ज्ञानेन तु तदज्ञानं येषां नाशितमात्मनः ।
तेषामादित्यवज्ज्ञानं प्रकाशयति तत्परम् ॥
jñānena tu tadajñānaṃ yeṣāṃ nāśitamātmanaḥ |
teṣāmādityavajjñānaṃ prakāśayati tatparam ||
Swami Sivananda (1887–1963)Bhagavad Gita
16. But, to those whose ignorance is destroyed by knowledge of the Self, like the sun,
knowledge reveals the Supreme (Brahman).
Sri Vishwesha Tirtharu (1931–2019)Gitasaroddhara
5.14–5.18 · ಜ್ಞಾನಿಯ ಸಮದೃಷ್ಟಿ
ಜ್ಞಾನಿಯ ಸಮದೃಷ್ಟಿ
ಪ್ರತಿಯೊಬ್ಬರ ವ್ಯವಹಾರಗಳ ಹಿನ್ನೆಲೆಯಲ್ಲಿಯೂವರಮಾತ್ಮನ ಶಕ್ತಿಯನ್ನು
ಕಾಣುವ ಬ್ರಹ್ಮಜ್ಞಾನಿಗಳು ಪ್ರಪಂಚದ ದರ್ಶನ, ವ್ಯವಹಾರಗಳಲ್ಲಿಯೂ ದಿವ್ಯ
ಆನಂದವನ್ನೇ ಅನುಭವಿಸಬಲ್ಲರು. ಪ್ರತಿಯೊಂದು ವಸ್ತುವಿನಲ್ಲೂ ಪರಮಾತ್ಮನ
ದಿವ್ಯರೂಪದ ದರ್ಶನವನ್ನು ವಡೆಯುತ್ತಿರುವ ಅವರು ಈ ಪ್ರಾವಂಚಿಕ
ಸಂಪರ್ಕದಿಂದ ವಿಚಲಿತರೂ ವಿಕಾರವಶರೂ ಆಗಲಾರರು. ವಿದ್ಯಾವಿನಯ
ಸಂಪನ್ನರಾದ ಸಜ್ಜನರಲ್ಲಿಯೂ ಹಿಂಸಾಜೀವಿಗಳೆನಿಸಿದ ಅನಾಗರಿಕ ಕ್ರೂರ
ಮನುಷ್ಯರಲ್ಲಿಯೂ ಹುದುಗಿದ ಭಗವತ್ತತ್ತ್ವವನ್ನು ಅವರು ಕಾಣಬಲ್ಲರು. ಈ
ಪ್ರಪಂಚದಲ್ಲಿ ಎಷ್ಟೇ ಭೇದ, ವೈಚಿತ್ರ್ಯಗಳಿದ್ದರೂ ಈ ಜಗತ್ತಿನಲ್ಲಿ ಅಂತರ್ಯಾಮಿ
ಎನಿಸಿದ ಜಗತ್ಫಚೋದಕ ಶಕ್ತಿಯಾದ ಪರಮಾತ್ಮನು ಎಲ್ಲ ಕಡೆಗಳಲ್ಲಿಯೂ
ಏಕರೂವವಾಗಿ ನೆಲೆಸಿರುವನು. ಪ್ರವಂಚದಲ್ಲಿ ವ್ಯವಹರಿಸುವಾಗ ಭಗವಂತನ
ಈ ಸಮತೆಯ ದರ್ಶನವಾದವನಿಗೆ ಬಾಹ್ಯ ಪ್ರಪಂಚದ ಏರುಪೇರುಗಳು ಮತ್ತು
ವಿಕೃತಿ, ಸಂಸ್ಕೃತಿಗಳ ದರ್ಶನದಿಂದ ಯಾವುದೇ ಕ್ಟೋಭವಾಗುವುದಿಲ್ಲ. ಎಲ್ಲಿ
ನೋಡಿದರೂ ಭಗವಂತನ ಚಿದಾನಂದಮಯರೂಪ ಮತ್ತು ಅವನ ಅದ್ಭುತ
ಶಕ್ತಿಕ್ರಿಯಾವಿಲಾಸವಿಭ್ರಮಗಳನ್ನು ಕಾಣುವ ಯೋಗಿಯು ಪ್ರಪಂಚದ
ಪ್ರತಿಯೊಂದು ಪದಾರ್ಥದಲ್ಲಿಯೂ ಆನಂದವನ್ನೇ ಅನುಭವಿಸುವನು.
ಶ್ರೀಮಧ್ವಾಚಾಯರು ಸಂನ್ಯಾಸಿಯಾಗಲು ಹೊರಟಾಗ ಎದುರಿಗೆ ಇದ್ದಹೊಲ
ಮರಗಳ ಕಡೆಗೂ ನಮಸ್ಕರಿಸುತ್ತಿದ್ದುದನ್ನು ಕಂಡು ಅಚ್ಚರಿಗೊಂಡ ಅವರ
ಬಂಧುಗಳು ಇದೇನು ನಿನ್ನ ಈ ವಿಚಿತ್ರ ವ್ಯವಹಾರವೆಂದು ಕೇಳಲು, ನನ್ನ
ಪ್ರೀತಿಯ ವಸ್ತುವು ಎಲ್ಲಕಡೆಗಳಲ್ಲಿಯೂ ಗೋಚರವಾಗುತ್ತಿರುವಾಗ ಅದಕ್ಕೆ
ತಲೆಬಾಗದೆ ಹೇಗೆ ಇರಲಿ ಎಂದರಂತೆ. ಹೀಗೆ ಜ್ಞಾನಿಗಳಿಗೆ ಎಲ್ಲಿನೋಡಿದರೂ
ಮಂಗಲಮಯದರ್ಶನ ಹಾಗೂ ನಿತ್ಯಾನಂದದ ಅನುಭವವೇ ದೊರೆಯು
್ರರವುದರಿಂದ ವೈಷಮ್ಯಪೂರಿತವಾದ ರುದ್ರಬೀಭತ್ತವೆನಿಸಿದ ಈಈ ಜಗತ್ತಿಗೆ
ಅವರು ಹೆದರುವುದಿಲ್ಲ.
ಜಗತ್ತಿನ ಎಲ್ಲ ಪದಾರ್ಥಗಳಲ್ಲಿಯೂ ಏಕರೂಪವಾಗಿ ಭಗವಚ್ಛಕ್ತಿ
ಪ್ರವಹಿಸಿಕೊಂಡಿದೆ. ವಿದ್ಯುಚ್ಛಕ್ತಿಯು ಎಲ್ಲ ಕಡೆಗಳಲ್ಲಿಯೂ ಒಂದೇ
ರೀತಿಯಿಂದ ಹರಿಯುತ್ತಿದ್ದರೂ ಬಲ್ಬ್ಗಳಿಗನುಗುಣವಾಗಿ ಹೆಚ್ಚು ಕಡಿಮೆ
ಪ್ರಮಾಣದಲ್ಲಿ ಅದು ಅಭಿವ್ಯಕ್ತವಾಗುವಂತೆ, ಭಗವಂತನು ಎಲ್ಲರಲ್ಲಿಯೂ
ಏಕಪ್ರಕಾರವಾಗಿ ಅನುಸೂತ್ಯನಾಗಿದ್ದರೂ ಅಧಿಷ್ಠಾನವಾದ ಪದಾರ್ಥ ಹಾಗೂ
ವ್ಯಕ್ತಿಯ ಸ್ವರೂಪ, ಯೋಗ್ಯತೆಗಳಿಗನುಸಾರವಾಗಿ ಪ್ರಕಟನಾಗುತ್ತಿರುವನು.
