अर्जुन उवाच ।
ज्यायसी चेत्कर्मणस्ते मता बुद्धिर्जनार्दन ।
तत्किं कर्मणि घोरे मां नियोजयसि केशव ॥
arjuna uvāca |
jyāyasī cetkarmaṇaste matā buddhirjanārdana |
tatkiṃ karmaṇi ghore māṃ niyojayasi keśava ||
Swami Sivananda (1887–1963)Bhagavad Gita
1. If it be thought by Thee that knowledge is superior to action, O Krishna, why then, O
Kesava, dost Thou ask me to engage in this terrible action?
Sri Vishwesha Tirtharu (1931–2019)Gitasaroddhara
ಮತ್ತೇಕೆ ಕರ್ಮದ ಜಂಜಾಟ
ಮತ್ತೆ ಕೆಕರ್ಮದ ಜಂಜಾಟ
ಶ್ರೀಕೃಷ್ಣನ ಈವರೆಗಿನ ಉಪದೇಶವನ್ನು ಕೇಳಿದನಂತರ ಅವನ ಮಾತುಗಳಲ್ಲಿ
ಕೆಲವಿರೋಧಾಭಾಸಗಳು ಅರ್ಜುನನಿಗೆ ಗೋಚರವಾದವು.
ದೂರೇಣ ಹೃವರಂ ಕರ್ಮ
ಬುದ್ಧಿಯೋಗಾತ್....!
| ಮುಂತಾದ ಮಾತುಗಳಿಂದ ಜ್ಞಾನಕ್ಕಿಂತ ಕರ್ಮವು ನಿಕೃಷ್ಟವೆಂದು ಸ್ವಾಮಿಯು
ಹೇಳಿದ್ದಾನೆ. ಹೀಗಿದ್ದರೂ
.. ಮಾತೇ: ಸಂಗೋಸ್ತ ಆ5ರ್ಮಣಿ [
ಯೋಗಸ್ಥಃ ಕುರು ಕರ್ಮಾಣಿ....!!
ಎಂದು ಮುತಾಗಿ ಕರ್ಮಗಳನ್ನು ಅವಶ್ಯವಾಗಿ ಆಚರಿಸಬೇಕೆಂದೂ ಹೇಳಿರುವನು.
ಜ್ಞಾನವೇ ಶ್ರೇಷ್ಠವೆನ್ನುವುದಾದರೆ, ಆ ಜ್ಞಾನಯೋಗದ ಮಾರ್ಗದಲ್ಲೇ ಏಕೆ
ನಡೆಯಬಾರದು? ಈ ಕರ್ಮ ಯೋಗದ ಜಂಜಾಟವೇಕೆ? ಎಂಬಸಂದೇಹವು
ಸಹಜವಾಗಿ ಮೂಡುವುದು. `' ಒಂದೆಡೆ ಜ್ಞಾನವು ಶ್ರೇಷ್ಠವೆನ್ನುವುದು; ಇನ್ನೊಮ್ಮೆ
ಕರ್ಮವನ್ನು ಆಚರಿಸಲೇಬೇಕೆಂದು ಹೇಳುವದು. ಈ ವ್ಯಾಮಿಶ್ರಗಳಾದ
ಮಾತುಗಳಿಂದ ನನ್ನ ಬುದ್ಧಿಯನ್ನೇ ವ್ಯಾಮೋಹಗೊಳಿಸುತ್ತಿರುವೆ. ಇಂತಹ
ಮೋಹಕ್ಕೆ ಅವಕಾಶವಾಗದಂತಹ ನಿಶ್ಚಿತ ಜ್ಞಾನವನ್ನು ನನಗೆ ನೀಡು'' ಎಂದು
ಅರ್ಜುನನು ಪ್ರಶ್ನಿಸುತ್ತಾನೆ.
'"ಕರ್ಮವು ನಿಕಪ್ಪವೆಂದು ಬೋಧಿಸುವಾಗ ಕೃಷ್ಣನ ಮನಸ್ಸಿನಲ್ಲಿ
ಕಾಮ್ಯಕರ್ಮಗಳನ್ನು ನಿಷೇಧಿಸುವುದಿತ್ತು; ನಿಷ್ಠಾಮವಾಗಿ ಕರ್ತವ್ಯಗಳನ್ನು
ನಡೆಸಬೇಕೆಂಬುದೇ ಕೃಷ್ಣನ ಆಂತರ್ಯ'' ಎಂದಿಟ್ಟುಕೊಂಡರೂ ಈ ಪ್ರಶ್ನೆ
ಇಲ್ಲಿಗೇ ಬಗೆಹರಿಯುವುದಿಲ್ಲ. ನಿಷ್ಕಾಮಕರ್ಮವನ್ನು ಆಚರಿಸಬೇಕೆಂದಿದ್ದರೆ
ಯುದ್ಧವನ್ನೇ ಆರಂಭಿಸಬೇಕೆ? ಯುದ್ಧದ ಹೊರತು ಬೇರೆ ಅನೇಕ ವಿಧದ
