18.4

निश्चयं श‍ृणु मे तत्र त्यागे भरतसत्तम ।
त्यागो हि पुरुषव्याघ्र त्रिविधः सम्प्रकीर्तितः ॥
niścayaṃ śṛṇu me tatra tyāge bharatasattama |
tyāgo hi puruṣavyāghra trividhaḥ samprakīrtitaḥ ||
Swami Sivananda (1887–1963)Bhagavad Gita
4. Hear from Me the conclusion or the final truth about this abandonment, O best of the Bharatas; abandonment, verily, O best of men, has been declared to be of three kinds!
Sri Vishwesha Tirtharu (1931–2019)Gitasaroddhara
18.3–18.40 · ತ್ಯಾಗ ಮತ್ತು ಸಂನ್ಯಾಸ
ತ್ಯಾಗ ಮತ್ತು ಸಂನ್ಯಾಸ ನಮ್ಮ ಪ್ರತಿಯೊಂದು ಕ್ರಿಯೆಯಲ್ಲಿಯೂ ಸತ್ತ್ವ ರಜ, ತಮಗಳ ಈ ಗತಿವಿಧಿಯನ್ನು ಪರಿಶೀಲಿಸಿದಷ್ಟೂ ನಮ್ಮ ಎಲ್ಲ ಕೃತಿಗಳನ್ನೂ ವಿಶ್ಲೇಷಿಸಿ ಆತ್ಮ ನಿರೀಕ್ಬ ಣೆ ಮಾಡಲು ಅನುಕೂಲವಾಗುತ್ತ ದೆ. ನತದಸ್ತಿ ಪೃಥಿವ್ಯಾಂವಾ ದಿವಿ ದೇವೇಷು ವಾ ಪುನಃ । ಜಗತ್ತಿನ ಪ್ರತಿಯೊಬ್ಬರೂ ಈ ಮೂರು ಗುಣಗಳ ಪ್ರಭಾವಕ್ಕೆ ಸಿಲುಕಿದವರೇ. ಈ ತ್ರಿಗುಣಗಳಿಂದಾಗಿ ನಾವು ಮಾಡುತ್ತಿರುವ ಧರ್ಮಾಚಾರಗಳೆಲ್ಲ ಎಂತಹ ವಿಕೃತ ರೂಪವನ್ನು ತಳೆಯುತ್ತವೆ ಎಂಬ ಪರಿವೆಯೂ ಇಲ್ಲದೆ ನಮ್ಮ ವ್ಯವಹಾರಗಳನ್ನು ಸಾಗಿಸುತ್ತಿರುವೆವು. ಧರ್ಮಾಚರಣೆಯಲ್ಲಿ ರಜಸ್ಸು, ತಮಸ್ಸುಗಳಿಂದ ಸಂಭವಿಸಬಹುದಾದ ವಿಕೃತಿಯನ್ನು ಕಂಡಾಗ ಈ ಧರ್ಮಾಚರಣೆಯೇ ಬೇಡವೆಂದು ನಮಗೆ ಅನಿಸಬಹುದು. ಎಷ್ಟು ಜಾಗರೂಕತೆಯಿಂದಕರ್ಮಗಳನ್ನು ಆಚರಿಸಿದರೂ ಈ ಪ್ರಕೃತಿ ಗುಣಗಳಿಂದಾಗಿ ಅಲ್ಲಿದೋಷಗಳು ನುಸುಳದಿರುವುದಿಲ್ಲ. ಈ ದೋಷಯುಕ್ತವಾದ ಕರ್ಮವನ್ನು ಆಚರಿಸುವುದಕ್ಕಿಂತ ಅದನ್ನು ಸರ್ವಾತ್ಮನಾ ತೊರೆಯುವುದೇ ಲೇಸೆಂಬ ಭಾವನೆಯುಂಟಾಗುವ ಅವಕಾಶವೂಇದೆ. ತ್ಯಾಜ್ಯಂ ದೋಷವದಿತ್ಯೇಕೇ ಕರ್ಮ ಪ್ರಾಹುರ್ಮನೀಷಿಣಃ। ದೋಷಯುಕ್ತ ವಾದ ಈ ಕರ್ಮವನ್ನು ಬಿಡಬೆಳೆಂದು ಕೆಲ ಮನೀಷಿಗಳು ಹೇಳಿದ್ದ! ರೆ ಯಜ್ಞ! ದಾನತಪಃಕರ್ಮನ ತ್ಯಾಜ್ಯಮಿತಿ ಚಾಪರೇ। ಜೀವನದ ಪಾವನತೆಗೆ ಸಾಧನಗಳಾದ ಯಜ್ಞ, ದಾನ, ತಪಸ್ಸುಗಳನ್ನು ಸರ್ವಥಾ ತೊರೆಯಬಾರದೆಂಬ ಆದೇಶವನ್ನು ಕೆಲವರು ನೀಡಿರುವರು. ವಿರುದ್ಧವಾದ ಇವೆರಡು ವಿಚಾರಗಳಲ್ಲಿ ನಾವು ಯಾವುದನ್ನು ಆರಿಸ ಬೇಕೆನ್ನುವುದೇ ನಮ್ಮ ಮುಂದಿರುವಪ್ಪಶ್ಪೆಯಾಗಿದೆ. ನಹಿ ದೇಹಚ್ಛತಾ ಶಕ್ಕಂ ತ್ಯಕ್ತ 0 ಕರ್ಮಾಣ್ಯಶೇಷತಃ [ ಆದರೆ ಜೀವಿಗಳಿಗೆ ಕರ್ತವ್ಯವನ್ನು ಪೂರ್ತಿಯಾಗಿ ತೊರೆಯಲು ಸಾಧ್ಯವೆ? ಆಹಾರ, ವ್ಯವಹಾರಾದಿಗಳಿಗೆ ಅವಶ್ಯವೆನಿಸಿದ ಕರ್ಮಗಳನ್ನು ಬಿಟ್ಟಿರಲು ಯಾರಿಂದಲೂ ಸಾಧ್ಯವಿಲ್ಲ. ಕರ್ಮಗಳಲ್ಲಿ ದೋಷವಿದೆ, ಅದನ್ನು ತೊರೆಯಬೇಕೆನ್ನುವ ಆತುರವು ಸ್ನಾನ, ಸಂಧ್ಯಾವಂದನ, ದೇವರಪೂಜೆ, ಸಮಾಜಸೇವೆಯಂತಹ ಲೂ ೇಕೋವಯುಕ್ತ ಕಾರ್ಯಗಳನ್ನು ಪರಿತ್ಯಜಿಸುವುದರಲ್ಲಿಯೇ ಪರ್ಯವಸಾನ ಹೊಂದುವುದು. ಲೌಕಿಕ ಜೀವನೌಪಾಯಿಕ ಕಾರ್ಯಗಳನ್ನ ೦ತೂ ಬಿಡಬೇಕೆಂದರೂ ಬಿಡಲು ಸಾಧ್ಯವೇ ಇಲ್ಲ. ಸುಲಭವಾಗಿ ಪರಿತ್ಯಜಿಸಬಹುದಾದಕಾರ್ಯಗಳೆಂದರೆ ಆತ್ಮನ ಉಸ್ಪತಿಗೆ ಕಾರಣಗಳಾಗುವ ಪುಣ್ಯಕೃತಿಗಳು ಮಾತ್ರ. ಇತರ ಭೋಗಕಾರ್ಯಗಳನ್ನೆಲ್ಲ ಮಾಡಿಕೊಂಡು ಧರ್ಮಾಚರಣೆಯನ್ನು ಮಾತ್ರ ಬಿಡುವುದರಲ್ಲಿವಿನರ್ಥವಿದೆ? ಹೀಗೆ ನಮ್ಮ ಮನಸ್ಸು ಕರ್ಮದ ಪರಿತ್ಯಾಗ ಹಾಗೂ ಆಚರಣೆಯ ನಡುವೆ ತೂಗುಯ್ಯಾಲೆಯಲ್ಲಿ ಹೊಯ್ದಾಡುತ್ತಿದೆ. ಗೀತೆಯು ಈ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಿದೆ. ಕರ್ಮಾಚರಣೆ ಬೇಡ, ಬೇಕು ಎನ್ನುವ ಎರಡು ವಾದಗಳ ಸಮನ್ವಯವನ್ನು ಗೀತೆಯು ಮಾಡಿದೆ. ಕರ್ಮವನ್ನುತ್ತಚಿಸವುದೆಂದರೆ ಅದರಲ್ಲಿ ದೋಷವು ತಗಲದಂತೆ ಆಸಕ್ತಿ ಮತ್ತು ಫಲಾಪೇಕ್ಷೆಯನ್ನು ತೊರೆಯುವುದೇ ಆಗಿದೆ ಎನ್ನುವ ಆಶಯವನ್ನು ಗೀತೆಯು ವಿವರಿಸಿದೆ. ಸಾಮಾನ್ಯ ಜನರು ಕರ್ಮ ಮತ್ತು ಅದರ ಲೌಕಿಕ ಫಲ ಇವೆರಡರಲ್ಲಿಯೂ ದೃಷ್ಟಿಯನ್ನಿಟ್ಟಿದ್ದರೆ ಅವುಗಳಲ್ಲಿ ಕರ್ಮವನ್ನು ಮಾತ್ರ ಪರಿಗ್ರಹಿಸಿ ಫಲವನ್ನು ಪರಿತ್ಯಜಿಸುವುದೇ ಕರ್ಮತ್ಯಾಗ ಹಾಗೂ ಕರ್ಮಾನುಷ್ಠಾನ ಇವೆರಡರ ಸಮನ್ವಯವಾಗಿದೆ. ಕರ್ಮಾನುಷ್ಠಾನದಲ್ಲಿ ಈ ತ್ಯಾಗವೃತ್ತಿಯನ್ನಾಗಲಿ ಸಂನ್ಯಾಸವೃತ್ತಿಯನ್ನಾಗಲಿ ಜೋಡಿಸುವುದರಿಂದ ಕರ್ಮಗಳನ್ನು ಆಚರಿಸಿದರೂ ಅದರ ದೋಷ, ಬಂಧನಗಳಿಗೆನಾವುಗುರಿಯಾಗುವುದಿಲ್ಲ. ತ್ಯಾಗ, ಸಂನ್ಯಾಸಗಳಲ್ಲಿರುವ. ಅಂತರವನ್ನೂ ನಾವು ಇಲ್ಲಿ ಪರಿಶೀಲಿಸಬೇಕಾಗಿದೆ. ತನಗಾಗಿ ಲೌಕಿಕ ಫಲವನ್ನು ಬಯಸಿದ್ದರೂ ಪರರ ಲೌಕಿಕ ಸುಖಕ್ಕಾಗಿ ಸ್ವಂತದ ಅಪೇಕ್ಷೆಯಿಲ್ಲದೆ ಮಾಡುವ ಕರ್ತವ್ಯದಲ್ಲಿ ತ್ಯಾಗ ವತ್ತಿಯಿದೆ. ತನ್ನಂತೆಯೇವರರಿಗೂ ಲೌಕಿಕಸುಖವನ್ನು ಅಪೇಕ್ಷಿಸದೆ ಅವರಿಗೂ ಜ್ಞಾನ, ಭಕ್ತಿ ಹರಿಪ್ರಸಾದಗಳನ್ನು ಮಾತ್ರ ಬಯಸಿ ಉನ್ನತ ಭಾವನೆಯಿಂದ ಮಾಡುವ ಕರ್ಮದಲ್ಲಿ ಸಂನ್ಯಾನವೃತ್ತಿಯು ಅಡಕವಾಗಿದೆ. ಈ ತ್ಯಾಗ, ಸಂನ್ಯಾಸಗಳೆರಡರಲ್ಲಿಯೂ ಕರ್ಮಾಚರಣೆಯು ಅನಿವಾರ್ಯವೇ. ಅನ್ಯರ ಸುಖಕ್ಕಾಗಿ ಹಾತೊರೆದು ಅನುಕಂಪಭಾವದಿಂದ ಸ್ವಸುಖನಿರಪೇಕ್ಟವಾಗಿ ಪ್ರವರ್ತಿಸುವ ಕರ್ಮಯೋಗಿಯ ತ್ಯಾಗದಲ್ಲಿ ಹಿರಿತನವಿದ್ದರೂ ತನ್ನಂತೆಯೇ ಅನ್ಯರ ಆಧ್ಯಾತ್ಮಿಕ ಉನ್ನತಿಯನ್ನೇ ಬಯಸುವ ಸಂನ್ಯಾಸಿಯ ಮನೋಭಾವವು ಹೆಚ್ಚು ಉದಾತ್ತವಾದುದು. ಇವರಿಬ್ಬರ ಆಚರಣೆಗಳೂ ಕರ್ಮದ ದೋಷಗಳನ್ನು ದಾಟಿ ನಿಂತಿವೆ. ವೈರಾಗ್ಯ ಭಕ್ತಿಗಳ ಧಾರೆಯಲ್ಲಿ ತೊಳೆದು ಸಿದ್ಧಗೊಳಿಸಿದ ಈ ಕರ್ಮದವಕ್ವಾನ್ನದಲ್ಲಿ ಆಸಕ್ತಿಯುಕ್ತಕರ್ಮಗಳಲ್ಲಿರುವ ಕಹಿ ದುರ್ಗಂಧಗಳು ಕಾಣಸಿಗವು. ಇಂತಹ ಕರ್ಮವನ್ನು ಸಾತ್ತ್ವಿಕವೆಂದು ಗೀತೆಯು ನಿರ್ದೇಶಿಸಿದೆ.
