कायेन मनसा बुद्ध्या केवलैरिन्द्रियैरपि ।
योगिनः कर्म कुर्वन्ति सङ्गं त्यक्त्वात्मशुद्धये ॥
kāyena manasā buddhyā kevalairindriyairapi |
yoginaḥ karma kurvanti saṅgaṃ tyaktvātmaśuddhaye ||
Swami Sivananda (1887–1963)Bhagavad Gita
11. Yogis, having abandoned attachment, perform actions only by the body, mind, intellect
and also by the senses, for the purification of the self.
Sri Vishwesha Tirtharu (1931–2019)Gitasaroddhara
5.8–5.14 · ಜ್ಞಾನಿಯು ಲೋಕವಿಮುಖನಲ್ಲ
ಜ್ಞಾನಿಯು ಲೋಕವಿಮುಖನಲ್ಲ
ಸರ್ವಕರ್ಮಾಣಿ ಮನಸಾ ಸಂನ್ಕಸ್ಯಾಸ್ತೇ ಸುಖಂ ವಶೀ |
ಜ್ಞಾನಯೋಗಿಯಲ್ಲಿ ಕರ್ಮದ ಸಂಬಂಧವೇಇರುವುದಿಲ್ಲ ಎಂದು ಕೆಲವರ
ಅಭಿವ್ರಾಯವಿದೆ. ಕರ್ಮಯೋಗವು ಸಾಧಕನ ಪೂರ್ವಾವಸ್ಥೆಯಾಗಿದ್ದರೆ
ಜ್ಞಾನಯೋಗವು ಅವನ ಕೊನೆಯ ಹಂತವಾಗಿದೆ. ಏಕಕಾಲದಲ್ಲಿ ಇವೆರಡೂ
ನಾಥಕನ್ಲಿ ಮೇಶೈಸರ ಲಾರವು . ಈ ಕ್ರಿಯೆ, ಕ್ರಿಯ ಸಾಫಲಸಂಬಂಧ ಹ ಹಾಗೂ
ಇವುಗಳಕಾರಣಗಳಿನಿಸಿದ ಈ ಪ್ರಪಂಚಮಾಯಾಮಯವೆನಿಸಿದ್ದುನಿದ್ದೆಯಿಂದ
ಎಚ್ಚತ್ತವನಿಗೆ ಸ್ವಷ್ಠರಾಜ್ಯದ ವಿಭ್ರಮ, ವಿಲಾಸಗಳೆಲ್ಲ ಕ್ಷಣ ಮಾತ್ರದಲ್ಲಿ
ಅದೃಶ್ವವಾಗುವಂತೆ ಜ್ಞಾನವನ್ನು ಪಡೆದವನ ಪಾಲಿಗೆ ಈ ಪ್ರಪಂಚವೆಲ್ಲ ಬರಿ ಕನಸೇ
ಆಗಿರುವುದು. ಹಗ್ಗವನ್ನು ಸರಿಯಾಗಿನೋಡಿದವನು ಅಲ್ಲಿತಾನು ಕಲ್ಪಿಸಿಕೊಂಡ
ಹಾವನ್ನು ಮತ್ತೆಕಾಣಲಾರನಸ್ಟೆ! ಅದರಂತೆ ಆತ್ಮಜ್ಞಾನವನ್ನು ಪಡೆದ ಮೇಲೆ ಅದರ
ಅಧಿಷ್ಠುನದಲ್ಲಿಯೇಕಲ್ಪನೆಗೊಂಡಿರುವಮಾಯಿಕವಾದ ಜಗತ್ತಿನ ದರ್ಶನವು
ಜ್ಞಾನಿಗೆ ಆಗುವುದಿಲ್ಲ. ಇಂತಹ ದೆಶೆಯಲ್ಲಿ ಅವನು ಕರ್ಮವನ್ನು ಹೇಗೆ ಮಾಡಿ
ಯಾನು? ಆದುದರಿಂದ ಯಜ್ಞರೂಪವಾದ ಸತ್ಯರ್ಮದ ಅನುಷ್ಠಾನವು
ಅಜ್ಞಾನದಲ್ಲಿ ತೊಳಲಾಡುವ ವ್ಯಕ್ತಿಗಳಿಗೆ ಮಾತ್ರ ಮೀಸಲಾದುದು.