ನಿಷ್ಕಾಮಕರ್ಮಗಳು ಇವೆ. ಶಮದಮಾದಿರೂಪಗಳಾದ ಯತಿಧರ್ಮಗಳು
ಎಂದೆಂದಿಗೂ ನಿಷ್ಕಮಕರ್ಮಗಳೇ. ಉಳಿದ ಧರ್ಮಗಳು ಅವರವರಮನಸ್ಸಿಗೆ
ಅನುಸಾರವಾಗಿ ಕೆಲವೊಮ್ಮೆ ಸಕಾಮಗಳೂ ಕೆಲಮೊಮ್ಮೆ ನಿಷ್ಕುಮಗಳೂ
ಆಗಬಲ್ಲವು. ಯಜ್ಞಯಾಗಾದಿಗಳನ್ನು ಕಾಮನೆಯಿಂದಲೂ ಅದನ್ನು ತೊರೆದೂ
ಮಾಡಬಹುದು. ಆದರೆ ಯತಿಧರ್ಮವನ್ನು ಆಚರಿಸುವಾಗ ಅಲ್ಲಿ ಕಾಮನೆಗೆ
ಪ್ರವೇಶವೇ ಇರುವುದಿಲ್ಲ. ಉಳಿದ ಧರ್ಮಗಳು ವೈಕಲ್ಪಿಕವಾಗಿ ಅಕಾಮ್ಯಗಳಾಗಿ
ದ್ದರೆ ಯತಿಧರ್ಮವು ಕೇವಲ ನಿಷ್ಕುಮಧರ್ಮವಾಗಿರುವುದು. ಇಂತಹ
ಯತಿಧರ್ಮವನ್ನು ಬಿಟ್ಟು ಕಾಮನೆಗಳು ಬಂದು ಇಣಿಕಿ ನೋಡಲು
ಸಂದರ್ಭವಿರುವ ಉಳಿದ ಕರ್ತವ್ಯಗಳನ್ನು ಯಾಕೆ ಮಾಡಬೇಕು? ಅದರಲ್ಲೂ
ಯುದ್ಧವನ್ನಂತು ನಿಷ್ಕುಮನೆಯಿಂದ ಮಾಡಲು ಸಾಧ್ಯವೇಇಲ್ಲ. ಈ ಯುದ್ಧದಲ್ಲಿ
ಮೊದಲಿಂದ ಕೊನೆಯವರೆಗೂ ಹೊಡೆಯುವುದು, ಕೊಲ್ಲುವುದು ಮುಂತಾದ
ಭೀಷಣ ಹಿಂಸಾಕೃತ್ಯಗಳೇ ಇರುವವು. ರಾಗದ್ವೇಷಗಳಿಲ್ಲದೆ ಈ ಘೋರಕ್ಕತ್ತವನ್ನು
ನಡೆಸಲು ಸಾಧ್ಯವೆ? ನಿಷ್ಕಾಮನೆಯಿಂದ ಯುದ್ಧವನ್ನು ಆಚರಿಸುವುದೆಂದರೆ
ಕಲ್ಲಿದ್ದಲುಗಣಿಯಲ್ಲಿ ಕೆಲಸ ಮಾಡಿ ಕೈಗೆ ಮಸಿ ಅಂಟಬಾರದೆಂದು ಅಂದು
ಕೊಂಡಂತೆ ಅವ್ಯವಹಾರ್ಯವಿರುವುದು. ಕಾಮನೆಯ ಸೋಂಕೂ ಇಲ್ಲದೆ
ಮಾಡಲುಸಾಧ್ಯವಿರುವ ಅನೇಕ ರೀತಿಯ ಸತ್ಯರ್ಮಗಳು ಇರುವಾಗ ಕ್ಷಣಕ್ಷಣ
ಗಳಲ್ಲಿ ಕೋಪ, ತಾಪಗಳಿಗೆ ಎಡೆಯಿರುವ ಈ ಭೀಕರ ಕೃತ್ಯದಲ್ಲಿ ತಾನು ಯಾಕೆ
ತೊಡಗಬೇಕು? ಸಂನ್ಯಾಸವೃತ್ತಿಯನ್ನೇತಾನು ಆಚರಿಸುವುದು ಮೇಲಲ್ಲವೆ? -
ಎಂದು ಅರ್ಜುನನಿಗೆನಾನಾ ಪ್ರಶ್ನೆಗಳು ತಲೆಯೆತ್ತುವವು. ಆದುದರಿಂದಲೇ-
ತತ್ ಕಿಂಕರ್ಮಣಿ ಘೋರೇ ಮಾಂ
ನಿಯೋಜಯಸಿ.... |
"ಘೋರವಾದ ಯುದ್ಧದ ಕಡೆಗೆ ನನ್ನನ್ನು ಯಾಕೆ ಪ್ರಚೋದಿಸುವೆ?''
ಎಂದು ಸ್ವಾಮಿ ಯನ್ನು ಕೇಳುವನು.
ಒಟ್ಟು ಅರ್ಜುನನು ಇಲ್ಲಿ ಎರಡು ಪ್ರಶ್ನೆಗಳನ್ನು ಪ್ರಸ್ತುತಪಡಿಸುವನು: (೧)
ಕರ್ಮಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ. ಆದುದರಿಂದ ಕರ್ಮಯೋಗ ಹಾಗೂ
ಜ್ಞಾನಯೋಗಗಳಲ್ಲಿ ಜ್ಞಾನಯೋಗವನ್ನೇ ಆರಿಸಿಕೊಂಡು ಕರ್ಮವನ್ನುತ್ಯಾಗ
ಮಾಡಬಹುದಲ್ಲವೆ? (೨) ಕರ್ಮವನ್ನು ಮಾಡುವುದಾದರೂ ನಿಷ್ಕಾಮ
ನಿರಪಾಯಗಳಾದ ಯತಿಧರ್ಮಗಳು ಇರುವಾಗ ಈ ಯುದ್ಧವನ್ನೇ ಏಕೆ
ಆಚರಿಸಬೇಕು?
