18.10

न द्वेष्ट्यकुशलं कर्म कुशले नानुषज्जते ।
त्यागी सत्त्वसमाविष्टो मेधावी छिन्नसंशयः ॥
na dveṣṭyakuśalaṃ karma kuśale nānuṣajjate |
tyāgī sattvasamāviṣṭo medhāvī chinnasaṃśayaḥ ||
Sri Madhvacharya (1238–1317)Bhagavad Gita Tatparya Nirnaya
18.10–18.11
‘न द्वेष्ट्यकुशलं कर्म केवलं दृष्टदुःखदम्। जन्मान्तरकृते पुण्ये न सज्जेत् सात्त्विकश्चले। यः सम्यक् तत्त्वविद् विष्णोस्तदर्पणधियैव तु। फलेच्छावर्जितस्तस्य कर्म बन्धाय नो भवेत्। बहुलं चेदल्पदोषं यावदेवापरोक्षधृक्’ इति च॥10-11॥
Swami Sivananda (1887–1963)Bhagavad Gita
10. The man of renunciation, pervaded by purity, intelligent and with his doubts cut asunder, does not hate a disagreeable work nor is he attached to an agreeable one.
Sri Vishwesha Tirtharu (1931–2019)Gitasaroddhara
18.3–18.40 · ತ್ಯಾಗ ಮತ್ತು ಸಂನ್ಯಾಸ
ತ್ಯಾಗ ಮತ್ತು ಸಂನ್ಯಾಸ ನಮ್ಮ ಪ್ರತಿಯೊಂದು ಕ್ರಿಯೆಯಲ್ಲಿಯೂ ಸತ್ತ್ವ ರಜ, ತಮಗಳ ಈ ಗತಿವಿಧಿಯನ್ನು ಪರಿಶೀಲಿಸಿದಷ್ಟೂ ನಮ್ಮ ಎಲ್ಲ ಕೃತಿಗಳನ್ನೂ ವಿಶ್ಲೇಷಿಸಿ ಆತ್ಮ ನಿರೀಕ್ಬ ಣೆ ಮಾಡಲು ಅನುಕೂಲವಾಗುತ್ತ ದೆ. ನತದಸ್ತಿ ಪೃಥಿವ್ಯಾಂವಾ ದಿವಿ ದೇವೇಷು ವಾ ಪುನಃ । ಜಗತ್ತಿನ ಪ್ರತಿಯೊಬ್ಬರೂ ಈ ಮೂರು ಗುಣಗಳ ಪ್ರಭಾವಕ್ಕೆ ಸಿಲುಕಿದವರೇ. ಈ ತ್ರಿಗುಣಗಳಿಂದಾಗಿ ನಾವು