यदृच्छालाभसन्तुष्टो द्वन्द्वातीतो विमत्सरः ।
समः सिद्धावसिद्धौ च कृत्वापि न निबध्यते ॥
yadṛcchālābhasantuṣṭo dvandvātīto vimatsaraḥ |
samaḥ siddhāvasiddhau ca kṛtvāpi na nibadhyate ||
Swami Sivananda (1887–1963)Bhagavad Gita
22. Content with what comes to him without effort, free from the pairs of opposites and
envy, even-minded in success and failure, though acting, he is not bound.
Bannanje Govindacharya (1936–2020)Bhagavad Gita Pravachana
ಯದೃಚ್ಛಾ ಲಾಭ ಸಂತುಷ್ಟಃ ದ್ವಂದ್ವ ಅತೀತಃ ವಿಮತ್ಸರಃ |
ಸಮಃ ಸಿದ್ಧೌ OAT? ಚ ಕೃತ್ವಾ ಅಪಿ ನ ನಿಬಧ್ಯತೇ -- ತಾನಾಗಿಯೇ ಸಿಕ್ಕಿದ್ದುದರಲ್ಲಿ ಸಂತಸಪಡುವವನು,
ಬದುಕಿನ ಇಬ್ಬಂದಿತನವನ್ನು ಮೀರಿನಿಂತವನು, ಹೆರವರ ಏಳಿಗೆಗೆ ಕಿಚ್ಚುಪಡದವನು, ಗಳಿಕೆಯನ್ನೂ
ಕಲಿಕೆಯನ್ನೂ ಒಂದೇ ಬಗೆಯಿಂದ ಕಾಣುವವನು ಕರ್ಮ ಮಾಡಿದರೂ ಅದರ ಸೆರೆಗೆ ಸಿಕ್ಕುವುದಿಲ್ಲ.
ನಮ್ಮ ಮನಸ್ಸು ನಮ್ಮ ಹಿಡಿತಕ್ಕೆ ಬಂದಾಗ ಕಾಣುವ ಮುಖ್ಯ ಲಕ್ಷಣದ ಬಗ್ಗೆ ಇಲ್ಲಿ ವಿವರಣೆ ಇದೆ. ತೃಪ್ತಿಯನ್ನು
ಸಾಧಿಸಿದವನಿಗೆ ಏನಾದರೂ ಸಿಕ್ಕಿದರೆ ಅದರಲ್ಲೇ ಸಂತೋಷವಾಗಿರುತ್ತಾನೆ. ಸಿಕ್ಕಿದ್ದು ಸಾಲದೆಂದಾಗಲೀ,
ಇನ್ನೇನೋ ಸಿಗಲಿ ಎಂದಾಗಲೀ ಆತನ ಮನಸ್ಸು ಬಯಸುವುದಿಲ್ಲ. ಏಕೆಂದರೆ ನಮಗೆ ಏನೇ ಸಿಕ್ಕಿದರೂ ಅದು
ಭಗವಂತನ ಇಚ್ಛೆಯಿಂದ ಸಿಕ್ಕಿರುವುದು. ಉದಾಹರಣೆಗೆ ಉದ್ಯೋಗ. ಪ್ರತಿಭೆ ಇದ್ದವರಿಗೆಲ್ಲಾ ಉದ್ಯೋಗ
ಸಿಗುವುದಿಲ್ಲ. ಉದ್ಯೋಗ ಸಿಗುವುದು, ಅದರಿಂದ ಸಂಬಳ ಸಿಗುವುದು- ಎಲ್ಲವೂ ಭಗವಂತನ ಇಚ್ಛೆಯಂತೆ.
ಆದ್ದರಿಂದ ಎಲ್ಲವೂ ಭಗವಂತನ ಸಂಕಲ್ಪ ಎಂದು ತಿಳಿದು ನಿಸ್ವಾರ್ಥ ಕರ್ಮದಲ್ಲಿ ತೊಡಗಿದಾಗ ಮನಸ್ಸು
ನಿರ್ಮಲವಾಗುತ್ತದೆ. ಈ ಸ್ಥಿತಿಯಲ್ಲಿ ಅಹಂಕಾರ ಎಂದೂ ಹತ್ತಿರ ಸುಳಿಯುವುದಿಲ್ಲ. ಬಡತನವಾಗಲೀ,
ಸಿರಿತನವಾಗಲೀ, ನಾವು ಹುಟ್ಟುವ ಮನೆಯಾಗಲೀ, ಯಾವುದೂ ನಮ್ಮ ಕೈಯಲ್ಲಿಲ್ಲ. ಎಲ್ಲವೂ ಆ ಈಶ್ವರ ಇಚ್ಛೆ.
ಇದನ್ನು ತಿಳಿದು ಬದುಕುವುದು ಯಶಚಿತ್ತಾತ್ಮನ ಗುರುತು.
ಇನ್ನು ಎರಡನೇ ಲಕ್ಷಣ 'ದ್ವಂದ್ವಾತೀತ ಜೀವನ'. ನಮ್ಮ ಜೀವನ ಎಂದರೆ ದ್ವಂದ್ವ. ಹಗಲು-ರಾತ್ರಿ, ಲಾಭ-ನಷ್ಟ,
ಸೋಲು-ಗೆಲುವು, ಹುಟ್ಟು-ಸಾವು ಹೀಗೆ ಎಲ್ಲವೂ ದ್ವಂದ್ವ. ನಾವು ಈ ದ್ವಂದ್ವದ ನಡುವೆಯೇ ಬದುಕಬೇಕು.
ಹಗಲು-ರಾತ್ರಿಗೆ ನಾವು ಹೇಗೆ ಹೊಂದಿಕೊಂಡು ಬದುಕುತ್ತೇವೆಯೋ ಹಾಗೇ 'ಇತರ ದ್ವಂದ್ವದ ಆಘಾತಕ್ಕೆ
ಒಳಗಾಗದೇ ಬದುಕಲು ಕಲಿ' ಎನ್ನುತ್ತಾನೆ ಕೃಷ್ಣ. ಸಿಗದಿದ್ದಾಗ ದುಃಖವಿಲ್ಲ, ಸಿಕ್ಕಾಗ ಹಾರಾಟವಿಲ್ಲ. ಎರಡೂ
ಸ್ಥಿತಿಯಲ್ಲಿ ಏಕರೂಪವಾದ ಮನಃಸ್ಥಿತಿಯನ್ನು ಗಳಿಸುವುದು ದ್ವಂದ್ವಾತೀತ ಜೀವನ.
ದ್ವಂದ್ವಾತೀತನಾಗಿ ಬದುಕುವಾಗ ಒಂದು ಸಮಸ್ಯೆ ಎದುರಾಗುತ್ತದೆ. ಇದ್ದದ್ದು ಸಾಕು ಎಂದು ಬದುಕುತ್ತಿರುವಾಗ
ನಮ್ಮ ಜೊತೆಗಿನ ಇನ್ನೊಬ್ಬ ಹೆಚ್ಚು ಗಳಿಸಲಾರಂಬಿಸಿದರೆ, ಅದನ್ನು ನೋಡಿ ನಮಗೆ ಕಿಚ್ಚು ಹುಟ್ಟಿಕೊಳ್ಳುತ್ತದೆ.
ನಮ್ಮ ಕೆಳಗಿನ ಮಟ್ಟದವರು, ನಮ್ಮ ಪಕ್ಕದ ಮನೆಯವರು ಯಾವುದೋ ಕಾರಣಕ್ಕೆ ಶ್ರೀಮಂತರಾದರೆ ನಮಗೆ
ಸಂಕಟ! ಇಲ್ಲಿ ಕೃಷ್ಣ ಹೇಳುತ್ತಾನೆ: "ಇನ್ನೊಬ್ಬರನ್ನು ಕಂಡು ಎಂದೂ ಕಿಚ್ಚು ಪಡಬೇಡ" ಎಂದು. ಯಾರ್ಯಾರಿಗೆ
ಎಷ್ಟೆಷ್ಟು ಸಿಗಬೇಕೋ ಅಷ್ಟಷ್ಟೇ ಸಿಗುತ್ತದೆ. ನಾವು ಎಷ್ಟು 503) B03 (expertise) OTT ಕೂಡಾ ಭಗವಂತ
ಅನುಗ್ರಹಿಸದೇ ಇದ್ದರೆ ನಾವು ಮೇಲಕ್ಕೇಳಲು ಸಾಧ್ಯವಿಲ್ಲ. ಈ ಎಚ್ಚರವೇ "ಯದೃಚ್ಛಾ ಲಾಭ ಸಂತುಷ್ಟಃ”
ಇನ್ನು ಸಿದ್ದಿ ಅಸಿದ್ದಿಗಳು. ಉದಾಹರಣೆಗೆ DoS (Meditation): ಧ್ಯಾನದಲ್ಲಿ ಏಕಾಗ್ರತೆ ಪಡೆಯಲು ಆಗದೇ
ಇನ್ನೇನೋ ಕಾಣಿಸಿದರೆ. ಏನು ಕಾಣಿಸಿತೋ ಅದರಲ್ಲೇ ಭಗವಂತನನ್ನು ಕಾಣು. ಅದಕ್ಕಾಗಿ ತಲೆ
ಕೆಡಿಸಿಕೊಳ್ಳಬೇಡ. ಏಕಾಗ್ರತೆ ಸಾಧ್ಯವಾದರೆ ಭ್ರಮೆಗೊಳಗಾಗಬೇಡ. ಏಕೆಂದರೆ ಸಿದ್ಧಿ-ಅಸಿದ್ಧಿಗಳು ನಮ್ಮ
ಕೈಯಲ್ಲಿಲ್ಲ. ಅಸಿದ್ದಿಯೂ ಸಿದ್ದಿಯ ಮೆಟ್ಟಿಲು. ಇಂತಹ ಮಾನಸಿಕ ಸಮತೋಲನ ಜೀವನದಲ್ಲಿ ಅತಿಮುಖ್ಯ.
ಇಂತಹ ಸ್ಥಿತಿಯಲ್ಲಿ ಕರ್ಮ ಎಂದೂ ಬಂಧಕವಾಗುವುದಿಲ್ಲ.
Bibek Debroy (1955–2024)The Bhagavad Gita
(22)
‘Satisfied with unsought gains,29 beyond opposites,30 bereft of envy and
regarding success and failure equally, even if he performs action, he is not
bound.’