इन्द्रियाणि पराण्याहुरिन्द्रियेभ्यः परं मनः ।
मनसस्तु परा बुद्धिर्यो बुद्धेः परतस्तु सः ॥
indriyāṇi parāṇyāhurindriyebhyaḥ paraṃ manaḥ |
manasastu parā buddhiryo buddheḥ paratastu saḥ ||
Swami Sivananda (1887–1963)Bhagavad Gita
42. They say that the senses are superior (to the body); superior to the senses is the mind;
superior to the mind is the intellect; and one who is superior even to the intellect is He—the Self.
Bannanje Govindacharya (1936–2020)Bhagavad Gita Pravachana
ಇಂದ್ರಿಯಾಣಿ ಪರಾಣಿ ಆಹುಃ ಇಂದ್ರಿಯೇಭ್ಯಃ ಪರಮ್ ಮನಃ |
ಮನಸಃ ತು ಪರಾ ಬುದ್ಧಿಃ ಯಃ ಬುದ್ಧೇಃ ಪರತಃ ತು ಸಃ-ಇಂದ್ರಿಯಗಳು[ಶರೀರಕ್ಕಿಂತ] ಹಿರಿದಾದ ತಾಣಗಳು.
[ಇಂದ್ರಿಯಾಭಿಮಾನಿಗಳಾದ ಇಂದ್ರಾದಿಗಳು ಹಿರಿಯ ದೇವತೆಗಳು].ಇಂದ್ರಿಯಗಳಿಗಿಂತ ಮನಸ್ಸು ಹಿರಿಯ
ತಾಣ.[ಇಂದ್ರಿಯಾಭಿಮಾನಿ ದೇವತೆಗಳಿಗಿಂತ ಮನೋಭಿಮಾನಿ ರುದ್ರ ಹಿರಿಯ ದೇವತೆ]. ಮನಸ್ಸಿಗಿಂತ ಬುದ್ದಿ
ಹಿರಿಯ ತಾಣ[ಮನೋಭಿಮಾನಿಗಿಂತ WRIA) ಸರಸ್ವತಿ ಹಿರಿಯ ದೇವತೆ]. ಬುದ್ಧಿಗಿಂತಲೂ
ಆಚೆಗಿರುವಂತಾದ್ದು ಆ ಪರತತ್ವ[ಬುದ್ಧಿ ಮಾನಿನಿಗಿಂತಲೂ ಬುದ್ಧಿಗೋಚರನಾಗದ ಭಗವಂತ ಹಿರಿಯತತ್ವ].
ಹೇಗೆ ದುಷ್ಟ ಶಕ್ತಿಗಳಿವೆಯೋ ಹಾಗೇ ನಮ್ಮ ಒಳಿತನ್ನು ಬಯಸುವ ದೇವತಾಶಕ್ತಿಗಳು ನಮ್ಮ ರಕ್ಷಣೆಗೆ
ನಿಂತಿರುತ್ತಾರೆ. ಪ್ರತಿಯೊಂದು ಇಂದ್ರಿಯಗಳಿಗೂ ಒಬ್ಬ ದೇವತೆ ಅಭಿಮಾನಿ. ನಮ್ಮ ಇಂದ್ರಿಯದ
ಅಭಿಮಾನಿದೇವತೆ ಇಂದ್ರ. ಮನಸ್ಸಿನ ಅಭಿಮಾನಿ. ಶಿವ-ಪಾರ್ವತಿಯರು, ಬುದ್ಧಿಯ ಅಭಿಮಾನಿ ಸರಸ್ವತಿ.
ಬುದ್ಧಿಯಿಂದಾಚೆಗಿರುವುದು ಆತ್ಮ-ಅದುವೇ ಆ ಭಗವಂತನ ಸ್ಥಾನ.
ನಾವು ನಮ್ಮ ಇಂದ್ರಿಯ ಮನಸ್ಸು ಬುದ್ದಿಯನ್ನು ನಿಯಂತ್ರಿಸುವ ದೇವತಾ ಶಕ್ತಿಗೆ ಶರಣಾಗಬೇಕು. ಆಗ ಆ
ದೇವತಾ ಶಕ್ತಿಗಳ ಸಹಾಯದಿಂದ ನಾವು ಜ್ಞಾನವನ್ನು ಪಡೆದು ಭಗವಂತನನ್ನು ಕಾಣಬಹುದು. ನಮ್ಮ
ಪ್ರತಿಯೊಂದು ಇಂದ್ರಿಯಕ್ಕೂ ಒಬ್ಬ ಅಭಿಮಾನಿ ದೇವತೆ ಇದ್ದಾನೆ. ಕಣ್ಣಿಗೆ ಸೂರ್ಯ, ಕಿವಿಗೆ ಚಂದ್ರ, ಬಾಯಿಗೆ
ಅಗ್ನಿ, ನಾಲಿಗೆಗೆ-ವರುಣ, ಮೂಗಿಗೆ-ಆಶ್ವೀದೇವತೆಗಳು ,ಕೈಗೆ-ಇಂದ್ರ(ಈತ ಸರ್ವೇಂದ್ರಿಯದ ಒಡೆಯ ಕೂಡಾ
ಹೌದು), ಕಾಲಿಗೆ-ಇಂದ್ರ ಪುತ್ರ ಉಪೇಂದ್ರ, ಯಮ-ಮಲಮೂತ್ರ ವಿಸರ್ಜನಾಂಗದ ಮತ್ತು ದಕ್ಷ ಸಂತಾನಕ್ಕೆ
ಸಂಬಂಧಪಟ್ಟ ಅಂಗದ ದೇವತೆ. ಹೀಗೆ ಪ್ರತಿಯೊಂದು ದೇವತೆಗಳೂ ನಮಗೆ ನಮ್ಮ ಶತ್ರುವಿನಿಂದ ಪಾರಾಗಲು
ಸಹಾಯ ಮಾಡುತ್ತಾರೆ. ಹೀಗೆ ದೇವತೆಗಳನ್ನು ಪ್ರಾರ್ಥಿಸಿ ಅವರ ಸಹಾಯ ಪಡೆದು ದುಷ್ಟ ಶಕ್ತಿಯಿಂದ ದೂರ
ಸರಿದು ಎಲ್ಲಕ್ಕೂ ಮಿಗಿಲಾದ ಆ ಪರತತ್ವವನ್ನು ಸೇರಬೇಕು.
Bibek Debroy (1955–2024)The Bhagavad Gita
(42)
‘It is said the senses are superior.55 The mind is superior to the senses.
Intellect is superior to the mind. That56 is superior to intellect.’