3.1–3.35 · ಸ್ವಧರ್ಮೇ ನಿಧನಂ ಶ್ರೇಯಃ
ಸ್ವಧರ್ಮೇ ನಿಧನಂಶ್ರೇಯಃ
ಇನ್ನು ಅರ್ಜುನನ
ತತ್ಮಿಂ ಕಮ ಣಿ ಘೋರೇಮಾಂ
ನಿಯೋಜಯಸಿ.... ।
ಎಂಬ ಪ್ರಶ್ನೆ ಉಳಿದಿದೆ. ಕರ್ಮದ ಪ್ರಮಾಣವು ಕಡಿಮೆಯಾಗಿರುವ
ಸನಕಾದಿಗಳ ಜ್ಞಾನಯೋಗದ ಮಾರ್ಗವಿರುವಾಗ ಯುದ್ಧದ ಈ ಕಠೋರ
ಮಾರ್ಗವನ್ನು ಯಾಕೆತಾನು ಆರಿಸಬೇಕು? ಅರಣ್ಯದಲ್ಲಿ ಶಾಂತನಾಗಿದ್ದು ಜಪ,
ತಪಸ್ಸು ಮುಂತಾದ ಕರ್ಮಗಳನ್ನು ಆಚರಿಸಿಕೊಂಡು ಹಾಯಾಗಿ ಯಾಕೆ
ಇರಬಾರದು ಎಂದು ಅರ್ಜುನನು ಮಾಡಿದ ಪ್ರಶ್ನೆಗೆ ಉತ್ತರ ಕೊಡುವುದು
ಉಳಿದಿದೆ.
ಇದಕ್ಕೆ ಗೀತೆಯ ಸಮಾಧಾನವು ಹೀಗಿದೆ : ಪ್ರತಿಯೊಬ್ಬನಿಗೂ ಅನೇಕ
ಕರ್ತವ್ಯಮಾರ್ಗಗಳು ತೋರಬಹುದು. ಅವುಗಳಲ್ಲಿ ಯಾವುದು ತನ್ನ ಸ್ವಧರ್ಮ
ವೆಂಬುದನ್ನು ಅರಿತುಕೊಂಡು ಆ ಮಾರ್ಗದಲ್ಲಿ ನಡೆಯುವುದರಲ್ಲೇ ಅವನ
ಪುರುಷಾರ್ಥ ಅಡಗಿದೆ. ವ್ಯಕ್ತಿಯ ಸ್ವರೂಪ, ಯೋಗ್ಯತೆಯನ್ನು ಅನುಸರಿಸಿ
ಕರ್ತವ್ಯಗಳೂ ಬೇರೆಬೇರೆಯಾಗಿರುತ್ತವೆ. ನಮ್ಮ ವ್ಯಕ್ತಿಸ್ವರೂಪಕ್ಕನುಸರಿಸಿ ನಾವು
ಮಾಡಬೇಕಾದ ಕರ್ತವ್ಯವನ್ನು ನಿರ್ಧರಿಸಬೇಕು. ಶುಕ್ಕ ಸನಕಾದಿಗಳು
ಜ್ಞಾನಯೋಗವನ್ನು ಅನುಸರಿಸುವುದೂ ಮನು, ಜನಕ ಮೊದಲಾದವರು
ಕರ್ಮಯೋಗವನ್ನು ಅವಲಂಬಿಸಿರುವುದೂ ಅವರವರವ್ಯಕ್ತಿತ್ತವನ್ನು ಆಧರಿಸಿದ
ಸ್ವಧರ್ಮಗಳಿಗೆ ಅನುಸಾರವಾಗಿಯೇ ಆಗಿದೆ. ಅರ್ಜುನನದೂ ಜನಕಾದಿಗಳಂತೆ
ಕರ್ಮಯೋಗಕ್ಕೆ ಮೀನಲಾಗಿರಿಸಿದ್ದ ಜೀವನ. ಅವನ ವ್ಯಕ್ತಿತ್ವವೇ ಅಂತಹದು.
ಶಮಪ್ರಧಾನವಾದ ಯತಿಧರ್ಮವನ್ನು ಸ್ವೀಕರಿಸಿ ನಡೆಯುವ ಸ್ವರೂಪವು
ಅವನದಲ್ಲ. ಅವನು ಆಧಿಕಾರಿಕರೆಂದು ಪರಿಗಣಿಸಲಾದ ಜೀವರ ವರ್ಗದಲ್ಲಿ
ಸೇರಿದವನು. ಲೋಕದಲ್ಲಿಯ ದೌಷ್ಟ್ಯ ಅಧರ್ಮಗಳನ್ನು ನಿವಾರಿಸಿ
ಸಜ್ಜನರನ್ನು ಸಂರಕ್ಷಿಸಿ ಮುನ್ನಡೆಸುವ ಆಧಿಕಾರಿಕ ವ್ಯಕ್ತಿತ್ವವು ಅವನದಾಗಿದೆ. ತನ್ನ
ವ್ಯಕ್ತಿತ್ವಕ್ಕೆ ಅನುಗುಣವಾದ ಕರ್ತವ್ಯವನ್ನು ಬಿಟ್ಟು ಬೇರೆ ದಾರಿಯಲ್ಲಿ ನಡೆದರೆ
ಅದರಿಂದ ಅವನ ಪ್ರಗತಿಯಾಗಲಾರದು. ಹೀಗೆ ಪ್ರತಿಯೊಬ್ಬರ ವಿಷಯದಲ್ಲೂ
ವ್ಯಕ್ತಿಯ ಸ್ವರೂವವನ್ನು ಆಧರಿಸಿ ಕರ್ತವ್ಯವು ನಿರ್ಧರಿಸಲ್ಪಡುತ್ತದೆ.
