देही नित्यमवध्योऽयं देहे सर्वस्य भारत ।
तस्मात्सर्वाणि भूतानि न त्वं शोचितुमर्हसि ॥
dehī nityamavadhyo'yaṃ dehe sarvasya bhārata |
tasmātsarvāṇi bhūtāni na tvaṃ śocitumarhasi ||
Sri Madhvacharya (1238–1317)Bhagavad Gita Tatparya Nirnaya
देही कुतोऽवध्यः? यस्मादयमिश्वरः सर्वस्य जीवस्य सूक्ष्मे स्थूले च देहे रक्षकत्वेनावस्थितः अत
एवावध्यः। न स्वसामर्थ्यः कस्यापि।
द्रव्यं कर्म च कालश्च स्वभावो जीव एव च।
यदनुग्रहतः सन्ति न सन्ति यदुपेक्षया’ इति हि भागवते।
‘तत्र तत्रस्थितो विष्णुर्नित्यं रक्षति नित्यदा।
अनित्यदैवानित्यं च नित्यानित्ये ततस्ततः।
भावाभावनियन्ता हि तदेकः पुरुषोत्तमः’ इति पाद्मे॥30॥
Swami Sivananda (1887–1963)Bhagavad Gita
30. This, the Indweller in the body of everyone, is always indestructible, O Arjuna!
Therefore, thou shouldst not grieve for any creature.
Bannanje Govindacharya (1936–2020)Bhagavad Gita Pravachana
ದೇಹೀ ನಿತ್ಯಮ್ ಅವಧ್ಯಃ ಅಯಮ್ ದೇಹೇ ಸರ್ವಸ್ಯ ಭಾರತ |
ತಸ್ಮಾತ್ ಸರ್ವಾಣಿ ಭೂತಾನಿ ನ ತ್ವಮ್ ಶೋಚಿತುಮ್ ಅರ್ಹಸಿ -- ಓ ಭಾರತಾ, ಎಲ್ಲರ ದೇಹದಲ್ಲೂ ಇರುವ ಈ
ಜೀವ ಎಂದೂ ಕೊಲ್ಲಲಾಗದ್ದು.[ಈ ಜೀವವನ್ನು ಕೊಲ್ಲುವುದು ಎಂದೂ ಸಾಧ್ಯವಿಲ್ಲ. ಏಕೆಂದರೆ ಎಲ್ಲರ ದೇಹದಲ್ಲೂ
ಭಗವಂತ ಜೀವಕ್ಕೆ ಕಾವಲಿದ್ದಾನೆ] ಆದ್ದರಿಂದ ಎಲ್ಲಾ ಜೀವಿಗಳಿಗಾಗಿ ನೀನು ಅಳುವುದು ತರವಲ್ಲ.
ಮೂಲಭೂತವಾಗಿ ಯಾರ ದೇಹದಲ್ಲಿರುವ ಜೀವವನ್ನೂ ಸಾಯಿಸುವುದು ಸಾಧ್ಯವಿಲ್ಲ. ದೇಹ ಸಾಯಬೇಕು
ಎನ್ನುವುದು ವಿಧಿ ನಿಯಮ, ಹಾಗೂ ಅದಕ್ಕಾಗಿ ದುಃಖಪಡಬೇಕಾಗಿಲ್ಲ. ತನ್ನ ಸ್ವಂತ ಇಚ್ಛೆಯಿಂದ ದೇಹ ತ್ಯಜಿಸಲು
ಸಾಧ್ಯವಿಲ್ಲ, ಹಾಗೂ ತ್ಯಜಿಸದೇ ಇರಲೂ ಸಾಧ್ಯವಿಲ್ಲ. "ಅಯಮ್ ದೇಹೇ ಸರ್ವಸ್ಯ ಭಾರತ" - "ರಕ್ಷಣೆ ಮಾಡುವ
ಭಗವಂತ ಒಳಗೆ ಕುಳಿತಿರುವಾಗ ಹುಟ್ಟು ಸಾವಿಗೆ ನೀನು ಹೊಣೆಗಾರನಾಗಲಾರೆ. ಭರತವಂಶದಲ್ಲಿ ಹುಟ್ಟಿ ಬಂದ
ನೀನು ಈ ಸತ್ಯವನ್ನು ಅರಿತುಕೋ" ಎನ್ನುತ್ತಾನೆ ಕೃಷ್ಣ. ಜೀವವೆಂಬ ಬೆಳಕಿನ ಕಿಡಿಯನ್ನು ತಿಳಿದಾಗ, ಅದರ
ಅರಿವು ಬಂದಾಗ-ಹುಟ್ಟು ಸಾವಿನ ಮರ್ಮ ತಿಳಿಯುತ್ತದೆ. ಆಗ ಸಾವು ಒಂದು ಆನಂದದ ಅನುಭವವಾಗುತ್ತದೆ.
ಕೃಷ್ಣನ ಈ ಎಲ್ಲಾ ವಿಶ್ಲೇಷಣೆಯನ್ನು ಕೇಳಿದಾಗ ನಮ್ಮಲ್ಲಿ ಒಂದು ಅಭಿಪ್ರಾಯ ಮೂಡಬಹುದು . "ಕೊಲ್ಲುವುದು
ತಪ್ಪಲ್ಲ, ಏಕೆಂದರೆ ಜೀವಕ್ಕೆ ಸಾವಿಲ್ಲ. ಎಲ್ಲವೂ ದೈವೇಚ್ಛೆ. ಯಾರು ಯಾರನ್ನು ಬೇಕಾದರೂ ಕೊಲ್ಲಬಹುದು”
ಎಂದು. ಆದರೆ ಅದು ಸರಿಯಲ್ಲ. ಏಕೆಂದರೆ ಈವರೆಗೆ ನಾವು ನೋಡಿದ ವಿಷಯ ಕೇವಲ ಬದುಕಿನ ಒಳನೋಟ.
ಸಮಾಜ ಜೀವಿಗಳಾದ ನಾವು ಒಳಗಿನ ಅರಿವನ್ನು ಸಮಾಜದ ವಿರುದ್ಧ ಬಳಸುವುದು ಅಧರ್ಮ. ಶಾಸ್ತ್ರಕ್ಕೆ
ಅನುಗುಣವಾಗಿರುವ ಸಮಾಜ ಧರ್ಮವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಮುಂದಿನ ಶ್ಲೋಕದಲ್ಲಿ ಕೃಷ್ಣ ಈ
ವಿಚಾರವನ್ನು ಅರ್ಜುನನ ಮುಖೇನ ನಮಗೆ ಸ್ಪಷ್ಟಪಡಿಸುತ್ತಾನೆ.
Bibek Debroy (1955–2024)The Bhagavad Gita
(30)
‘O descendant of Bharata!27 In everyone’s body, the atman is indestructible.
Therefore, you should not mourn about any being.’