ದುಷ್ಠರಲ್ಲಿ ಭಗವಂತನ ಸನ್ನಿಧಾನವಿದ್ದರೂ ಅವರ ದೌಷ್ಟ್ಯ, ದರ್ಪಗಳಲ್ಲಿ
ಅಡಗಿದ ಭಗವತ್ತತ್ತ್ವವನ್ನು ಕಾಣುವುದು ಸಾಮಾನ್ಯ ಜನರಿಗೆ ಸಾಧ್ಯವಾಗದ
ಕಾರ್ಯವಾಗಿದ್ದರೆ ದುಷ್ಟ ಶಿಷ್ಟರಿಬ್ಬರಲ್ಲಿಯೂ ಭಗವಂತನ ಹಾಗೂ ಅವನ
ಏಕತ್ವದ ದರ್ಶನವನ್ನು ಪಡೆಯುವ ಭಾಗ್ಯ ಜ್ಞಾನಿಗಳದ್ದಾಗಿದೆ. ಪರಮಾತ್ಮನು
ಎಲ್ಲರಲ್ಲಿಯೂ ಒಂದೇರೀತಿಯಿಂದ ವ್ಯಾಪ್ತನಾಗಿದ್ದರೂ ಆಯಾಯ ವ್ಯಕ್ತಿಗಳ
ಸ್ವಭಾವ ಮತ್ತು ಮೂಲಭೂತ ಅಭಿರುಚಿಗಳನ್ನನುಸರಿಸಿ ಜಗತ್ತಿನಲ್ಲಿ ದುಷ್ಟ
ಶಿಷ್ಟರ ವಿಭಾಗ ವ್ಯವಸ್ಥೆಯಾಗಿದೆ. ಪರಮಾತ್ಮನು ಎಲ್ಲ ಕಡೆ ಇದ್ದಾನೆ
ಎಂಬುದರಿಂದ ಸಜ್ಜನರು, ದುರ್ಜನರು ಎಲ್ಲರೂ ಸಮಾನರು ಎಂಬುದಾಗಿ
ಸಮತೆಯ ಅರ್ಥವಿಪರ್ಯಾಸವನ್ನು ನಾವುಮಾಡಬಾರದು.
ಪಂಡಿತಾಃ ಸಮದರ್ಶಿನಃ ॥
ಈ ವಾಕ್ಯವನ್ನು ನಾನಾ ರೀತಿಯಿಂದ ವಿಪರೀತವಾಗಿ ಎಳೆಯುವ ಪ್ರಯತ್ನವು
ನಡೆದಿದೆ. ಪ್ರತಿಯೊಬ್ಬನಿಗೂ ಅವನ ಸದ್ಗುಣ, ಸತ್ಯಾರ್ಯಗಳಿಗನುಗುಣವಾಗಿ
ಗೌರವ ಪುರಸ್ಕಾರಗಳು ಲಭಿಸುತ್ತಿದ್ದರೆ ಆ ಸಮಾಜವು ಹಿತಕರವಾದ ರೀತಿಯಲ್ಲಿ
ಬೆಳೆಯಬಹುದು. ಸಜ್ಜನಿಕೆ. ಹಾಗೂ ದೌರ್ಜನ್ಯಗಳಲ್ಲಿ ಯಾವ
ಭೇದಭಾವವನ್ನೂ ಇಟ್ಟುಕೊಳ್ಳದೆ ಎಲ್ಲರನ್ನೂ ಸಮಾನ ದೃಷ್ಟಿಯಿಂದ
ನೋಡಬೇಕೆನ್ನುವ ಸಮತೆಯನ್ನು ಯಾರೂ ಅಪೇಕ್ಷಿಸಲಾರರು. ಅದರಂತೆ
ಜ್ಞಾನಿಗಳೂ ವಾಮರರೂ ಕ್ರಿಯಾಶೀಲರೂ ಅಲಸರೂ ಸೌಜನ್ಯಸದ್ಗುಣ
ಶಾಲಿಗಳೂ ದುರ್ನಡತೆಯವರೂ ಈ ಎಲ್ಲರಲ್ಲಿಯೂ ಭಗವಂತನು
ನೆಲೆಸಿದ್ದರೂ ಅವರವರ ಅಂತಸ್ತಿಗೆ ಅನುಗುಣವಾಗಿ ಸಮಾಜದಲ್ಲಿ
ಸ್ಥಾನಮಾನಗಳನ್ನು ನೀಡುವುದೇ ನಿಜವಾದಸಮತೆ ಎನಿಸುವುದು. ಚಿಕ್ಕಮಕ್ಕಳು
ಹಾಗೂ ದೊಡ್ಡವರಿಗೆ ಒಂದೇರೀತಿಯಾಗಿ ಆಹಾರವಿತರಣೆಯನ್ನು ಮಾಡಿದಲ್ಲಿ
ಅದು ಸಮತೆ ಎನಿಸಲಾರದು. ಜ್ಞಾನ, ಸದ್ಗುಣ, ಸತ್ಯಾರ್ಯಗಳಿಗನುಸಾರವಾಗಿ
ಮಾಡುವತರತಮ ಭಾವವೇನಿಜವಾದ ಸಾಮ್ಯದೃಷ್ಟಿಯಾಗುವುದು. ವ್ಯಕ್ತಿಯ
ದುಡಿತ, ಸೇವೆಗಳಿಗೆ ಅನುಸಾರವಾಗಿ ಪ್ರತಿಫಲದಲ್ಲಿ ಹೆಚ್ಚು ಕಡಿಮೆ ಮಾಡಿದರೆ
ವೈಷಮ್ಯದ ಆರೋಪವನ್ನು ಯಾರೂಮಾಡಲಾರರು. ಅದರ ಬದಲಾಗಿ ಅತ್ಯಂತ
ಬುದ್ಧಿವಂತನಾದ ವಿದ್ಯಾರ್ಥಿಯನ್ನು ಕಡಿಮೆ ಅಂಕವನ್ನು ವಡೆದ
ವಿದ್ಯಾರ್ಥಿಯೊಂದಿಗೆಸಮವಾಗಿ ನಡೆಸಿದರೆ ಅದನ್ನೇ ವೈಷಮ್ಯ ಪಕ್ಷಪಾತವೆಂದು
ಕರೆಯಲಾಗುತ್ತದೆ. ದೇಶದಲ್ಲಿ ಸುಜನ-ದುರ್ಜನ ವಿವೇಕವನ್ನು ಮಾಡದೆ
ರಾಜ್ಯಭಾರವನ್ನು ನಡೆಸಿದಲ್ಲಿ ಅದು ಅರಾಜಕತೆಗೆ ಆಹ್ವಾನವಿತ್ತಂತೆ. ಈ ಎಲ್ಲ
ವಿಚಾರವನ್ನು ಗಮನಿಸಿಕೊಂಡು ಗೀತೆಯ ""ಸಮದರ್ಶಿನಃ' ಎಂಬುದರ
ಭಾವವನ್ನು ನಾವು ತಿಳಿದುಕೊಳ್ಳಬೇಕು. ಶ್ರೇಷ್ಠ ವ್ಯಕ್ತಿಗಳಲ್ಲಿಯೂ, ಕನಿಷ್ಠ
ಮನುಷ್ಯರಲ್ಲಿಯೂ ಸುಜನರಲ್ಲಿಯೂ ದುರ್ಜನರಲ್ಲಿಯೂ ಪರಮಾತ್ಮ
ನೇನೋವಏಕರೂಪದಲ್ಲಿ ನೆಲೆಸಿರುವನು. ಬೇರೆ ಬೇರೆ ಯಂತ್ರಗಳಲ್ಲಿ ವಿದ್ಯುತ್ತು
ಏಕರೂಪವಾಗಿ ಹರಿಯುತ್ತಿದ್ದರೂ ಅವುಗಳ ಸ್ವಭಾವ ರಚನೆಗಳಿಗೆ
ಅನುಗುಣವಾಗಿ ಅವುಗಳಿಂದ ಭಿನ್ನ ಭಿನ್ನಕಾರ್ಯಗಳು ನಡೆಯುತ್ತವೆ. ವಿದ್ಯುತ್ತು
ಏಕರೂಪವಾಗಿ ಹರಿಯುತ್ತಿದ್ದರೂ ಎಲ್ಲ ಯಂತ್ರಗಳೂ ಒಂದೇಕಾರ್ಯವನ್ನು
ಮಾಡಲಾರವು, ಒಂದೇ ರೀತಿಯಲ್ಲಿ ಮಾಡಲಾರವು. ಅದರಂತೆ ಜೀವರ
ಸ್ವಭಾವಗಳಿಗನುಸಾರವಾಗಿ ಈ ಜಗತ್ತಿನಲ್ಲಿ ವೃತ್ಯಾಸವು ಅನಿವಾರ್ಯವೇ ಆಗಿದೆ.