ಅದರಂತೆ ಸಾಮಾಜಿಕ ಹೊಣೆಗಾರಿಕೆಯಿಂದ ಪ್ರಾಪ್ತವಾಗುವ
ವರ್ಣಾಶ್ರಮೋಚಿತ ಕರ್ತವ್ಯಗಳನ್ನು ನಾವು ನಿಷ್ಠೆಯಿಂದ ಅನುಸರಿಸಬೇಕು. ತನ್ನ
ನಿಜಸ್ವರೂಪವನ್ನು ಪರಿಶೀಲಿಸಿ ವ್ಯಕ್ತಿಧರ್ಮವನ್ನು ನಿರ್ಧರಿಸುವಂತೆ ಶಾಸ್ತ್ರಗಳಿಂದ
ನಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಕ್ರಮಪ್ರಾಪ್ತವಾದ ನಮ್ಮ
ವರ್ಣಧರ್ಮಗಳನ್ನು ತಿಳಿದು ಅದರಂತೆ ನಡೆಯಬೇಕು. ಈ ವ್ಯಕ್ತಿಧರ್ಮ,
ವರ್ಣಧರ್ಮಗಳೆರಡೂ ಸ್ವಧರ್ಮಗಳಾಗಿದ್ದು ಈ ಎರಡೂ ದೃಷ್ಟಿಗಳಿಂದ
ಯತಿಧರ್ಮದ ಬದಲು ಕ್ಹಾತ್ರಧರ್ಮವನ್ನು ಅರ್ಜುನನು ಪರಿಗ್ರಹಿನ
ಬೇಕಾಗಿದೆ. ಸಂನ್ಯಾಸಧರ್ಮವಾಗಲಿ ಅರಣ್ಯಕ್ಕೆ ಹೋಗಿ ವಾನವ್ರಸ್ಥವೃತ್ತಿಯನ್ನು
ಅವಲಂಬಿಸುವುದಾಗಲಿ ಶ್ರೇಷ್ಠವೇ ಇರಬಹುದು. ಆದರೆ ದುಷ್ಟನಿಗ್ರಹ ಹಾಗೂ
ಧರ್ಮ ರಕ್ಷಣೆಯ ವಿಶಿಷ್ಟ ಹೊಣೆಗಾರಿಕೆಯನ್ನು ಹೊತ್ತ ಅರ್ಜುನನು ತನ್ನ ಈ
ಕರ್ತವ್ಯವನ್ನು ತೊರೆದು ಶ್ರೇಷ್ಠ ಮಾರ್ಗವೆಂದು ಸಂನ್ಯಾಸಿ ಅಥವಾ
ವಾನಪ್ರಸ್ಥನಾಗುವುದು ಉಚಿತವಾಗಲಾರದು. ಬೇರೆ ಅಧಿಕಾರ ಸ್ಥಾನಗಳಲ್ಲಿ
ನಿಯುಕ್ತರಾದವರು ತಮ್ಮ ಕರ್ತವ್ಯದಲ್ಲಿ ಅಲಕ್ಷ್ಯ ಮಾಡಿ ಬೇರೆ ಎಷ್ಟೇ
ಉಪಯುಕ್ತಕಾರ್ಯವನ್ನುನಡೆಸಿದರೂ ಅದು ಪ್ರಶಂಸನೀಯವೆನಿಸುವುದಿಲ್ಲ.
ಸೈನ್ಯ ಅಥವಾ ಆಡಳಿತದ ಕಾರ್ಯದಲ್ಲಿ ನಿಯುಕ್ತರಾದವರು ತಮ್ಮ ಕೆಲಸದ
ವೇಳೆಯಲ್ಲಿ ಪವಿತ್ರ ಕಾರ್ಯವೆಂದು ಧಾರ್ಮಿಕ ಗಂಥಗಳ ಅಧ್ಯಯನದಲ್ಲೇ
ತೊಡಗಿದರೆ ಅದು ಧರ್ಮವೆನಿಸಲಾರದು. ತನಗೆ ನಿಯೋಜಿಸಲ್ಪಟ್ಟ
ಕಾರ್ಯವನ್ನು ನಿಷ್ಠೆಯಿಂದ ಆಚರಿಸುವುದರಿಂದಲೇ ಮನುಷ್ಯನು ಶ್ರೇಷ್ಠ
ವ್ಯಕ್ತಿಯಾಗಬಲ್ಲನು. ಹೊರತು ಅವನು ಯಾವಕಾರ್ಯಮಾಡುತ್ತಿದ್ದಾನೆಂಬು
ದರಿಂದಲೇ ಅವನ ಮಹತ್ತ್ವವನ್ನು ನಿರ್ಧರಿಸಲಾರೆವು.
ಹೀಗೆಯೇವ್ಯಕ್ತಿಯ ವಿಶಿಷ್ಟ ಪರಿಸ್ಥಿತಿ, ಸಂದರ್ಭಗಳನ್ನು ಅನುಸರಿಸಿ ನಮ್ಮ
ಕರ್ತವ್ಯವನ್ನು ವಿವೇಚಿಸುವ ಪ್ರಸಂಗವೂ ನಮ್ಮ ಜೀವನದಲ್ಲಿ ಬರುತ್ತದೆ.
ನದಿಯಲ್ಲಿ ಒಬ್ಬನು ಮುಳುಗುತ್ತಿರುವಾಗ, ತೀರದಲ್ಲಿ ಜಪಮಾಡುತ್ತಿರುವವನು
ಜಪವನ್ನು ಬಿಟ್ಟು ಮುಳುಗುವವನನ್ನು ಮೇಲಕ್ಕೆತ್ತಲು ಪ್ರಯತ್ನಿಸುವುದೇ
ಧರ್ಮವೆನಿಸುವುದು. ಜಪವೇ ಶ್ರೇಷ್ಠವೆಂದು ಆತನು ಮೂಗು ಹಿಡಿದು ಕುಳಿತರೆ
ಅದು ಸರಿಯೆನಿಸುವುದೆ? ದೇವರ ಗುಡಿಗೆ ಹೋಗುವುದೇನೋ ಒಳ್ಳೆಯ
ಕಾರ್ಯವೇ; ಆದರೆ ಶಾಲೆಗೆ ಹೋಗುವುದನ್ನು ತಪ್ಪಿಸಿ ಹುಡುಗರು ದೇವರ
ಗುಡಿಗೆ ಹೋದರೆ ಅದನ್ನು ಯಾರೂ ಅಭಿನಂದಿಸಲಾರರು. ಮಕ್ಕಳಿಗಾಗಿ,
ಪತಿಗಾಗಿ ತಾನು ನಿರ್ವಹಿಸಬೇಕಾದ ಕೌಟುಂಬಿಕ ಕರ್ತವ್ಯಗಳನ್ನು ತೊರೆದು
ಮಹಿಳೆಯರು ಸಮಾಜಸೇವೆಯೆಂದು ಹೊರಗೇ ಅಡ್ಮಾಡುತ್ತಿದ್ದರೆ ಅದು
ಧರ್ಮ ಎನಿಸಲಾರದು.
ಮಹಾಭಾರತದಲ್ಲಿ ಧರ್ಮವ್ಯಾಧನ ಉಪಾಖ್ಯಾನದಲ್ಲಿ ಪ್ರತಿಯೊಬ್ಬನೂ
ತನ್ನ ಈ ವೈಯಕ್ತಿಕ ಹೊಣೆಗಾರಿಕೆಯನ್ನು ಪಾಲಿಸುವುದರ ಅವಶ್ಯಕತೆಯನ್ನು
ಒತ್ತಿಹೇಳಲಾಗಿದೆ. ತರುಣ ಬ್ರಾಹ್ಮಣ ಯುವಕನೊಬ್ಬನು ತನ್ನ ವೃದ್ಧ
ತಾಯಿತಂದೆಗಳಿಗೆ ಸಲ್ಲಿಸಬೇಕಾದ ಸೇವಾಕಾರ್ಯವನ್ನು ನಿರ್ವಹಿಸದೆ ಯಾವ
ರಕ್ಷಕರೂ ಇಲ್ಲದ ಅವರನ್ನು ಮನೆಯಲ್ಲೇ ಬಿಟ್ಟುತಾನು ತಪಸ್ವಿಯಾಗಬೇಕೆಂದು
ಅರಣ್ಯದಲ್ಲಿ ಇರುತ್ತಾನೆ. ಅನೇಕ ವರ್ಷಗಳವರೆಗೆ ತಪ್ಪಸ್ಸನ್ನು ಆಚರಿಸಿ
ಉಗ್ರಶಕ್ತಿಯನ್ನು ಪಡೆಯುತ್ತಾನೆ. ಒಮ್ಮೆ ಒಂದು ಮರದ ಕೆಳಗೆ ಆತ
ಕುಳಿತಿರುವಾಗಮೇಲಿರುವಹಕ್ಕಿಯು ಆತನಮೇಲಿತನ್ನ ಅಶುಚಿ ಪದಾರ್ಥವನ್ನು
ಕೆಡಹಿತು. ಕೋಪಾವಿಷ್ಠನಾದ ಆತನು ಮುಖವೆತ್ತ ಕೆಂಗಣ್ಣಿನಿಂದ ಆಹಕ್ಕಿಯನ್ನು
ನೋಡಿದ. ಕೂಡಲೇ ಅದು ಸುಟ್ಟು ಬೂದಿಯಾಯಿತು. ತನ್ನ ತಪಸ್ಸಿನ ಬಗ್ಗೆ
ಈತನಲ್ಲಿ ಅಹಂಭಾವ ಉದಯಿಸಿತು. ಭಿಕ್ಷೆಗಾಗಿ ಗ್ರಾಮದಲ್ಲಿ ಸಂಚರಿಸುತ್ತ ಈ
ತಪಸ್ವಿಯು ಒಂದು ಮನೆಯ ಮುಂದೆ ಬಂದು ನಿಂತನು. ಮನೆಯ ಗೃಹಿಣಿಯು
ಅತ್ಯಂತಸಾದ್ವಿಯಾಗಿದ್ದಳು. ತಪಸ್ವಿಗೆ ಭಿಕ್ಷೆಯನ್ನು ನೀಡಬೇಕೆಂದು ಆಕೆಹೊರಟು
ನಿಂತಾಗ ಬಳಲಿದ ತನ್ನ ಪತಿಯು ಹೊರಗಿನಿಂದ ಬರುವುದನ್ನು ಕಂಡಳು.
ಪತಿಯನ್ನು ಉಪಚರಿಸಿ ಆತನ ಸೇವೆಯನ್ನು ಮಾಡುವ ಭರದಲ್ಲಿ ಈ
ಅತಿಥಿಯನ್ನು ಅಕೆ ಮರೆತಳು. ಸ್ವಲ್ಪಹೊತ್ತಿನ ನಂತರ ಅತಿಥಿಯ ನೆನಪಾಗಿ ಭಿಕ್ಷ
ಹಿಡಿದುಕೊಂಡು ಅವನ ಬಳಿಗೆ ಬಂದಳು. ಕೋವಾಕ್ರಾಂತನಾದ ಅತಿಥಿ
ತಪಸ್ವಿಯನ್ನು ಇವಳು ಎಷ್ಟು ಸಂತೈಸಿದರೂ ಅವನ ಸಿಟ್ಟು ಇಳಿಯಲಿಲ್ಲ.
ಆಕ್ಕೆ “ನಾನೇನು ಅರಣ್ಯದಲ್ಲಿನೀನು ಬೂದಿಮಾಡಿದ ಹಕ್ಕಿಯಲ್ಲ' ಎಂದು
ನುಡಿದಳು. ಇದನ್ನು ಕೇಳಿ ಆತಪಸ್ವಿತಣ್ಣಗಾದ. ಅಲ್ಲಿಯ ಘಟನೆಯನ್ನು ಇವಳು
ತಿಳಿದ ಬಗೆ ಹೇಗೆ? ಇವಳಿಗೆ ಈ ಜ್ಞಾನಶಕ್ತಿ ಹೇಗೆ ಬಂದಿತು? ಎಂದು
ಅಚ್ಚರಿಗೊಂಡು ಇವಳನ್ನು ಬೇಡಿದಾಗ, ಧರ್ಮವ್ಯಾಧನ ಬಳಿ ಹೋಗಲು
ತಿಳಿಸಿದಳು. ಧರ್ಮವ್ಯಾಧನು ಮಾಂಸವನ್ನು ಮಾರುತ್ತಿದ್ದನು. ಅವನ ಈ
ವ್ಯಾಪಾರವನ್ನು ಕಂಡು ಅವನ ಬಳಿ ಹೋಗಲು ಈ ತಪಸ್ವಿ ಹಿಂಜರಿದಾಗ,
ಧರ್ಮವ್ಯಾಧನೇ "ಸಾಧ್ವೀಮಣಿಯಿಂದ ಕಳಿಸಲ್ಪಟ್ಟವನಲ್ಲ ವೇನೀನು?' ಎಂದು
ಈತನ ಪೂರ್ವಾಪರವನ್ನು ಹೇಳಲು, ಇವನಿಗೆ ಮತ್ತೂ ವಿಸ್ಮಯವಾಯಿತು.
ಧರ್ಮವ್ಯಾಧನು ತಾನು ಮಾಡುವ ವ್ಯಾಪಾರದ ನೀತಿ, ಸೇವಾಭಾವಗಳನ್ನು
ಆತನಿಗೆ ವಿವರಿಸಿ, ತನ್ನ ವೃದ್ಧ ತಂದೆತಾಯಿಗಳ ಸೇವೆಯನ್ನು ತಾನು ಮಾಡುವ
ವಿಧಾನವನ್ನು ಅವನಿಗೆ ಪ್ರತ್ಯಕ್ಷವಾಗಿ ತೋರಿಸಿದನು. ತಂದೆತಾಯಿಗಳ ಬಗ್ಗೆ ತಾನು
ಮಾಡಬೇಕಾದ ಕರ್ತವ್ಯವನ್ನು ಬಿಟ್ಟು ಅರಣ್ಯಕ್ಕೆ ಬಂದಿರುವ ಈ ತವಸ್ವಿಗಿಂತ
ಶೆಚ್ಚಿನಸಿದ್ಧಿಯನ್ನು, ಯೋಗ್ಯತೆಯನ್ನು ಪಕಿಯ ಬಗ್ಸೆ ತಂದೆತಾಯಿಯರ ಬಗ್ಗೆ
ತಮ್ಮ ವೈಯಕ್ತಿಕ ಕರ್ತವ್ಯವನ್ನು ನಿಷ್ಠೆಯಿಂದ, ಭಗವದ್ಭಕ್ತಿಯಿಂದ ಸಲ್ಲಿಸುತ್ತಲೇ
ತಮ್ಮ ವ್ಯವಹಾರವನ್ನು ನಡೆಸುತ್ತಿರುವ ಸಾಧ್ವಿ ಹಾಗೂ ಧರ್ಮವ್ಯಾಧರು
ಪಡೆದಿರುವರು. ಯಾರೂತಾವು ಮಾಡಬೇಕಾದ ವೈಯಕ್ತಿಕಹಾಗೂಸಾಮಾಜಿಕ
ಕರ್ತವ್ಯಗಳನ್ನು ಬಟ್ಟು ಬೇರೆ ಯಾವುದೇಎಷ್ಟೇ ಶ್ರೇಷ್ಠವಾದ ಕಾರ್ಯಗಳನ್ನು
ಮಾಡಿದರೂ ಅವರು ಅದರಿಂದ ಶ್ರೇಯಸ್ಸನ್ನು ಪಡೆಯಲಾರರು.
ಧರ್ಮವ್ಯಾಧನ ಕಥೆಯಲ್ಲಿ ಕಂಡುಬರುವ ತಪಸ್ವಿ ಬ್ರಾಹ್ಮಣನು ಈ ಮಾತಿಗೆ
ಒಳ್ಳೆಯ ನಿದರ್ಶನನಾಗಿದ್ದಾನೆ. ಪ್ರತಿಯೊಬ್ಬರೂ ತಮ್ಮ ತಮ್ಮ ವ್ಯಕ್ತಿಧರ್ಮ,
ವರ್ಣ-ಧರ್ಮಗಳನ್ನು ಅರಿತುಕೊಂಡು ತಮ್ಮ ಹೊಣೆಗಾರಿಕೆಯನ್ನು
ಭಕ್ತಿಯಿಂದ, ಶ್ರದ್ಧೆಯಿಂದ ನಿರ್ವಹಿಸುವುದರಲ್ಲೇ ಅವರ ಜೀವನದಸಿದ್ಧಿ ಇದೆ.
ಸ್ವಧರ್ಮೆ ನಿಧನಂ ಶ್ರೇಯಃ ।
ಪರಧರ್ಮೋ ಭಯಾವಹಃ।
ಅರ್ಜುನನದು ಕರ್ಮಯೋಗಿಯ ವ್ಯಕ್ತಿತ್ವ ಅದರಲ್ಲೂ ಕ್ಚತ್ರಿಯನಾಗಿ
ಲೋಕ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತವ. ಇಂತಹ ಧರ್ಮಯುದ್ಧದಲ್ಲಿ
ಪ್ರಮುಖ ಭಾಗವನ್ನು ವಹಿಸಿ ಕರ್ತವ್ಯವನ್ನು ಪೂರೈಸದೆ ಶಮಪ್ರಧಾನವಾದ
ಯತಿಧರ್ಮವನ್ನು ಆಚರಿಸಲು ಅವನಿಗೆ ಅಧಿಕಾರ ಏನಿದೆ? ನೀರಿಗಿಂತ ಹಾಲು
ಶ್ರೇಷ್ಠವೇನೋನಿಜ. ಆದರೆ ಮೀನನ್ನು ನೀರಿನಿಂದ ತೆಗೆದು ಹಾಲಿನಲ್ಲೇಇಟ್ಟರೆ
ಅದು ಬದುಕಬಹುದೆ? ಅದರಂತೆ ಮಾನವನು ತನ್ನ ವ್ಯಕ್ತಿಧರ್ಮ,
ವರ್ಣಧರ್ಮ, ಪ್ರಾಸಂಗಿಕ ಧರ್ಮಗಳನ್ನು ಪರಿಶೀಲಿಸಿ ತನ್ನ ಸ್ವಧರ್ಮವನ್ನು
ನಿರ್ಧರಿಸಿ ಆಮಾರ್ಗದಿಂದಲೇ ನಡೆಯಬೇಕು.
