18.2

श्रीभगवानुवाच ।
काम्यानां कर्मणां न्यासं संन्यासं कवयो विदुः ।
सर्वकर्मफलत्यागं प्राहुस्त्यागं विचक्षणाः ॥
śrībhagavānuvāca |
kāmyānāṃ karmaṇāṃ nyāsaṃ saṃnyāsaṃ kavayo viduḥ |
sarvakarmaphalatyāgaṃ prāhustyāgaṃ vicakṣaṇāḥ ||
Swami Sivananda (1887–1963)Bhagavad Gita
2. The sages understand Sannyas to be the renunciation of action with desire; the wise declare the abandonment of the fruits of all actions as Tyaga.
Bannanje Govindacharya (1936–2020)Bhagavad Gita Pravachana
ಭಗವಾನ್‌ ಉವಾಚ- ಭಗವಂತ ಹೇಳಿದನು: ಕಾಮ್ಯಾನಾಮ್‌ ಕರ್ಮಣಾಮ್‌ ನ್ಯಾಸಮ್‌ ಸಂನ್ಯಾಸಂ ಕವಯಃ ವಿದುಃ | ಸರ್ವಕರ್ಮಫಲ ತ್ಯಾಗಮ್‌ ಪ್ರಾಹುಃ ತ್ಯಾಗಂ ವಿಚಕ್ಷಣಾಃ -ಕಾಮ್ಯ ಕರ್ಮಗಳನ್ನು ತೊರೆಯುವುದನ್ನು ಬಲ್ಲವರು "ಸಂನ್ಯಾಸ' ಎನ್ನುತ್ತಾರೆ. ಎಲ್ಲಾ ಕರ್ಮಗಳ ಫಲವನ್ನಷ್ಟೇ ತೊರೆಯುವುದನ್ನು ತಿಳಿದವರು 'ತ್ಯಾಗ' ಎನ್ನುತ್ತಾರೆ. ಇಲ್ಲಿ ಹೇಳುವ ಸಂನ್ಯಾಸ ಗೃಹಸ್ಥರನ್ನೂ ಒಳಗೊಂಡು ಎಲ್ಲಾ ಸಾಧಕರಿಗೂ ಅನ್ವಯವಾಗುವ ಸಂನ್ಯಾಸ. ಸಂನ್ಯಾಸದಲ್ಲಿ ಎರಡು ವಿಧ. ಒಂದು ಕರ್ಮದ ಫಲವನ್ನು ಬಿಡುವುದು, ಇನ್ನೊಂದು ಬಯಕೆಗಳಿಂದ ಪ್ರೇರಿತವಾದ ಕರ್ಮವನ್ನೇ ತ್ಯಾಗ ಮಾಡುವುದು. ಇಲ್ಲಿ ತ್ಯಾಗ ಎಂದರೆ ಕರ್ಮವನ್ನು ತ್ಯಾಗ ಮಾಡುವುದಲ್ಲ, ಬದಲಿಗೆ ಯಾವ ಕರ್ಮವೇ ಇರಲಿ, ಅದನ್ನು ಮಾಡಿ-ಯಾವುದೇ ಫಲವನ್ನು ಬಯಸದೇ ಇರುವುದು. ಆದ್ದರಿಂದ ಕರ್ಮತ್ಯಾಗ ಎಂದರೆ: ವೇದಾಧ್ಯಯನ ಬಿಡುವುದು, ಸಂಧ್ಯಾವಂದನೆ ಬಿಡುವುದು, ವೃತಾನುಷ್ಠಾನ ಇತ್ಯಾದಿಯನ್ನು ಬಿಡುವುದು ಎಂದಲ್ಲ. ಬದಲಿಗೆ ಸತ್ಕರ್ಮವನ್ನು ಮಾಡಿ ಅದರ ಫಲವನ್ನು ಬಯಸದೇ ಇರುವುದು ಎಂದರ್ಥ. ಯಾವ ಕರ್ಮವೇ ಇರಲಿ ಅದನ್ನು ಭಗವದ್‌ ಪ್ರೀತ್ಯರ್ತ ಮಾಡು-ಫಲ ಬಯಕೆಯಿಂದಲ್ಲ. ಇಲ್ಲಿ ಕವಯಃ ಮತ್ತು ವಿಚಕ್ಷಣಾಃ ಎನ್ನುವ ಎರಡು ವಿಶೇಷ ಪದಗಳನ್ನು ಬಳಸಲಾಗಿದೆ. ಶಬ್ದಾರ್ಥದ ಸಂಬಂಧವನ್ನು ತಿಳಿದವರು-ಕವಿಗಳು; ಶಬ್ದಾರ್ಥವನ್ನು ತಿಳಿದು ಅದನ್ನು ಅನುಭವಿಸಿ ಆಚರಿಸುವವರು ವಿಚಕ್ಷಣರು. “ಕವಿಗಳು ಮತ್ತು ವಿಚಕ್ಷಣರು ಸಂನ್ಯಾಸ ಮತ್ತು ತ್ಯಾಗಕ್ಕೆ ಈ ವಿವರಣೆಯನ್ನು ಕೊಡುತ್ತಾರೆ” ಎಂದಿದ್ದಾನೆ ಕೃಷ್ಣ.
Bibek Debroy (1955–2024)The Bhagavad Gita
(2) Bhagavan5 said: ‘The wise know the relinquishing of action that satisfies desires as sannyasa. The discriminating call the relinquishing of the fruits of all action tyaga.’