ಇನ್ನೊಬ್ಬರಿಗೆ ಪ್ರಿಯವೂ-ಹಿತವೂ ಆದ ಮಾತನ್ನು ಆಡುವುದು ಬಹಳ
ಕಷ್ಟ. ಏಕೆಂದರೆ ಹೆಚ್ಚಿನ ಸಂದರ್ಭದಲ್ಲಿ ಪ್ರಿಯವಾದದ್ದು ಹಿತವಾಗಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಮೌನ
ಲೇಸು. ಕೃಷ್ಣನ ಕಥೆಯನ್ನು ಓದುವಾಗ ಅನೇಕ ಕಡೆ ನಮಗೆ ಕೃಷ್ಣ ಸುಳ್ಳು ಹೇಳಿದಂತೆ, ಮೋಸ ಮಾಡಿದಂತೆ
ಕಾಣಿಸುತ್ತದೆ. ಆದರೆ ಆ ಕ್ರಿಯೆಯ ಹಿಂದೆ ಇರುವ ಕಾರುಣ್ಯ, ಹಿತಚಿಂತನೆಯನ್ನು ಗಮನಿಸಿದಾಗ ನಮಗೆ ಅದು
ಸುಳ್ಳಲ್ಲ ಎನ್ನುವುದು ತಿಳಿಯುತ್ತದೆ. ದೈನಂದಿನ ಜೀವನದಲ್ಲಿ ನಾವು ಮಾತನಾಡುವಾಗ ನಮಗೆ ಕೃಷ್ಣ ಈ
ಶ್ಲೋಕದಲ್ಲಿ ಹೇಳಿದ ಸಂದೇಶದ ಎಚ್ಚರವಿರಬೇಕು. ಮಾತನಾಡದೆ ಮೌನವಾಗಿದ್ದರೂ ಸರಿ-ಆದರೆ ಏನೋ
ಮಾತನಾಡಿ ಆನಂತರ ಪಶ್ಚಾತ್ತಾಪಪಟ್ಟರೆ ಉಪಯೋಗವಿಲ್ಲ. “ಆಡಿದ ಮಾತನ್ನು ಹಿಂದೆ ಪಡೆಯಲು
ಸಾಧ್ಯವಿಲ್ಲ; ಘಾಸಿಯಾದ ಮನಸ್ಸನ್ನು ವಾಸಿಮಾಡುವ ಮದ್ದು ನಮ್ಮಲ್ಲಿಲ್ಲ”. ಆದ್ದರಿಂದ ಇನ್ನೊಬ್ಬರನ್ನು
ನೋಯಿಸುವ ಮಾತನ್ನೆಂದೂ ಆಡಬೇಡ. ಹಾಳು ಹರಟೆಯಲ್ಲಿ ದಿನ ಕಳೆಯದೆ, ವೇದದ ಅರ್ಥಚಿಂತನೆ,
ಗೀತಾಚಿಂತನೆ, ವಿಷ್ಣುಸಹಸ್ರನಾಮ ಪಠಣ, ಇತ್ಯಾದಿ ಸ್ವಾಧ್ಯಾಯದಲ್ಲಿ ನಿರತನಾಗುವುದು ಮಾತಿನ ತಪಸ್ಸು
Bibek Debroy (1955–2024)The Bhagavad Gita
(15)
‘Not uttering words that lead to anxiety, speaking the truth and that which is
pleasant and leads to welfare,27 and self-study28—these are known as verbal
austerities.’