18.8

दुःखमित्येव यत्कर्म कायक्लेशभयात्त्यजेत् ।
स कृत्वा राजसं त्यागं नैव त्यागफलं लभेत् ॥
duḥkhamityeva yatkarma kāyakleśabhayāttyajet |
sa kṛtvā rājasaṃ tyāgaṃ naiva tyāgaphalaṃ labhet ||
Sri Madhvacharya (1238–1317)Bhagavad Gita Tatparya Nirnaya
मोहं विना दृष्टदुःखमित्येव। दुःखशब्देन केवलं मानसम्। कायक्लेशस्य पृथगुक्तेः। ‘दुःखं तु मानसं ज्ञेयमायासो बाह्य उच्यते। विशेषस्य विवक्षायामन्यथा सर्वमेव तु’ इति शब्दनिर्णये॥08॥
Swami Sivananda (1887–1963)Bhagavad Gita
8. He who abandons action on account of the fear of bodily trouble (because it is painful), he does not obtain the merit of renunciation by doing such Rajasic renunciation.
Sri Vishwesha Tirtharu (1931–2019)Gitasaroddhara
18.3–18.40 · ತ್ಯಾಗ ಮತ್ತು ಸಂನ್ಯಾಸ
ತ್ಯಾಗ ಮತ್ತು ಸಂನ್ಯಾಸ ನಮ್ಮ ಪ್ರತಿಯೊಂದು ಕ್ರಿಯೆಯಲ್ಲಿಯೂ ಸತ್ತ್ವ ರಜ, ತಮಗಳ ಈ ಗತಿವಿಧಿಯನ್ನು ಪರಿಶೀಲಿಸಿದಷ್ಟೂ ನಮ್ಮ ಎಲ್ಲ ಕೃತಿಗಳನ್ನೂ ವಿಶ್ಲೇಷಿಸಿ ಆತ್ಮ ನಿರೀಕ್ಬ ಣೆ ಮಾಡಲು ಅನುಕೂಲವಾಗುತ್ತ ದೆ. ನತದಸ್ತಿ ಪೃಥಿವ್ಯಾಂವಾ ದಿವಿ ದೇವೇಷು ವಾ ಪುನಃ । ಜಗತ್ತಿನ ಪ್ರತಿಯೊಬ್ಬರೂ ಈ ಮೂರು ಗುಣಗಳ ಪ್ರಭಾವಕ್ಕೆ ಸಿಲುಕಿದವರೇ. ಈ ತ್ರಿಗುಣಗಳಿಂದಾಗಿ ನಾವು ಮಾಡುತ್ತಿರುವ ಧರ್ಮಾಚಾರಗಳೆಲ್ಲ ಎಂತಹ ವಿಕೃತ ರೂಪವನ್ನು ತಳೆಯುತ್ತವೆ ಎಂಬ ಪರಿವೆಯೂ ಇಲ್ಲದೆ ನಮ್ಮ ವ್ಯವಹಾರಗಳನ್ನು ಸಾಗಿಸುತ್ತಿರುವೆವು. ಧರ್ಮಾಚರಣೆಯಲ್ಲಿ ರಜಸ್ಸು, ತಮಸ್ಸುಗಳಿಂದ ಸಂಭವಿಸಬಹುದಾದ ವಿಕೃತಿಯನ್ನು ಕಂಡಾಗ ಈ ಧರ್ಮಾಚರಣೆಯೇ ಬೇಡವೆಂದು ನಮಗೆ ಅನಿಸಬಹುದು. ಎಷ್ಟು ಜಾಗರೂಕತೆಯಿಂದಕರ್ಮಗಳನ್ನು ಆಚರಿಸಿದರೂ ಈ ಪ್ರಕೃತಿ ಗುಣಗಳಿಂದಾಗಿ ಅಲ್ಲಿದೋಷಗಳು ನುಸುಳದಿರುವುದಿಲ್ಲ. ಈ ದೋಷಯುಕ್ತವಾದ ಕರ್ಮವನ್ನು ಆಚರಿಸುವುದಕ್ಕಿಂತ ಅದನ್ನು ಸರ್ವಾತ್ಮನಾ ತೊರೆಯುವುದೇ ಲೇಸೆಂಬ ಭಾವನೆಯುಂಟಾಗುವ ಅವಕಾಶವೂಇದೆ. ತ್ಯಾಜ್ಯಂ ದೋಷವದಿತ್ಯೇಕೇ ಕರ್ಮ ಪ್ರಾಹುರ್ಮನೀಷಿಣಃ। ದೋಷಯುಕ್ತ ವಾದ ಈ ಕರ್ಮವನ್ನು ಬಿಡಬೆಳೆಂದು ಕೆಲ ಮನೀಷಿಗಳು ಹೇಳಿದ್ದ! ರೆ ಯಜ್ಞ! ದಾನತಪಃಕರ್ಮನ ತ್ಯಾಜ್ಯಮಿತಿ ಚಾಪರೇ। ಜೀವನದ ಪಾವನತೆಗೆ ಸಾಧನಗಳಾದ ಯಜ್ಞ, ದಾನ, ತಪಸ್ಸುಗಳನ್ನು ಸರ್ವಥಾ ತೊರೆಯಬಾರದೆಂಬ ಆದೇಶವನ್ನು ಕೆಲವರು ನೀಡಿರುವರು. ವಿರುದ್ಧವಾದ ಇವೆರಡು ವಿಚಾರಗಳಲ್ಲಿ ನಾವು ಯಾವುದನ್ನು ಆರಿಸ ಬೇಕೆನ್ನುವುದೇ ನಮ್ಮ ಮುಂದಿರುವಪ್ಪಶ್ಪೆಯಾಗಿದೆ. ನಹಿ ದೇಹಚ್ಛತಾ ಶಕ್ಕಂ ತ್ಯಕ್ತ 0 ಕರ್ಮಾಣ್ಯಶೇಷತಃ [ ಆದರೆ ಜೀವಿಗಳಿಗೆ ಕರ್ತವ್ಯವನ್ನು ಪೂರ್ತಿಯಾಗಿ ತೊರೆಯಲು ಸಾಧ್ಯವೆ? ಆಹಾರ, ವ್ಯವಹಾರಾದಿಗಳಿಗೆ ಅವಶ್ಯವೆನಿಸಿದ ಕರ್ಮಗಳನ್ನು ಬಿಟ್ಟಿರಲು ಯಾರಿಂದಲೂ ಸಾಧ್ಯವಿಲ್ಲ. ಕರ್ಮಗಳಲ್ಲಿ ದೋಷವಿದೆ, ಅದನ್ನು ತೊರೆಯಬೇಕೆನ್ನುವ ಆತುರವು ಸ್ನಾನ, ಸಂಧ್ಯಾವಂದನ, ದೇವರಪೂಜೆ, ಸಮಾಜಸೇವೆಯಂತಹ ಲೂ ೇಕೋವಯುಕ್ತ ಕಾರ್ಯಗಳನ್ನು ಪರಿತ್ಯಜಿಸುವುದರಲ್ಲಿಯೇ ಪರ್ಯವಸಾನ ಹೊಂದುವುದು. ಲೌಕಿಕ ಜೀವನೌಪಾಯಿಕ ಕಾರ್ಯಗಳನ್ನ ೦ತೂ ಬಿಡಬೇಕೆಂದರೂ ಬಿಡಲು ಸಾಧ್ಯವೇ ಇಲ್ಲ. ಸುಲಭವಾಗಿ ಪರಿತ್ಯಜಿಸಬಹುದಾದಕಾರ್ಯಗಳೆಂದರೆ ಆತ್ಮನ ಉಸ್ಪತಿಗೆ ಕಾರಣಗಳಾಗುವ ಪುಣ್ಯಕೃತಿಗಳು ಮಾತ್ರ. ಇತರ ಭೋಗಕಾರ್ಯಗಳನ್ನೆಲ್ಲ ಮಾಡಿಕೊಂಡು ಧರ್ಮಾಚರಣೆಯನ್ನು ಮಾತ್ರ ಬಿಡುವುದರಲ್ಲಿವಿನರ್ಥವಿದೆ? ಹೀಗೆ ನಮ್ಮ ಮನಸ್ಸು ಕರ್ಮದ ಪರಿತ್ಯಾಗ ಹಾಗೂ ಆಚರಣೆಯ ನಡುವೆ ತೂಗುಯ್ಯಾಲೆಯಲ್ಲಿ ಹೊಯ್ದಾಡುತ್ತಿದೆ. ಗೀತೆಯು ಈ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಿದೆ. ಕರ್ಮಾಚರಣೆ ಬೇಡ, ಬೇಕು ಎನ್ನುವ ಎರಡು ವಾದಗಳ ಸಮನ್ವಯವನ್ನು ಗೀತೆಯು ಮಾಡಿದೆ. ಕರ್ಮವನ್ನುತ್ತಚಿಸವುದೆಂದರೆ ಅದರಲ್ಲಿ ದೋಷವು ತಗಲದಂತೆ ಆಸಕ್ತಿ ಮತ್ತು ಫಲಾಪೇಕ್ಷೆಯನ್ನು ತೊರೆಯುವುದೇ ಆಗಿದೆ ಎನ್ನುವ ಆಶಯವನ್ನು ಗೀತೆಯು ವಿವರಿಸಿದೆ. ಸಾಮಾನ್ಯ ಜನರು ಕರ್ಮ ಮತ್ತು ಅದರ ಲೌಕಿಕ ಫಲ ಇವೆರಡರಲ್ಲಿಯೂ ದೃಷ್ಟಿಯನ್ನಿಟ್ಟಿದ್ದರೆ ಅವುಗಳಲ್ಲಿ ಕರ್ಮವನ್ನು ಮಾತ್ರ ಪರಿಗ್ರಹಿಸಿ ಫಲವನ್ನು ಪರಿತ್ಯಜಿಸುವುದೇ ಕರ್ಮತ್ಯಾಗ ಹಾಗೂ ಕರ್ಮಾನುಷ್ಠಾನ ಇವೆರಡರ ಸಮನ್ವಯವಾಗಿದೆ. ಕರ್ಮಾನುಷ್ಠಾನದಲ್ಲಿ ಈ ತ್ಯಾಗವೃತ್ತಿಯನ್ನಾಗಲಿ ಸಂನ್ಯಾಸವೃತ್ತಿಯನ್ನಾಗಲಿ ಜೋಡಿಸುವುದರಿಂದ ಕರ್ಮಗಳನ್ನು ಆಚರಿಸಿದರೂ ಅದರ ದೋಷ, ಬಂಧನಗಳಿಗೆನಾವುಗುರಿಯಾಗುವುದಿಲ್ಲ. ತ್ಯಾಗ, ಸಂನ್ಯಾಸಗಳಲ್ಲಿರುವ. ಅಂತರವನ್ನೂ ನಾವು ಇಲ್ಲಿ ಪರಿಶೀಲಿಸಬೇಕಾಗಿದೆ. ತನಗಾಗಿ ಲೌಕಿಕ ಫಲವನ್ನು ಬಯಸಿದ್ದರೂ ಪರರ ಲೌಕಿಕ ಸುಖಕ್ಕಾಗಿ ಸ್ವಂತದ ಅಪೇಕ್ಷೆಯಿಲ್ಲದೆ ಮಾಡುವ ಕರ್ತವ್ಯದಲ್ಲಿ ತ್ಯಾಗ ವತ್ತಿಯಿದೆ. ತನ್ನಂತೆಯೇವರರಿಗೂ ಲೌಕಿಕಸುಖವನ್ನು ಅಪೇಕ್ಷಿಸದೆ ಅವರಿಗೂ ಜ್ಞಾನ, ಭಕ್ತಿ ಹರಿಪ್ರಸಾದಗಳನ್ನು ಮಾತ್ರ ಬಯಸಿ ಉನ್ನತ ಭಾವನೆಯಿಂದ ಮಾಡುವ ಕರ್ಮದಲ್ಲಿ ಸಂನ್ಯಾನವೃತ್ತಿಯು ಅಡಕವಾಗಿದೆ. ಈ ತ್ಯಾಗ, ಸಂನ್ಯಾಸಗಳೆರಡರಲ್ಲಿಯೂ ಕರ್ಮಾಚರಣೆಯು ಅನಿವಾರ್ಯವೇ. ಅನ್ಯರ ಸುಖಕ್ಕಾಗಿ ಹಾತೊರೆದು ಅನುಕಂಪಭಾವದಿಂದ ಸ್ವಸುಖನಿರಪೇಕ್ಟವಾಗಿ ಪ್ರವರ್ತಿಸುವ ಕರ್ಮಯೋಗಿಯ ತ್ಯಾಗದಲ್ಲಿ ಹಿರಿತನವಿದ್ದರೂ ತನ್ನಂತೆಯೇ ಅನ್ಯರ ಆಧ್ಯಾತ್ಮಿಕ ಉನ್ನತಿಯನ್ನೇ ಬಯಸುವ ಸಂನ್ಯಾಸಿಯ ಮನೋಭಾವವು ಹೆಚ್ಚು ಉದಾತ್ತವಾದುದು. ಇವರಿಬ್ಬರ ಆಚರಣೆಗಳೂ ಕರ್ಮದ ದೋಷಗಳನ್ನು ದಾಟಿ ನಿಂತಿವೆ. ವೈರಾಗ್ಯ ಭಕ್ತಿಗಳ ಧಾರೆಯಲ್ಲಿ ತೊಳೆದು ಸಿದ್ಧಗೊಳಿಸಿದ ಈ ಕರ್ಮದವಕ್ವಾನ್ನದಲ್ಲಿ ಆಸಕ್ತಿಯುಕ್ತಕರ್ಮಗಳಲ್ಲಿರುವ ಕಹಿ ದುರ್ಗಂಧಗಳು ಕಾಣಸಿಗವು. ಇಂತಹ ಕರ್ಮವನ್ನು ಸಾತ್ತ್ವಿಕವೆಂದು ಗೀತೆಯು ನಿರ್ದೇಶಿಸಿದೆ.
Bannanje Govindacharya (1936–2020)Bhagavad Gita Pravachana
ದುಃಖಮ್‌ & ಏವ ಯತ್‌ ಕರ್ಮ ಕಾಯ ಕ್ಲೇಶ ಭಯಾತ್‌ ತ್ಯಜೇತ್‌ | ಸಃ ಕೃತ್ವಾ ರಾಜಸಮ್‌ ತ್ಯಾಗಮ್‌ ನ ಏವ ತ್ಯಾಗ ಫಲಮ್‌ ಲಭೇತ್‌ - ಮಾಡುವುದಕ್ಕೆ ಮೈಬಗ್ಗದೆ, ಬಗೆಯೊಗ್ಗದೆ, ಕಷ್ಟವಾಗುತ್ತದೆ ಎಂದು ಮಾಡದೇ ಇರುವುದು ರಾಜಸ ತ್ಯಾಗ. ಇಂತಹ ತ್ಯಾಗ ಮಾಡಿಯೂ ತ್ಯಾಗದ ಫಲ ದೊರೆಯದು. ನಮಗೆ ನಮ್ಮ ನಿಯತಕರ್ಮ ಮಾಡಬೇಕು ಎನ್ನುವುದು ಗೊತ್ತಿದ್ದೂ, ಮನಸ್ಸಿಗೆ ದೇಹಕ್ಕೆ ನೋವಾಗುತ್ತದೆ ಎನ್ನುವ ಕಾರಣಕ್ಕಾಗಿ ಕರ್ಮವನ್ನು ಮಾಡದೇ ಬಿಡುವುದು ರಾಜಸ ತ್ಯಾಗ ಎನಿಸುತ್ತದೆ. ಉದಾಹರಣೆಗೆ ಯಾವುದೋ ದೂರದರ್ಶನದ ದಾರಾವಾಹಿಯನ್ನು ನೋಡಬೇಕು ಎನ್ನುವ ಮನಸ್ಸಿನ ಉತ್ಕಟ ಬಯಕೆಯಿಂದ ಕರ್ಮವನ್ನು ಕೈಬಿಡುವುದು, ಚಳಿಯಾಗುತ್ತದೆ ಎಂದು ಸಂಧ್ಯಾವಂದನೆ ಮಾಡದೇ ಇರುವುದು, ಇತ್ಯಾದಿ ರಾಜಸ ತ್ಯಾಗ. ಇಂತಹ ರಾಜಸ ತ್ಯಾಗ ಮಾಡಿದರೆ ನಿಜವಾದ ತ್ಯಾಗದ ಫಲ ಸಿಗದು.
Bibek Debroy (1955–2024)The Bhagavad Gita
(8) ‘He who relinquishes action because action leads to discomfort and requires physical exertion performs rajas- type relinquishing. He doesn’t receive the fruits from relinquishing.’