एवं परम्पराप्राप्तमिमं राजर्षयो विदुः ।
स कालेनेह महता योगो नष्टः परन्तप ॥
evaṃ paramparāprāptamimaṃ rājarṣayo viduḥ |
sa kāleneha mahatā yogo naṣṭaḥ parantapa ||
Sri Madhvacharya (1238–1317)Bhagavad Gita Tatparya Nirnaya
‘ब्रह्मरुद्रेन्द्रसूर्याणां यद्दत्तं विष्णुना पुरा।
पञ्चरात्रात्मकं ज्ञानं व्यासोऽदात् पाण्डवेषु तत्।
तेषामेवावतारेषु सेनामध्येऽर्जुनाय च।
प्रादाद्गीतेतिनिर्दिष्टं सङ्क्षेपेणायुयुत्सवे।
यथा कुर्वन्ति कर्माणि यथा जानन्ति देवताः।
सर्वे कार्तयुगाश्चैव नृपाश्च मनुपूर्वकाः।
ज्ञातव्यं चैव कर्तव्यं यथा सर्वैर्मुमुक्षुभिः।
त्रेतादित्रिषु जातैश्च गीतायां तदुदाहृतम्।
पाण्डवाद्याः क्षेमकान्ताः करिष्यन्ति च जानते।
तथैव तेन गीताया नास्ति शास्त्रं समं क्वचित्।
वेदार्थपूर्वकं ज्ञेयं पञ्चरात्रं यतोऽखिलम्।
तत्सङ्क्षेपश्च गीतेयं तस्मान्यास्याः समं क्वचित्’
इति ब्रह्मवैवर्ते॥01॥
Swami Sivananda (1887–1963)Bhagavad Gita
2. This, handed down thus in regular succession, the royal sages knew. This Yoga, by a long
lapse of time, has been lost here, O Parantapa (burner of foes)!
COMMENTARY: The royal sages were kings who at the same time possessed divine
knowledge. They learnt this Yoga.
Bannanje Govindacharya (1936–2020)Bhagavad Gita Pravachana
ಏವಮ್ ಪರಂಪರಾ ಪ್ರಾಪ್ತಮ್ ಇಮಮ್ ರಾಜ ಖುಷಯ ವಿದುಃ |
ಸಃ ಕಾಲೇನ ಇಹ ಮಹತಾ ಯೋಗಃ ನಷ್ಟಃ ಪರಂತಪ-ಹೀಗೆ ಒಬ್ಬರಿಂದ ಒಬ್ಬರಿಗೆ ಹರಿದು ಬಂದಿರುವ ಇದನ್ನು
ಜ್ಞಾನಿಗಳಾದ ಅರಸರು ಅರಿತಿದ್ದರು. ಓ ಅರಿಗಳನ್ನು ತರಿದವನೇ, ತುಂಬಾ ಕಾಲದ ಬಳಿಕ ಆ ಅರಿವಿನ ದಾರಿ ಈ
ನೆಲದಲ್ಲಿ ಕಣ್ಮರೆಯಾಯಿತು.
4.1–4.3
ಸಃ ಏವ ಅಯಮ್ ಮಯಾ ತೇ ಅದ್ಯ ಯೋಗಃ ಪ್ರೋಕ್ತಃ ಪುರಾತನಃ |
ಭಕ್ತಃ ಅಸಿ ಮೇ ಸಖಾ ಚ ಇತಿ ರಹಸ್ಯಮ್ ಹಿ ಏತತ್ ಉತ್ತಮಮ್.. ಅದೇ ಹಳೆಯ ಅರಿವಿನ ದಾರಿಯನ್ನು
ನಾನೀಗ ನಿನಗೆ ಹೇಳಿದೆ -ನೀನು ನನ್ನ ಭಕ್ತ ಮತ್ತು ಗೆಳೆಯ ಎನ್ನುವುದಕ್ಕಾಗಿ. ಇದು ತುಂಬಾ ರಹಸ್ಯವಾದ
ಹಿರಿಯ ಸಂಗತಿ.
