मात्रास्पर्शास्तु कौन्तेय शीतोष्णसुखदुःखदाः ।
आगमापायिनोऽनित्यास्तांस्तितिक्षस्व भारत ॥
mātrāsparśāstu kaunteya śītoṣṇasukhaduḥkhadāḥ |
āgamāpāyino'nityāstāṃstitikṣasva bhārata ||
Sri Madhvacharya (1238–1317)Bhagavad Gita Tatparya Nirnaya
तददर्शनादिनिमित्तं सोढव्यमित्याह - मात्रस्पर्शा इति। विषय
सम्बन्धाः॥14॥
Swami Sivananda (1887–1963)Bhagavad Gita
14. The contacts of the senses with the objects, O son of Kunti, which cause heat and cold
and pleasure and pain, have a beginning and an end; they are impermanent; endure them bravely, O
Arjuna!
Bannanje Govindacharya (1936–2020)Bhagavad Gita Pravachana
ಮಾತ್ರಾ ಸ್ಪರ್ಶಾಃ ತು ಕೌಂತೇಯ ಶೀತ ಉಷ್ಣ ಸುಖದುಃಖದಾಃ।
ಆಗಮ ಅಪಾಯಿನಃ ಅನಿತ್ಯಾಃ ತಾನ್ ತಿತಿಕ್ಷಸ್ವ ಭಾರತ -- ಕೌಂತೇಯ, ವಿಷಯ ಸಂಪರ್ಕಗಳೇ ತಂಪು-
ಬಿಸಿಗಳ, ಸುಖ-ದುಃಖಗಳ ಅನುಭವ ನೀಡುವಂಥವು. ಇವು ಬಂದು ಹೋಗುವಂಥವು. ನಿರಂತರವಾಗಿ
ಇರುವಂಥವಲ್ಲ. ಓ ಭಾರತಾ, ಅವುಗಳನ್ನು ಸಹಿಸಿಕೋ.
ನಾವು ಬಾಲ್ಯದ ದೇಹವನ್ನು ಕಳೆದುಕೊಂಡು ಯೌವನದ ದೇಹವನ್ನು ಪಡೆಯುತ್ತೇವೆ. ಯೌವನದ ದೇಹವನ್ನು
ಕಳೆದುಕೊಂಡು ಮುಪ್ಪಿನ ದೇಹವನ್ನು ಪಡೆಯುತ್ತೇವೆ. ಈ ಕಾರಣಕ್ಕಾಗಿ ಯಾರೂ ದುಃಖಿಸುವುದಿಲ್ಲ. ಆದರೆ
ಸಾವಿನಲ್ಲಿ 'ಕಾಣುವ' ಇನ್ನೊಂದು ದೇಹ ಇಲ್ಲವಾಗುತ್ತದೆ-ಆಗ ದುಃಖ. ಯಾವ ದೇಹದ ಮೂಲಕ ಭಾಂದವ್ಯದ
ನಂಟನ್ನು ಬೆಳೆಸಿಕೊಂಡಿರುತ್ತೇವೋ , ಅದು ಇಲ್ಲವಾಗುತ್ತದಲ್ಲಾ ಎನ್ನುವ ದುಃಖ ಸಾಮಾನ್ಯವಾಗಿ ನಮ್ಮನ್ನು
ಕಾಡುತ್ತದೆ.
ಜೀವನದಲ್ಲಿ ನಾವು ಅನುಭವಿಸುವ ಸುಖ ಮತ್ತು ದುಃಖದ ಮೂಲ “ಮಾತ್ರಾ ಸ್ಪರ್ಶಾ". ಇದು ಎಲ್ಲವುದರ
ಮೂಲ. ನಾವು ಯಾವುದನ್ನು ನಮ್ಮ ಇಂದ್ರಿಯಗಳ ಮೂಲಕ ಗ್ರಹಿಸುತ್ತೇವೋ ಅದು ಮಾತ್ರೆ. ಶಬ್ದ, ಸ್ಪರ್ಶ,
ರೂಪ, ರಸ, ಗಂಧ ಇವೇ ನಮ್ಮ ಸುಖ-ದುಃಖಗಳಿಗೆ ಕಾರಣವಾದ ಐದು ಮಾತ್ರೆಗಳು.