ಬ್ರಹ್ಮಜ್ಞಾನವನ್ನು ಪಡೆದವ್ಯಕ್ತಿಯು, ಜ್ಞಾನಹಾಗೂ ಕರ್ಮ ಸಂನ್ಯಾಸದಲ್ಲಿ ಮಾತ್ರ
ಅಧಿಕೃತನು. ಅವನು ತನ್ನ ಶರೀರ ರಕ್ಷಣೆಗೆ ಮಾತ್ರ ಅವಶ್ಯಕವೆನಿಸುವ
ಕಾರ್ಯಗಳನ್ನು ನಿರ್ಲಿಪ್ತತೆಯಿಂದ ನಿರ್ವಹಿಸುವನು. ಇತರ ನಿತ್ಯ-ನೈಮಿತ್ತಿಕ
ಧಾರ್ಮಿಕ-ಸಾಮಾಜಿಕವೆನಿಸುವಯಾವಕಾರ್ಯಗಳನ್ನೂ ಜ್ಞಾನಿಯಾದವನು
ಮಾಡಲಾರನೆಂದು ಶ್ರೀತಂಕರಾಜಾರ್ಯಮೊದಲಾದವರುಪ್ರತಿಪಾದಿಸಿ, ಇದರ
ಸಮರ್ಶನೆಗಾಗಿ
ಸರ್ವಕರ್ಮಾಣಿ ಮನಸಾ ಸಂನೃಸ್ಯಾಸ್ತೆ ಸುಖಂ ವತೀ।
ನ ಕರ್ತೃತ್ವಂ ನ ಕರ್ಮಾಣಿ |
ನೈವ ಕುರ್ವನ್ ನಕಾರಯಾನ್ |
ಶಾರೀರಂ ಕೇವಲಂ ಕರ್ಮ ।
ಮುಂತಾದ ಶ್ಲೋಕಗಳನ್ನು ಉದಾಹರಿಸುತ್ತಾರೆ. ಈ ವಾಕ್ಯಗಳನ್ನು
ಪರಾಮರ್ಶಿಸುವಾಗಲೇ ಇವರು ಹೇಳುವ ಕರ್ಮಸಂನ್ಯಾಸವು ಗೀತೆಗೆ
ಸಮ್ಮತವಲ್ಲವೆಂದು ಸ್ಪಷ್ಟವಾಗುವುದು. ಸರ್ವ ಕರ್ಮಗಳ ಕಾಯಿಕ ತ್ಯಾಗವನ್ನು
ಹೇಳಿರದೆಮಾನಸಿಕತ್ಯಾಗವನ್ನಷ್ಟೇ ಇಲ್ಲಿವಿಧಾನಮಾಡಲಾಗಿದೆ. "ಸರ್ವಕರ್ಮಾಣಿ
ಮನಸಾ ನಂ್ಕಸ್ಯ' ಈ ವಾಕ್ಯದಲ್ಲಿ ಮಾನಸಿಕವಾಗಿ ಯಾವ ಫಲಾಭಿಲಾಷೆಯನ್ನೂ
ಮಾಡಲಾಗದು ಮತ್ತು ತಾನು ಕರ್ತಾ ಎಂಬ ಸ್ವಾತಂತ್ರ್ಯದ ಅಭಿಮಾನವೂ
ಮನಸ್ಸಿನಲ್ಲಿರಬಾರದು ಎಂಬ ಆಶಯವೇ ವ್ಯಕ್ತವಾಗುತ್ತದೆ. ""ಮನಸಾ'' ಎಂಬ
ಪದವು ಇಲ್ಲಿ ಅರ್ಥಪೂರ್ಣವಾಗಿದೆ.