ಈ ಮೇಲಿನ ಮೂರು ಶ್ಲೋಕದಲ್ಲಿ ಸೃಷ್ಟಿಯ ಆದಿಯಿಂದ ಈ ಜ್ಞಾನದ ಪರಂಪರೆ ಹೇಗೆ ಬೆಳೆದುಬಂತು ಎನ್ನುವ
ಚಿತ್ರಣವನ್ನು ಕೃಷ್ಣ ಕೊಟ್ಟಿದ್ದಾನೆ. ವಾಸ್ತವಿಕವಾಗಿ ಜ್ಞಾನದ ಮೂಲ ವೇದಗಳು. ವೇದದ ಸಾರವನ್ನು ಸಂಗ್ರಹ
ಮಾಡಿ, ಸಮಸ್ತ ವೇದಾರ್ಥ ಸಂಗ್ರಹವಾದಂತಹ ಒಂದು ಗ್ರಂಥ ರಚನೆಯಾಯಿತು. ಅದನ್ನು ಪಂಚರಾತ್ರ ಎಂದು
ಕರೆದರು. ಪಂಚರಾತ್ರ ಅನ್ನುವುದು ವೈದಿಕ ವಾಜ್ಮಯದ ಜ್ಞಾನಯೋಗ ಮತ್ತು... ಕರ್ಮಯೋಗಗಳ
ಸಮಷ್ಠಿರೂಪವಾಗಿರುವಂತಹ ಗ್ರಂಥ. ಆ ಪಂಚರಾತ್ರದ ಸಾರಸಂಗ್ರಹವೇ ಭಗವದ್ಗೀತೆ. ಸೃಷ್ಟಿಯ ಆದಿಯಲ್ಲಿ,
ಸ್ವಾಯಂಭುವ ಮನ್ವಂತರದಲ್ಲಿ ಭಗವಂತ ಪಂಚರಾತ್ರವನ್ನು ಚತುರ್ಮುಖನಿಗೆ ಉಪದೇಶಿಸಿದ. ಹೀಗೆ ಪ್ರಪಂಚ
ಸೃಷ್ಟಿಯಾದ ಮೊದಲಲ್ಲೇ ಪಂಚರಾತ್ರದ ಜ್ಞಾನ ಚತುರ್ಮುಖನಿಗೆ ಹಾಗೂ ದೇವತೆಗಳಿಗೆ ಬಂತು. ಸೂರ್ಯ
ವೈವಸ್ವತ ಮನ್ವಂತರದಲ್ಲಿ ಇದನ್ನು ಮನುವಿಗೆ, ಮನು चतुर ठन ಹೇಳಿದ. ಇದನ್ನೇ ಕೃಷ್ಣ ಇಲ್ಲಿ
ಅರ್ಜುನನನಿಗೆ ವಿವರಿಸುತ್ತಿದ್ದಾನೆ.
ಮೊಟ್ಟ ಮೊದಲು ದೇವತೆಗಳು ಭಗವಂತನಿಂದ ಈ ಜ್ಞಾನವನ್ನು ಪಡೆದರು. ಈ ದೇವತೆಗಳಲ್ಲಿ ಸೂರ್ಯನೂ
ಒಬ್ಬ. ಸೂರ್ಯ ಭೂಮಿಗೂ ದೇವತೆಗಳಿಗೂ ಸಂಪರ್ಕ ಕೊಡುವ ದೇವತೆ. ಈತನಿಂದ ವೈವಸ್ವತ ಮನ್ವಂತರದ
ಅಭಿಮಾನಿಯಾದ ಮನುವಿಗೆ ಈ ಜ್ಞಾನ ಹರಿದು ಬಂತು. ಮನು ಇದನ್ನು ತನ್ನ ಮಗ ಇಕ್ಷಾಕುವಿಗೆ ಹೇಳಿದ.
ಈತ ಭೂಲೋಕದಲ್ಲಿ ಚಕ್ರವರ್ತಿಯಾಗಿ ಬಾಳಿದ ಮಹಾ ರಾಜರ್ಷಿ. ಹೀಗೆ ಈ ಜ್ಞಾನ ದೇವತೆಗಳಿಂದ
ಭೂಲೋಕಕ್ಕೆ ಹರಿದು ಬಂತು.