ಒಬ್ಬನು ತನಗೆ ಒಪ್ಪಿಗೆಯಾಗುವ ಪತ್ನಿಯನ್ನು ಆರಿಸಬಲ್ಲ. ತನಗೆ
ಬೇಡವಾದಾಗ ಪತ್ನಿಯನ್ನು ತೊರೆಯಲೂ ಸಾಧ್ಯವಾಗಬಹುದು. ಆದರೆ ತನ್ನ
ತಾಯಿಯ ಬಗ್ಗೆ ಹೀಗೆ ನಡೆಯಬಲ್ಲನೆ? ಈ ತಾಯಿ ಚೆನ್ನಾಗಿಲ್ಲ
ಸುಂದರಳಾಗಿಲ್ಲ; ತನಗೆ ಬೇರೆತಾಯಿ ಬೇಕೆಂದು ಬದಲಿಸಲು ಸಾಧ್ಯವೆ? ನಾವು
ಹುಟ್ಟುವಾಗಲೇ ನಮ್ಮತಾಯಿ ಸಿದ್ಧಳಾಗಿರುತ್ತಾಳೆ. ಅವಳನ್ನೇ ತಾಯಿಯೆಂದು
ಸ್ವೀಕರಿಸಿ ಪ್ರತ್ರರಾಗಿ ನಮ್ಮ ಸೇವೆ, ಕರ್ತವ್ಯಗಳನ್ನು ನಾವು ಮಾಡಬೇಕಾಗುತ್ತದೆ.
ಧರ್ಮದ ಬಗ್ಗೆಯೂ ಇದೇ ರೀತಿಯನ್ನು ನಾವು ಅನುಸರಿಸಬೇಕು. ನಾವು
ಹುಟ್ಟುವಾಗಲೇನಮ್ಮ ಧರ್ಮವೂನಿರ್ಧರಿತವಾಗಿರುತ್ತದೆ. ನಮ್ಮ ಸೇವೆಯನ್ನು
ಪಡೆಯಲು ಅದು ಸಿದ್ಧವಾಗಿರುವುದು. ಅದನ್ನು ಬದಲಿಸುವ ಗೋಜಿಗೇನಾವು
ಹೋಗಬಾರದು. ನಮಗೆ ವ್ರಾಪ್ತವಾದ ಧರ್ಮವನ್ನು ನಿಷ್ಠೆಯಿಂದ ಅನುಷ್ಠಾನ
ಮಾಡಬೇಕು. ಇದನ್ನೇ ವರ್ಣಧರ್ಮವೆನ್ನಲಾಗುವುದು.
Bannanje Govindacharya (1936–2020)Bhagavad Gita Pravachana
ಅರ್ಜುನಃ ಉವಾಚ- ಅರ್ಜುನ ಹೇಳಿದನು:
ಜ್ಯಾಯಸೀ ಚೇತ್ ಕರ್ಮಣಃ ತೇ ಮತಾ ಬುದ್ಧಿಃ ಜನಾರ್ದನ |
ತತ್ ಕಿಂ ಕರ್ಮಣಿ ಘೋರೇ ಮಾಮ್ ನಿಯೋಜಯಸಿ ಕೇಶವ - £ ಜನಾರ್ದನಾ, ಕಾಯಕಕ್ಕಿಂತ ಅರಿವೇ
ಹಿರಿದು ಎಂದು ನಿನ್ನ ಆಶಯವಾದರೆ, ಮತ್ತೇಕೆ ನನ್ನನ್ನು ಈ ಕೊಲ್ಲುವ ಕಾಯಕದಲ್ಲಿ ತೊಡಗಿಸುತ್ತಿರುವೆ
ಕೇಶವಾ?