ಪಶ್ಯನ್ ಶೃಣ್ವನ್ ಸ್ಪೃಶನ್ ಜಿಪ್ರನ್
ಅಶ್ನನ್ ಗಚ್ಛನ್ ಸ್ವಪನ್ ಶ್ವಸನ್ ।
ಪ್ರಲಪನ್ ವಿಸೃಜನ್ ಗೃಷ್ಣನ್
ಉನ್ಫಿಷನ್ ನಿಮಿಷನ್ನಪಿ
ಎಂದು ಜ್ಞಾನಿಗೆ ಸಕಲ ವ್ಯವಹಾರಗಳನ್ನು ನಿರೂಪಿಸಿ ಜ್ಞಾನಿಯು
ಬ್ರಹ್ಮಾರ್ಪಣಬುದ್ಧಿಯಿಂದ ಪರಮಾತ್ಮನ ಸ್ವತಂತ್ರ ಕ್ರಿಯಾಶಕ್ತಿಯ ನಿರಂತರ
ಅನುಸಂಧಾನದ ಜೊತೆಗೆ ಅನಾಸಕ್ತಿಯಿಂದ ಈ ಎಲ್ಲ ವ್ಯವಹಾರಗಳನ್ನೂ
ನಿರ್ವಹಿಸುವನೆಂದು ಹೇಳಿರುವುದರಿಂದ ಕಾಯಿಕವಾಗಿ ಕರ್ಮಗಳ
ವರಿತ್ಯಾಗವನ್ನು ಇಲ್ಲಿ ಪ್ರತಿಪಾದಿಸಿಲ್ಲವೆಂದು ಸುಸ್ಪಷ್ಟವಾಗುವುದು. ಅಹಂಕಾರ
ಮತ್ತು ಫಲಾಶೆಗಳ ಪರಿವರ್ಜನೆಯೇ ಕರ್ಮದ ಮಾನಸಿಕ ತ್ಯಾಗವೆನಿಸಿದೆ.
ಕಾಮ್ಯಕರ್ಮಗಳ ವರ್ಜನವೇ ಸಂನ್ಯಾಸವೆಂದೂ ಸರ್ವಲೌಕಿಕ ಫಲಗಳನ್ನು
ಬಿಡುವುದೇತ್ಯಾಗವೆಂದೂ ಹದಿನೆಂಟನೆಯ ಅಧ್ಯಾಯದಲ್ಲಿ ವರ್ಣಿಸಲಾಗಿದೆ.
ಪ್ರಪಂಚವು ಕಾಲ್ಪನಿಕವಾಗಿದ್ದು ಜ್ಞಾನಿಯಾದವನಿಗೆ ಈ ಜಗತ್ತು ಕಾಣುವುದೇ
ಇಲ್ಲವಾದರೆತನ್ನ ರಕ್ಷಣೆಗಾಗಿ ಉಪಯುಕ್ತವಾದ ಕಾರ್ಯಗಳನ್ನಾದರೂ ಅವನು
ಹೇಗೆ ಮಾಡಬಲ್ಲನು? ಶರೀರ ಹಾಗೂ ಇತರ ಆಹಾರಾದಿ ಪದಾರ್ಥಗಳೂ
ಜಗತ್ತಿನ ಜೊತೆಗೆನಿವೃತ್ತಿ ಹೊಂದಿರುವುದರಿಂದ ಅವನು ಯಾವಕ್ರಿಯೆಯನ್ನೂ
ಮಾಡಲಾರನ್ಟೆ ಹೀಗಿರುವಾಗ ನಿತ್ಯಜೀವನೋಪಯುಕ್ತಕಾರ್ಯಗಳ ಮಟ್ಟಿಗೆ
ಅವನಿಗೆ ಅವಕಾಶವನ್ನು ಸಲ್ಲಿಸಿರುವುದು ಅತ್ಯಂತ ಅರ್ಥಶೂನ್ಯವಾಗಿದೆ.