ಜ್ಞಾನ ಎನ್ನುವುದು ಅನಾಧಿನಿತ್ಯ.. ಇದು ಅಳಿವಿರದ ವಿದ್ಯೆ. ಪ್ರತೀ ಸೃಷ್ಟಿಯ ಆದಿಯಲ್ಲೂ ಈ ವಿದ್ಯೆ
ಭಗವಂತನಿಂದ ಹೇಳಲ್ಪಡುತ್ತದೆ. ನಂತರ ದೇವತೆಗಳು, ದೇವತೆಗಳಿಂದ ರಾಜರ್ಷಿಗಳು, ನಂತರ ಖುಷಿಗಳು
ಹೀಗೆ ಜ್ಞಾನ ಪರಂಪರೆ ಬೆಳೆಯುತ್ತದೆ. ಇಂದು ಈ ರೀತಿ ಹರಿದು ಬಂದ ವಿದ್ಯೆ ಕಣ್ಮರೆಯಾಗುತ್ತಿದೆ; ಜನ
ಮರೆಯುತ್ತಿದ್ದಾರೆ. ಮಹಾನ್ ಜ್ಞಾನಿಯಾದ ಅರ್ಜುನ ಕೂಡಾ ಈ ಜ್ಞಾನವನ್ನು ಮರೆತಿದ್ದಾನೆ. ಹಿಂದೆ ಹೇಳಿದಂತೆ
ಅರ್ಜುನ ಆ ಕಾಲದ ಮಹಾನ್ ಜ್ಞಾನಿ. ಆದರೂ ಅದು ಆತನಿಗೆ ನೆನಪಿಗೆ ಬರುತ್ತಿಲ್ಲ. ಇಲ್ಲಿ ಕೃಷ್ಣ ಅರ್ಜುನನನ್ನು
"ಪರಂತಪ" ಎಂದು ಸಂಬೋಧಿಸಿದ್ದಾನೆ. ಪರಂತಪ ಎಂದರೆ ಸದಾ ಭಗವಂತನನ್ನು ಜ್ಞಾನದ ದೃಷ್ಟಿಯಿಂದ
ಕಾಣಬಲ್ಲವ. "ನೀನು ಅಪರೋಕ್ಷ ಜ್ಞಾನಿ; ನಿನ್ನಲ್ಲೇ ಆ ಜ್ಞಾನ ಪರಂಪರೆ ಇದೆ; ಆದರೂ ನಿನಗೆ ಸಂಶಯ ಬಂತು;
ಈ ಅನಾಧಿನಿತ್ಯವಾದ ಜ್ಞಾನ ಪರಂಪರೆ ನಿನ್ನಲ್ಲೇ ಮರೆಯಾಗುತ್ತಿದೆ. ಹೀಗಿರುವಾಗ ಉಳಿದವರ ಪಾಡೇನು”
ಎನ್ನುವ ಧ್ವನಿ ಈ ಪರಂತಪ ಎನ್ನುವ ಸಂಬೋಧನೆಯಲ್ಲಿದೆ.
ಜ್ಞಾನ ನಾಶವಾಗಿಲ್ಲ, ಆದರೆ ಮೋಹದ ಪರದೆ ಅದನ್ನು ತಡೆದಿದೆ. ಆದ್ದರಿಂದ ನಿನಗೆ ನಾನು ಈಗ ಆ ಜ್ಞಾನವನ್ನು
ಪುನಃ ಹೇಳುತ್ತಿದ್ದೇನೆ ಎನ್ನುತ್ತಾನೆ ಕೃಷ್ಣ. ಅರ್ಜುನ ಕೃಷ್ಣನ ಮೇಲಿಟ್ಟಿರುವ ಅಪಾರ ಗೌರವ, ಭಕ್ತಿ ಹಾಗೂ
ಆತ್ಮೀಯತೆಯನ್ನು ಗುರುತಿಸಿ, ಅನಾದಿನಿತ್ಯವಾದ, ಅಪೂರ್ವವಾದ ಈ ಜ್ಞಾನವನ್ನು ಕೃಷ್ಣ ಅರ್ಜುನನಿಗೆ
el
ನೆನಪಿಸುತ್ತಿದ್ದಾನೆ. ಅರ್ಜುನನ ಭಕ್ತಿ ನವವಿಧ ಭಕ್ತಿಗಳಲ್ಲಿ (ಶ್ರವಣ, ಕೀರ್ತನ, ಸ್ಮರಣ, ಪಾದಸೇವನ, ಅರ್ಚನ,
ವಂದನ, ದಾಸ್ಯ, ಸಖ್ಯ ಹಾಗೂ ಆತ್ಮನಿವೇದನ) ಒಂದಾದ ಸಖ್ಯ. ಆತ ಭಗವಂತನನ್ನು ಗೆಳೆಯನಾಗಿ
ಪೂಜಿಸಿದ. ಈ ಕಾರಣಕ್ಕಾಗಿ ಇಲ್ಲಿ ಕೃಷ್ಣ ಹೇಳುತ್ತಾನೆ: "ನೀನು ನನ್ನ ಭಕ್ತ ಮತ್ತು ಸಖ. ಆ ಕಾರಣಕ್ಕಾಗಿ ಈ
ಅಮೂಲ್ಯವಾದ ಜ್ಞಾನವನ್ನು ನಿನಗೆ ಹೇಳುತ್ತಿದ್ದೇನೆ" ಎಂದು.
