दूरेण ह्यवरं कर्म बुद्धियोगाद्धनञ्जय ।
बुद्धौ शरणमन्विच्छ कृपणाः फलहेतवः ॥
dūreṇa hyavaraṃ karma buddhiyogāddhanañjaya |
buddhau śaraṇamanviccha kṛpaṇāḥ phalahetavaḥ ||
Sri Madhvacharya (1238–1317)Bhagavad Gita Tatparya Nirnaya
बुद्धौ जातायामपि विष्णुमेव शरणमन्विच्च -
‘अज्ञानां ज्ञानिनां चैव मुक्तानां शरणं हरिः।
तं ये स्वैक्येन मन्यन्ते सर्वभिन्नं गुणोच्छ्रयात्।
कृपणास्ते तमस्यन्धे निपतन्ति न संशयः।
न तेषामुत्थितिः क्वापि नित्यातिशयदुःखिनाम्।
गुणभेदविदां विष्णोर्भेदाभेदविदामपि।
देहकर्मादिषु तथा प्रादुर्भावादिकेऽपि वा।
स्वोद्रिक्तानां तदीयानां निन्दां कुर्वन्ति योऽपि च।
सर्वेषामपि चैतेषां गतिरेषा न संशयः’ इति नारदीये॥49॥
Swami Sivananda (1887–1963)Bhagavad Gita
49. Far lower than the Yoga of wisdom is action, O Arjuna! Seek thou refuge in wisdom;
wretched are they whose motive is the fruit.
COMMENTARY: Actions done with evenness of mind is the Yoga of wisdom. Actions
performed by one who expects their fruits are far inferior to the Yoga of wisdom wherein the seeker
does not seek the fruits. The former leads to bondage, and is the cause of birth and death.
Bannanje Govindacharya (1936–2020)Bhagavad Gita Pravachana
ದೂರೇಣ ಹಿ ಅವರಮ್ ಕರ್ಮ ಬುದ್ಧಿಯೋಗಾತ್ ಧನಂಜಯ |
ಬುದೌ ಶರಣಮ್ ಅನ್ವಿಚ್ಛ ಕೃಪಣಾಃ ಫಲಹೇತವಃ -- ಧನಂಜಯಾ, ಅರಿವಿನ ದಾರಿಗಿಂತ ಕರ್ಮದ ದಾರಿ ತುಂಬಾ
ಕೀಳು. ಅದರಿಂದ ಅರಿವಿನಲ್ಲಿ ನೆಲೆನಿಲ್ಲು.[ಅರಿವು ಬಂದ ಮೇಲೂ ಹರಿಗೆ ಶರಣಾಗು]. ಫಲವನ್ನೇ ನಂಬಿ
ನಿಂತವರು ಮರುಕಪಡಬೇಕಾದವರು.
ಪ್ರಪಂಚದಲ್ಲಿ ಕೆಲವರು ಕರ್ಮಯೋಗಿಗಳು, ಇನ್ನು ಕೆಲವರು ಜ್ಞಾನಯೋಗಿಗಳು. ಕರ್ಮಯೋಗಿಗಳಿಗೆ ಜ್ಞಾನವಿಲ್ಲ,
ಹಾಗೂ ಜ್ಞಾನ ಬಂದ ಮೇಲೆ ಕರ್ಮ ಬೇಕಿಲ್ಲ ಎನ್ನುವ ಚಿಂತನೆ ಕೆಲವರದು. ಕೆಲವರು ಕರ್ಮ ಮೇಲೆನ್ನುತ್ತಾರೆ
ಮತ್ತೆ ಕೆಲವರು ಜ್ಞಾನ ಮೇಲು ಎನ್ನುತ್ತಾರೆ. ಇನ್ನು ಕೆಲವರು ಕರ್ಮ ಮತ್ತು ಜ್ಞಾನ- “ಎರಡು ಚಕ್ರಗಳಂತೆ'
ಸಮಾನ ಎಂದು ವಾದ ಮಾಡುತ್ತಾರೆ. ಇದರಿಂದ ಅನೇಕ ದ್ವಂದ್ವಗಳು ಹುಟ್ಟಿಕೊಳ್ಳುತ್ತವೆ. ಆದರೆ ಕೃಷ್ಣ ಇಲ್ಲಿ
ಸ್ಪಷ್ಟವಾಗಿ ಹೇಳುತ್ತಾನೆ: ಜ್ಞಾನದ ಮುಂದೆ ಕರ್ಮ ಬಹಳ ದೂರ ಎಂದು. ಕರ್ಮ ಮಾಡುವಾಗ ಜ್ಞಾನ ಅತಿಮುಖ್ಯ.
ಜ್ಞಾನಕ್ಕೋಸ್ಕರ ಕರ್ಮವಿರುವುದೇ ಹೊರತು ಅದು ಜ್ಞಾನಕ್ಕೆ ಸಮಾನ ಅಲ್ಲ. ಅದಕ್ಕಾಗಿ ಜ್ಞಾನಕ್ಕೆ ಶರಣಾಗಿ
ಜ್ಞಾನಕ್ಕೆ ಪೂರಕವಾದ ಕರ್ಮ ಮಾಡಬೇಕು. ಜ್ಞಾನವಿಲ್ಲದೆ, ಫಲಾಪೇಕ್ಷೆಯಿಂದ ಕರ್ಮ ಮಾಡುವರ ಸ್ಥಿತಿ
ಶೋಚನೀಯ. ಇವರು ಕರ್ಮದ ಮರ್ಮವನ್ನು ತಿಳಿಯದೇ ಕರ್ಮ ಮಾಡಿ ಒದ್ದಾಡುತ್ತಿರುತ್ತಾರೆ.