ರೋಕಾನುಗ್ರಹಕಾರಕವೂ ಆತ್ಮೋನ್ನತಿಪೋಷಕವೂ ಆದ ವಿಸ್ತಾರವಾದ ಶ್ರೇಷ್ಠ
ಕರ್ತವ್ಯಗಳನ್ನೆಲ್ಲ ದೂರಸರಿಸಿ ಉದರ ಪೋಷಣೆಗೆ ಅವಶ್ಯವೆನಿಸಿದ ಕಾರ್ಯಗಳ
ಮಟ್ಟಿಗೆ ಜ್ಞಾನಿಯ ಕರ್ತವ್ಯವನ್ನು ಮೊಟಕುಗೊಳಿಸುವುದರಿಂದ ಜ್ಞಾನಿಯ
ಮಟ್ಟವನ್ನೇ ಕೆಳಗಿಳಿಸಿದಂತಾಗುವುದು. ಬ್ರಹ್ಮಜ್ಞಾನಿಯಾದ ಉದಾರ, ವಿಶಾಲ
ಮನಸ್ಸಿನ ಮಹಾಪುರುಷನು ಈ ಜಗತ್ತಿನಲ್ಲಿ ಶರೀರಹಾಗೂ ಅದಕ್ಕೆ ಸಂಬಂಧಿಸಿದ
ವಸ್ತುಗಳನ್ನು ಮಾತ್ರ ಕಾಣುವನು. ಉಳಿದ ಪ್ರವಂಚವೆಲ್ಲ ಅವನಿಗೆ
ಶೂನ್ಯವೆನ್ನುವುದು ಅರ್ಥರಹಿತವಾದ ವಿಚಾರವೆನಿಸುವುದು. ಜಗತ್ತು
ಮಾಯಿಕವಾದುದರಿಂದ ಬ್ರಹ್ಮಜ್ಞಾನಿಗೆ ಇದು. ಗೋಚರವಾಗುವುದಿಲ್ಲ
ವೆನ್ನುವುದರಿಂದ ಆಧ್ಯಾತ್ಮಿಕ ಪ್ರಪಂಚ ಹಾಗೂ ಜಗತ್ತಿನ ಸಂಬಂಧವನ್ನೇ
ಕಡಿದುಹಾಕಿದಂತೆ. ಬ್ರಹ್ಮ ದರ್ಶನವನ್ನು ಹೊಂದಿದ ಮಹಾನುಭಾವನಿಂದಲೇ
ಲೋಕದ ಜನರು ಪರಮಾತ್ಮನ ವಿಚಾರವನ್ನರಿಯಬೇಕು. ಬ್ರಹ್ಮಜ್ಞಾನಿಯಾದ
ಜೀವನ್ಮುಕ್ರನಿಗೆ ಈ ಜಗತ್ತೇಕಾಣದಾದರೆ ಭಗವಂತನ ಸಂದೇಶವನ್ನು ಲೋಕೆ
ನೀಡುವವರು ಬೇರೆ ಯಾರು ? ಪರಮಾತ್ಮನನ್ನೂ ಅಜ್ಞಾನಿ ಜನತೆಯನ್ನೂ
ಜೋಡಿಸುವ ಸೇತುವೆಯೇ ಬ್ರಹ್ಮಜ್ಞಾನಿಯಾಗಿದ್ದು ಅವನ ಲೋಕದರ್ಶನ
ವನ್ನೇ ಅಲ್ಲಗಳೆದರೆ ಯಷಿಗಳ ಸಾಕ್ಷಾತ್ಕಾರದ ಪ್ರತಿಧ್ವನಿಗಳೂ ಅವರ ಅನುಭವದ
ಉದ್ಗಾರಗಳೂ ಎನಿಸಿದ ಈಗ ದೊರೆಯುವ ಶಾಸ್ತ್ರೀಯ ಉಪದೇಶಗಳೆಲ್ಲ
ಅಜ್ಞಾನಿಗಳಾದ ಸಾಧಕರ, ಅನುಭವದ ಿನ್ನೆಲೆಯಿಲ್ಲದ, ಅಪ್ರಗಲ್ಪ
ವಿಚಾರಗಳಿನಿಸುವವು. ಜ್ಞಾನಿಗಳೂ ಅಜ್ಞಾನಿಗಳೂ ಎಲ್ಲರೂ ಈ ಲೋಕದಲ್ಲಿ