ಪರಮಾತ್ಮ: ನು ಜಗತ್ತಿನಲ್ಲಿ ವ್ಯಾಪಿಸಿದ್ದ ರೂಸ್ವಭಾವ ಗುಣಗಳ ಆಧಾರದಲ್ಲಿರುವ
ಈ ಲೋಕಪ್ರವೃತ್ತಿಯನ್ನು ಬದಲಿಸಲಾರನು.
ಸ್ವಭಾವಸ್ತು ಪ್ರವರ್ತತೇ ।
ಪ್ರತಿಯೊಂದು ಲೋಕವ್ಯವಹಾರಕ್ಕೂ ಸ್ವಯಂಭುವಾದ ಪರಮಾತ್ಮ ಮತ್ತು
ವ್ಯಕ್ತಿಯ ಮೂಲಭೂತ ಸ್ವಭಾವ ಇವೆರಡೂ ಕಾರಣವಾಗಿರುವುದರಿಂದ
ವೈಷಮ್ಯತಕ್ಟರಹಿತನಾದ ಭಗವಂತನು ಇದ್ದೂ ಜಗತ್ತಿನಲ್ಲಿ ಹೀಗೇಕೆ ಒಬ್ಬೊಬ್ಬರು.
ಒಂದೊಂದುರೀತಿಯಿಂದ ವರ್ತಿಸುತ್ತಿದ್ದಾ ರೆಂದು ಆಕ್ಬೇಪಿಸಲು ಅವಕಾಶವಿಲ್ಲ.
ತತ್ರ ತತ್ರ ಸ್ಥಿತೋ ವಿಷ್ಣು
ಸ್ಪತ್ತಚ್ಛಕ್ತಿಃ ಪ್ರಬೋಧಯನ್ ॥
ಪ್ರತಿಯೊಂದು ಜಡ-ಚೇತನದಲ್ಲೂ ಇದ್ದು ಅವರವರ ಸ್ವಭಾವ ಹಾಗೂ
ಶಕ್ತಿಗಳನ್ನು ಪ್ರಬೋಧನೆ ಮಾಡುವುದೇಪರಮಾತ್ಮನ ಸೃಷ್ಟಿಯ ವಿಧಾನವಾಗಿದೆ.
ಲೋಕದಲ್ಲಿಎಲ್ಲಗಿಡಗಳಿಗೂ ಸರಿಯಾದನೀರು, ಗೊಬ್ಬರಗಳನ್ನು ಹಾಕಿದರೂ
ಅವುಗಳ ಬೀಜದಮೂಲ ಸ್ವಭಾವಕ್ಕನುಗುಣವಾಗಿ ಹಣ್ಣುಗಳ ರಸ-ರುಚಿಗಳಲ್ಲಿ
ಭೇದವು ಉಂಟಾದಲ್ಲಿ ತೋಟಗಾರನು ಅದಕ್ಕೆ ಹೊಣೆಗಾರನಾಗುವನೆ? ಅದರಂತೆ
ಸೃಷ್ಟಿಯ ಈ ವೈವಿಧ್ಯ ವಿಭಿನ್ನತೆಗಳಿಗೆ ಜೀವ, ಜಡರ ಮೂಲಭೂತ ವ್ಯಕ್ತಿತ್ವ
ಅಭಿರುಚಿಗಳೇ ಹಿನ್ನೆಲೆಯಾಗಿರುವುದರಿಂದ ಭಗವಂತನನ್ನೂ ಅವನ
ಸಮತೆಯನ್ನೂ ನಾವು ದೂಷಿಸಲಾರೆವು.