ಸುಖ-ದುಃಖಗಳಿಗೆ ಒಂದು ವ್ಯವಸ್ಥೆ ಇಲ್ಲ. ಒಬ್ಬರಿಗೆ ಸುಖವಾದದ್ದು ಇನ್ನೊಬ್ಬರಿಗೆ ದುಃಖವಾಗಬಹುದು.
ವಿಷಯಗಳ ಸ್ಪರ್ಶದಿಂದ ಸುಖ-ದುಃಖ ಬರುತ್ತದೆ. ಅದು ಶೀತೊಷ್ಟದಂತೆ. ಮೊದಲು ಸುಖಕೊಟ್ಟ ವಸ್ತುವೇ
ಮುಂದೆ ದುಃಖವಾಗಿ ಪರಿಣಮಿಸಬಹುದು. ಸುಖ-ದುಃಖ ಜೀವದ ಧರ್ಮವಲ್ಲ. ಅದು ಬಂದು ಹೋಗುವಂತಾದ್ದು.
ಅದು ನಮ್ಮ ಮಾನಸಿಕ ಕಲ್ಪನೆಯ ಫಲ. "ನನ್ನ" ಎನ್ನುವುದು ದುಃಖಕ್ಕೆ ಮೂಲ ಕಾರಣ. ನಿದ್ದೆಯಲ್ಲಿ ನಮಗೆ
ನನ್ನ" ಎನ್ನುವುದು ಇಲ್ಲ. ಆದ್ದರಿಂದ ಎಂದೂ ನಿದ್ದೆಯಲ್ಲಿ ದುಃಖವಿಲ್ಲ. ಎಚ್ಚರ ಮತ್ತು ಕನಸಿನಲ್ಲಿ ಮಾತ್ರ ಈ
ಸಮಸ್ಯೆ. ನಿದ್ದೆಯಲ್ಲಿ ಎಲ್ಲವೂ ನಿರ್ಮಲ.
ನಾವೇ ನಮ್ಮ ಮಾನಸಿಕ ಭಾವನೆಗಳಿಂದ ಮತ್ತು ಅನುಭವಗಳಿಂದ ನಿರ್ಮಿಸಿಕೊಂಡಿರುವುದು ಈ ಸುಖ-ದುಃಖ.
ಇದರಿಂದ ಪಾರಾಗುವ ಉಪಾಯವನ್ನು ನಾವೇ ಕಲಿತುಕೊಳ್ಳಬೇಕು. ದುಃಖದ ಮೂಲದ ಅನ್ವೇಷಣೆ ಮಾಡಿದಾಗ
ದುಃಖ ಸಹ್ಯವಾಗುತ್ತದೆ. ನಾವು ನಮ್ಮ ಭಾವನೆಗಳನ್ನು ಸಹನೆ ಮಾಡಿಕೊಳ್ಳುವುದನ್ನು ಕಲಿತುಕೊಳ್ಳಬೇಕು.
ಯಾವುದು ಬಂತೋ ಅದನ್ನು ಸ್ವೀಕರಿಸುವುದನ್ನು ಕಲಿತುಕೊಳ್ಳಬೇಕು. ನನಗೆ 'ಅದೇ ಬೇಕು'; 'ಹೀಗೇ ಆಗಬೇಕು'
ಎನ್ನುವ ಚಿಂತನೆ ದುಃಖಕ್ಕೆ ಮೂಲ ಕಾರಣ. ಬಂದಿದ್ದನ್ನು ಬಂದಂತೆ ಎದುರಿಸುತ್ತೇನೆ ಎನ್ನುವ ಆತ್ಮಸ್ಥೈರ್ಯವಿದ್ದರೆ
ದುಃಖವಿಲ್ಲ.
Bibek Debroy (1955–2024)The Bhagavad Gita
(14)
‘O son of Kunti!12 Because of contact between senses and objects, feelings
of warmth and cold, pleasure and pain result. But these are temporary and
are created and disappear. O descendant of Bharata!13 Therefore, tolerate
these.’