श्रीभगवानुवाच ।
त्रिविधा भवति श्रद्धा देहिनां सा स्वभावजा ।
सात्त्विकी राजसी चैव तामसी चेति तां शृणु ॥
śrībhagavānuvāca |
trividhā bhavati śraddhā dehināṃ sā svabhāvajā |
sāttvikī rājasī caiva tāmasī ceti tāṃ śṛṇu ||
Swami Sivananda (1887–1963)Bhagavad Gita
2. Threefold is the faith of the embodied, which is inherent in their nature—the Sattwic
(pure), the Rajasic (passionate), and the Tamasic (dark). Do thou hear of it.
Bannanje Govindacharya (1936–2020)Bhagavad Gita Pravachana
ಭಗವಾನ್ ಉವಾಚ -ಭಗವಂತ ಹೇಳಿದನು:
ತ್ರಿವಿಧಾ ಭವತಿ ಶ್ರದ್ಧಾ ದೇಹಿನಾಂ ಸಾ ಸ್ವಭಾವಜಾ |
ಸಾತ್ವಿಕೀ ರಾಜಸೀ ಚ ಏವ ತಾಮಸೀ ಚ ಇತಿ ತಾಂ ಶೃಣು -ಜೀವಿಗಳ ಹುಟ್ಟುಗುಣದಿಂದಲೇ ಹುಟ್ಟಿಬರುವ ಈ
ನಂಬಿಕೆ ಮೂರು ತೆರನಾಗಿದೆ: ಸಾತ್ವಿಕ, ರಾಜಸ, ಮತ್ತು ತಾಮಸ. ಅದರ ಬಗೆಯನ್ನಾಲಿಸು.
ಸಾಧನಾ ಶರೀರದಲ್ಲಿರುವ ಜೀವಗಳು ಮೂಲಭೂತವಾಗಿ ಮೂರು ತೆರನಾಗಿರುತ್ತವೆ. ಅದು ಸಾತ್ವಿಕ, ರಾಜಸ
ಮತ್ತು ತಾಮಸ. ಇದರ ಮೇಲೆ ಪರಿಸರದ ಮತ್ತು ಮನೆತನದ ಪ್ರಭಾವದಿಂದ ಮಾನಸಿಕವಾಗಿ ನಾವು ಮತ್ತೆ
ಮೂರು ತೆರನಾದ ಶ್ರದ್ಧೆಯನ್ನು ಬೆಳಸಿಕೊಳ್ಳುತ್ತೇವೆ. ಆದ್ದರಿಂದ ಸ್ವರೂಪತಃ ಸಾತ್ವಿಕನಾಗಿದ್ದರೂ ಕೂಡಾ ಆತ
ಮಾನಸಿಕವಾಗಿ ರಾಜಸನಾಗಿರಬಹುದು ಅಥವಾ ತಾಮಸನಾಗಿರಬಹುದು. ಉದಾಹರಣೆಗೆ ಸ್ವರೂಪತ
ಸಾತ್ವಿಕರಾಗಿದ್ದ ಗರ್ಗಾಚಾರ್ಯರು ತಾಮಸ ಪ್ರಭಾವಕ್ಕೊಳಗಾಗಿ ಕೃಷ್ಣನನ್ನು ಸೋಲಿಸುವ ಮಗ ಹುಟ್ಟಬೇಕು
ಎಂದು ತಪಸ್ಸನ್ನಾಚರಿಸಿರುವ ಕಥೆಯನ್ನು ಹಿಂದೆ ನೋಡಿದ್ದೇವೆ. ಮಾನಸಿಕವಾಗಿ ಬರುವ ಈ ಬಾಹ್ಯ ಶ್ರದ್ಧೆ ಜನ್ಮ
ಜನ್ಮಾಂತರದ್ದಲ್ಲ. ಆದರೆ ಸ್ವರೂಪ ಶ್ರದ್ಧೆ ಪ್ರತೀ ಜನ್ಮದಲ್ಲೂ ಸದಾ ಜೀವನೊಂದಿಗಿರುತ್ತದೆ. ಇದನ್ನು
ಸ್ಪಷ್ಟಪಡಿಸುವುದಕ್ಕೋಸ್ಕರ ಈ ಶ್ಲೋಕದಲ್ಲಿ ‘OTF ಮತ್ತು “ಚ' ಕಾರವನ್ನು ಒಟ್ಟಿಗೆ ಬಳಸಿದ್ದಾರೆ. ಜೀವಸ್ವರೂಪ-
ಸಾತ್ವಿಕೇವ, ರಾಜಸ್ಯೇವ ಅಥವಾ ತಾಮಸ್ಯೇವ-ಅದು ಬದಲಾಗುವುದಿಲ್ಲ. ಈ ಸ್ವರೂಪದ ಮೇಲಿರುವ ಬಾಹ್ಯ
ಶ್ರದ್ದೆ- ಸಾತ್ವಿಕೇಚ,, ರಾಜಸೇಚ, ತಾಮಸೇಚ-ಪ್ರಭಾವದಿಂದ ಬರುವಂತದ್ದು, ಗರಿಷ್ಠ ಒಂದು ಜನ್ಮಕ್ಕೆ
ಮೀಸಲಾಗಿರುವಂತಾದ್ದು. “ಈ ಮೂರು ವಿಧವಾದ ಶ್ರದ್ಧೆಯ ಬಗೆಯನ್ನಾಲಿಸು" ಎಂದು ಕೃಷ್ಣ ಅರ್ಜುನನಲ್ಲಿ
ಹೇಳುತ್ತಾನೆ.
Bibek Debroy (1955–2024)The Bhagavad Gita
(2)
Bhagavan3 said:
‘According to their nature,4 people show three kinds of faith—sattva-type,
rajas-type and tamas-type. Listen to this.’