5.26

कामक्रोधवियुक्तानां यतीनां यतचेतसाम् ।
अभितो ब्रह्मनिर्वाणं वर्तते विदितात्मनाम् ॥
kāmakrodhaviyuktānāṃ yatīnāṃ yatacetasām |
abhito brahmanirvāṇaṃ vartate viditātmanām ||
Swami Sivananda (1887–1963)Bhagavad Gita
26. Absolute freedom (or Brahmic bliss) exists on all sides for those self-controlled ascetics who are free from desire and anger, who have controlled their thoughts and who have realised the Self.
Bannanje Govindacharya (1936–2020)Bhagavad Gita Pravachana
ಕಾಮ ಕ್ರೋಧ ವಿಯುಕ್ತಾನಾಮ್‌ ಯತೀನಾಮ್‌ ಯತಚೇತಸಾಮ್‌ | ಅಭಿತಃ ಬ್ರಹ್ಮನಿರ್ಬಾಣಮ್‌ ವರ್ತತೇ ವಿದಿತ ಆತ್ಮನಾಮ್‌- ಪ್ರಯತ್ನಶೀಲರಾಗಿ ಒಲುಮೆ-ಸಿಡುಕುಗಳನ್ನು ಒದ್ದವರಿಗೆ, ಬಗೆಯನ್ನು ಗೆದ್ದವರಿಗೆ, ಭಗವಂತನನ್ನು ಬಲ್ಲವರಿಗೆ ಎಲ್ಲೆಡೆಯೂ ನಿತ್ಯ ಸ್ವರೂಪನಾದ ಭಗವಂತ ತುಂಬಿರುತ್ತಾನೆ. ಕಾಮ-ಕ್ರೋಧವನ್ನು ಸಂಪೂರ್ಣ ತೊರೆದು, ಪೂರ್ಣವಾಗಿ ಇಂದ್ರಿಯನಿಗ್ರಹ ಸಾಧಿಸಿದವರಿಗೆ ಎಲ್ಲೆಡೆಯೂ ಎಲ್ಲಾ ಜೀವ ಜಂತುವಿನಲ್ಲೂ ಭಗವಂತ ಕಾಣಿಸುತ್ತಾನೆ. ಯಾವುದೇ ಐಹಿಕ ಕ್ಲೇಶದ ನೋವು ಇವರಿಗಿರುವುದಿಲ್ಲ. ಇವರ ಮನದಲ್ಲಿ ಸರ್ವಾಂತರ್ಯಾಮಿಯಾದ, ನಿತ್ಯ ಸ್ವರೂಪನಾದ ಭಗವಂತ ನೆಲೆನಿಂತಿರುತ್ತಾನೆ. ಬಾಹ್ಯ ಸುಖದಿಂದ ಅಂತರಂಗದ ಸ್ವರೂಪಭೂತವಾದ ಸಹಜ ಸುಖದ ಕಡೆ ತಿರುಗುವ ಸಂದೇಶವನ್ನು ಕೊಟ್ಟ ಕೃಷ್ಣ, ಅದಕ್ಕೆ ಪೂರಕವಾದ ಧ್ಯಾನದ ಬಗ್ಗೆ ಸಂಕ್ಷಿಪ್ತವಾಗಿ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(26) ‘Freed from desire and anger, controlled in mind and knowing the atman, such sages attain liberation in the brahman all around them.’32