ನಾದತ್ತೇ ಕಸ್ಯಚಿತ್ ಪಾಪಂನ ಚೈವ ಸುಕೃತಂ ವಿಭುಃ
ಸರ್ವಕರ್ತನೂ ಸರ್ವವ್ಯಾಪಿಯೂ ಆದ ವರಮಾತ್ಮನು ಒಂದು ನೀತಿ,
ನಿಯಮವನ್ನು ಆಧರಿಸಿಯೇ ಜಗತ್ತಿನ ವ್ಯವಹಾರವನ್ನು ನಡೆಸುವುದರಿಂದ
ಯಾವ ವೈಷಮ್ಯ ದೋಷಕ್ಕೂ ಆತನು ಪಾತ್ರನಾಗಲಾರ. ಮಾನವರಸತ್, ಅಸತ್
ಕಾರ್ಯಗಳಿಂದ ಆಗುವ ಸುಕೃತ, ದುಷ್ಕತ ಲೇಪವೂ ಅವನಿಗೆ ಇರುವುದಿಲ್ಲ.
ಅದರಂತೆ ಅಧಿಷ್ಠುನವಾದ ಜೀವ-ಜಡರಲ್ಲಿರುವ ಮೂಲಭೂತ
ಗುಣದೋಷಗಳ ಪರಿಣಾಮ ಆಘಾತಗಳು ಅವುಗಳಲ್ಲಿ ನೆಲೆಸಿರುವ
ಪರಮಾತ್ಛನಿಗೆ ಸ್ವಲ್ಪವೂ ಆಗುವುದಿಲ್ಲ. ಅವನು ಎಂದೆಂದಿಗೂ ವರಿಶುದ್ಧನೂ
ಗುಣಪೂರ್ಣನೂ ಆಗಿರುವನು. ವಸ್ತುಭೇದದಿಂದ ಅವನ ಅಭಿವ್ಯಕ್ತಿಯ
ತಾರತಮ್ಯವಿರಬಹುದಾದರೂ ಅವನ ಸ್ವರೂಪಕ್ಕೆ ಯಾವ ಚ್ಯತಿ, ವಿಕಾರಗಳೂ
ಬಾಹ್ಯ ಪದಾರ್ಥಗಳ ಸಂಪರ್ಕದಿಂದ ಉಂಟಾಗಲಾರವು. ಆದುದರಿಂದಲೇ
ಅಸಂಗನೆಂದು ಪರಮಾತ್ಮನನ್ನು ಉಪನಿಷತ್ತುಗಳು ವರ್ಣಿಸಿರುತ್ತವೆ.
ವಿಷಮೇಷ್ಟಪಿ ಜೀವೇಷು ಸಮೋ ವಿಷ್ಣು ಸದೈವ ತು।
-ಗೀತಾತಾತ್ಪರ್ಯ
ಸರ್ವೋತ್ತಮ ಚೈತನ್ಯವೆನಿಸಿದ ಪರಮಾತ್ಮನು ವಿಚಿತ್ರ ವಿಭಿನ್ನ ಪ್ರವೃತ್ತಿಯ ಈ
ಎಲ್ಲ ಜೀವ-ಜಡ ಪ್ರಪಂಚದಲ್ಲಿ ಅನುಸ್ಯೂತನಾಗಿ ನೆಲೆಸಿದ್ದರೂ ಅವುಗಳ
ಸಂಪರ್ಕದಿಂದ ಯಾವುದೇವಿಕೃತಿ, ವಿಷಮತೆಗಳನ್ನು ಅವನು ಪಡೆದಿರುವುದಿಲ್ಲ.
ಅವನು ಎಂದೆಂದಿಗೂ ನಿರ್ವಿಕಾರನೂ ಏಕರೂಪನೂ ಆಗಿರುವನು.
ಬಾಹ್ಯವಸ್ತುವನ್ನು ಅವಲೋಕಿಸುವುದರ ಜೊತೆಗೆ ಈ ನಿರ್ವಿಕಾರವಾದ
ಪರತತ್ತ್ವದ ದರ್ಶನವಾಗುವುದರಿಂದಲೇ ಪ್ರಪಂಚದ ಮಧ್ಯದಲ್ಲಿದ್ದರೂ
ಜ್ಞಾನಿಯು ಈ ಅನುಪಮ ಆನಂದವನ್ನು ಸವಿಯುವನು.