ಸ್ವಕರ್ತವ್ಯವನ್ನು ಮಾಡಲೇಬೇಕೆಂದು ಬೋಧಿಸುವ ಗೀತೆಗೆ ಈ ವಾದವು
ಸರ್ವಥಾಸಮೃತವಲ್ಲ
ಬ್ರಹ್ಮಣ್ಯಾಧಾಯ ಕರ್ಮಾಣಿ
ಸಂಗಂ ತ್ಯಕ್ತ್ವಾ ಕರೋತಿ ಯಃ |
ಎಂದು ಗೀತೆಯಲ್ಲಿ ನಿರೂಪಿಸಿದಂತೆ ಅಸಂಗಮತ್ತು ಬ್ರಹ್ಮಾರ್ಪಣ ಬುದ್ಧಿಯಿಂದ
ಸ್ವಕರ್ತವ್ಯಾಚರಣೆ ಹಾಗೂ ಲೋಕವ್ಯವಹಾರ ಇವೆರಡೂ ಬ್ರಹ್ಮಜ್ಞಾನಿಗಳಲ್ಲೂ
ಇವೆ ಎಂಬುದನ್ನು ಅರಿತುಕೊಂಡು ಅವರು ತೋರಿಸಿದ ಹಾದಿಯಲ್ಲಿ ಅವರು
ನಡೆಯುವರೀತಿಯಲ್ಲಿ ಹೆಜ್ಜೆ ಇಡಲು ನಾವು ಪ್ರಯತ್ನಿಸಬೇಕು.
Bannanje Govindacharya (1936–2020)Bhagavad Gita Pravachana
ಕಾಯೇನ ಮನಸಾ ಬುದ್ಧ್ಯಾ ಕೇವಲೈಃ ಇಂದ್ರಿಯ್ಯೆಃ ಅಪಿ |
ಯೋಗಿನಃ ಕರ್ಮ ಕುರ್ವಂತಿ ಸಂಗಮ್ ತ್ಯಕ್ತ್ವಾ ಆತ್ಮ ಶುದ್ಧಯೇ-ಯೋಗಿಗಳು ಮೈಯಿಂದ, ಮನದಿಂದ,
ಬುದ್ಧಿಯಿಂದ ಮತ್ತು ಬರಿಯ ಇಂದ್ರಿಯಗಳಿಂದ ಕರ್ಮ ಮಾಡುತ್ತಾರೆ. ನಂಟು ನೀಗಿ, ಬಗೆಯ ಶುದ್ಧಿಗಾಗಿ.
ಶಾಸ್ತ್ರದ ಸಂಪ್ರದಾಯದಂತೆ ಒಂದು ವಿಷಯವನ್ನು ಹೇಳಿ; ಕೊನೆಗೆ ಆ ರೀತಿ ಅನುಷ್ಠಾನ ಮಾಡಿದವರ ಬಗ್ಗೆ
ಹೇಳಿ; ನಮಗೆ ಆ ವಿಷಯದಲ್ಲಿ ಭರವಸೆ ಬರುವಂತೆ ಮಾಡುತ್ತಾರೆ. ಇದನ್ನು 'ಅರ್ಥವಾದ' ಎನ್ನುತ್ತಾರೆ.
ಯಾವುದೇ ವಿಷಯವನ್ನು ನಾವೇ ಮೊದಲು ಆರಂಭಿಸುವುದು ಅಂದರೆ ಸ್ವಲ್ಪ ಕಷ್ಟ. ಆದರೆ 'ಅದು ಹಿಂದಿನಿಂದಲೂ
ನಡೆದುಕೊಂಡು ಬಂದ ವಿಚಾರ' ಎಂದಾಗ ಆ ವಿಷಯದ ಬಗ್ಗೆ ನಮಗೆ ಧೈರ್ಯ ಹೆಚ್ಚು. ಹಾಗೇ ಕೃಷ್ಣ ಇಲ್ಲಿ
ಜ್ಞಾನಿಗಳು ಸಂನ್ಯಾಸಯುಕ್ತವಾದ ಕರ್ಮಯೋಗ ಮಾಡುವುದನ್ನು ಪ್ರಸ್ತಾಪಿಸುತ್ತಾನೆ.