ಇಲ್ಲಿ 'ರಹಸ್ಯವಾದ ಜ್ಞಾನವನ್ನು ನಿನಗೆ ಹೇಳುತ್ತಿದ್ದೇನೆ' ಎಂದು ಕೃಷ್ಣ ಹೇಳಿದ್ದಾನೆ. ಜ್ಞಾನವನ್ನು ರಹಸ್ಯವಾಗಿಡಲು
ಎರಡು ಕಾರಣವಿದೆ. ಒಂದು ಅದರ ದುರುಪಯೋಗ ಹಾಗೂ ಇನ್ನೊಂದು ಅದರ ನಿರುಪಯೋಗ. ಯಾರು
ಜ್ಞಾನವನ್ನು ಪಡೆದು ಅದನ್ನು ತಮ್ಮ ತಲೆಮಾರಿಗೆ ಕೊಡಲಾರರೋ ಅಂಥವರಿಗೆ ಜ್ಞಾನವನ್ನು ಕೊಡುವುದು
ವ್ಯರ್ಥ. ಇದರಿಂದ ಜ್ಞಾನ ಪರಂಪರೆ ಹರಿದು ಬರಲಾರದು. ಇನ್ನು ದುರುಪಯೋಗ. ಜ್ಞಾನ ಇರುವುದು ನಮ್ಮ
ಅಂತರಂಗದ ಉದ್ಧಾರಕ್ಕೆ ಹಾಗೂ ಇನ್ನೊಬ್ಬರ ಉದ್ಧಾರದ ದಾರಿ ತೋರುವುದಕ್ಕಾಗಿಯೇ, ಹೊರತು
ವ್ಯವಹಾರ-ವ್ಯಾಪಾರ ಮಾಡುವುದಕ್ಕಾಗಿ ಅಲ್ಲ. ಜ್ಞಾನದಿಂದ ಸಮಾಜವನ್ನು ಮೋಸಗೊಳಿಸಬಹುದು. ತಿಳುವಳಿಕೆ
ಇಲ್ಲದವರನ್ನು ತನ್ನ ತಿಳುವಳಿಕೆಯಿಂದ ಮೋಸ ಮಾಡಿ ವಂಚಿಸಬಹುದು. ಈ ಎಲ್ಲಾ ಕಾರಣದಿಂದ ಜ್ಞಾನ ರಹಸ್ಯ
ವಿಷಯ. ಹಿಂದೆ ಯೋಗ ಸಿದ್ಧಿಯಿಂದ ಮಾಯವಾಗುವ ವಿದ್ಯೆ ಜ್ಞಾನಿಗಳಿಗೆ ತಿಳಿದಿತ್ತು. ಇಂತಹ ಅಮೂಲ್ಯ ವಿದ್ಯೆಯ
ದುರುಪಯೋಗ ಅತೀ ಸುಲಭ. ಆ ಕಾರಣಕ್ಕಾಗಿ ಅದನ್ನು ರಹಸ್ಯವಾಗಿಟ್ಟರು. ಪ್ರಾಣಿ ಭಾಷೆಯನ್ನೂ ಅರ್ಥ
ಮಾಡಿಕೊಳ್ಳುವ ವಿದ್ಯೆ ನಮ್ಮಲ್ಲಿತ್ತು. ಇದನ್ನೂ ಕೂಡಾ ರಹಸ್ಯವಾಗಿಟ್ಟರು. ಹೀಗೆ ಜ್ಞಾನದಿಂದ
ದುರುಪಯೋಗವಾಗುವ ಸಾಧ್ಯತೆ ಇದ್ದಾಗ ಅದನ್ನು ರಹಸ್ಯವಾಗಿಡಬೇಕು. ಇಂತಹ ರಹಸ್ಯವಾದ ವಿಷಯವನ್ನು
ನಾನು 'ನಿನ್ನನ್ನು ಆಯ್ಕೆ ಮಾಡಿ ಹೇಳುತ್ತಿದ್ದೇನೆ' ಎಂದಿದ್ದಾನೆ ಕೃಷ್ಣ.
ಅರ್ಜುನ ಉವಾಚ |
Bibek Debroy (1955–2024)The Bhagavad Gita
(2)
‘In this way, handed down by tradition, the royal sages4 knew this.5 O
scorcher of foes!6 In this world, because of the long passage of time, this
yoga has been destroyed.’7