Bannanje Govindacharya (1936–2020)Bhagavad Gita Pravachana
ಜ್ಞಾನೇನ ತು ತತ್ ಅಜ್ಞಾನಮ್ ಯೇಷಾಮ್ ನಾಶಿತಮ್ ಆತ್ಮನಃ |
ತೇಷಾಮ್ ಆದಿತ್ಯ ವತ್ ಜ್ಞಾನಮ್ ಪ್ರಕಾಶಯತಿ ತತ್ ಪರಮ್-ಭಗವಂತನ ಅರಿವಿನಿಂದ ಅವಿದ್ಯೆಯನ್ನು
ಅಳಿಸಿಕೊಂಡವರ ಆ ಅರಿವು-ಸೂರ್ಯನಂತೆ ಪರತತ್ವವನ್ನು ಬೆಳಗಿಸುತ್ತದೆ.
ನಾವು ನಮ್ಮ ಗೊಂದಲವನ್ನು ಪರಿಹರಿಸಿಕೊಳ್ಳಲು ಇರುವುದು ಕೇವಲ ಒಂದೇ ಮಾರ್ಗ. ಜ್ಞಾನ ಮಾರ್ಗದಲ್ಲಿ
ಸಾಧನೆ ಮಾಡಿ ಸತ್ಯವನ್ನು ತಿಳಿದುಕೊಳ್ಳುವುದು. ನಮ್ಮ ಸಮಸ್ಯೆ ಅಂದರೆ ನಮ್ಮೊಳಗೆ ಇರುವ ಜೀವ
ಸ್ವರೂಪದಲ್ಲಿ ಜ್ಞಾನವಿದೆ-ಆದರೆ ಅದನ್ನು ಅಜ್ಞಾನವೆಂಬ ಮಸುಕು ಕವಿದಿದೆ. ನಾವು ನಮ್ಮ ಜೀವ ಸ್ವರೂಪವನ್ನು
ಅಜ್ಞಾನವೆಂಬ ಪೆಟ್ಟಿಗೆಯೊಳಗೆ ಭದ್ರವಾಗಿ ಮುಚ್ಚಿಟ್ಟಿದ್ದೇವೆ. ಜ್ಞಾನಕ್ಕೆ ಮುಚ್ಚಳ-ಅಜ್ಞಾನದ್ದು ಹಾಗೂ ನಮಗೆ ಆ
ಮುಚ್ಚಳವನ್ನು ತೆಗೆಯಲು ಇಷ್ಟವಿಲ್ಲ.
ನಾವು. ಮೊದಲು ತಿಳಿಯಬೇಕಾದ ಸಂಗತಿ 'ನಾನು ಅಂದರೆ ಏನು' ಎನ್ನುವುದನ್ನು. ಅದು ಗೊತ್ತಾದಾಗ ನನ್ನ
ಸೀಮಿತತೆ ಏನು, ನನ್ನ ಶಕ್ತಿ ಏನು, ನನ್ನ ಅಲ್ಪತ್ವವೇನು ಎನ್ನುವುದು ತಿಳಿಯುತ್ತದೆ. ನಮ್ಮ ಇಂದ್ರಿಯದ ಒಡೆತನ
ನಮಗಿಲ್ಲ; ನಮ್ಮ ಮನಸ್ಸು ನಾವು ಹೇಳಿದಂತೆ ಕೇಳುವುದಿಲ್ಲ. ಆದ್ದರಿಂದ ನಾನು ಇವೆಲ್ಲವುದರ ಜೊತೆಗಿದ್ದೇನೆ,
ಯಾರೋ ಇದನ್ನೆಲ್ಲಾ ಇಲ್ಲಿ ಇಟ್ಟಿದ್ದಾರೆ; ಇಂದ್ರಿಯದಿಂದ ಅನುಭವ ಬರುತ್ತದೆ ನಾನು ಅನುಭವಿಸುತ್ತೇನೆ ಎನ್ನುವ
ಅರಿವು ಮೂಡುತ್ತದೆ... ಈ ಇಂದ್ರಿಯಗಳನ್ನು ಕೊಟ್ಟವನ್ಯಾರು, ಅದರಿಂದ ಅನುಭವ ಕೊಡುವವನ್ಯಾರು
ಎನ್ನುವುದು ಅರ್ಥವಾದಾಗ, ತಾನು ಕೇವಲ ಪ್ರತಿಬಿಂಬ ಮತ್ತು ಮೂಲ ಬಿಂಬ ಭಗವಂತ ಎನ್ನುವ ಅರಿವು
ಮೂಡುತ್ತದೆ.
