श्रद्धावाँल्लभते ज्ञानं तत्परः संयतेन्द्रियः ।
ज्ञानं लब्ध्वा परां शान्तिमचिरेणाधिगच्छति ॥
śraddhāvām̐llabhate jñānaṃ tatparaḥ saṃyatendriyaḥ |
jñānaṃ labdhvā parāṃ śāntimacireṇādhigacchati ||
Swami Sivananda (1887–1963)Bhagavad Gita
39. The man who is full of faith, who is devoted to it, and who has subdued all the senses,
obtains (this) knowledge; and, having obtained the knowledge, he goes at once to the supreme
peace.
Bannanje Govindacharya (1936–2020)Bhagavad Gita Pravachana
ಶ್ರದ್ಧಾವಾನ್ ಲಭತೇ ಜ್ಞಾನಮ್ ತತ್ ಪರಃ ಸಂಯತ ಇಂದ್ರಿಯಃ |
ಜ್ಞಾನಮ್ ಲಬ್ಧ್ವಾ ಪರಾಮ್ ಶಾಂತಿಮ ಆಚಿರೇಣ ಅಧಿಗಚ್ಛತಿ-- ಇಂದ್ರಿಯಗಳನ್ನು BRIO, ಶ್ರದ್ಧೆಯಿಂದ
ನನ್ನನ್ನೇ ಪರದೈವವೆಂದು ನಂಬಿದವನು ತಿಳಿವನ್ನುಗಳಿಸಿ ಶೀಘ್ರವಾಗಿ ಸಂತಸದ ಸೆಲೆಯಾದ ಮುಕ್ತಿಯನ್ನು
ಪಡೆಯುತ್ತಾನೆ.
ನಮ್ಮಲ್ಲಿ ಅರಿವು. ಮೂಡಬೇಕೆಂದರೆ ಬರಿಯ ಅಧ್ಯಯನ ಸಾಲದು. ಒಂದು ವಿಷಯ ನಮಗೆ
ಮನವರಿಕೆಯಾಗಬೇಕಾದರೆ ಮೊದಲು ನಮಗೆ ಶ್ರದ್ಧೆ ಬೇಕು. ಇಲ್ಲಿ ಸಮರ್ಪಣಾ ಭಾವನೆ ಅತಿಮುಖ್ಯ. ನಾನು
ತಿಳಿದದ್ದೇ ದೊಡ್ಡದು, ಅದಕ್ಕೆಂತ ದೊಡ್ಡದು ಯಾವುದೂ ಇಲ್ಲ ಅನ್ನುವ ಅಹಂಕಾರವನ್ನು ಮೊದಲು ಬಿಡಬೇಕು.
ನನಗೆ ಯಾವುದು ತಿಳಿದಿಲ್ಲವೋ ಅದು ಸತ್ಯವಾಗಿರಲು ಸಾಧ್ಯ ಎನ್ನುವ ಶ್ರದ್ಧೆ ಬೇಕು. ಪ್ರಪಂಚದ ಸತ್ಯ ನಮ್ಮ
ನಂಬಿಕೆಯ ಮೇಲೆ ನಿಂತಿಲ್ಲ. ಈ ಪ್ರಪಂಚದಲ್ಲಿ ನಮಗೆ ತಿಳಿದಿರುವುದು ಕೇವಲ ಅತೀ ಚಿಕ್ಕ ಅಂಶ. ನಮಗೆ
ಗೊತ್ತಿಲ್ಲದೇ ಇರುವ ಸತ್ಯ ಇದೆ ಎಂದು ತಿಳಿಯುವುದೇ ಶ್ರದ್ಧೆ. ನಮ್ಮ ಬದುಕಿನ ಗುರಿ ಜ್ಞಾನ ಮತ್ತು ಸತ್ಯದ
ತಿಳುವಳಿಕೆಯಾಗಬೇಕು. ಜ್ಞಾನದ ತೃಷೆ ಜೊತೆಗೆ ಇಂದ್ರಿಯಗಳ ಚಾಪಲ್ಯಕ್ಕೆ ಹಿಡಿತವಿರಬೇಕು. ಹೀಗಿದ್ದಾಗ
ಅದರಿಂದ ಮಾನಸ ಸಾಕ್ಷಾತ್ಕಾರ, ಆತ್ಮಸಾಕ್ಷಾತ್ಕಾರ-ಕೊನೆಗೆ ಪರಮಾತ್ಮನ ಸಾಕ್ಷಾತ್ಕಾರ. ಈ ನಡೆಯಿಂದ
ಅಪರೋಕ್ಷ ಜ್ಞಾನ ಸಿದ್ಧಿಯಾಗುತ್ತದೆ. ಮತ್ತು ಇದರಿಂದ ಸದಾ ಜ್ಞಾನಾನಂದಪೂರ್ಣನಾದ ಭಗವಂತನನ್ನು
(ಮೋಕ್ಷವನ್ನು ) ಪಡೆಯಲು ಸಾಧ್ಯ.
Bibek Debroy (1955–2024)The Bhagavad Gita
(39)
‘Knowledge is attained by the faithful, the unwavering and those who
control their senses. Having attained knowledge, they quickly achieve
supreme peace.’