ಕೃಷ್ಣ ಜ್ಞಾನ ಮತ್ತು ಕರ್ಮದ ಬಗ್ಗೆ ಕೊಟ್ಟ ವಿವರಣೆಯಿಂದ ಅರ್ಜುನನಿಗೆ ಗೊಂದಲವಾಗುತ್ತದೆ. ತನಗೆ ಯಾವ
ಮಾರ್ಗ ಉಚಿತ ಎನ್ನುವ ಪ್ರಶ್ನೆ ಆತನನ್ನು ಕಾಡುತ್ತದೆ. ಕೃಷ್ಣ ಒಮ್ಮೆ ಜ್ಞಾನ ಮಾರ್ಗದಲ್ಲಿ ಸಾಗು-ಅದು ಶ್ರೇಷ್ಠ
ಎನ್ನುತ್ತಾನೆ; ಇನ್ನೊಮ್ಮೆ ಯುದ್ಧ ಮಾಡು ಅನ್ನುತ್ತಾನೆ! ತಾನೇಕೆ ಶ್ರೇಷ್ಠವಾದ ಜ್ಞಾನ ಮಾರ್ಗದಲ್ಲಿ ಸಾಗಬಾರದು,
ಯುದ್ಧವನ್ನೇಕೆ ಮಾಡಬೇಕು ಎನ್ನುವ ಗೊಂದಲ ಅರ್ಜುನನದು. ಈ ಗೊಂದಲದಲ್ಲಿ ಅರ್ಜುನ ಕೃಷ್ಣನಲ್ಲಿ
ಕೇಳುತ್ತಾನೆ: “ಓ ಜನಾರ್ದನಾ, ಕರ್ಮಕ್ಕಿಂತ ಜ್ಞಾನ ಮಾರ್ಗ ಶ್ರೇಷ್ಠ ಎನ್ನುವುದು ನಿನ್ನ ಅಭಿಮತವಾದರೆ, ನನ್ನ
ಹತ್ತಿರ ಕರ್ಮ ಮಾಡು ಎಂದು ಏಕೆ ಹೇಳುತ್ತಿದ್ದೀಯ? ಯುದ್ಧ ಎನ್ನುವುದು ಘೋರ ರಾಗ-ದ್ವೇಷಗಳಿಂದ ತುಂಬಿದ
ತಾಮಸಕಾರ್ಯ. ಅದು ಅಧ್ಯಾತ್ಮ ಸಾಧನೆಗೆ ತೀರಾ ವಿರುದ್ಧವಾದ ಕರ್ಮ. ಹೀಗಿರುವಾಗ ನನ್ನನ್ನೇಕೆ. ಈ
ಕಾರ್ಯದಲ್ಲಿ ತೊಡಗಿಸುತ್ತಿರುವೆ ಕೇಶವ?” ಎಂದು.
ಈ ಶ್ಲೋಕದಲ್ಲಿ ಅರ್ಜುನ ಶ್ರೀಕೃಷ್ಣನನ್ನು ‘VIBES’ ಮತ್ತು “ಕೇಶವ' ಎನ್ನುವ ಎರಡು ವಿಶೇಷ ನಾಮದಿಂದ
ಸಂಬೋಧಿಸಿರುವುದನ್ನು ಕಾಣುತ್ತೇವೆ. ಇಲ್ಲಿ-ಪ್ರಶ್ನೆ ಮಾಡುತ್ತಿರುವ ಅರ್ಜುನನ ಭಾವ ಅಡಗಿದೆ. ಜನ*-ಅರ್ದನ
ಅಂದರೆ ಜನರನ್ನು ನಾಶ ಮಾಡುವವ! ಇಲ್ಲಿ ಜನ ಅಂದರೆ ದುರ್ಜನ. ಜನಾರ್ದನ ಅಂದರೆ ದುರ್ಜನ ನಾಶಕ.
“ದುಷ್ಟ ನಿಗ್ರಹಕ್ಕಾಗಿ ಅವತರಿಸಿದ ನೀನು, ನನ್ನಿಂದ ಈ ಕಾರ್ಯವನ್ನು ಮಾಡಿಸುತ್ತಿದ್ದೀಯ. ಆದರೆ ಇಲ್ಲಿ
ಸೇರಿರುವರೆಲ್ಲಾ ದುರ್ಜನರಲ್ಲ. ಹೀಗಿರುವಾಗ ಅವರನ್ನು ಕೊಲ್ಲುವ ಕರ್ಮ ಶ್ರೇಷ್ಠ ಹೇಗಾದೀತು? ಜನನ
ಮುಕ್ತಗೊಳಿಸಿ ಮೋಕ್ಷವನ್ನು ಕರುಣಿಸುವ ನೀನು, ನನ್ನಿಂದ ಗುರು ಹಿರಿಯರನ್ನು ಕೊಲ್ಲುವ ಈ ಘೋರ ಕರ್ಮವನ್ನು
ಏಕೆ. ಮಾಡಿಸುತ್ತಿರುವೆ?”. ಎನ್ನುವುದು ಅರ್ಜುನನ ಪ್ರಶ್ನೆ. ಶ್ಲೋಕದ ಕೊನೆಯಲ್ಲಿ *ಕೇಶವ' ಎನ್ನುವ
ನಾಮವಿಶೇಷಣ ಅರ್ಜುನನ ಶರಣಾಗತಿಯನ್ನು ಸೂಚಿಸುತ್ತದೆ. ಕಾ*ಈಶ*ವ-ಕೇಶವ; ಇಲ್ಲಿ 'ಕಾ' ಎಂದರೆ
ಸೃಷ್ಟಿಗೆ ಕಾರಣವಾಗಿರುವ ಚತುರ್ಮುಖ ಬ್ರಹ್ಮ ; ಈಶ ಎಂದರೆ ಸಂಹಾರಕ್ಕೆ ಕಾರಣವಾಗಿರುವ ಶಂಕರ. ಕೇಶವ
ಅಂದರೆ ಸೃಷ್ಟಿ-ಸಂಹಾರಕ್ಕೆ ಕಾರಣವಾಗಿರುವ ಬ್ರಹ್ಮಶಕ್ತೆ ಮತ್ತು ಶಿವಶಕ್ತಿಯನ್ನೊಳಗೊಂಡ ಪರಶಕ್ತಿ. “ಸೃಷ್ಠಿ-ಸ್ಥಿತಿ-
ಸಂಹಾರ-ಮೋಕ್ಷಗಳಿಗೆ ಕಾರಣನಾದ ನೀನು ನನ್ನನ್ನು ಈ ಗೊಂದಲದಿಂದ ಪಾರು ಮಾಡು” ಎಂದು ಅರ್ಜುನ
ಶ್ರೀಕೃಷ್ಣನಲ್ಲಿ ಶರಣಾಗಿ ಬೇಡುತ್ತಾನೆ.
Bibek Debroy (1955–2024)The Bhagavad Gita
(1)
Arjuna said:
‘O Janardana!1 If, in your opinion, knowledge is superior to action, then
why are you engaging me in this terrible action?’