Bannanje Govindacharya (1936–2020)Bhagavad Gita Pravachana
ನಿಶ್ಚಯಮ್‌ ಶೃಣು ಮೇ ತತ್ರ ತ್ಯಾಗೇ ಭರತಸತ್ತಮ | ತ್ಯಾಗಃ ಹಿ ಪುರುಷವ್ಯಾಘ್ರ ತ್ರಿವಿಧಃ ಸಂಪ್ರಕೀರ್ತಿತಃ -- ಭರತಸತ್ತಮಾ, ಅದರಲ್ಲಿ ತ್ಯಾಗದ ಬಗ್ಗೆ ನನ್ನ ನಿರ್ಧಾರ ಕೇಳು. ಪುರುಷವ್ಯಾಘ್ರಾ, ಮೂರು ಬಗೆಯ ತ್ಯಾಗ ಉಕ್ತವಾಗಿದೆ. “ತ್ಯಾಗದ ವಿಷಯದಲ್ಲಿ ನಿಶ್ಚಿತವಾದ ಅಭಿಪ್ರಾಯವನ್ನು ನಿನಗೆ ಹೇಳುತ್ತೇನೆ” ಎನ್ನುತ್ತಾನೆ ಕೃಷ್ಣ. ಹೇಗೆ ಯಜ್ಞ- ದಾನ-ತಪಸ್ಸು ಮೂರು ವಿಧವೋ ಹಾಗೇ ತ್ಯಾಗವೂ ಕೂಡಾ ಮೂರು ವಿಧ. ಅದನ್ನು ಕೃಷ್ಣ ಅರ್ಜುನನಿಗೆ ವಿವರಿಸುತ್ತಾನೆ. ಇಲ್ಲಿ ಕೃಷ್ಣ ಅರ್ಜುನನನ್ನು ಭರತಸತ್ತಮ ಮತ್ತು ಪುರುಷವ್ಯಾಘ್ರ ಎಂದು ಸಂಬೋಧಿಸಿದ್ದಾನೆ. ಭರತವಂಶದ ಅರಸರ ಮಾಲಿಕೆಯಲ್ಲಿ ಗಣ್ಯನಾದ್ದರಿಂದ ಅರ್ಜುನ ಭರತಸತ್ತಮ-ಇದು ಮೇಲ್ನೋಟದ ಅರ್ಥ. ಭಗವಂತನಲ್ಲಿ ಮತ್ತು ಜ್ಞಾನದಲ್ಲಿ ರತನಾದವ, ಭಕ್ತಿ ಉಳ್ಳವ ಭರತಸತ್ತಮ ಎನ್ನುವುದು ಈ ಸಂಬೋಧನೆಯ ಅಂತರಂಗದ ಅರ್ಥ. ಅದೇ ರೀತಿ ಪುರುಷವ್ಯಾಘ್ರ ಎಂದರೆ ಪುರುಷಶ್ರೇಷ್ಠ ಎಂದರ್ಥ. ಭಗವಂತನ ಕಡೆಗೆ ತಮ್ಮ ಮನಸ್ಸನ್ನು ಹರಿಯಗೊಟ್ಟವರು ಪುರುಷರು. ಅವರಲ್ಲಿ ಶ್ರೇಷ್ಠ-ಪುರುಷಶ್ರೇಷ್ಠ. ಅಂದರೆ ಜ್ಞಾನಿಗಳಲ್ಲಿ ಶ್ರೇಷ್ಠ ಎಂದರ್ಥ. ನಾವೂ ಕೂಡಾ ನಮ್ಮ ಜೀವನದಲ್ಲಿ ಭರತಸತ್ತಮರು, ಪುರುಷವ್ಯಾಘ್ರರು ಆಗಬೇಕು. ಆಗ ಭಗವಂತನ ಸಂದೇಶ ನಮಗೆ ತಲುಪುತ್ತದೆ
Bibek Debroy (1955–2024)The Bhagavad Gita
(4) ‘O supreme of the Bharatas!6 Listen to my decided views about that relinquishing. O tiger among men!7 It has been said that relinquishing is of three types.’