यदृच्छया चोपपन्नं स्वर्गद्वारमपावृतम् ।
सुखिनः क्षत्रियाः पार्थ लभन्ते युद्धमीदृशम् ॥
yadṛcchayā copapannaṃ svargadvāramapāvṛtam |
sukhinaḥ kṣatriyāḥ pārtha labhante yuddhamīdṛśam ||
Swami Sivananda (1887–1963)Bhagavad Gita
32. Happy are the Kshatriyas, O Arjuna, who are called upon to fight in such a battle that
comes of itself as an open door to heaven!
COMMENTARY: The scriptures declare that if a warrior dies for a righteous cause on the
battlefield he at once ascends to heaven.
Bannanje Govindacharya (1936–2020)Bhagavad Gita Pravachana
ಯದೃಚ್ಛಯಾ ಚ ಉಪಪನ್ನಮ್ ಸ್ವರ್ಗ ದ್ವಾರಮ್ ಅಪಾವೃತಮ್ |
ಸುಖಿನಃ ಕ್ಷತ್ರಿಯಾಃ ಪಾರ್ಥ ಲಭಂತೇ ಯುದ್ಧಮ್ ಈದೃಶಮ್-- ಇಂತಹ ಕಾಳಗವೆಂದರೆ ದೈವೇಚ್ಛೆಯಿಂದ
ಕೂಡಿಬಂದ, ತೆರೆದಿಟ್ಟ ಸ್ವರ್ಗದ ಬಾಗಿಲು. ಪಾರ್ಥಾ, ಭಾಗ್ಯವಂತರಾದ ಕ್ಷತ್ರಿಯರು ಮಾತ್ರವೇ ಇಂತಹ
ಅವಕಾಶ ಪಡೆಯುತ್ತಾರೆ.
ಕಾಲು ಕೆದಕಿ ಯುದ್ಧ ಮಾಡುವುದು ತಪ್ಪು. ಆದರೆ ಇಲ್ಲಿ ಸಮಪ್ಪಿಯಾಗಿ ಬಂದ ಯುದ್ಧದ ಹೊಣೆಗಾರಿಕೆ
ಪಾಂಡವರದ್ದಲ್ಲ. ತನ್ನಷ್ಟಕ್ಕೇ ಬಂದು ಎರಗಿದ ಈ ಯುದ್ಧ ದೈವೇಚ್ಛೆ. ಈಶ್ವರನ ಇಚ್ಛೆಯಂತೆ ಎಲ್ಲವೂ ಆಗುವಾಗ,
ಏನು ಬಂತೋ ಅದನ್ನು ಹಾಗೇ ಸ್ವೀಕರಿಸಬೇಕು. ಅನ್ಯಾಯದ ವಿರುದ್ಧ ಧರ್ಮಯುದ್ಧ ಮಾಡಿದವನಿಗೆ ಸ್ವರ್ಗದ
ಬಾಗಿಲು ಸದಾ ತೆರೆದಿರುತ್ತದೆ. ಇಂತಹ ಯುದ್ಧದ ಅವಕಾಶ ಒಬ್ಬ ಕ್ಷತ್ರಿಯನಿಗೆ ಬರಬೇಕಾದರೆ ಆತ ಪುಣ್ಯ
ಮಾಡಿರಬೇಕು. ಇಂತಹ ಸಮಯದಲ್ಲಿ ಕ್ಷತ್ರಿಯನಾದವನು ಕಣ್ಮುಚ್ಚಿ ಕುಳಿತುಕೊಳ್ಳುವುದು ಮಹಾಪಾಪ.
ಇಲ್ಲಿ ನಮಗೆ ಕೃಷ್ಣ ಅರ್ಜುನನಲ್ಲಿ ಯುದ್ಧಮಾಡು ಎಂದು ಏಕೆ ಹೇಳುತ್ತಿದ್ದಾನೆ ಎನ್ನುವುದು ಸ್ಪಷ್ಟವಾಗಿ
ತಿಳಿಯುತ್ತದೆ. ಪ್ರತಿಯೊಬ್ಬ ಮಾನವನೂ ಸನಾತನಧರ್ಮ, ಅದಕ್ಕನುಗುಣವಾಗಿ ಸಮಾಜಧರ್ಮ ಹಾಗೂ
ಸಮಾಜ ಮತ್ತು ಸನಾತನ ಧರ್ಮಕ್ಕನುಗುಣವಾಗಿ ಸ್ವಧರ್ಮ-ಈ ನೆಲೆಯಲ್ಲಿ ತನ್ನ ಕರ್ತವ್ಯ ನಿರ್ವಹಿಸಬೇಕು. ಈ
ನೆಲೆಯಲ್ಲಿ ಮಾಡಿದ ಯಾವ ಕಾರ್ಯವೂ ಪಾಪ ಕಾರ್ಯವಾಗದು. ಮುಂದಿನ ಶ್ಲೋಕದಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ
ವಿವರವನ್ನು ಕೃಷ್ಣ ಕೊಡುತ್ತಾನೆ. ಸನಾತನಧರ್ಮ, ಸಮಾಜಧರ್ಮ ಮತ್ತು ಸ್ವಧರ್ಮ ಅಂದರೆ ಏನು
ಎನ್ನುವುದನ್ನು ಈಗಾಗಲೇ ಅಧ್ಯಾಯ ಒಂದರಲ್ಲಿ (ಶ್ಲೋಕ-೪೦) ವಿವರವಾಗಿ ವಿಶ್ಲೇಷಿಸಲಾಗಿದೆ.
Bibek Debroy (1955–2024)The Bhagavad Gita
(32)
‘O Partha!29 This war has arrived on its own, like an open door to heaven.
Happy are the kshatriyas who obtain a war like this.’