ಯೋಗಿಗಳು ದ್ವಂದ್ವಾತೀತವಾದ, ಫಲಕಾಮನೆ ಇಲ್ಲದೇ, 'ನನ್ನೊಳಗೆ ಭಗವಂತ ತನ್ನ ಪೂಜೆಯನ್ನು ನನ್ನ
ಮೂಲಕ ನನ್ನ ಉದ್ಧಾರಕ್ಕೋಸ್ಕರ ಮಾಡಿಸುತ್ತಿದ್ದಾನೆ' ಎಂದು ತಿಳಿದು ಕರ್ತವ್ಯ ದೃಷ್ಟಿಯಿಂದ ಕರ್ಮ
ಮಾಡುತ್ತಾರೆ. ಅವರಿಗೆ ಅಹಂಕಾರ-ಮಮಕಾರ ಇರುವುದಿಲ್ಲ; ಇದರಿಂದ ಮನಸ್ಸು ಶುದ್ಧವಾಗುತ್ತದೆ.
ಶುದ್ಧಮನಸ್ಸಿಗೆ ಶುದ್ಧ ವಿಷಯ ಗ್ರಹಣ ಮಾಡಲು ಸಾಧ್ಯ. ಶುದ್ಧ ವಿಷಯ ಗ್ರಹಣ ಎಂದರೆ ಶಾಸ್ತ್ರಕಾರರು ಯಾವ
ಅರ್ಥದಲ್ಲಿ ಹೇಳಿದ್ದಾರೋ ಅದೇ ಅರ್ಥದಲ್ಲಿ ಗ್ರಹಿಸುವುದು. ಹೀಗೆ ಅರ್ಥ ಮಾಡಿಕೊಳ್ಳಬೇಕಾದರೆ ನಮ್ಮ ಮನಸ್ಸು
ಶಾಸ್ತ್ರಕಾರರ ಮನಸ್ಸಿಗೆ Byrnes) (tuning) ಅಥವಾ ನಾವು ಅವರ ಸ್ಥಾನಕ್ಕೇರಬೇಕು ಹಾಗೂ ಅವರ
ಸ್ಥಾನದಲ್ಲಿ ನಿಂತು ಯೋಚಿಸಬೇಕು. ಇಲ್ಲದಿದ್ದರೆ ನಿಜವಾದ ವಿಷಯ ಗ್ರಹಣವಾಗುವುದಿಲ್ಲ. ಇಲ್ಲಿ ಕೃಷ್ಣ
ಹೇಳುತ್ತಾನೆ: "ಯೋಗಿಗಳೂ ಕೂಡಾ ಅಹಂಕಾರ-ಮಮಕಾರ ತೊರೆದು (ಸಂಗಂ ತ್ಯಕ್ತ್ವಾ) ಭಗವದರ್ಪಣ
ಬುದ್ಧಿಯಿಂದ- ಮೈಯಿಂದ, ಮನದಿಂದ, ಬುದ್ಧಿಯಿಂದ ಮತ್ತು ಇಂದ್ರಿಯಗಳಿಂದ ಕರ್ಮಾನುಷ್ಠಾನವನ್ನು
ಮಾಡುತ್ತಾರೆ" ಎಂದು. ಈ ವಿಚಾರವನ್ನು ಮತ್ತಷ್ಟು ಒತ್ತುಕೊಟ್ಟು ಮುಂದಿನ ಶ್ಲೋಕದಲ್ಲಿ ಕೃಷ್ಣ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(11)
‘To purify their hearts, yogis give up attachment15 and perform action only
with their bodies, minds, intellect and senses.’