ಮಾಡುತ್ತಿರುವ ಧರ್ಮಾಚಾರಗಳೆಲ್ಲ ಎಂತಹ ವಿಕೃತ ರೂಪವನ್ನು ತಳೆಯುತ್ತವೆ ಎಂಬ ಪರಿವೆಯೂ ಇಲ್ಲದೆ ನಮ್ಮ ವ್ಯವಹಾರಗಳನ್ನು ಸಾಗಿಸುತ್ತಿರುವೆವು. ಧರ್ಮಾಚರಣೆಯಲ್ಲಿ ರಜಸ್ಸು, ತಮಸ್ಸುಗಳಿಂದ ಸಂಭವಿಸಬಹುದಾದ ವಿಕೃತಿಯನ್ನು ಕಂಡಾಗ ಈ ಧರ್ಮಾಚರಣೆಯೇ ಬೇಡವೆಂದು ನಮಗೆ ಅನಿಸಬಹುದು. ಎಷ್ಟು ಜಾಗರೂಕತೆಯಿಂದಕರ್ಮಗಳನ್ನು ಆಚರಿಸಿದರೂ ಈ ಪ್ರಕೃತಿ ಗುಣಗಳಿಂದಾಗಿ ಅಲ್ಲಿದೋಷಗಳು ನುಸುಳದಿರುವುದಿಲ್ಲ. ಈ ದೋಷಯುಕ್ತವಾದ ಕರ್ಮವನ್ನು ಆಚರಿಸುವುದಕ್ಕಿಂತ ಅದನ್ನು ಸರ್ವಾತ್ಮನಾ ತೊರೆಯುವುದೇ ಲೇಸೆಂಬ ಭಾವನೆಯುಂಟಾಗುವ ಅವಕಾಶವೂಇದೆ. ತ್ಯಾಜ್ಯಂ ದೋಷವದಿತ್ಯೇಕೇ ಕರ್ಮ ಪ್ರಾಹುರ್ಮನೀಷಿಣಃ। ದೋಷಯುಕ್ತ ವಾದ ಈ ಕರ್ಮವನ್ನು ಬಿಡಬೆಳೆಂದು ಕೆಲ ಮನೀಷಿಗಳು ಹೇಳಿದ್ದ! ರೆ ಯಜ್ಞ! ದಾನತಪಃಕರ್ಮನ ತ್ಯಾಜ್ಯಮಿತಿ ಚಾಪರೇ। ಜೀವನದ ಪಾವನತೆಗೆ ಸಾಧನಗಳಾದ ಯಜ್ಞ, ದಾನ, ತಪಸ್ಸುಗಳನ್ನು ಸರ್ವಥಾ ತೊರೆಯಬಾರದೆಂಬ ಆದೇಶವನ್ನು ಕೆಲವರು ನೀಡಿರುವರು. ವಿರುದ್ಧವಾದ ಇವೆರಡು ವಿಚಾರಗಳಲ್ಲಿ ನಾವು ಯಾವುದನ್ನು ಆರಿಸ ಬೇಕೆನ್ನುವುದೇ ನಮ್ಮ ಮುಂದಿರುವಪ್ಪಶ್ಪೆಯಾಗಿದೆ. ನಹಿ ದೇಹಚ್ಛತಾ ಶಕ್ಕಂ ತ್ಯಕ್ತ 0 ಕರ್ಮಾಣ್ಯಶೇಷತಃ [ ಆದರೆ ಜೀವಿಗಳಿಗೆ ಕರ್ತವ್ಯವನ್ನು ಪೂರ್ತಿಯಾಗಿ ತೊರೆಯಲು ಸಾಧ್ಯವೆ? ಆಹಾರ, ವ್ಯವಹಾರಾದಿಗಳಿಗೆ ಅವಶ್ಯವೆನಿಸಿದ ಕರ್ಮಗಳನ್ನು ಬಿಟ್ಟಿರಲು ಯಾರಿಂದಲೂ ಸಾಧ್ಯವಿಲ್ಲ. ಕರ್ಮಗಳಲ್ಲಿ ದೋಷವಿದೆ, ಅದನ್ನು ತೊರೆಯಬೇಕೆನ್ನುವ ಆತುರವು ಸ್ನಾನ, ಸಂಧ್ಯಾವಂದನ, ದೇವರಪೂಜೆ, ಸಮಾಜಸೇವೆಯಂತಹ ಲೂ ೇಕೋವಯುಕ್ತ ಕಾರ್ಯಗಳನ್ನು ಪರಿತ್ಯಜಿಸುವುದರಲ್ಲಿಯೇ ಪರ್ಯವಸಾನ ಹೊಂದುವುದು. ಲೌಕಿಕ ಜೀವನೌಪಾಯಿಕ ಕಾರ್ಯಗಳನ್ನ ೦ತೂ ಬಿಡಬೇಕೆಂದರೂ ಬಿಡಲು ಸಾಧ್ಯವೇ ಇಲ್ಲ. ಸುಲಭವಾಗಿ ಪರಿತ್ಯಜಿಸಬಹುದಾದಕಾರ್ಯಗಳೆಂದರೆ ಆತ್ಮನ ಉಸ್ಪತಿಗೆ ಕಾರಣಗಳಾಗುವ ಪುಣ್ಯಕೃತಿಗಳು ಮಾತ್ರ. ಇತರ ಭೋಗಕಾರ್ಯಗಳನ್ನೆಲ್ಲ ಮಾಡಿಕೊಂಡು ಧರ್ಮಾಚರಣೆಯನ್ನು ಮಾತ್ರ ಬಿಡುವುದರಲ್ಲಿವಿನರ್ಥವಿದೆ? ಹೀಗೆ ನಮ್ಮ ಮನಸ್ಸು ಕರ್ಮದ ಪರಿತ್ಯಾಗ ಹಾಗೂ ಆಚರಣೆಯ ನಡುವೆ ತೂಗುಯ್ಯಾಲೆಯಲ್ಲಿ ಹೊಯ್ದಾಡುತ್ತಿದೆ. ಗೀತೆಯು ಈ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಿದೆ. ಕರ್ಮಾಚರಣೆ ಬೇಡ, ಬೇಕು ಎನ್ನುವ ಎರಡು ವಾದಗಳ ಸಮನ್ವಯವನ್ನು ಗೀತೆಯು ಮಾಡಿದೆ. ಕರ್ಮವನ್ನುತ್ತಚಿಸವುದೆಂದರೆ ಅದರಲ್ಲಿ ದೋಷವು ತಗಲದಂತೆ ಆಸಕ್ತಿ ಮತ್ತು ಫಲಾಪೇಕ್ಷೆಯನ್ನು ತೊರೆಯುವುದೇ ಆಗಿದೆ ಎನ್ನುವ ಆಶಯವನ್ನು ಗೀತೆಯು ವಿವರಿಸಿದೆ. ಸಾಮಾನ್ಯ ಜನರು ಕರ್ಮ ಮತ್ತು ಅದರ ಲೌಕಿಕ ಫಲ ಇವೆರಡರಲ್ಲಿಯೂ ದೃಷ್ಟಿಯನ್ನಿಟ್ಟಿದ್ದರೆ ಅವುಗಳಲ್ಲಿ ಕರ್ಮವನ್ನು ಮಾತ್ರ ಪರಿಗ್ರಹಿಸಿ ಫಲವನ್ನು ಪರಿತ್ಯಜಿಸುವುದೇ ಕರ್ಮತ್ಯಾಗ ಹಾಗೂ ಕರ್ಮಾನುಷ್ಠಾನ ಇವೆರಡರ ಸಮನ್ವಯವಾಗಿದೆ. ಕರ್ಮಾನುಷ್ಠಾನದಲ್ಲಿ ಈ ತ್ಯಾಗವೃತ್ತಿಯನ್ನಾಗಲಿ ಸಂನ್ಯಾಸವೃತ್ತಿಯನ್ನಾಗಲಿ ಜೋಡಿಸುವುದರಿಂದ ಕರ್ಮಗಳನ್ನು ಆಚರಿಸಿದರೂ ಅದರ ದೋಷ, ಬಂಧನಗಳಿಗೆನಾವುಗುರಿಯಾಗುವುದಿಲ್ಲ. ತ್ಯಾಗ, ಸಂನ್ಯಾಸಗಳಲ್ಲಿರುವ. ಅಂತರವನ್ನೂ ನಾವು ಇಲ್ಲಿ ಪರಿಶೀಲಿಸಬೇಕಾಗಿದೆ. ತನಗಾಗಿ ಲೌಕಿಕ ಫಲವನ್ನು ಬಯಸಿದ್ದರೂ ಪರರ ಲೌಕಿಕ ಸುಖಕ್ಕಾಗಿ ಸ್ವಂತದ ಅಪೇಕ್ಷೆಯಿಲ್ಲದೆ ಮಾಡುವ ಕರ್ತವ್ಯದಲ್ಲಿ ತ್ಯಾಗ ವತ್ತಿಯಿದೆ. ತನ್ನಂತೆಯೇವರರಿಗೂ ಲೌಕಿಕಸುಖವನ್ನು ಅಪೇಕ್ಷಿಸದೆ ಅವರಿಗೂ ಜ್ಞಾನ, ಭಕ್ತಿ ಹರಿಪ್ರಸಾದಗಳನ್ನು ಮಾತ್ರ ಬಯಸಿ ಉನ್ನತ ಭಾವನೆಯಿಂದ ಮಾಡುವ ಕರ್ಮದಲ್ಲಿ ಸಂನ್ಯಾನವೃತ್ತಿಯು ಅಡಕವಾಗಿದೆ. ಈ ತ್ಯಾಗ, ಸಂನ್ಯಾಸಗಳೆರಡರಲ್ಲಿಯೂ ಕರ್ಮಾಚರಣೆಯು ಅನಿವಾರ್ಯವೇ. ಅನ್ಯರ ಸುಖಕ್ಕಾಗಿ ಹಾತೊರೆದು ಅನುಕಂಪಭಾವದಿಂದ ಸ್ವಸುಖನಿರಪೇಕ್ಟವಾಗಿ ಪ್ರವರ್ತಿಸುವ ಕರ್ಮಯೋಗಿಯ ತ್ಯಾಗದಲ್ಲಿ ಹಿರಿತನವಿದ್ದರೂ ತನ್ನಂತೆಯೇ ಅನ್ಯರ ಆಧ್ಯಾತ್ಮಿಕ ಉನ್ನತಿಯನ್ನೇ ಬಯಸುವ ಸಂನ್ಯಾಸಿಯ ಮನೋಭಾವವು ಹೆಚ್ಚು ಉದಾತ್ತವಾದುದು. ಇವರಿಬ್ಬರ ಆಚರಣೆಗಳೂ ಕರ್ಮದ ದೋಷಗಳನ್ನು ದಾಟಿ ನಿಂತಿವೆ. ವೈರಾಗ್ಯ ಭಕ್ತಿಗಳ ಧಾರೆಯಲ್ಲಿ ತೊಳೆದು ಸಿದ್ಧಗೊಳಿಸಿದ ಈ ಕರ್ಮದವಕ್ವಾನ್ನದಲ್ಲಿ ಆಸಕ್ತಿಯುಕ್ತಕರ್ಮಗಳಲ್ಲಿರುವ ಕಹಿ ದುರ್ಗಂಧಗಳು ಕಾಣಸಿಗವು. ಇಂತಹ ಕರ್ಮವನ್ನು ಸಾತ್ತ್ವಿಕವೆಂದು ಗೀತೆಯು ನಿರ್ದೇಶಿಸಿದೆ.
Bannanje Govindacharya (1936–2020)Bhagavad Gita Pravachana
ನ ದ್ವೇಷ್ಟಿ ಅಕುಶಲಮ್‌ ಕರ್ಮ ಕುಶಲೇ ನ ಅನುಷಜ್ಜತೇ | ತ್ಯಾಗೀ ಸತ್ತ್ವಸಮಾವಿಷ್ಟಃ ಮೇಧಾವೀ ಛಿನ್ನಸಂಶಯಃ - ಮುದ ನೀಡದ ಕರ್ಮದ ಬಗ್ಗೆ ಹಗೆಯೂ ಇಲ್ಲ, ಮುದ ನೀಡುವ ಕರ್ಮದ ಬಗ್ಗೆ ಅತಿಯಾದ ನಂಟೂ ಇಲ್ಲ. ಇಂತವನು ಸಾತ್ವಿಕ-ತ್ಯಾಗಿ. ಅವನು ತಿಳಿದವನು ಮತ್ತು ಸಂದೇಹವಳಿದವನು. ಈ ಶ್ಲೋಕ ಒಬ್ಬ ಸಾತ್ವಿಕ ತ್ಯಾಗಿ ಯಾವ ರೀತಿ ತನ್ನ ಕರ್ಮಗಳನ್ನು ನೋಡುತ್ತಾನೆ ಎನ್ನುವುದನ್ನು ಹೇಳುತ್ತದೆ. ನಾವು ಮಾಡಿದ ಹಿಂದಿನ ಯಾವುದೋ ಒಂದು ಕರ್ಮದಿಂದ ಇಂದು ಕೆಟ್ಟ ಪರಿಣಾಮ ಆಗುತ್ತಿದ್ದರೆ, ಅಥವಾ ಹಿಂದೆ ಮಾಡಿದ ಇನ್ಯಾವುದೋ ಕರ್ಮದಿಂದ ಒಳ್ಳೆಯದು ಆಗುತ್ತಿದ್ದರೆ, ಸಾತ್ವಿಕ ತ್ಯಾಗಿ ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆತ ಒಳ್ಳೆಯದಾಯಿತು ಎಂದು ಹಾರಾಡುವುದಿಲ್ಲ, ಕೆಟ್ಟದ್ದಾಯಿತು ಎಂದು ಕುಸಿಯುವುದಿಲ್ಲ. ಈತ ದುಃಖಕಾರಕವಾದ ಕರ್ಮವನ್ನು ದ್ವೇಷಿಸುವುದೂ ಇಲ್ಲ. ಔಷಧಿ ಹೇಗೆ ಕಹಿ ಇರುತ್ತದೋ ಹಾಗೇ ಸತ್ಕರ್ಮ ಕಿಂಚಿತ್‌ ದುಃಖಕರವಾದಾಗ ಅದರ ಬಗ್ಗೆ ಆತ ಚಿಂತೆ ಮಾಡುವುದಿಲ್ಲ. ಸಾತ್ವಿಕ ತ್ಯಾಗಿಯ ಮನಸ್ಸು ಸತ್ತ್ವಗುಣದಲ್ಲಿ ತುಂಬಿರುತ್ತದೆ. ಅವನಿಗೆ ತಾಮಸ-ರಾಜಸ ಚಿಂತೆಗಳೇ ಬರುವುದಿಲ್ಲ. ಬಲಜ್ಞಾನಗಳಿಂದ ಪರಿಪೂರ್ಣನಾದ ಭಗವಂತನಲ್ಲಿ ಎಲ್ಲವನ್ನೂ ಅರ್ಪಿಸಿ ಆತ ಕರ್ಮ ಮಾಡುತ್ತಿರುತ್ತಾನೆ. ಇದರಿಂದ ಆತನ ಮನಸ್ಸು ಪೂರ್ಣವಾಗಿ ಭಗವಂತನಲ್ಲಿ ಸಮಾವಿಷ್ಠವಾಗಿರುತ್ತದೆ. ಮೇಧಾವಿಯಾಗಿರುವ ಈತನಿಗೆ ತನ್ನ ಬದುಕಿನ ಪ್ರತೀ ನಡೆಯ ಎಚ್ಚರವಿರುತ್ತದೆ. ಭಗವಂತನಲ್ಲಿ ನೆಲೆಗೊಂಡ ಇಂತವರ ಮನಸ್ಸಿಗೆ ಎಂದೂ ಯಾವ ಗೊಂದಲವೂ ಸುಳಿಯುವುದಿಲ್ಲ. ಇಂತವರ ಜೀವನದ ನಡೆ ನೋಡಲು ಸಾಮಾನ್ಯವಾಗಿರುತ್ತದೆ ಆದರೆ ಅವರ ಕ್ರಿಯೆಯ ಹಿಂದಿನ ಅನುಸಂಧಾನ ಮಾತ್ರ ಭಿನ್ನವಾಗಿರುತ್ತದೆ. ಇವರು “ಭಗವಂತ ನೀನು ಮಾಡಿಸುತಿದ್ದಿ-ನಾನು ಮಾಡುತ್ತಿದ್ದೇನೆ” ಎನ್ನುವ ಅನುಸಂಧಾನದಿಂದ ತಮ್ಮ ಕರ್ಮವನ್ನು ಮಾಡುತ್ತಿರುತ್ತಾರೆ.
Bibek Debroy (1955–2024)The Bhagavad Gita
(10) ‘Immersed in the sattva quality, steady in learning and without doubt, the relinquisher doesn’t hate disagreeable action or become addicted to agreeable action.’