तस्मादोमित्युदाहृत्य यज्ञदानतपःक्रियाः ।
प्रवर्तन्ते विधानोक्ताः सततं ब्रह्मवादिनाम् ॥
tasmādomityudāhṛtya yajñadānatapaḥkriyāḥ |
pravartante vidhānoktāḥ satataṃ brahmavādinām ||
Swami Sivananda (1887–1963)Bhagavad Gita
24. Therefore, with the utterance of “Om” are the acts of gift, sacrifice and austerity as
enjoined in the scriptures always begun by the students of Brahman.
Bannanje Govindacharya (1936–2020)Bhagavad Gita Pravachana
ತಸ್ಮಾತ್ ಓಂ ಇತಿ ಉದಾಹೃತ್ಯ ಯಜ್ಞ ದಾನ ತಪಃ ಕ್ರಿಯಾಃ |
ಪ್ರವರ್ತಂತೇ ವಿಧಾನ ಉಕ್ತಾಃ ಸತತಮ್ ಬ್ರಹ್ಮವಾದಿನಾಮ್ - ಆದ್ದರಿಂದ ಶಾಸ್ತ್ರದ ಕಟ್ಟಳೆಗೆ ಅನುಗುಣವಾದ,
ಬ್ರಹ್ಮ ಚಿಂತಕರ ಯಜ್ಞ, ದಾನ ಮತ್ತು ತಪದ ಕ್ರಿಯೆಗಳು ಯಾವಾಗಲೂ 'ಓಂ' ಎಂದು ಭಗವಂತನ ನಾಮ
ಸ್ಮರಣೆಯ ಜತೆಗೆಯೇ ತೊಡಗುತ್ತವೆ.
ಕರ್ಮದಲ್ಲಿ ಓಂಕಾರ ಬಳಕೆಯ ಮಹತ್ವವನ್ನು ಕೃಷ್ಣ ಇಲ್ಲಿ ವಿವರಿಸಿದ್ದಾನೆ. ನಮಗೆ ತಿಳಿದಂತೆ ಒಬ್ಬ
ವೇದಜ್ಜನಾಗಬೇಕಾದರೆ ಆತನಿಗೆ ಓಂಕಾರದ ಉಪದೇಶವಾಗಿರಬೇಕು; ಯಜ್ಞದ ಆದಿ-ಅಂತದಲ್ಲಿ ಓಂಕಾರ
ಹೇಳಬೇಕು; ವೇದ ಪಠಣದ ಆದಿ-ಅಂತದಲ್ಲಿ ಓಂಕಾರವಿರಬೇಕು. ಇದೆಲ್ಲವೂ ಹಿಂದಿನಿಂದಲೂ ಬಂದಿರುವ
ಆಚರಣೆಗಳು. ನಾವು ಮಾಡುವ ಯಾವ ಕಾರ್ಯವೇ ಇರಲಿ, ಅದನ್ನು ಪ್ರಾರಂಭಿಸುವಾಗ “ಇದನ್ನು ಭಗವಂತನ
ಪೂಜಾರೂಪವಾಗಿ ಮಾಡುತ್ತೇನೆ” ಎನ್ನುವ ಸಂಕಲ್ಪ ಮಾಡಿ ಮಾಡುವುದು ಮತ್ತು ಅಂತ್ಯದಲ್ಲಿ “ನಾನು
ಮಾಡಿದ್ದನ್ನು ಭಗವಂತ ಸ್ವೀಕರಿಸಲಿ” ಎಂದು ಹೇಳುವುದು-ಇದರ ಮೂಲ ಉದ್ದೇಶ. ಹೀಗೆ ಓಂಕಾರ ಹೇಳಿಯೇ
ಕರ್ಮ ಮಾಡಬೇಕು ಎನ್ನುವ ಆಚರಣೆ ಹಿಂದಿನಿಂದ ಬೆಳೆದುಬಂತು. ಈ ಅನುಸಂಧಾನದಿಂದ ನಾವು ಯಾವುದೇ
ಪಾರಾಯಣ, ಹೋಮ, ಹವನ, ಯಜ್ಞ, ತಪಸ್ಸು, ದಾನ ಮಾಡಿದರೂ ಕೂಡಾ ಅದು ಸಾತ್ವಿಕ ಕರ್ಮವೆನಿಸುತ್ತದೆ.
Bibek Debroy (1955–2024)The Bhagavad Gita
(24)
‘Therefore, according to prescribed rites, sacrifices, donations and
austerities by those who are learned in the brahman,36 are always
undertaken after uttering “Om”.’