इन्द्रियाणि मनो बुद्धिरस्याधिष्ठानमुच्यते ।
एतैर्विमोहयत्येष ज्ञानमावृत्य देहिनम् ॥
indriyāṇi mano buddhirasyādhiṣṭhānamucyate |
etairvimohayatyeṣa jñānamāvṛtya dehinam ||
Swami Sivananda (1887–1963)Bhagavad Gita
40. The senses, mind and intellect are said to be its seat; through these it deludes the
embodied by veiling his wisdom.
Bannanje Govindacharya (1936–2020)Bhagavad Gita Pravachana
ಇಂದ್ರಿಯಾಣಿ ಮನಃ ಬುದ್ಧಿಃ ಅಸ್ಯ ಅಧಿಷ್ಠಾನಮ್ ಉಚ್ಯತೇ |
ಎತೈಃ ವಿಮೋಹಯತಿ ಏಷಃ ಜ್ಞಾನಮ್ ಆವೃತ್ಯ ದೇಹಿನಮ್ -- ಇಂದ್ರಿಯಗಳು, ಮನಸ್ಸು, ಬುದ್ಧಿ ಈ ಕಾಮದ
ನೆಲೆದಾಣಗಳು. ಇವುಗಳ ಮೂಲಕ ಇದು ತಿಳಿವನ್ನು ಕವಿದು ಸಾಧಕನನ್ನು ಕಂಗೆಡಿಸುತ್ತದೆ.
ನಮ್ಮ ಬಯಕೆಗಳ ಸರಮಾಲೆ ಮೊದಲು ಬಂದು ಕೂರುವುದು ನಮ್ಮ ಇಂದ್ರಿಯದಲ್ಲಿ. ಕಣ್ಣಿಗೆ ನೋಡುವ, ಕಿವಿಗೆ
ಕೇಳುವ, ಮೂಗಿಗೆ ಮೂಸುವ, ಮೈಗೆ ಮುಟ್ಟುವ-ಹೀಗೆ ಒಂದೊಂದು ಬಯಕೆ ಒಂದೊಂದು ರೂಪದಲ್ಲಿ
ಒಂದೊಂದು ಇಂದ್ರಿಯದಲ್ಲಿ ಬಂದು ಕೂರುತ್ತದೆ. ಅಲ್ಲಿ ನಾವು ಅದನ್ನು ನಿಗ್ರಹಿಸದೇ ಇದ್ದರೆ. ಅದು ನಮ್ಮ
ಮನಸ್ಸನ್ನು ಆಕ್ರಮಿಸುತ್ತದೆ. . ಅಲ್ಲೂ ನಾವು ಸಡಿಲಗೊಳಿಸಿದರೆ ಅದು ಮುಂದೆ ನಮ್ಮ ಬುದ್ದಿಯನ್ನು
ಆಕ್ರಮಿಸಿಬಿಡುತ್ತದೆ. ಹೀಗೆ ಅಂಗಳದ(ಇಂದ್ರಿಯ) ಈ ಶತ್ರುವನ್ನು ಮೊಗಸಾಲೇಮನಸ್ಸು)ಗೆ ಕರೆದು, ನಂತರ
ನಮ್ಮ ನಡು ಮನೆಯಲ್ಲಿ(ಬುದ್ಧಿ) ಕುಳ್ಳಿರಿಸಿದಂತೆ. ಒಮ್ಮೆ ಈ ಶತ್ರು ನಮ್ಮ ಬುದ್ಧಿಯನ್ನು ಆಕ್ರಮಿಸಿದರೆ ಮುಂದೆ
ಅದನ್ನು ತೊಡೆದು ಹಾಕುವುದು ತುಂಬಾ ಕಷ್ಟ. ಈ ಸ್ಥಿತಿಯಲ್ಲಿ ಬಯಕೆ ಎನ್ನುವುದು ಸಿದ್ಧಾಂತವಾಗಿ ನಮ್ಮೊಳಗಿದ್ದು
ನಮ್ಮನ್ನೇ ಆಳುವುದಕ್ಕೆ ಆರಂಭಿಸುತ್ತದೆ. ಇದರಿಂದ ಕಾಮನೆ ಎನ್ನುವುದು ನಮ್ಮ ಜೀವನ ಧರ್ಮವಾಗುತ್ತದೆ.
ಉದಾಹರಣೆಗೆ ಒಂದು ಸಂಗತಿ ನಮ್ಮ ಕಿವಿ ಮೇಲೆ ಬೀಳುತ್ತದೆ. ನಾವು ಆ ವಿಷಯದಿಂದ ನಮಗೇನು
ಉಪಯೋಗ ಆ ಬಗ್ಗೆ ಗಮನ ಏಕೆ ಹರಿಸಬೇಕು ಎಂದು ಯೋಚಿಸುವುದಿಲ್ಲ. ಅದನ್ನು ಬಿಟ್ಟು ಕೇಳಿದ ವಿಷಯವನ್ನು
ನೋಡಲು ಹಂಬಲಿಸುತ್ತೇವೆ. ನೋಡಿದ ಮೇಲೆ ಮುಟ್ಟ ಬೇಕು(ತಿನ್ನ ಬೇಕು ಮೂಸಬೇಕು ಇತ್ಯಾದಿ) ಎನ್ನುವ ಆಸೆ!
ಹೀಗೆ ನಾವು ನಮ್ಮೆಲ್ಲಾ ಇಂದ್ರಿಯದಲ್ಲಿ ಈ ಕಾಮನೆ ಎನ್ನುವ ವೈರಿಗೆ ಪ್ರೋತ್ಸಾಹ ಕೊಡುತ್ತೇವೆ. ಆಗ ಅದು
ನಿಧಾನವಾಗಿ. ನಮ್ಮ ಮನಸ್ಸನ್ನು ಆಕ್ರಮಿಸುತ್ತದೆ. ಮನಸ್ಸು ನಿರಂತರವಾಗಿ ಆ ವಿಷಯದ ಬಗ್ಗೆ
ಯೋಚಿಸಲಾರಂಭಿಸುತ್ತದೆ. ಮನಸ್ಸು 'ಅದು ನನ್ನದಾಗಬೇಕು, ನನ್ನದೇ ಆಗಬೇಕು (Possessiveness) ಎಂದು
ಯೋಚಿಸುತ್ತಿದೆ ಎಂದರೆ ಈ ವೈರಿ ಮನಸ್ಸನ್ನು ಆಕ್ರಮಿಸಿದೆ ಎಂದರ್ಥ. ಇಲ್ಲಿಂದ ಮುಂದೆ ಬುಧ್ಧಿ; 'ಅದನ್ನು ಬಿಟ್ಟು
ನಾನಿರಲಾರೆ, ಏನೇ ಆಗಲಿ ನಾನು ಅದನ್ನು ಪಡೆಯಲೇ ಬೇಕು' ಇತ್ಯಾದಿ ಯೋಚನೆಗಳು, ಇದು ಕಾಮನೆ ನಮ್ಮ
ಬುದ್ಧಿಯನ್ನು ಆಕ್ರಮಿಸುವ ಸೂಚನೆ. ಇದು ಸರ್ವನಾಶದ ಮುನ್ಸೂಚನೆ. ಹೀಗೆ ಜ್ಞಾನಕ್ಕೆ ವಿಭ್ರಮೆಯಾಗಿರುವ ಈ
ಮೂರು ಜಾಗದಲ್ಲಿ ಕೂತು ಜ್ಞಾನಕ್ಕೆ ಪರದೆಯಾಗಿ ನಿಲ್ಲುತ್ತದೆ ಈ ನಮ್ಮ ವೈರಿ.
ಇಲ್ಲಿ 'ದೇಹಿನಮ್' ಎನ್ನುವ ಪದ ಬಳಕೆಯಾಗಿದೆ- ನಮ್ಮ ದೇಹ ಎನ್ನುವುದು ಜ್ಞಾನದ ಮೂಲಕ ನಮ್ಮನ್ನು
ಎತ್ತರಕ್ಕೆ ಕೊಂಡೊಯ್ಯುವ ಸಾಧನ. ಆದರೆ ಕಾಮನೆ ಎನ್ನುವ ವೈರಿಯ ಸಂಗ ಮಾಡಿದಾಗ ಅದು ನಮ್ಮನ್ನು
ಅಧಃಪಾತಕ್ಕೆ ತಳ್ಳುವ ಸಾಧನವಾಗುತ್ತದೆ. ಇದು ಈ ಪದದ ಹಿಂದಿರುವ ಭಾವಾರ್ಥ.
ಹೀಗೆ ನಮ್ಮ ವೈರಿ ಯಾರು, ಆತ ಇರುವ ಸ್ಥಾನ ಯಾವುದು ಹಾಗೂ ಆತ ಹೇಗೆ ನಮ್ಮನ್ನು ಆಕ್ರಮಿಸುತ್ತಾನೆ
ಎನ್ನುವ ವಿವರಣೆಯನ್ನು ಕೊಟ್ಟ ಕೃಷ್ಣ, ಈ ವೈರಿಯನ್ನು ಗೆದೆಯುವ ಪರಿಯನ್ನು ಮುಂದೆ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(40)
‘All senses, the mind and intellect, are its49 seat. This50 uses these51 to veil
knowledge and delude beings.’