ಜ್ಞಾನದ ಮಾರ್ಗದಲ್ಲಿ ಎತ್ತರಕ್ಕೇರಲು ನಾವು ಕರ್ಮವನ್ನು ಮಾಡಬೇಕು. ಇದರಿಂದ ಭಗವಂತನ
ಸಾಕ್ಷಾತ್ಕಾರವಾಗುತ್ತದೆ. ಈ ಸ್ಥಿತಿಯಲ್ಲಿ ಅಹಂಕಾರ ಪಡದೆ, ಭಗವಂತನೇ ನನ್ನ ರಕ್ಷಕ ಹಾಗೂ ಆತನೇ ನನ್ನ
ನೆಲೆ ಎಂದು ತಿಳಿದು ಆತನಲ್ಲಿ ಶರಣಾಗಬೇಕು. ದೇವರಿಗೆ ನಾನು ನನ್ನನ್ನು ಅರ್ಪಿಸಿಕೊಂಡಿದ್ದೇನೆ, ಆತ ನನ್ನನ್ನು
ರಕ್ಷಿಸಿಯೇ ರಕ್ಷಿಸುತ್ತಾನೆ ಎನ್ನುವ ಮನವರಿಕೆ (conviction) ಶರಣಾಗತಿ.
ನಮಗೆ ಏನಾದರೂ ಸಮಸ್ಯೆ ಬಂದಾಗ ಭಗವಂತನ ಹತ್ತಿರ ಪ್ರಾರ್ಥಿಸಿಕೊಳ್ಳಬೇಕೇ ಹೊರತು ಅನ್ಯರನ್ನಲ್ಲ. "ಓ
ಭಗವಂತಾ, ನನ್ನನ್ನು ಏಕೆ ಈ ಸಮಸ್ಯೆಯಲ್ಲಿ ಸಿಲುಕಿಸಿದಿ? ಇದಕ್ಕೆ ಪರಿಹಾರವನ್ನು ತೋರಿಸು ತಂದೆ" ಎಂದು
ಮನಃಪೂರ್ವಕವಾಗಿ ಕೇಳಿಕೊಂಡರೆ ಖಂಡಿತ ಆತ ನಮ್ಮನ್ನು ಸಂಕಟದಿಂದ ಪಾರು ಮಾಡುತ್ತಾನೆ. ಆದರೆ ಇಲ್ಲಿ
ಕೂಡಾ ಫಲದ ಅಧಿಕಾರ ಸಾಧಿಸದೆ, ಕೇವಲ ಭಗವಂತನನ್ನು ನಂಬಿ, ನಮ್ಮ ಎಲ್ಲಾ ಸಮಸ್ಯೆಗಳ ನಡುವೆಯೂ
ನಿಶ್ಚಿಂತೆಯಿಂದ ಬದುಕಲು ಕಲಿಯಬೇಕು.
ಮುಂದಿನ ಶ್ಲೋಕವನ್ನು ನೋಡುವ ಮೊದಲು ಇಲ್ಲಿ ಬಂದಿರುವ ಧನಂಜಯ ಎನ್ನುವ ನಾಮವಿಶೇಷಣದ
ಅರ್ಥವನ್ನು ತಿಳಿಯೋಣ. ಈ ಸಂಬೋಧನೆಗೆ ಎರಡು ಅರ್ಥವಿದೆ. ಒಂದು ಲೌಕಿಕ ಹಾಗೂ ಇನ್ನೊಂದು
ಆಧ್ಯಾತ್ಮಿಕ ಅರ್ಥ. ಲೌಕಿಕವಾಗಿ ನೋಡಿದರೆ ಅರ್ಜುನ ಅನೇಕ ಕಡೆ ಯುದ್ಧ ಮಾಡಿ, ದೇಶದ ಸೀಮೆಯನ್ನು
ವಿಸ್ತರಿಸಿ, ರಾಜಕೋಶದ ಸಂಪತ್ತನ್ನು ವೃದ್ಧಿ ಮಾಡಿದವ-ಆದ್ದರಿಂದ ಆತ ಧನಂಜಯ. ಆಧ್ಯಾತ್ಮಿಕವಾಗಿ
ನೋಡಿದರೆ ಈ ನಾಮಕ್ಕೆ ವಿಶೇಷ ಅರ್ಥವಿದೆ. ಭಗವಂತನ ಆರಾಧನೆ, ಅಧ್ಯಾತ್ಮದ ಅರಿವು-ನಿಜವಾದ ಧನ.
ಭಗವಂತನ ಅರಿವು, ಜ್ಞಾನ ಎಲ್ಲಕ್ಕೆಂತ ದೊಡ್ಡ ಸಂಪತ್ತು. ಅರ್ಜುನ ಆ ಕಾಲದ ಅಪರೋಕ್ಷ ಜ್ಞಾನಿ. ಆತ ಸ್ವಯಂ
ಇಂದ್ರ. ಆತ ಜ್ಞಾನದ ಸಂಪತ್ತಿನ ಪರಾಕಾಷ್ಠೆ. 'ಇಂತಹ ಜ್ಞಾನಿಯಾದ ನೀನು ಭಗವಂತನಿಗೆ ಶರಣಾಗಿ,
ಬುದ್ಧಿಪೂರ್ವಕವಾಗಿ ಕರ್ಮಮಾಡು' ಎನ್ನುವ ಅರ್ಥದಲ್ಲಿ ಕೃಷ್ಣ ಈ ಸಂಬೋಧನೆ ಮಾಡಿದ್ದಾನೆ.
Bibek Debroy (1955–2024)The Bhagavad Gita
(49)
‘O Dhananjaya!47 Action is far inferior to the yoga of wisdom.48 Seek
refuge in this wisdom. Pitiable are those who crave after the fruit.’