योगस्थः कुरु कर्माणि सङ्गं त्यक्त्वा धनञ्जय ।
सिद्ध्यसिद्ध्योः समो भूत्वा समत्वं योग उच्यते ॥
yogasthaḥ kuru karmāṇi saṅgaṃ tyaktvā dhanañjaya |
siddhyasiddhyoḥ samo bhūtvā samatvaṃ yoga ucyate ||
Sri Madhvacharya (1238–1317)Bhagavad Gita Tatparya Nirnaya
सङ्गं फलस्नेहम्॥48॥
Swami Sivananda (1887–1963)Bhagavad Gita
48. Perform action, O Arjuna, being steadfast in Yoga, abandoning attachment and
balanced in success and failure! Evenness of mind is called Yoga.
Bannanje Govindacharya (1936–2020)Bhagavad Gita Pravachana
ಯೋಗಸ್ಥಃ ಕುರು ಕರ್ಮಾಣಿ ಸಂಗಮ್ ತ್ಯಕ್ತ್ವಾ ಧನಂಜಯ |
ಸಿದ್ದಿ ಅಸಿದ್ಧೋಃ ಸಮಃ ಭೂತ್ವಾ ಸಮತ್ವಂ ಯೋಗಃ ಉಚ್ಯತೇ - ಧನಂಜಯಾ, 'ಯೋಗ' ದಲ್ಲಿ ನೆಲೆಗೊಂಡು
ಕರ್ಮಗಳನ್ನು ಮಾಡು-ಫಲದ ನಂಟನ್ನು ತೊರೆದು, ಕೆಲಸ ಕೈಗೂಡಿದರೂ, ಕೆಟ್ಟರೂ-ಸಮಭಾವದಿಂದಿರು.
ಇಂತಹ ಸಮಭಾವಕ್ಕೆ 'ಯೋಗ'ವೆಂದು ಹೆಸರು.
ಎಂತಹ ಕರ್ಮ ಮಾಡುವುದಾದರೂ ಸಹ ಸುಮ್ಮನೆ ಮಾಡುವುದಲ್ಲ. ಅದರ ಹಿಂದೆ ಒಂದು ಯೋಗವಿರಬೇಕು.
ಭಗವಂತ ಫಲವನ್ನು ಕೊಡತಕ್ಕಂತವ, ನನ್ನಿಂದ ಕರ್ಮವನ್ನು ಮಾಡಿಸತಕ್ಕಂತವನೂ ಅವನೇ. ಏನು ಫಲ,
ಎಷ್ಟು ಫಲ, ಯಾವಾಗ ಫಲ, ಎಲ್ಲವೂ ಅವನಿಗೆ ಸೇರಿದ್ದು. ಸಿಕ್ಕಿದರೂ ಸಂತೋಷ, ಸಿಗದಿದ್ದರೂ ಸಂತೋಷ.
ಇದು ಭೌತಿಕ ಸಮತೋಲನ. ಇಂತಹ ಸಮತೋಲನದಲ್ಲಿ ಕರ್ತವ್ಯ ದೃಷ್ಟಿಯಿಂದ ಕರ್ಮವನ್ನು ಮಾಡಬೇಕು.
ನಮ್ಮ ಬದುಕಿನ ಸಮಸ್ತ ಕರ್ಮದಲ್ಲಿ ಈ ಅನುಸಂಧಾನವಿದ್ದಾಗ ಅದು ಭಗವಂತನ ಪೂಜೆಯಾಗುತ್ತದೆ. ಇದೇ
ಕರ್ಮಯೋಗ.
ಸಿದ್ದಿ-ಅಸಿದ್ದಿಯನ್ನು ಸಮಭಾವದಿಂದ ಕಾಣುವುದು ಮನಸ್ಸಿನ ಯೋಗ. ಇದೊಂದು ಮಾನಸಿಕ ಸ್ಥಿತಿ. ಈ ರೀತಿಯ
ಯೋಗ ಭಾವನೆಯಿಂದ ಕರ್ಮ ಮಾಡಿದರೆ-ಫಲ ಬಂದಾಗ ಹೆಗ್ಗಳಿಕೆ ಇರುವುದಿಲ್ಲ, ಬಾರದೇ ಇದ್ದಾಗ
ದುಃಖವಿರುವುದಿಲ್ಲ. ಹೀಗೆ ಸಿದ್ಧಿ-ಅಸಿದ್ದಿಗಳ ಸಮತ್ವದಿಂದ ಮಾಡುವ ಪ್ರತಿಯೊಂದು ಕರ್ತವ್ಯವೂ ಕೂಡಾ
ಭಗವಂತನ ಪೂಜೆಯಾಗುತ್ತದೆ. ಈ ಅನುಸಂಧಾನವಿಲ್ಲದೆ ಮಾಡುವ ಮಹಾಯಜ್ಞ ಕೂಡಾ ಪೂಜೆ ಆಗಲಾರದು.
ಭಗವಂತ ನನ್ನಿಂದ ಈ ಕೆಲಸವನ್ನು ಮಾಡಿಸಿದ. ಇದು ಭಗವಂತನ ಪೂಜಾರೂಪವಾಗಿ ಅರ್ಪಿತವಾಗಲಿ ಎನ್ನುವ
ಅನುಸಂಧಾನವಿದ್ದಾಗ ಮಾತ್ರ ಕರ್ಮ-ಯೋಗವಾಗುತ್ತದೆ. ನಮ್ಮ ಮನಸ್ಸು ಭಗವಂತನಲ್ಲಿ ಸಂಯೋಗ
ಹೊಂದುವುದೇ ಯೋಗ. ಈ ಅನುಸಂಧಾನಕ್ಕೆ ಪೂರಕವಾದ ಮತ್ತು ಅನುಸಂಧಾನಪೂರ್ವಕವಾದ ಎಲ್ಲಾ
ಕರ್ಮವೂ ಕರ್ಮಯೋಗ.
Bibek Debroy (1955–2024)The Bhagavad Gita
(48)
‘O Dhananjaya!45 Perform action by resorting to yoga.46 Give up
attachment. Look upon success, and failure equally. This equal attitude is
known as yoga.’