2.55

श्रीभगवानुवाच ।
प्रजहाति यदा कामान्सर्वान्पार्थ मनोगतान् ।
आत्मन्येवात्मना तुष्टः स्थितप्रज्ञस्तदोच्यते ॥
śrībhagavānuvāca |
prajahāti yadā kāmānsarvānpārtha manogatān |
ātmanyevātmanā tuṣṭaḥ sthitaprajñastadocyate ||
Sri Madhvacharya (1238–1317)Bhagavad Gita Tatparya Nirnaya
‘सर्वकामनिवृत्तिस्तु जानतो न कथञ्चन। अनिषिद्धकामितैवातो ह्यकामित्वमितीर्यते। अपरोक्षदृशोऽपि स्याद्यदा नास्त्य परोक्षधृक्। क्वचिद्विरुद्धकामोऽपि यथाऽयुध्यद्धरो हरिम्। अतोऽनभिभवो यावद्दृशस्तावन्निगद्यते। स्थितप्रज्ञस्तथाऽप्यस्य कदाचित्क्यपि या दृशिः। नियमेनैव मोक्षाय भवेद्योग्या भवेद्यदि। अयोग्या भक्तिजाता चेत् क्रमान्मुक्तैर्भवेत् तथा’ इति च। आत्मनि - विष्णौ, आत्मना - विष्णुना। तत्प्रसादादेव तुष्टः॥55॥
Swami Sivananda (1887–1963)Bhagavad Gita
55. When a man completely casts off, O Arjuna, all the desires of the mind and is satisfied in the Self by the Self, then is he said to be one of steady wisdom! COMMENTARY: All the pleasures of the world are worthless to an illumined sage who is ever content in the immortal Self.
Bannanje Govindacharya (1936–2020)Bhagavad Gita Pravachana
ಭಗವಾನುವಾಚ -ಭಗವಂತ ಹೇಳಿದನು: ಪ್ರಜಹಾತಿ ಯದಾ ಕಾಮಾನ್‌ ಸರ್ವಾನ್‌ ಪಾರ್ಥ ಮನಃಗತಾನ್‌ | ಆತ್ಮನಿ ಏವ ಆತ್ಮನಾ ತುಷ್ಟಃ ಸ್ಥಿತಪ್ರಜ್ಞಃ ತದಾ ಉಚ್ಯತೇ- -ಪಾರ್ಥಾ, ಮನದಲ್ಲಿ ಮನೆಮಾಡಿದ ಎಲ್ಲಾ ಬಯಕೆಗಳನ್ನು ತೊರೆದಾಗ, ಪರಮಾತ್ಮನಲ್ಲೇ ನೆಲೆನಿಂತು, ಪರಮಾತ್ಮನ ಹಸಾದದಿಂದ ತಣಿದು ನಲಿದಾಗ BTR ಎನಿಸುತ್ತಾನೆ. ಕೃಷ್ಣ ನೇರವಾಗಿ ಸ್ಥಿತಪ್ರಜ್ಞನ ನಡೆ-ನುಡಿಗಳ ಬಗ್ಗೆ ಹೇಳದೇ, ಆತ ಹೇಗಿರುತ್ತಾನೆ ಎನ್ನುವುದನ್ನು ಇಲ್ಲಿ ಮೊದಲು ವಿವರಿಸುತ್ತಾನೆ. ನಿಜವಾದ ಸ್ಥಿತಪ್ರಜ್ಞನಿಗೆ ಮೂಲಭೂತವಾಗಿ ಯಾವ ಬಯಕೆಯೂ ಕಾಡುವುದಿಲ್ಲ (ಇಲ್ಲಿ ಬಯಕೆ ಎಂದರೆ ಮನುಷ್ಯನನ್ನು ದಾರಿ ತಪ್ಪಿಸುವ ಕೆಟ್ಟ ಕಾಮನೆಗಳು). ಆತ ಇಂತಹ ಎಲ್ಲಾ ಕ್ಷುದ್ರ ಕಾಮನೆಗಳನ್ನು ತೊರೆದು... ತನ್ನೊಳಗಿರುವ. ಜ್ಞಾನಾನಂದಮಯನಾದ ಭಗವಂತನನ್ನು ಕಾಣುತ್ತಾ. ಸದಾ ಸಂತೋಷವಾಗಿರುತ್ತಾನೆ. ಮನುಷ್ಯನ ದುಃಖಕ್ಕೆ ಮೂಲ ಕಾರಣ ಆತನ ಕ್ಷುದ್ರ ಬಯಕೆಗಳು. ತನ್ನ ಬಯಕೆ ಈಡೇರದೇ ಇದ್ದಾಗ ದುಃಖ- ಕೋಪ ಇತ್ಯಾದಿ ಆರಂಭವಾಗುತ್ತದೆ. ಇದರಿಂದ ಆತ ತನ್ನ ಜೀವನವನ್ನು ನರಕವನ್ನಾಗಿ ಮಾಡಿಕೊಳ್ಳುತ್ತಾನೆ. ಇಂತಹ ಸ್ಥಿತಿಯಲ್ಲಿ ಆತನಿಗೆ ತನ್ನೊಳಗಿರುವ ಆ ಅಪೂರ್ವ ಶಕ್ತಿಯ ಬಗ್ಗೆ ಅರಿವಿರುವುದಿಲ್ಲ. ಸ್ಥಿತಪ್ರಜ್ಞನಾದವನು ಈ ಜಂಜಾಟದಲ್ಲಿ ಸಿಲುಕದೇ, ತನ್ನಂತರಂಗದಲ್ಲಿನ ಆ ಮಹದಾನಂದವನ್ನು ಸದಾ ಸವಿಯುತ್ತಾ ಸಂತೋಷವಾಗಿರುತ್ತಾನೆ. ಆತ ಕಾಮನೆಗಳಿಗೆ ಬೆಂಬೀಳುವುದಿಲ್ಲ. ಬೇಕು ಎನ್ನುವ ಬಯಕೆ ಆತನನ್ನು ಕಾಡುವುದಿಲ್ಲ. ಆತನ ಮನಸ್ಸು ಸದಾ ಪ್ರಸನ್ನವಾಗಿರುತ್ತದೆ. ಜೀವನದಲ್ಲಿ ಎಂತಹ ಸಮಸ್ಯೆ ಬಂದರೂ ಆತ ಎಂದೂ ಉದ್ವೇಗಕ್ಕೆ (Tension or Stress) ಒಳಗಾಗುವುದಿಲ್ಲ. ಆತನ ಮನಸ್ಸು ಗಟ್ಟಿಯಾಗಿರುತ್ತದೆ ಮತ್ತು ಇದರಿಂದಾಗಿ ಆತ ಯಶಸ್ಸನ್ನು ಕಾಣಬಲ್ಲ. ಇಲ್ಲಿ ಕೃಷ್ಣ ಅರ್ಜುನನನ್ನು 'ಪಾರ್ಥ' ಎಂದು ಸಂಬೋಧಿಸಿದ್ದಾನೆ. ಪಾರ್ಥ ಎಂದರೆ ಪಾರ-ತೀರ-ಗಮನೆ, ಅಂದರೆ ಸತ್ಯದ, ಸಾಧನೆಯ ಕಡಲನ್ನು ದಾಟಿದವ. “ಸಾಧನೆಯ ಕಡಲನ್ನು ದಾಟಿದ ನಿನಗೆ ಇದು ಸ್ಪಷ್ಟವಾಗಿ ತಿಳಿಯಬೇಕು” ಎನ್ನುವ ಅರ್ಥದಲ್ಲಿ ಇಲ್ಲಿ ಈ ಸಂಬೋಧನೆ ಇದೆ. ಮುಂದೆ ಬರುವ ಮೂರು ಶ್ಲೋಕಗಳಲ್ಲಿ ಕೃಷ್ಣ ಕಾಮನೆಗಳನ್ನು ಬಿಡುವುದು ಅಂದರೆ ಏನು ಹಾಗೂ ಹೇಗೆ? ಎನ್ನುವುದನ್ನು ವಿವರಿಸುತ್ತಾನೆ.
Bibek Debroy (1955–2024)The Bhagavad Gita
(55) Krishna said: ‘O Partha!52 A person is said to be unwavering in intellect when he banishes all desires from his mind. He is content within his own atman.’