2.22

वासांसि जीर्णानि यथा विहाय
नवानि गृह्णाति नरोऽपराणि ।
तथा शरीराणि विहाय जीर्णा-
न्यन्यानि संयाति नवानि देही ॥
vāsāṃsi jīrṇāni yathā vihāya
navāni gṛhṇāti naro'parāṇi |
tathā śarīrāṇi vihāya jīrṇā-
nyanyāni saṃyāti navāni dehī ||
Sri Madhvacharya (1238–1317)Bhagavad Gita Tatparya Nirnaya
जीवस्यापि शरीरसंयोगवियोगावेव जनिमृती यतस्ततो न दुःखकारणमित्याह - वासांसीति॥22॥
Swami Sivananda (1887–1963)Bhagavad Gita
22. Just as a man casts off worn-out clothes and puts on new ones, so also the embodied Self casts off worn-out bodies and enters others that are new.
Bannanje Govindacharya (1936–2020)Bhagavad Gita Pravachana
ವಾಸಾಂಸಿ ಜೀರ್ಣಾನಿ ಯಥಾ ವಿಹಾಯ ನವಾನಿ ಗೃಹ್ಣಾತಿ ನರಃ ಅಪರಾಣಿ | ತಥಾ ಶರೀರಾಣಿ ವಿಹಾಯ ಜೀರ್ಣಾನಿ ಅನ್ಯಾನಿ ಸಂಯಾತಿ ನವಾನಿ ದೇಹೀ -- ಮನುಷ್ಯ ಹಳೆಯ ಬಟ್ಟೆಬರೆಗಳನ್ನು ಬಿಸುಟು ಬೇರೆ ಹೊಸತನ್ನು ಉಡುತ್ತಾನೆ ಹೇಗೆಯೋ ಹಾಗೇ-ಜೀವ ಒಂದು ದೇಹವನ್ನು ಬಿಟ್ಟು ಬೇರೆ ಹೊಸ ದೇಹವನ್ನು ಪಡೆಯುತ್ತಾನೆ. ನಾವು ಉಟ್ಟ ಬಟ್ಟೆ ಹಳೆಯದಾದಾಗ ಹೇಗೆ ಅದನ್ನು ಬದಲಿಸುತ್ತೇವೋ-ಹಾಗೇ, ಜೀವ ಒಂದು ದೇಹವನ್ನು ಬಿಟ್ಟು ಇನ್ನೊಂದು ದೇಹವನ್ನು ಪಡೆಯುತ್ತಾನೆ. ಇಲ್ಲಿ ಒಂದು ವಿಶೇಷವೆಂದರೆ ಹೇಗೆ ತಾಯಿ ತನ್ನ ಮಗುವಿಗೆ ತನ್ನಿಚ್ಚೆಯಂತೆ ಬಟ್ಟೆ ಬದಲಿಸುತ್ತಾಳೋ ಹಾಗೆ ಭಗವಂತ ಜೀವದ ದೇಹ ಬದಲಿಸುತ್ತಾನೆ. ಜೀವನಿಗೆ ಸ್ವತಃ ದೇಹ ಬದಲಿಸುವ ಸ್ವಾತಂತ್ರ್ಯ ಇರುವುದಿಲ್ಲ. ಇದಕ್ಕೆ ಒಂದು ಅಪವಾದ ಎಂದರೆ ಆತ್ಮ ಸಾಕ್ಷಾತ್ಕಾರವಾದ ಯೋಗಿಗಳು. ಅವರು ಭಗವಂತನ ಅನುಗ್ರಹದಿಂದ ಸ್ವ-ಇಚ್ಛೆಯಂತೆ ದೇಹ ಬದಲಿಸುವ ಶಕ್ತಿಯನ್ನು ಪಡೆದಿರುತ್ತಾರೆ. [ಈ ಬಗ್ಗೆ ಸ್ವಾಮಿರಾಮ್‌ ಅವರು ಬರೆದಿರುವ "Living with Himalayan Masters" ಎನ್ನುವ ಪುಸ್ತಕದಲ್ಲಿ ಅನೇಕ ನೈಜ ದೃಷ್ಟಾಂತಗಳನ್ನು ಕಾಣಬಹುದು.] ಇಂತಹ ಮಹಾನ್‌ ಯೋಗಿಗಳನ್ನು ಬಿಟ್ಟರೆ ಇತರರಿಗೆ ಸ್ವ-ಇಚ್ಛೆಯಂತೆ ದೇಹ ಬದಲಿಸುವ ಸ್ವಾತಂತ್ರ್ಯ ಇಲ್ಲ. ಆದ್ದರಿಂದ ಭೌತಿಕವಾಗಿ ಹುಟ್ಟು-ಸಾವು ಎಂದರೆ ಉಟ್ಟ ಬಟ್ಟೆಯನ್ನು ಕಳಚಿ ಹೊಸ ಬಟ್ಟೆಯನ್ನು ತೊಡಿಸಿದಂತೆ. ಸ್ವರೂಪತಃ ಜೀವಕ್ಕೆ ಎಂದೂ ಹುಟ್ಟು-ಸಾವು ಅನ್ನುವುದಿಲ್ಲ ಹಾಗೂ ಹೊಸ ಶರೀರದಿಂದ ಅದರ ಮೂಲಸ್ವಭಾವ ಬದಲಾಗುವುದಿಲ್ಲ. ಹಾಗಾದರೆ ಆತ್ಮವನ್ನು ನಾಶ ಮಾಡಲು ಸಾದ್ಯವೇ ಇಲ್ಲವೋ? ಎಂದೆಂದಿಗೂ ಇಲ್ಲ ಎನ್ನುತ್ತಾನೆ ಕೃಷ್ಣ ಮುಂದಿನ
Bibek Debroy (1955–2024)The Bhagavad Gita
(22) ‘Like a person discards worn-out clothes and accepts others that are new, like that, the soul discards worn-out bodies and attains others that are new.’