ನಾವು ಹೇಗೆ ನಮ್ಮ ಅಜ್ಞಾನದ ಪರದೆಯನ್ನು ಕಳಚಿ ಜ್ಞಾನದ ಮಾರ್ಗವನ್ನು ಹಿಡಿಯಬಹುದು ಎನ್ನುವುದನ್ನು ಕೃಷ್ಣ
ಇಲ್ಲಿ ವಿವರಿಸಿದ್ದಾನೆ. "ಜ್ಞಾನ ಎನ್ನುವುದು ಬೆಂಕಿಯಂತೆ. ಒಳಗಿರುವ ಜ್ಞಾನದ ಕಿಡಿಯನ್ನು ಸತತ ಅಂತರಂಗದ
ಮನನದಿಂದ ಪ್ರಜ್ವಲಿಸು. ಆಗ ಅದು ಈ ಅಜ್ಞಾನವೆಂಬ ಪರದೆಯನ್ನು ಸುಟ್ಟುಬಿಡುತ್ತದೆ". ನಿರಂತರ
ಅಂತರಂಗದ ಮನನ ಮಾತ್ರ ನಮ್ಮ ಅಂತರಂಗದ ಜ್ಞಾನವನ್ನು ಪ್ರಜ್ವಲಿಸಬಲ್ಲದು. ಹೊರಗಿನ ಶ್ರವಣ,
ಅಧ್ಯಯನ ಇದಕ್ಕೆ ಪೂರಕ. ಒಮ್ಮೆ ಅಜ್ಞಾನದ ಪರದೆ ಸುಟ್ಟು ನಾಶವಾದಾಗ ನಮಗೆ ಸತ್ಯದ
ಸಾಕ್ಷಾತ್ಕಾರವಾಗುತ್ತದೆ. ಇದರಿಂದ 'ನಾನು ಮಾಡಿದೆ' ಎನ್ನುವ ಅಹಂಕಾರ ಬರಲು ಸಾಧ್ಯವೇ ಇಲ್ಲ. ಈ ಜ್ಞಾನದ
ಬೆಂಕಿ ಸೂರ್ಯ ಪ್ರಕಾಶಕ್ಕೆಂತ ದೊಡ್ಡದು ಎನ್ನುತ್ತಾನೆ ಕೃಷ್ಣ. ಹೇಗೆ ಹೊರ ಪ್ರಪಂಚವನ್ನು ಸೂರ್ಯ
ಬೆಳಗಿಸುತ್ತಾನೋ ಹಾಗೇ ಈ ಜ್ಞಾನ ಅಂತರಂಗ ಪ್ರಪಂಚವನ್ನು ಬೆಳಗಿಸುತ್ತದೆ. ಇದು ಅಪರೋಕ್ಷ ಜ್ಞಾನ
ಹಾಗೂ ಈ ಜ್ಞಾನ ಭಗವಂತನ ಸಾಕ್ಷಾತ್ಕಾರ ಮಾಡಿಸುತ್ತದೆ.
ಕೃಷ್ಣನ ಈ ವಿವರಣೆಯನ್ನು ಕೇಳಿದಾಗ ನಮಗೆ ನಾವೂ ಅಪರೋಕ್ಷ ಜ್ಞಾನವನ್ನು ಪಡೆಯಬೇಕು ಅನ್ನಿಸುತ್ತದೆ.
ಆದರೆ ಅದು ಹೇಗೆ? ಅಪರೋಕ್ಷ ಜ್ಞಾನ ಬರಬೇಕಾದರೆ ನಾವು. ಏನು ಮಾಡಬೇಕು? ಇದನ್ನು ಮುಂದಿನ
ಶ್ಲೋಕದಲ್ಲಿ ಕೃಷ್ಣ ವಿವರಿಸಿದ್ದಾನೆ.
Bibek Debroy (1955–2024)The Bhagavad Gita
(16)
‘But in those in whom that ignorance has been destroyed by the knowledge
of the atman, in them that knowledge expresses the great truth,21 like the
sun.’