2.38

सुखदुःखे समे कृत्वा लाभालाभौ जयाजयौ ।
ततो युद्धाय युज्यस्व नैवं पापमवाप्स्यसि ॥
sukhaduḥkhe same kṛtvā lābhālābhau jayājayau |
tato yuddhāya yujyasva naivaṃ pāpamavāpsyasi ||
Swami Sivananda (1887–1963)Bhagavad Gita
38. Having made pleasure and pain, gain and loss, victory and defeat the same, engage thou in battle for the sake of battle; thus thou shalt not incur sin. COMMENTARY: This is the Yoga of equanimity or the doctrine of poise in action. If a person performs actions with the above mental attitude, he will not reap the fruits of such actions.
Bannanje Govindacharya (1936–2020)Bhagavad Gita Pravachana
ಸುಖ ದುಃಖೇ ಸಮೇ ಕೃತ್ವಾ ಲಾಭ ಅಲಾಭೌ ಜಯ ಅಜಯೌ | ತತಃ ಯುದ್ಧಾಯ ಯುಜ್ಯಸ್ವ ನ ಏವಮ್‌ ಪಾಪಮ್‌ ಅವಾಪ್ಸ್ಯಸಿ -- ಸುಖ-ದುಃಖಗಳನ್ನು, ಗಳಿಕೆ-ಇಳಿಕೆಗಳನ್ನು, ಸೋಲು-ಗೆಲುವನ್ನು ಒಂದೇ ನಿಟ್ಟಿನಿಂದ ಕಂಡು ಮತ್ತೆ ಹೋರಾಡತೊಡಗು. ಆಗ ನಿನಗೆ ಯಾವ ಪಾಪವೂ ತಟ್ಟದು. ಜೀವನದಲ್ಲಿ ಸುಖ-ದುಃಖ ಎನ್ನುವುದು ಅನಿವಾರ್ಯ. ಸುಖ-ದುಃಖ, ಗಳಿಕೆ-ಇಳಿಕೆ, ಸೋಲು-ಗೆಲುವು ಎಲ್ಲವನ್ನೂ ಸಮನಾಗಿ ಕಾಣುವವನಿಗೆ ಯಾವ ಪಾಪವೂ ಅಂಟದು. ಎಲ್ಲವನ್ನು ಸಮದೃಷ್ಟಿಯಿಂದ ಕಾಣುತ್ತಾ, ಕೇವಲ ಕರ್ತವ್ಯ ಪ್ರಜ್ಞೆಯಿಂದ ಹೋರಾಟ ಮಾಡುವುದು ಬದುಕಿನ ಯಶಸ್ವಿನ ಸೂತ್ರ. ಜಯಿಸಬೇಕು ಎನ್ನುವ ಸ್ವಾರ್ಥವಿಲ್ಲದೇ; ನಾವೇ ಲಾಭ ಗಳಿಸಬೇಕು-ಅವರು ಮಣ್ಣು ಮುಕ್ಕಲಿ ಎನ್ನುವ ದ್ವೇಷವಿಲ್ಲದೇ, ಎಲ್ಲವೂ ಭಗವಂತನ ಪ್ರಸಾದ ಎನ್ನುವ ಮನೋಭಾವನೆಯಿಂದ ಹೋರಾಡು ಎನ್ನುತ್ತಾನೆ ಕೃಷ್ಣ. ಭಗವಂತನ ಈ ನುಡಿಯನ್ನು ಮನುಷ್ಯ ತನ್ನ ಜೀವನದಲ್ಲಿ ಅಳವಡಿಸಿಕೊಂಡರೆ ಆತ ಎಂದೂ ದುಃಖಿ ಆಗಲಾರ. "ಬಂದದ್ದೆಲ್ಲಾ ಬರಲಿ ಗೋವಿಂದನ ದಯೆಯೊಂದಿರಲಿ" ಎಂದು ಧರ್ಮ ಮಾರ್ಗದಲ್ಲಿ ಮುನ್ನುಗ್ಗುವವನಿಗೆ ಸದಾ ಸ್ವರ್ಗದ ಬಾಗಿಲು ತೆರೆದಿರುತ್ತದೆ. ಆತನಿಗೆ ದುಃಖ-ದುಃಖವಾಗಿ ಕಾಣಲಾರದು, ಸೋಲು-ಸೋಲಾಗಿ ಕಾಣಲಾರದು. ಆತನಿಗೆ ಇಹವೂ-ಸ್ವರ್ಗ ಪರವೂ-ಸ್ವರ್ಗ. ಇಲ್ಲಿಯವರೆಗೆ ಕೃಷ್ಣ ಆತ್ಮತತ್ವದ ಬಗೆಗೆ ಸಾಕಷ್ಟು ವಿವರಣೆಯನ್ನು ಅರ್ಜುನನಿಗೆ ಹೇಳಿದ. ಬದುಕು ಅಂದರೇನು? ಸಾವು ಅಂದರೇನು? ಆತ್ಮ-ಪರಮಾತ್ಮ, ಆ ತತ್ವಗಳ ಅಂತರಂಗದ ರಹಸ್ಯವೇನು? ಇವು ಹೇಗೆ ಯಾವ ಬದಲಾವಣೆಯೂ ಇಲ್ಲದೇ ಅನಾದಿನಿತ್ಯ ಎನ್ನುವುದನ್ನು ವಿವರಿಸಿ, ಯುದ್ಧದ ಅವಶ್ಯಕತೆಯನ್ನು ಹೇಳಿದ. ಇಲ್ಲಿಂದ ಮುಂದೆ ಕೃಷ್ಣ ಸಾಂಖ್ಯದಿಂದ ಕರ್ಮದ ಕಡೆ ತಿರುಗುತ್ತಾನೆ. ನಾವು. ಮನಸ್ಸಿನಲ್ಲಿ ವೇದಾಂತವನ್ನು ಎಷ್ಟು ರೂಢಿಸಿಕೊಂಡರೂ, ತತ್ಕಾಲದ ಮನುಷ್ಯನ ದುಃಖ ಅದಮ್ಯವಾಗಿರುತ್ತದೆ-ಎನ್ನುವುದನ್ನು ಗೀತೆ ಸ್ಪಷ್ಟವಾಗಿ ತಿಳಿಸುತ್ತದೆ. ಭಗವಂತನಿಂದ ಗೀತೆಯ ಉಪದೇಶವನ್ನು ಪಡೆದ ಅರ್ಜುನ, ತನ್ನ ಮಗ ಅಭಿಮನ್ಯು ಯುದ್ಧದಲ್ಲಿ ಸತ್ತಾಗ ಪುನಃ ವಿಚಲಿತನಾಗುವುದನ್ನು ನಾವು ಮಹಾಭಾರತದಲ್ಲಿ ಕಾಣುತ್ತೇವೆ. ಪೂರ್ಣವಾದ ಆತ್ಮಸಾಕ್ಷಾತ್ಕಾರ ಪಡೆಯುವುದು ಅಷ್ಟು ಸುಲಭದ ವಿಷಯವಲ್ಲ. ಆತ್ಮ ಅಜರ-ಅಮರ ಎಂದು ತಿಳಿದರಷ್ಟೇ ಸಾಲದು, ಪೂರ್ಣವಾಗಿ ತಿಳಿಯಬೇಕು. ಅಂತಹ ಸ್ಥಿತಿಯಲ್ಲಿ ಎಲ್ಲಾ ದುಃಖವನ್ನು ಮರೆತು ಇರಬಹುದು. ಆದರೆ ಈ ಆತ್ಮ ತತ್ವವನ್ನು ತಿಳಿಯುವ ಬಗೆ ಹೇಗೆ? ಆತ್ಮದ ಜ್ಞಾನವನ್ನು ಪಡೆಯುವ ಸಾಧನವೇನು? ಕೇಳಿದ ತಕ್ಷಣ ಸಾಕ್ಷಾತ್ಕಾರವಾಗಿ ಮನಸ್ಸಿನಲ್ಲಿ ಗಟ್ಟಿಯಾಗಿ ನಿಲ್ಲುವ ವಿಷಯ ಇದಲ್ಲ. ಅಂದಮೇಲೆ ಮಾನಸಿಕವಾಗಿ ಈ ಉತ್ತುಂಗದ ಸ್ಥಿತಿಯನ್ನು ತಲುಪುವುದು ಹೇಗೆ ಎಂದು ಕೃಷ್ಣ ಮುಂದೆ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(38) ‘Therefore, get ready to fight, looking upon happiness and unhappiness, gain and loss and victory and defeat equally. And sin will not touch you.’