नैनं छिन्दन्ति शस्त्राणि नैनं दहति पावकः ।
न चैनं क्लेदयन्त्यापो न शोषयति मारुतः ॥
nainaṃ chindanti śastrāṇi nainaṃ dahati pāvakaḥ |
na cainaṃ kledayantyāpo na śoṣayati mārutaḥ ||
Sri Madhvacharya (1238–1317)Bhagavad Gita Tatparya Nirnaya
कारणतोऽपि नेश्वरस्यान्यथात्वमित्याह-नैनं छिन्दन्तीति॥23॥
Swami Sivananda (1887–1963)Bhagavad Gita
23. Weapons cut It not, fire burns It not, water wets It not, wind dries It not.
COMMENTARY: The Self is partless. It is infinite and extremely subtle. So the sword
cannot cut It, fire cannot burn It, wind cannot dry It.
Bannanje Govindacharya (1936–2020)Bhagavad Gita Pravachana
ನ ಏನಮ್ ಛಿಂದಂತಿ ಶಸ್ತ್ರಾಣಿ ನ ಏನಮ್ ದಹತಿ ಪಾವಕಃ |
ನ ಚ ಏನಮ್ ಕ್ಲೇದಯಂತಿ ಅಪಃ ನ ಶೋಷಯತಿ ಮಾರುತಃ -- ಈ ಜೀವನನ್ನು (ಭಗವಂತನನ್ನು)
ಆಯುಧಗಳು ತುಂಡರಿಸವು. ಇವನನ್ನು ಬೆಂಕಿ ಸುಡದು. ಇವನನ್ನು ನೀರು ನೆನೆಸದು, ಗಾಳಿ ಒಣಗಿಸದು.
ಯಾವುದೇ ಒಂದು ವಸ್ತುವನ್ನು ನಾಶಮಾಡಲು ಇರುವ ಮುಖ್ಯ ಅಸ್ತ್ರ ನಾಲ್ಕು. ಮಣ್ಣು(ಘನ ಆಯುಧ), ನೀರು,
ಬೆಂಕಿ ಹಾಗೂ ಗಾಳಿ. ಜೀವ-ಸೂಕ್ಷ್ಮರಲ್ಲಿ ಸೂಕ್ಷ್ಮ. ಶಾಸ್ತ್ರಕಾರರು ಹೇಳುವಂತೆ ಕುದುರೆಯ ಬಾಲದ ಒಂದು
ಕೂದಲಿನ ತುತ್ತ ತುದಿಯನ್ನು ಹತ್ತು ಸಾವಿರ ಭಾಗಗಳಾಗಿ ವಿಂಗಡಿಸಿದರೆ ಸಿಗುವ ಒಂದು ಭಾಗ ಎಷ್ಟು
ಗಾತ್ರದ್ದೋ ಅಷ್ಟು ಗಾತ್ರದಲ್ಲಿರುತ್ತದೆ ಜೀವ. ಇಂತಹ ಜೀವವನ್ನು ಯಾವುದೇ ಆಯುಧ ತುಂಡರಿಸಲು
ಸಾಧ್ಯವಿಲ್ಲ. ಬೆಂಕಿ ಜೀವನನ್ನು ಸುಡಲಾರದು. ನೀರಿನಿಂದ ಜೀವ ಒದ್ದೆಯಾಗದು. ಗಾಳಿ ಜೀವನನ್ನು ಒಣಗಿಸದು.
ಸೂಕ್ಷ್ಮಾತಿ ಸೂಕ್ಷ್ಮವಾದ ಜೀವನನ್ನು ಯಾವ ಆಯುಧವೂ ನಾಶ ಮಾಡಲಾರವು.
ಇಲ್ಲಿ ನಮಗೆ ಇನ್ನೊಂದು ಪ್ರಶ್ನೆ ಮೂಡುತ್ತದೆ. “ಇಂದು ನಾಶ ಮಾಡಲು ಅಸಾಧ್ಯವಾದ ಜೀವ ಎಂದೆಂದೂ
ನಾಶವಾಗದೇ ಇರುತ್ತದೆಯೇ?” ಎಂದು. ಹೌದು ಎನ್ನುತ್ತಾನೆ ಕೃಷ್ಣ ಮುಂದಿನ ಶ್ಲೋಕದಲ್ಲಿ.
Bibek Debroy (1955–2024)The Bhagavad Gita
(23)
‘Weapons cannot cut this.21 Fire cannot burn this. Nor can water wet this.
And the wind cannot dry this.’